India
YouTube

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಭಾರತದಲ್ಲಿ ಮಾರುತಿ ಸುಜುಕಿಯಂತಹ ಕಾರುಗಳೊಂದಿಗೆ ಸ್ಪರ್ಧಿಸುವ ದೇಶದ ಪ್ರಮುಖ ವಾಹನ ತಯಾರಕರಲ್ಲಿ ಹ್ಯುಂಡೈ ಒಂದಾಗಿದೆ. ಹ್ಯುಂಡೈ ಮೋಟಾರ್ ಇಂಡಿಯಾ ಇತ್ತೀಚೆಗೆ 2022ರ ಮೇ ತಿಂಗಳ ವಾಹನ ಮಾರಾಟದ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಕಂಪನಿಯ ಪ್ರಕಾರ, ಕಳೆದ ಮೇ ತಿಂಗಳಲ್ಲಿ 51,263 ಯುನಿಟ್ ಕಾರುಗಳು ಮಾರಾಟವಾಗಿವೆ, ಇದು ಕಳೆದ ವರ್ಷ ಮೇ ತಿಂಗಳಲ್ಲಿ ಮಾರಾಟವಾದ 30,703 ಯುನಿಟ್‌ಗಳಿಗೆ ಹೋಲಿಸಿದರೆ ಶೇ 67 ರಷ್ಟು ಹೆಚ್ಚಾಗಿದೆ. ಸೆಮಿಕಂಡಕ್ಟರ್‌ಗಳ ಪೂರೈಕೆಯಲ್ಲಿನ ಕೊರತೆ ಮತ್ತು ವೆನ್ಯೂ ಫೇಸ್‌ಲಿಫ್ಟ್‌ನ ಬಿಡುಗಡೆಗೆ ಮುಂಚಿತವಾಗಿ ಸ್ಟಾಕ್ ತಿದ್ದುಪಡಿ ಚಟುವಟಿಕೆಯು ಮಾರಾಟದ ಮೇಲೆ ಪರಿಣಾಮವನ್ನು ಬೀರಿತು. ಆದರೆ ಕಳೆದ ತಿಂಗಳು ಕೆಲವು ಹ್ಯುಂಡೈ ಕಾರುಗಳು ಉತ್ತಮ ಮಾರಾಟವನ್ನು ಕಂಡಿದೆ. ಕಳೆದ ತಿಂಗಳು ಅತಿ ಹೆಚ್ಚು ಮಾರಾಟವಾದ ಟಾಪ್-3 ಹುಂಡೈ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಹ್ಯುಂಡೈ ಕ್ರೆಟಾ

