ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಫೋರ್ಸ್ ಮೋಟಾರ್ಸ್(Force Motors) ಕಂಪನಿಯು ತನ್ನ ಜನಪ್ರಿಯ ಆಫ್ ರೋಡ್ ಎಸ್‌ಯುವಿ ಮಾದರಿಯಾದ ಗೂರ್ಖಾ(Gurkha) ಮಾದರಿಯನ್ನು ಹೊಸ ಆವೃತ್ತಿಯೊಂದಿಗೆ ಉನ್ನತೀಕರಿಸುತ್ತಿದ್ದು, 2022ರ ಮಾದರಿಯಲ್ಲಿ ಹೊಸ ಕಾರು ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಬಿಎಸ್-6 ಮಾದರಿಯೊಂದಿಗೆ ಕಳೆದ ವರ್ಷವಷ್ಟೇ ಬಿಡುಗಡೆಗೊಂಡಿದ್ದ ಫೋರ್ಸ್ ಗೂರ್ಖಾ ಮಾದರಿಯು 3 ಡೋರ್ ಮಾದರಿಯೊಂದಿಗೆ ಮಾತ್ರ ಮಾರಾಟಗೊಳ್ಳುತ್ತಿದ್ದು, ಇದೀಗ ಹೊಸ ಆವೃತ್ತಿಯಲ್ಲಿ ಕಂಪನಿಯು 5 ಡೋರ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಹೊಸ ಆವೃತ್ತಿಯ ಬಿಡುಗಡೆಗೂ ಮುನ್ನ ಕಂಪನಿಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಮುಂಬರುವ ಏಪ್ರಿಲ್ ಅಥವಾ ಮೇ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಗೂರ್ಖಾ ಆಫ್ ರೋಡ್ ಎಸ್‌ಯುವಿ ಮಾದರಿಯು ಪ್ರತಿಸ್ಪರ್ಧಿಯಾದ ಥಾರ್ ಮಾದರಿಯಾಗಿ ಪೈಪೋಟಿಯಾಗಿ ಮಾರುಕಟ್ಟೆ ಪ್ರವೇಶಿಸಿದ್ದು, ಮಹೀಂದ್ರಾ ಕಂಪನಿಯು ಸಹ ಥಾರ್ ಮಾದರಿಯಲ್ಲಿ 5 ಡೋರ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಹೀಗಾಗಿ ಥಾರ್ ಕಾರಿಗೆ ಪೈಪೋಟಿಯಾಗಿ ಗೂರ್ಖಾ ಮಾದರಿಯು ಹೊಸ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿರುವ ಫೋರ್ಸ್ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರನ್ನು 3 ಡೋರ್ ಮತ್ತು 5 ಡೋರ್ ಮಾದರಿಗಳಾಗಿ ಮಾರಾಟಗೊಳಿಸಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಹೊಸ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಯಲ್ಲಿರುವಂತೆಯೇ ಎಂಜಿನ್ ಆಯ್ಕೆ ಮತ್ತು ಇತರೆ ತಾಂತ್ರಿಕ ಸೌಲಭ್ಯಗಳೊಂದಿಗೆ 5 ಬಾಗಿಲುಗಳ ಸೌಲಭ್ಯವನ್ನು ಹೊಂದಲಿದ್ದು, 5 ಬಾಗಿಲು ಮಾದರಿಯಾಗಿ ಕಂಪನಿಯು ಕಾರಿನ ಬೂಟ್ ಸ್ಪೆಸ್ ವಿಸ್ತರಿಸುವ ಸಾಧ್ಯತೆಗಳಿವೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಇನ್ನು ಮಾರುಕಟ್ಟೆಯಲ್ಲಿರುವ ಗೂರ್ಖಾ 3 ಬಾಗಿಲು ಹೊಂದಿರುವ ಮಾದರಿಯು ವಿನೂತನ ವಿನ್ಯಾಸದೊಂದಿಗೆ ಒಂದೇ ಒಂದು ವೆರಿಯೆಂಟ್‌ನಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.10 ಲಕ್ಷ ಬೆಲೆ ಹೊಂದಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಸುಧಾರಿತ ತಂತ್ರಜ್ಞಾನ ಪ್ರೇರಿತ ಹೊಸ ತಲೆಮಾರಿನ ಗೂರ್ಖಾ ಕಾರು ಮಾದರಿಯು ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಆಫ್ ರೋಡ್ ಎಸ್‌ಯುವಿ ಪ್ರಿಯರನ್ನು ಸೆಳೆಯುತ್ತಿದ್ದು, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್, ಬ್ಲ್ಯಾಕ್ ಔಟ್ ಫ್ರಂಟ್ ಬಂಪರ್, ಎಂಜಿನ್ ಬಾಷ್ ಪ್ಲೇಟ್, ಫಾಗ್ ಲ್ಯಾಂಪ್, ಬಾಡಿ ಕ್ಲ್ಯಾಡಿಂಗ್, ಸ್ನೋರ್ಕಲ್ ಸೌಲಭ್ಯ ಹೊಂದಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಗೂರ್ಖಾ ಕಾರಿನ ಕ್ಯಾಬಿನ್ ಕೂಡಾ ಆಕರ್ಷಕವಾಗಿದ್ದು, ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ 7 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಮ್ಯಾನುವಲ್ ಎಸಿ ವೆಂಟ್ಸ್ , 12V ಚಾರ್ಜಿಂಗ್ ಸಾಕೆಟ್ ಮತ್ತು ಡ್ಯುಯಲ್ ಯುಎಸ್‌ಬಿ ಸಾಕೆಟ್ ನೀಡಲಾಗಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಫೋರ್ಸ್ ಮೋಟಾರ್ಸ್ ಕಂಪನಿಯು ಕಾರು ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಸೇರ್ಪಡೆ ಮಾಡಲಾಗಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಕಾರಿನ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಹೊಸ ಕಾರು ಆಫ್-ರೋಡ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಥಾರ್ ಮಾದರಿಗೆ ಪ್ರಬಲ ಪೈಪೋಟಿ ನೀಡಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಹೊಸ ಗೂರ್ಖಾ ಆವೃತ್ತಿಯು 4116 ಎಂಎಂ ಉದ್ದ, 1812 ಎಂಎಂ ಎತ್ತರ, 2400 ವ್ಹೀಲ್ ಬೆಸ್ ಮತ್ತು 210 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರನ್ನು ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಖರೀದಿಸಬಹುದಾಗಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ನ್ಯೂ ಜನರೇಷನ್ ಗೂರ್ಖಾ ಆಫ್-ರೋಡ್ ಪ್ರಿಯರನ್ನು ಸೆಳೆಯಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ. 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 90 ಬಿಎಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 4X4 ಡ್ರೈವ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಫೋರ್ಸ್ ಮೋಟಾರ್ಸ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಕ್ಸೆಸರಿಸ್‌ಗಳನ್ನು ಹೊರತುಪಡಿಸಿ ಆಸಕ್ತ ಗ್ರಾಹಕರಿಗೆ ಹೆಚ್ಚುವರಿ ಮೌಲ್ಯದ ಆಕ್ಸೆಸರಿಸ್ ಪ್ಯಾಕೇಜ್ ಆಯ್ಕೆ ನೀಡಲಿದ್ದು, ಹೆಚ್ಚುವರಿ ಆಕ್ಸೆಸರಿಸ್‌ನಲ್ಲಿ ವಿಂಡ್ ಸ್ಕೀನ್ ಬಾರ್, ರೂಫ್ ಕ್ಯಾರಿಯರ್, ರಿಯರ್ ರ್ಯಾಡರ್, ಅಲಾಯ್ ವೀಲ್ಹ್ ಮತ್ತು ರಿಯರ್ ಸೈಡ್ ಫೇಸಿಂಗ್ ಚೈಲ್ಡ್ ಸೀಟ್ ನೀಡಲಾಗಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಇದರೊಂದಿಗೆ ಹೊಸ ಕಾರು ರೆಡ್, ಗ್ರಿನ್, ವೈಟ್, ಆರೇಂಜ್, ಗ್ರೆ ಎಂಬ ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಕಾರಿನ ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ಗಳು ಆಫ್ ರೋಡ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿವೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಫೋರ್ಸ್ ಮೋಟಾರ್ಸ್ ಕಂಪನಿಯು ಸ್ಟ್ಯಾಂಡರ್ಡ್ ಆಕ್ಸೆಸರಿಸ್ ಫೀಚರ್ಸ್ ಹೊರತುಪಡಿಸಿ ಹೆಚ್ಚುವರಿ ಮೊತ್ತದಲ್ಲಿ ಆಫ್-ರೋಡ್ ಚಾಲನೆ ಪೂರಕವಾದ ಮತ್ತಷ್ಟು ಹೊಸ ಸೌಲಭ್ಯಗಳನ್ನು ಆಕ್ಸೆಸರಿಸ್ ಪ್ಯಾಕೇಜ್ ಮೂಲಕ ಪಡೆದುಕೊಳ್ಳಬಹುದು.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ 5 ಡೋರ್ ವರ್ಷನ್ ಫೋರ್ಸ್ ಗೂರ್ಖಾ ಎಸ್‌ಯುವಿ

ಹೊಸ ಕಾರಿನಲ್ಲಿ ಆಸಕ್ತ ಗ್ರಾಹಕರು ಹೆಚ್ಚುವರಿ ಮೌಲ್ಯದೊಂದಿಗೆ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ವಿಂಡ್ ಸ್ಕೀನ್ ಬಾರ್, ಲಗೇಜ್ ಸಂಗ್ರಹಿಸಲು ರೂಫ್ ಕ್ಯಾರಿಯರ್, ರಿಯರ್ ಪಿನ್ ಲ್ಯಾಡರ್, ಅಲಾಯ್ ಚಕ್ರದೊಂದಿಗೆ ಆಲ್ ಟೆರೇನ್ ಟೈರ್, ರಿಯರ್ ಸೈಡ್ ಫೇಸಿಂಗ್ ಚೈಲ್ಡ್ ಸೀಟ್ ಮತ್ತು ಟೈಲ್ ಲ್ಯಾಂಪ್ ಗ್ರಿಲ್ ನೀಡಲಾಗುತ್ತದೆ.

Image Courtesy: Abhijeet Mane

More from DriveSpark

Article Published On: Thursday, March 10, 2022, 10:55 [IST]
English summary
Force gurkha 5 door version spotted testing again
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+