ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು...

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಕಿಯಾ ಇಂಡಿಯಾ(Kia India) 2022ರ ಆಗಸ್ಟ್ ತಿಂಗಳ ಕಾರು ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ವರದಿಗಳ ಪ್ರಕಾರ, ಕಿಯಾ ಇಂಡಿಯಾ ಕಂಪನಿಯು 2022ರ ಆಗಸ್ಟ್ ತಿಂಗಳಿನಲ್ಲಿ 22,322 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ತಿಂಗಳು ಕಿಯಾ ಕಾರುಗಳು ಭರ್ಜರಿ ಮಾರಾಟವನ್ನು ಕಂಡಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಭಾರತದಲ್ಲಿ ಮಾರುತಿ ಸುಜುಕಿಯಂತಹ ಕಾರುಗಳೊಂದಿಗೆ ಸ್ಪರ್ಧಿಸುವ ದೇಶದ ಪ್ರಮುಖ ವಾಹನ ತಯಾರಕರಲ್ಲಿ ಕಿಯಾ ಇಂಡಿಯಾ ಒಂದಾಗಿದೆ. ಕಿಯಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಪ್ರಮುಖ ಕಾರು ಉತ್ಪನ್ನಗಳ ತಂತ್ರಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸುತ್ತಿದೆ. ಆದರೆ ಕಳೆದ ತಿಂಗಳು ಕೆಲವು ಕಿಯಾ ಕಾರುಗಳು ಉತ್ತಮ ಮಾರಾಟವನ್ನು ಕಂಡಿದೆ. ಕಳೆದ ತಿಂಗಳು ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಕಿಯಾ ಸೆಲ್ಟೋಸ್

2022 ಆಗಸ್ಟ್ ತಿಂಗಳಿನಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯ 8,652 ಯುನಿಟ್ ಮಾರಾಟ ಮಾಡಿತು. ಕಳೆದ ವರ್ಷದ ಇದೇ ಅವಧಿಯಲ್ಲಿ 8,619 ಯುನಿಟ್ ಮಾರಾಟವಾಗಿದೆ. ಸಣ್ನ ಮಟ್ಟದ ಬೆಳವಾಣಿಗೆಯನ್ನು ಸಾಧಿಸಿದೆ, ಇತ್ತೀಚೆಗೆ, ಕಿಯಾ ಇಂಡಿಯಾ ಸೆಲ್ಟೋಸ್ ಲೈನ್ ಅಪ್ ಅನ್ನು ಹೊಸ ಸ್ಟ್ಯಾಂಡರ್ಡ್ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಎಲ್ಲಾ ನಾಲ್ಕು ಚಕ್ರಗಳಲ್ಲಿ ಆರು ಏರ್‌ಬ್ಯಾಗ್‌ಗಳು ಮತ್ತು ಡಿಸ್ಕ್ ಬ್ರೇಕ್‌ಗಳೊಂದಿಗೆ ನವೀಕರಿಸಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಕಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಮಾದರಿ ಸೆಲ್ಟೋಸ್ ಎಸ್‍ಯುವಿಯಾಗಿದೆ. ಈ ಸೆಲ್ಟೋಸ್ ಎಸ್‍ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಭಾರತೀಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಯಶ್ವಸಿಯಾಗಿದೆ. ಭಾರತದ ಗ್ರಾಹಕರು ಈ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿದೆ. ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಸೆಲ್ಟೋಸ್ ಯಶಸ್ಸು ದೇಶದಲ್ಲಿ ದಕ್ಷಿಣ ಕೊರಿಯಾದ ವಾಹನ ತಯಾರಕರಾದ ಕಿಯಾಗೆ ಅಡಿಪಾಯ ಹಾಕಿತು. ಪ್ರಸ್ತುತ ಕಿಯಾ ಸೆಲ್ಟೋಸ್ ಎಸ್‍ಯುವಿಯನ್ನು ಹಲವು ಎಂಜಿನ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ,

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಇದರಲ್ಲಿ 1.5 ಲೀಟರ್ ಪೆಟ್ರೋಲ್, 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಗಳಾಗಿವೆ. ಈ ಎಸ್‍ಯುವಿ ಮಾದರಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿ‍ಎಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಈ ಎಲ್ಲಾ ಎಂಜಿನ್ ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಸಿವಿ‍ಟಿ, 1.5 ಲೀಟರ್ ಡೀಸೆಲ್‍ಗೆ ಐವಿ‍ಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಕೂಡ ಅಳವಡಿಸಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಕಿಯಾ ಸೊನೆಟ್

