Just In
- 5 hrs ago
ವ್ಯಾಗನ್ಆರ್ ಕಾರಿಗೆ ಸೆಡ್ಡು ಹೊಡೆಯಲಿದೆ 2022ರ ಕಿಯಾ ರೇ ಫೇಸ್ಲಿಫ್ಟ್
- 5 hrs ago
ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ
- 6 hrs ago
30.9 ಕಿ.ಮೀ ಮೈಲೇಜ್ನೊಂದಿಗೆ ಮಾರುತಿ ಸ್ವಿಫ್ಟ್ ಸಿಎನ್ಜಿ ಕಾರು ಬಿಡುಗಡೆ
- 6 hrs ago
ಅತಿ ಕಡಿಮೆ ಅವಧಿಯಲ್ಲಿ ಕಿಯಾ ಸೆಲ್ಟೋಸ್ ಹೊಸ ಮೈಲಿಗಲ್ಲು: ದೇಶದಲ್ಲಿ ದಾಖಲೆಯ ಮಾರಾಟ
Don't Miss!
- News
Breaking: ಕರ್ನಾಟಕದಲ್ಲಿ 2000 ಗಡಿ ದಾಟಿದ ಕೊರೊನಾ ವೈರಸ್!
- Movies
ಪ್ರಭಾಸ್ ಅಭಿಮಾನಿಗಳಿಗೆ ಹೊಂಬಾಳೆ ಫಿಲ್ಮ್ಸ್ ಗುಡ್ ನ್ಯೂಸ್; ಗೆಟ್ ರೆಡಿ ಡಾರ್ಲಿಂಗ್ಸ್!
- Sports
ಮಹಾರಾಜ ಟ್ರೋಫಿ: ಮಯಾಂಕ್ ಶತಕ; 15.4 ಓವರ್ಗಳಲ್ಲಿ 176 ರನ್ ಚಚ್ಚಿ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್!
- Lifestyle
Surya Gochar 2022 : ಆ. 17ಕ್ಕೆ ಸಿಂಹದಲ್ಲಿ ಸೂರ್ಯ ಸಂಚಾರ: ದ್ವಾದಶ ರಾಶಿಗಳ ಮೇಲೆ ಬೀರುವ ಪ್ರಭಾವವೇನು?
- Finance
ಕ್ರಿಪ್ಟೋ ವಹಿವಾಟು: 370 ಕೋಟಿ ರೂಪಾಯಿ ಜಪ್ತಿ ಮಾಡಿದ ಇಡಿ
- Technology
ರೆಡ್ಮಿ K50 ಅಲ್ಟ್ರಾ ಮತ್ತು ಶಿಯೋಮಿ ಪ್ಯಾಡ್ 5 ಪ್ರೊ 12.4 ಬಿಡುಗಡೆ! ವಿಶೇಷತೆ ಏನು?
- Travel
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
5 ಡೋರ್ ಜೊತೆ 9 ಸೀಟರ್ ಸೌಲಭ್ಯ ಹೊಂದಿರಲಿದೆ ಫೋರ್ಸ್ ಗೂರ್ಖಾ ಹೊಸ ವರ್ಷನ್
ಫೋರ್ಸ್ ಮೋಟಾರ್ಸ್(Force Motors) ಕಂಪನಿಯು ಆಫ್ ರೋಡ್ ಎಸ್‌ಯುವಿ ಮಾದರಿಯಾದ ಗೂರ್ಖಾ(Gurkha)ದಲ್ಲಿ ಹೊಸ ಆವೃತ್ತಿಯೊಂದನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಆವೃತ್ತಿಯು ಶೀಘ್ರದಲ್ಲಿಯೇ ಮಾರುಕಟ್ಟೆ ಪ್ರವೇಶಿಸಲಿದೆ.

