ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಭಾರತದಲ್ಲಿ ಕಾರು ಮಾರಾಟಕ್ಕೆ ಹ್ಯಾಚ್‌ಬ್ಯಾಕ್ ವಿಭಾಗವು ಗಮನಾರ್ಹ ಕೊಡುಗೆಯನ್ನು ನೀಡುತ್ತಿದೆ. ಈ ವ್ ವಿಭಾಗದಲ್ಲಿ ದೇಶದ ಅತಿದೊಡ್ಡ ವಾಹನ ತಯಾರಕರಾದ ಮಾರುತಿ ಸುಜುಕಿಯಿಂದ ಪ್ರಾಬಲ್ಯ ಹೊಂದಿದೆ. ಆಗಸ್ಟ್ 2022 ರಲ್ಲಿ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಹೆಚ್ಚು ಮಾರಾಟವಾದ ಮೂರು ಅತ್ಯುತ್ತಮ ಮಾದರಿಗಳ ಬಗ್ಗೆ ಹೆಚ್ಚಿನ ಮಾಹಿತಿಗಳು ಇಲ್ಲಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಮಾರುತಿ ಸುಜುಕಿ ಬಲೆನೊ

2022ರ ಆಗಸ್ಟ್ ತಿಂಗಳ ಕಾರು ಮಾರಾಟದಲ್ಲಿ ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್, ಬಲೆನೊ ಮಾದರಿಯು ವ್ಯಾಗನ್‌ಆರ್ ಅನ್ನು ಹಿಂದಿಕ್ಕಿದೆ. 2022ರ ಆಗಸ್ಟ್ ತಿಂಗಳಿನಲ್ಲಿ ಬಲೆನೊ ಮಾದರಿಯ 8,418 ಯುನಿಟ್ ಗಳು ಮಾರಾಟವಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 15,646 ಯುನಿಟ್ ಮಾರಾಟವಾಗಿದೆ, ಇದರಿಂದಾಗಿ ಶೇಕಡಾ 18 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಮಾರುತಿ ಸುಜುಕಿ ದೇಶದಲ್ಲಿ ಮಾರುತಿ ಬಲೆನೊ ಫೇಸ್‌ಲಿಫ್ಟ್ ಅನ್ನು ತಾಜಾ ವಿನ್ಯಾಸ ಮತ್ತು ವೈಶಿಷ್ಟ್ಯಗಳ ನವೀಕರಣಗಳೊಂದಿಗೆ ಪರಿಚಯಿಸಿತು. ಈ ಬಲೆನೊ ಫೇಸ್‌ಲಿಫ್ಟ್ ಮಾದರಿಯ ವಿನ್ಯಾಸದಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗೊಂಡಿದ್ದು, ನೆಕ್ಸಾವೆವ್ ಹನಿಕೊಂಬ್ ಗ್ರಿಲ್, ಫ್ಲಾಟರ್ ಕ್ಲಾಮ್‌ಶೆಲ್ ಬಾನೆಟ್ ಮತ್ತು ಪರಿಷ್ಕೃತ ಮುಂಭಾಗದ ಬಂಪರ್ ಜೊತೆಗೆ ದೊಡ್ಡ ಫಾಗ್ ಲ್ಯಾಂಪ್ ಹೌಸಿಂಗ್‌ಗಳನ್ನು ಕೂಡ ಹೊಂದಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಈ ಮಾರುತಿ ಬಲೆನೊ ಕಾರಿನಲ್ಲಿ ಸೈಡ್ ಪ್ರೊಫೈಲ್ ಹಿಂದಿನ ಮಾದರಿಯಂತೆಯೇ ಕಂಡರೂ ಕ್ರೋಮ್ ಸ್ಟ್ರಿಪ್ ಅನ್ನು ಹೊರತುಪಡಿಸಿ ಈಗ ಕೆಳಗಿನ ವಿಂಡೋ ಲೈನ್‌ನಿಂದ ಹಿಂದಿನ ಕ್ವಾರ್ಟರ್ ಗ್ಲಾಸ್‌ಗೆ ಚಲಿಸುವಂತೆ ವಿನ್ಯಾಸಗೊಳಿಸಲಾಗಿದೆ. ಹಿಂಭಾಗದಲ್ಲಿ ಹೊಸ ಬಲೆನೊ ಹೊಸ ಟೈಲ್‌ಗೇಟ್ ವಿನ್ಯಾಸ, ಹೊಸ ಸಿ-ಆಕಾರದ ಎಲ್‌ಇಡಿ ಟೈಲ್-ಲೈಟ್‌ಗಳು ಮತ್ತು ರಿಪ್ರೊಫೈಲ್ಡ್ ರಿಯರ್ ಬಂಪರ್‌ನೊಂದಿಗೆ ಬಲೆನೊ ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರಾಂಡ್ಯೂರ್ ಗ್ರೇ, ಸೆಲೆಸ್ಟಿಯಲ್ ಬ್ಲೂ, ಓಪ್ಯುಲೆಂಟ್ ರೆಡ್ ಮತ್ತು ಲಕ್ಸ್ ಬೀಜ್ ಎನ್ನುವ ಆರು ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಹೊಸ ವೈಶಿಷ್ಟ್ಯತೆಗಳಲ್ಲಿ ಮರುವಿನ್ಯಾಸಗೊಳಿಸಲಾದ ಡ್ಯಾಶ್‌ಬೋರ್ಡ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಕನೆಕ್ಟಿವಿಟಿಯೊಂದಿಗೆ 9.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹಿಂದಿನ ಮಾದರಿಗಳಿಂತೆ ಎಸಿ ವೆಂಟ್‌ಗಳು, ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್‌, ಹೆಡ್ ಅಪ್ ಡಿಸ್ಪ್ಲೇ (ಹೆಚ್‌ಯುಡಿ) ಅನ್ನು ಒಳಗೊಂಡಿದೆ,