ಹುಂಡೈ ಕ್ರೆಟಾ ಕಳೆದ ತಿಂಗಳು ಭಾರತದಲ್ಲಿ ಕಂಪನಿಗೆ ಹೆಚ್ಚು ಮಾರಾಟವಾದ ಮಾದರಿಯಾಗಿ ಹೊರಹೊಮ್ಮಿತು. 2022ರ ಮೇ ತಿಂಗಳಿನಲ್ಲಿ ಕ್ರೆಟಾ ಮಾದರಿಯ 10,973 ಯುನಿಟ್ ಮಾರಾಟವನ್ನು ಮಾರಾಟ ಮಾಡಿದೆ, ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕ್ರೆಟಾ ಮಾದರಿಯ 7,527 ಯುನಿಟ್‌ಗಳನ್ನು ಮಾರಾಟ ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಳಿಸಿದರೆ ಶೇ.46 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಕ್ರೆಟಾದಲ್ಲಿ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮಾರಾಟವನ್ನು ಹೊಂದಿದೆ. ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಹೊಸ ಎಮಿಷನ್ ಜಾರಿ ನಂತರ ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. 1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಈ ಕಾರು ಭಾರತದಲ್ಲಿ ಕಂಪನಿಗೆ ಎರಡನೇ ಅತಿ ಹೆಚ್ಚು ಮಾರಾಟವಾದ ಮಾದರಿಯಾಗಿ ಹೊರಹೊಮ್ಮಿದೆ, 2022ರ ಮೇ ತಿಂಗಳಿನಲ್ಲಿ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಮಾದರಿಯ ,138 ಯುನಿಟ್ ಮಾರಾಟಗಳು ಕಳೆದ ವರ್ಷದ ಇದೇ ಅವಧಿಯಲ್ಲಿ 3,804 ಯುನಿಟ್ ಮಾರಾಟಗಳಿಗೆ ಹೋಲಿಸಿದರೆ, 140 ಪ್ರತಿಶತದಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಕಂಪನಿಯು ಕಳೆದ ತಿಂಗಳು ದೇಶದಲ್ಲಿ ಹೊಸ ಕಾರ್ಪೊರೇಟ್ ಆವೃತ್ತಿ ರೂಪಾಂತರವನ್ನು ಪರಿಚಯಿಸಿತು. ಇನ್ನು ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ನಾಲ್ಕು ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ. ಬೇಸ್ ಎಂಜಿನ್ ಆಯ್ಕೆಯು 1.2-ಲೀಟರ್ ನ್ಯಾಚುರಲ್ ಆಸ್ಪೈರಡ್ ಪೆಟ್ರೋಲ್ ಎಂಜಿನ್ ಆಗಿದ್ದು. ಇದು 82 ಬಿಹೆಚ್‍ಪಿ ಪವರ್ ಮತ್ತು 121 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಇದರೊಂದಿಗೆ 99 ಬಿಹೆಚ್‍ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಮತ್ತೊಂದೆಡೆ, 1.2-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 74 ಬಿಹೆಚ್‌ಪಿ ಪವರ್ ಮತ್ತು 190 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಕೊನೆಯ ಎಂಜಿನ್ ಆಯ್ಕೆಯು 1.2-ಲೀಟರ್ ನ್ಯಾಚುರಲ್ ಆಸ್ಪೈರಡ್ ಪೆಟ್ರೋಲ್ ಎಂಜಿನ್‌ನ CNG ಆವೃತ್ತಿಯಾಗಿದೆ .ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಬೆಲೆಯು ಭಾರತರ ಎಕ್ಸ್ ಶೋರೂಂ ಪ್ರಕಾರ ರೂ 5.39 ಲಕ್ಷದಿಂದ ಪ್ರಾರಂಭವಾಗುತ್ತವೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಹ್ಯುಂಡೈ ವೆನ್ಯೂ