ಗೂರ್ಖಾ ಆಫ್ ರೋಡ್ ಎಸ್‌ಯುವಿ ಮಾದರಿಯೊಂದಿಗೆ ಸದ್ಯ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಫೋರ್ಸ್ ಮೋಟಾರ್ಸ್ ಕಂಪನಿಯು 3 ಡೋರ್ ವರ್ಷನ್ ಮಾತ್ರ ಮಾರಾಟಗೊಳಿಸುತ್ತಿದ್ದು, ಇದೀಗ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ 5 ಡೋರ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

ಹೊಸ ಮಾದರಿಯು ಮುಂಬರುವ ಸೆಪ್ಟೆಂಬರ್ ಅಥವಾ ಅಕ್ಟೊಬರ್ ವೇಳೆಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಮಾದರಿಯು 5 ಬಾಗಿಲು ಸೌಲಭ್ಯದೊಂದಿಗೆ 9 ಆಸನಗಳ ಆಯ್ಕೆ ಹೊಂದಿಲಿದೆ.

ರೋಡ್ ಟೆಸ್ಟಿಂಗ್ ವೇಳೆ ಹೊಸ ಮಾದರಿಯು 5 ಬಾಗಿಲು ಸೌಲಭ್ಯದೊಂದಿಗೆ 9 ಆಸನಗಳನ್ನು ಹೊಂದಿರುವ ಸ್ಪಷ್ಟವಾಗಿದ್ದು, ಮೂರನೇ ಸಾಲಿನಲ್ಲಿ ಬೆಂಚ್ ಸೀಟ್ ವೈಶಿಷ್ಟ್ಯತೆ ನೀಡಲಾಗಿದೆ. ಹೀಗಾಗಿ ಮುಂಭಾಗದಲ್ಲಿ ಡ್ರೈವರ್ ಮತ್ತು ಸಹ ಪ್ರಯಾಣಿಕರಿದ್ದರೆ ಮಧ್ಯದ ಸಾಲಿನಲ್ಲಿ ಮೂವರು ಮತ್ತು ಮೂರನೇ ಸಾಲಿನಲ್ಲಿರುವ ಎರಡು ಬೆಂಚ್ ಸೀಟ್‌ಗಳಲ್ಲಿ ನಾಲ್ಕು ಜನ ಕುಳಿತುಕೊಳ್ಳುವ ಸೌಲಭ್ಯವಿದೆ.

ಇದಕ್ಕಾಗಿ ಕಂಪನಿಯು 3 ಬಾಗಿಲು ಹೊಂದಿರುವ ಗೂರ್ಖಾ ಮಾದರಿಗಿಂತಲೂ ಹೊಸ ಮಾದರಿಯಲ್ಲಿ ವಿಸ್ತರಿತ ವೀಲ್ಹ್‌ಬೆಸ್ ನೀಡಲಾಗಿದ್ದು, ಇದು ಹಿಂಬದಿಯ ಆಸನ ಸೌಲಭ್ಯವನ್ನು ವಿಸ್ತರಿಸಲು ಸಹಕಾರಿಯಾಗಿದೆ.

ಫೋರ್ಸ್ ಗೂರ್ಖಾ ಪ್ರಮುಖ ಪ್ರತಿಸ್ಪರ್ಧಿಯಾಗಿರುವ ಮಹೀಂದ್ರಾ ಥಾರ್ ಕೂಡಾ ಶೀಘ್ರದಲ್ಲಿಯೇ 5 ಬಾಗಿಲು ಸೌಲಭ್ಯದೊಂದಿಗೆ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೀಗಾಗಿ ಫೋರ್ಸ್ ಗೂರ್ಖಾ ಹೊಸ ಮಾದರಿಯು ಪ್ರತಿಸ್ಪರ್ಧಿಗೆ ಪೈಪೋಟಿಯಾಗಿ ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಗೂರ್ಖಾ 3 ಬಾಗಿಲು ಹೊಂದಿರುವ ಮಾದರಿಯು ವಿನೂತನ ವಿನ್ಯಾಸದೊಂದಿಗೆ ಒಂದೇ ಒಂದು ವೆರಿಯೆಂಟ್‌ನಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.49 ಲಕ್ಷ ಬೆಲೆ ಹೊಂದಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಹೊಸ ತಲೆಮಾರಿನ ಗೂರ್ಖಾ ಕಾರು ಮಾದರಿಯು ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಆಫ್ ರೋಡ್ ಎಸ್‌ಯುವಿ ಪ್ರಿಯರನ್ನು ಸೆಳೆಯುತ್ತಿದ್ದು, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್, ಬ್ಲ್ಯಾಕ್ ಔಟ್ ಫ್ರಂಟ್ ಬಂಪರ್, ಎಂಜಿನ್ ಬಾಷ್ ಪ್ಲೇಟ್, ಫಾಗ್ ಲ್ಯಾಂಪ್, ಬಾಡಿ ಕ್ಲ್ಯಾಡಿಂಗ್, ಸ್ನೋರ್ಕಲ್ ಸೌಲಭ್ಯ ಹೊಂದಿದೆ.