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಇನ್ನು ಹೆಚ್ಚುವರಿ ಏರ್‌ಬ್ಯಾಗ್ ಸೌಲಭ್ಯದ ಜೊತೆಗೆ ಹೊಸ ಬಲೆನೊದಲ್ಲಿ ಹೊಸ ಸುರಕ್ಷತಾ ವೈಶಿಷ್ಟ್ಯಗಳಲ್ಲಿ ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ಎಬಿಎಸ್, ಕೀ ಲೆಸ್ ಎಂಟ್ರಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಇಎಸ್‌ಪಿ ಮತ್ತು ಇಬಿಡಿ ಸಹ ಸೇರ್ಪಡೆಯಾಗಲಿದ್ದು, ಸುಜುಕಿ ಕಾರ್ ಕನೆಕ್ಟ್ ತಂತ್ರಜ್ಞಾನದಲ್ಲೂ ಸಹ ಸುಧಾರಿತ ವೈಶಿಷ್ಟ್ಯತೆಗಳನ್ನು ನೀಡಲಾಗಿದೆ. ಈ ಮಾರುತಿ ಸುಜುಕಿ ಕಂಪನಿಯ ಹೊಸ ಸುಜುಕಿ ಕನೆಕ್ಟ್ ಟೆಕ್ನಾಲಜಿ ಮೂಲಕ ಒಂದೇ ಸೂರಿನಡಿ 40ಕ್ಕೂ ಹೆಚ್ಚು ತಾಂತ್ರಿಕ ಸೌಲಭ್ಯಗಳನ್ನು ಸ್ಮಾರ್ಟ್‌ಫೋನ್ ಮೂಲಕವೇ ನಿರ್ವಹಣೆ ಮಾಡಬಹುದಾಗಿದ್ದು, ಅಮೆಜಾನ್ ಅಲೆಕ್ಸಾ ವಾಯ್ಸ್ ಕಮಾಂಡ್ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದು.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಮಾರುತಿ ವ್ಯಾಗನ್‌ಆರ್‌

