ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಹೊಸ ಗೂರ್ಖಾ ಆಫ್ ರೋಡ್ ಎಸ್‌ಯುವಿ ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಫೋರ್ಸ್ ಮೋಟಾರ್ಸ್ ಕಂಪನಿಯು ಬಿಎಸ್ 6 ಆವೃತ್ತಿಯ ಬಿಡುಗಡೆಯ ನಂತರ ಮೊದಲ ಬಾರಿಗೆ ದರ ಹೆಚ್ಚಿಸಿದ್ದು, ಆಫ್ ರೋಡ್ ಮಾದರಿಯು ಇದೀಗ ಹೊಸ ವರ್ಷದ ಆರಂಭದಲ್ಲಿ ಮತ್ತಷ್ಟು ದುಬಾರಿಯಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಗೂರ್ಖಾ ಹೊಸ ಆವೃತ್ತಿಯೊಂದಿಗೆ ಫೋರ್ಸ್ ಮೋಟಾರ್ಸ್ ಕಂಪನಿಯು ತನ್ನ ಪ್ರತಿಸ್ಪರ್ಧಿ ಮಾದರಿಯಾದ ಮಹೀಂದ್ರಾ ಥಾರ್‌ಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಹೆಚ್ಚುತ್ತಿರುವ ಬಿಡಿಭಾಗಗಳ ವೆಚ್ಚ ಹೆಚ್ಚಳ ಹಿನ್ನಲೆಯಲ್ಲಿ ಹೊಸ ಕಾರಿನ ಬೆಲೆಯಲ್ಲಿ ಶೇ. 2 ರಷ್ಟು ಬೆಲೆ ಹೆಚ್ಚಿಸಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಗೂರ್ಖಾ 4x4 ಆಫ್ ರೋಡ್ ಎಸ್‌ಯುವಿ ಕಾರು ಮಾದರಿಯು ಸದ್ಯ ಒಂದೇ ಒಂದು ವೆರಿಯೆಂಟ್‌ನಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಹೊಸ ದರಪಟ್ಟಿಯಲ್ಲಿ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 13.59 ಲಕ್ಷದಿಂದ ರೂ. 14.10 ಲಕ್ಷಕ್ಕೆ(ರೂ.51 ಸಾವಿರ) ಏರಿಕೆಯಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಹೊಸ ವರ್ಷ ಮತ್ತು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ನವೀಕರಣಗೊಂಡಿರುವ ಹೊಸ ತನಲೆಮಾರಿನ ಗೂರ್ಖಾ ಕಾರು ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ಗಳು ಆಫ್ ರೋಡ್ ಎಸ್‌ಯುವಿ ಪ್ರಿಯರನ್ನು ಸೆಳೆಯುತ್ತಿದ್ದು, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್, ಬ್ಲ್ಯಾಕ್ ಔಟ್ ಫ್ರಂಟ್ ಬಂಪರ್, ಎಂಜಿನ್ ಬಾಷ್ ಪ್ಲೇಟ್, ಫಾಗ್ ಲ್ಯಾಂಪ್, ಬಾಡಿ ಕ್ಲ್ಯಾಡಿಂಗ್, ಸ್ನೋರ್ಕಲ್ ಸೌಲಭ್ಯವಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಗೂರ್ಖಾ ಕಾರಿನ ಕ್ಯಾಬಿನ್ ಕೂಡಾ ಆಕರ್ಷಕವಾಗಿದ್ದು, ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ 7 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಮ್ಯಾನುವಲ್ ಎಸಿ ವೆಂಟ್ಸ್ , 12V ಚಾರ್ಜಿಂಗ್ ಸಾಕೆಟ್ ಮತ್ತು ಡ್ಯುಯಲ್ ಯುಎಸ್‌ಬಿ ಸಾಕೆಟ್ ನೀಡಲಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಫೋರ್ಸ್ ಮೋಟಾರ್ಸ್ ಕಂಪನಿಯು ಕಾರು ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಸೇರ್ಪಡೆ ಮಾಡಲಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಕಾರಿನ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಹೊಸ ಕಾರು ಆಫ್-ರೋಡ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಥಾರ್ ಮಾದರಿಗೆ ಪ್ರಬಲ ಪೈಪೋಟಿ ನೀಡಲಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಹೊಸ ಗೂರ್ಖಾ ಆವೃತ್ತಿಯು 4116 ಎಂಎಂ ಉದ್ದ, 1812 ಎಂಎಂ ಎತ್ತರ, 2400 ವ್ಹೀಲ್ ಬೆಸ್ ಮತ್ತು 210 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರನ್ನು ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಖರೀದಿಸಬಹುದಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ನ್ಯೂ ಜನರೇಷನ್ ಗೂರ್ಖಾ ಆಫ್-ರೋಡ್ ಪ್ರಿಯರನ್ನು ಸೆಳೆಯಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 90 ಬಿಎಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 4X4 ಡ್ರೈವ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಫೋರ್ಸ್ ಮೋಟಾರ್ಸ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಕ್ಸೆಸರಿಸ್‌ಗಳನ್ನು ಹೊರತುಪಡಿಸಿ ಆಸಕ್ತ ಗ್ರಾಹಕರಿಗೆ ಹೆಚ್ಚುವರಿ ಮೌಲ್ಯದ ಆಕ್ಸೆಸರಿಸ್ ಪ್ಯಾಕೇಜ್ ಆಯ್ಕೆ ನೀಡಲಿದ್ದು, ಹೆಚ್ಚುವರಿ ಆಕ್ಸೆಸರಿಸ್‌ನಲ್ಲಿ ವಿಂಡ್ ಸ್ಕೀನ್ ಬಾರ್, ರೂಫ್ ಕ್ಯಾರಿಯರ್, ರಿಯರ್ ರ್ಯಾಡರ್, ಅಲಾಯ್ ವೀಲ್ಹ್ ಮತ್ತು ರಿಯರ್ ಸೈಡ್ ಫೇಸಿಂಗ್ ಚೈಲ್ಡ್ ಸೀಟ್ ನೀಡಲಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಇದರೊಂದಿಗೆ ಹೊಸ ಕಾರು ರೆಡ್, ಗ್ರಿನ್, ವೈಟ್, ಆರೇಂಜ್, ಗ್ರೆ ಎಂಬ ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಕಾರಿನ ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ಗಳು ಆಫ್ ರೋಡ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿವೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಫೋರ್ಸ್ ಮೋಟಾರ್ಸ್ ಕಂಪನಿಯು ಸ್ಟ್ಯಾಂಡರ್ಡ್ ಆಕ್ಸೆಸರಿಸ್ ಫೀಚರ್ಸ್ ಹೊರತುಪಡಿಸಿ ಹೆಚ್ಚುವರಿ ಮೊತ್ತದಲ್ಲಿ ಆಫ್-ರೋಡ್ ಚಾಲನೆ ಪೂರಕವಾದ ಮತ್ತಷ್ಟು ಹೊಸ ಸೌಲಭ್ಯಗಳನ್ನು ಆಕ್ಸೆಸರಿಸ್ ಪ್ಯಾಕೇಜ್ ಮೂಲಕ ಪಡೆದುಕೊಳ್ಳಬಹುದು.

ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹೊಸ ಫೋರ್ಸ್ ಗೂರ್ಖಾ

ಹೊಸ ಕಾರಿನಲ್ಲಿ ಆಸಕ್ತ ಗ್ರಾಹಕರು ಹೆಚ್ಚುವರಿ ಮೌಲ್ಯದೊಂದಿಗೆ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ವಿಂಡ್ ಸ್ಕೀನ್ ಬಾರ್, ಲಗೇಜ್ ಸಂಗ್ರಹಿಸಲು ರೂಫ್ ಕ್ಯಾರಿಯರ್, ರಿಯರ್ ಪಿನ್ ಲ್ಯಾಡರ್, ಅಲಾಯ್ ಚಕ್ರದೊಂದಿಗೆ ಆಲ್ ಟೆರೇನ್ ಟೈರ್, ರಿಯರ್ ಸೈಡ್ ಫೇಸಿಂಗ್ ಚೈಲ್ಡ್ ಸೀಟ್ ಮತ್ತು ಟೈಲ್ ಲ್ಯಾಂಪ್ ಗ್ರಿಲ್ ನೀಡಲಾಗುತ್ತದೆ.

Most Read Articles

Kannada
English summary
Force gurkha suv price increased up to rs 51000 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X