ಗೂರ್ಖಾ ಕಾರಿನ ಕ್ಯಾಬಿನ್ ಕೂಡಾ ಆಕರ್ಷಕವಾಗಿದ್ದು, ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ 7 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಮ್ಯಾನುವಲ್ ಎಸಿ ವೆಂಟ್ಸ್ , 12V ಚಾರ್ಜಿಂಗ್ ಸಾಕೆಟ್ ಮತ್ತು ಡ್ಯುಯಲ್ ಯುಎಸ್‌ಬಿ ಸಾಕೆಟ್ ನೀಡಲಾಗಿದೆ.

ಫೋರ್ಸ್ ಮೋಟಾರ್ಸ್ ಕಂಪನಿಯು ಕಾರು ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಸೇರ್ಪಡೆ ಮಾಡಲಾಗಿದೆ.

ಕಾರಿನ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಹೊಸ ಕಾರು ಆಫ್-ರೋಡ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಥಾರ್ ಮಾದರಿಗೆ ಪ್ರಬಲ ಪೈಪೋಟಿ ನೀಡಲಿದೆ.

ಹೊಸ ಗೂರ್ಖಾ ಆವೃತ್ತಿಯು 4116 ಎಂಎಂ ಉದ್ದ, 1812 ಎಂಎಂ ಎತ್ತರ, 2400 ವ್ಹೀಲ್ ಬೆಸ್ ಮತ್ತು 210 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರನ್ನು ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಖರೀದಿಸಬಹುದಾಗಿದೆ.

ನ್ಯೂ ಜನರೇಷನ್ ಗೂರ್ಖಾ ಆಫ್-ರೋಡ್ ಪ್ರಿಯರನ್ನು ಸೆಳೆಯಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ. 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 90 ಬಿಎಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 4X4 ಡ್ರೈವ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.

ಫೋರ್ಸ್ ಮೋಟಾರ್ಸ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಕ್ಸೆಸರಿಸ್‌ಗಳನ್ನು ಹೊರತುಪಡಿಸಿ ಆಸಕ್ತ ಗ್ರಾಹಕರಿಗೆ ಹೆಚ್ಚುವರಿ ಮೌಲ್ಯದ ಆಕ್ಸೆಸರಿಸ್ ಪ್ಯಾಕೇಜ್ ಆಯ್ಕೆ ನೀಡಲಿದ್ದು, ಹೆಚ್ಚುವರಿ ಆಕ್ಸೆಸರಿಸ್‌ನಲ್ಲಿ ವಿಂಡ್ ಸ್ಕೀನ್ ಬಾರ್, ರೂಫ್ ಕ್ಯಾರಿಯರ್, ರಿಯರ್ ರ್ಯಾಡರ್, ಅಲಾಯ್ ವೀಲ್ಹ್ ಮತ್ತು ರಿಯರ್ ಸೈಡ್ ಫೇಸಿಂಗ್ ಚೈಲ್ಡ್ ಸೀಟ್ ನೀಡಲಾಗಿದೆ.

ಇದರೊಂದಿಗೆ ಹೊಸ ಕಾರು ರೆಡ್, ಗ್ರಿನ್, ವೈಟ್, ಆರೇಂಜ್, ಗ್ರೆ ಎಂಬ ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಕಾರಿನ ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ಗಳು ಆಫ್ ರೋಡ್ ಎಸ್‌ಯುವಿ ಪ್ರಿಯರನ್ನು ಸೆಳೆಯುತ್ತಿದೆ.
Source:MotorBeam