ಮಾರುತಿ ಸುಜುಕಿಯ ಮಾರಾಟಕ್ಕೆ ವ್ಯಾಗನ್‌ಆರ್‌ ಪ್ರಮುಖ ಕೊಡುಗೆದಾರರಲ್ಲಿ ಒಂದಾಗಿದೆ. ಕಂಪನಿಯು 2022ರ ಆಗಸ್ಟ್ ತಿಂಗಳು ವ್ಯಾಗನ್‌ಆರ್‌ನ 18,398 ಯುನಿಟ್‌ಗಳನ್ನು ಮಾರಾಟ ಮಾಡಿದೆ, 2021ರ ಆಗಸ್ಟ್ ತಿಂಗಳಿನಲ್ಲಿ 9,628 ಯುನಿಟ್ ಮಾರಾಟಗಳನ್ನು ಮಾಡಿದೆ, ಆ ಮೂಲಕ 91 ಪ್ರತಿಶತದಷ್ಟು ಬಲವಾದ ಬೆಳವಣಿಗೆಯನ್ನು ದಾಖಲಿಸಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ವ್ಯಾಗನ್‌ಆರ್‌ ದೇಶದಲ್ಲಿನ ಹೆಚ್ಚಿನ ಇಂಧನ ಬೆಲೆಗಳಿಂದಾಗಿ ಸಿಎನ್‌ಜಿ ಆಯ್ಕೆಯನ್ನು ಹುಡುಕುತ್ತಿರುವ ಖರೀದಿದಾರರಲ್ಲಿ ವಿಶೇಷವಾಗಿ ಜನಪ್ರಿಯ ಆಯ್ಕೆಯಾಗಿದೆ. ಭಾರತದಲ್ಲಿ ಮಾರುತಿ ಸುಜುಕಿ ವ್ಯಾಗನ್‍ಆರ್ ಸುಮಾರು ಎರಡು ದಶಕಗಳಿಂದ ಮಾರಾಟದಲ್ಲಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಈ ವ್ಯಾಗನ್‍ಆರ್ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ ದೇಶದಲ್ಲಿ ಪ್ರಾರಂಭಿಸಿದಾಗಿನಿಂದಲೂ ಕೂಡ ಉತ್ತಮ ಬೇಡಿಕೆಯಿಂದ ಮಾರಾಟವಾಗುತ್ತಿದೆ. ಈಗ ಮೂರನೇ ತಲೆಮಾರಿನ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ. ಮಾರುತಿ ಸುಜುಕಿ ವ್ಯಾಗನ್ಆರ್ ಕಾರನ್ನು ಅದೇ 1.0-ಲೀಟರ್ ಮತ್ತು 1.2-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಗಳ ಆಯ್ಕೆಯಲ್ಲಿ ಮಾರಾಟ ಮಾಡಲಾಗುತ್ತದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ವ್ಯಾಗನ್‌ಆರ್‌ ಎಸ್-ಸಿಎನ್‌ಜಿ ಮಾದರಿಯಲ್ಲಿ 1.0-ಲೀಟರ್ 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದು 58 ಬಿಹೆಚ್‌ಪಿ ಮತ್ತು 78 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ ಜೋಡಿಸಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಮಾರುತಿ ಆಲ್ಟೋ

ಮಾರುತಿ ಸುಜುಕಿ ಆಲ್ಟೋ ಕಳೆದ ತಿಂಗಳು ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಭಾರತೀಯ ವಾಹನ ತಯಾರಕರು ಆಗಸ್ಟ್ 2022 ರಲ್ಲಿ ಆಲ್ಟೊದ 14,388 ಯುನಿಟ್‌ಗಳನ್ನು ಮಾರಾಟ ಮಾಡಿದರು, ಕಳೆದ ವರ್ಷದ ಇದೇ ಅವಧಿಯಲ್ಲಿ 13,236 ಯುನಿಟ್ ಮಾರಾಟಗಳಿಗೆ ಹೋಲಿಸಿದರೆ, ಶೇಕಡಾ 9 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್‌ ಕಾರುಗಳು...

ಇನ್ನು ಮಾರುತಿ ಸುಜುಕಿ ತನ್ನ ಪೋರ್ಟ್ಫೋಲಿಯೊಗೆ ಆಲ್ಟೋ ಕೆ10 ಅನ್ನು ಮರಳಿ ತಂದಿದೆ. ಹಿಂದಿನ ಆಲ್ಟೊ ಕೆ10 ಮಾದರಿಯನ್ನು ಸುಮಾರು ಒಂದೆರಡು ವರ್ಷಗಳ ಹಿಂದೆ ಸ್ಥಗಿತಗೊಳಿಸಲಾಯಿತು. ಹೊಸ ನವೀಕರಣಗಳೊಂದಿಗೆ ಜನಪ್ರಿಯ ಮಾರುತಿ ಸುಜುಕಿ ಆಲ್ಟೋ ಕೆ10 ಹ್ಯಾಚ್‌ಬ್ಯಾಕ್‌ ಮತ್ತೊಮ್ಮೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ.

Most Read Articles

Kannada
English summary
Here is list bestselling hatchback in august 2022 details
Story first published: Thursday, September 22, 2022, 18:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X