ಕಳೆದ ತಿಂಗಳು ಕಿಯಾ ಸೊನೆಟ್ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಕಂಪನಿಯು ಕಳೆದ ತಿಂಗಳು ಭಾರತದಲ್ಲಿ ಕಿಯಾ ಸೊನೆಟ್ 7,838 ಯುನಿಟ್‌ಗಳನ್ನು ಮಾರಾಟ ಮಾಡಿದೆ, ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ 7,752 ಯುನಿಟ್ ಮಾರಾಟಕ್ಕೆ ಹೋಲಿಸಿದರೆ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಕಿಯಾ ಇಂಡಿಯಾ ಕಂಪನಿಯು 2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಸೊನೆಟ್(Sonet) ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಸೆಲ್ಟೋಸ್, ಕಾರ್ನಿವಲ್ ಬಳಿಕ ಕಿಯಾ ಮೋಟಾರ್ಸ್ ಮೂರನೇ ಮಾದರಿಯಾಗಿ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತ್ತು. ಇದೀಗ ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಈ ಎಸ್‍ಯುವಿಯು ಅದರ ಬೆಲೆ ಮತ್ತು ವೈಶಿಷ್ಟ್ಯಗಳ ಕಾರಣದಿಂದಾಗಿ ಸಾಕಷ್ಟು ಗಮನ ಸೆಳೆಯಿತು .ಹೆಚ್ಚು ಸ್ಥಳೀಯವಾಗಿರುವ ಈ ಎಸ್‍ಯುವಿ ಕಳೆದ 21 ತಿಂಗಳುಗಳಲ್ಲಿ ಕಂಪನಿಗೆ ಅಗ್ರ ಮಾರಾಟಗಾರ ಎಂದು ಸಾಬೀತಾಗಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಯುನಿಟ್ ಮತ್ತು 1.0-ಲೀಟರ್ ಟರ್ಬೊ-ಚಾರ್ಜ್ಡ್ ಪೆಟ್ರೋಲ್ ಅನ್ನು ಹೊಂದಿದೆ. ಇದರಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ 84 ಬಿಹೆಚ್‌ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್‌ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಇನ್ನು ಟಾಪ್ ಸ್ಪೆಕ್ ಮಾದರಿಯಲ್ಲಿರುವ 1.0-ಲೀಟರ್ ಪೆಟ್ರೋಲ್ ಎಂಜಿನ್ 119 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಅಥವಾ 6-ಸ್ಪೀಡ್ ಐಎಂಟಿ ಅನ್ನು ಕೂಡ ಜೋಡಿಸಲಾಗಿದೆ. ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯ ಡೀಸೆಲ್ ಎಂಜಿನ್ ಬಗ್ಗೆ ಹೇಳುವುದಾದರೆ, 1.5-ಲೀಟರ್ ಡೀಸೆಲ್ ಡಬ್ಲ್ಯುಜಿಟಿ ಎಂಜಿನ್ 99 ಬಿಹೆಚ್‌ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ವಿಜಿಟಿ ಎಂಜಿನ್ 114 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಕಿಯಾ ಕಾರೆನ್ಸ್

ಈ ಕಿಯಾ ಕಾರೆನ್ಸ್ ಜುಲೈ 2022 ರಲ್ಲಿ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ವಾಹನ ತಯಾರಕರು ಕಳೆದ ತಿಂಗಳು ಕ್ಯಾರೆನ್ಸ್‌ನ 5,558 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ.ಈ ವಾಹನವನ್ನು ಇತ್ತೀಚೆಗೆ GNCAP ಮೂಲಕ ಪರೀಕ್ಷಿಸಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಸದ್ಯ ಕಿಯಾ ಕಾರೆನ್ಸ್ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್‌ ಹೊಂದಿರುವ ಎಂಪಿವಿ ಕಾರು ಮಾದರಿಯಾಗಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು..

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಮಾದರಿಯಲ್ಲಿ ಪೆಟ್ರೋಲ್ ಮಾದರಿಗಳಿಂತಲೂ ಡೀಸೆಲ್ ಮಾದರಿಗಳಿಗೆ ಹೆಚ್ಚು ಬೇಡಿಕೆಯಿದೆ. ಹೊಸ ಕಾರಿನಲ್ಲಿ ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

More from DriveSpark

Article Published On: Monday, September 19, 2022, 19:30 [IST]
English summary
Here is list kia top 3 bestselling cars in august 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+