ವೆನ್ಯೂ ದೇಶದಲ್ಲಿ ಹುಂಡೈಗೆ ಮೂರನೇ ಹೆಚ್ಚು ಮಾರಾಟವಾದ ಮಾದರಿಯಾಗಿ ಹೊರಹೊಮ್ಮಿದೆ. 2022ರ ಮೇ ತಿಂಗಳಿನಲ್ಲಿ ವೆನ್ಯೂ ಕಾಂಪ್ಯಾಕ್ಟ್ ಎಸ್‍ಯುವಿಯ 8,300 ಯುನಿಟ್‌ಗಳು ಮಾರಾಟವಾಗಿವೆ. ಇನ್ನು 2021ರ ಮೇ ತಿಂಗಳಿನಲ್ಲಿ 4,840 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 71 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಕಂಪನಿಯು ಇತ್ತೀಚೆಗೆ ವೆನ್ಯೂ ಫೇಸ್‌ಲಿಫ್ಟ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಹೊಸ ಹ್ಯುಂಡೈ ವೆನ್ಯೂ ಗಮನಾರ್ಹವಾಗಿ ಪರಿಷ್ಕೃತ ವಿನ್ಯಾಸದೊಂದಿಗೆ ಬರುತ್ತದೆ, ಏಕೆಂದರೆ ಇದು ಬ್ರ್ಯಾಂಡ್‌ನ ಹೊಸ ಸೆನ್ಸೌಸ್ ಸ್ಪೋರ್ಟಿನೆಸ್ ವಿನ್ಯಾಸದ ತತ್ತ್ವಶಾಸ್ತ್ರವನ್ನು ಒಳಗೊಂಡಿದೆ. ಮುಂಭಾಗದ ವಿನ್ಯಾಸವು ಹೊಸ ಟ್ಯೂಸಾನ್ ಮತ್ತು ಪಾಲಿಸೇಡ್ ಎಸ್‍ಯುವಿಗಳಿಂದ ಹೆಚ್ಚು ಪ್ರೇರಿತವಾಗಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಈ ಹೊಸ ವೆನ್ಯೂ ಎಸ್‍ಯುವಿಯಲ್ಲಿ ಡಾರ್ಕ್ ಕ್ರೋಮ್‌ನೊಂದಿಗೆ ಹೊಸ ಗ್ರಿಲ್ ಅನ್ನು ಒಳಗೊಂಡಿರುವ ಪರಿಷ್ಕೃತ ಮುಂಭಾಗದ ಫಾಸಿಕದೊಂದಿಗೆ ಬರುತ್ತದೆ. ಕೆಳಗಿನ ಬಂಪರ್ ಸ್ಪೋರ್ಟಿ ಲುಕ್ ಗಾಗಿ ಹೆಚ್ಚು ಸ್ಪಷ್ಟವಾದ ಫಾಕ್ಸ್ ಸ್ಕಿಡ್ ಪ್ಲೇಟ್ ಅನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟಪ್ ಜೊತೆಗೆ ಎಲ್ಇಡಿ DRL ಗಳನ್ನು ಮೇಲ್ಭಾಗದಲ್ಲಿ ಮತ್ತು ಮುಖ್ಯ ಹೆಡ್‌ಲ್ಯಾಂಪ್ ಕೆಳಗಿರುತ್ತದೆ. ಮೇಲಿನ ಲೈಟಿಂಗ್ ಗ್ರಿಲ್ನ ವಿಸ್ತರಣೆಯಂತೆ ಕಾಣುತ್ತದೆ. ಈ ಹೊಸ ವೆನ್ಯೂ ಹೆಚ್ಚು ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ 2022ರ ಹ್ಯುಂಡೈ ವೆನ್ಯೂ ಸೈಡ್ ಪ್ರೊಫೈಲ್ ಪ್ರಸ್ತುತ ಮಾದರಿಗೆ ಹೆಚ್ಚಾಗಿ ಹೋಲುತ್ತದೆ. ಆದರೆ ಇದು ಹೊಸ ಅಲಾಯ್ ವ್ಹೀಲ್ ಗಳು ಮತ್ತು ವೀಲ್ ಕ್ಯಾಪ್ ಅನ್ನು ಪಡೆಯುತ್ತದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

2022ರ ವೆನ್ಯೂ ಮಾದರಿಯಲ್ಲಿ ಕಂಪನಿಯು ಈ ಹಿಂದಿನಂತೆಯೇ 1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಹೊಸ ಕಾರಿನಲ್ಲಿ ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್, 6-ಸ್ಪೀಡ್ ಮ್ಯಾನುವಲ್ ಮತ್ತು 6 -ಸ್ಪೀಡ್ ಐಎಂಟಿ ಗೇರ್‌ಬಾಕ್ಸ್ ಮತ್ತು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಮಾದರಿಗಳನ್ನು ಪರಿಚಯಿಸಲಾಗಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಹ್ಯುಂಡೈ ಕಾರುಗಳು...

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಭಾರತೀಯ ವಾಹನ ಮಾರುಕಟ್ಟೆಯು ಕಳೆದ ಕೆಲ ತಿಂಗಳುಗಳಿಂದ ಸೆಮಿಕಂಡಕ್ಟರ್ ಕೊರತೆ ಎದುರಿಸುತ್ತಿದ್ದು, ಇದರ ಪರಿಣಾಮವಾಗಿ ಹಲವು ಕಂಪನಿಗಳು ಮಾರಟದಲ್ಲಿ ಕುಸಿತ ಕಂಡಿದ್ದವು. ಇದೀಗ ವಾಹನ ಮಾರುಕಟ್ಟೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಮಾರಟದಲ್ಲಿ ಉತ್ತಮ ಪ್ರಗತಿ ಕಾಣುತ್ತಿವೆ. ಹ್ಯುಂಡೈ ಕೂಡ ಕಳೆದ ವರ್ಷ ಮೇ ತಿಂಗಳಿಗೆ ಹೋಲಿಸಿಕೊಂಡರೆ ಈ ವರ್ಷದ ಮೇನಲ್ಲಿ ಶೇ 67 ರಷ್ಟು ಬೆಳವಣಿಗೆಯನ್ನು ಕಂಡಿದೆ.

Most Read Articles

Kannada
English summary
Here is list hyundai top 3 bestselling cars in may 2022 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X