Just In
- 4 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 5 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 6 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 7 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- Movies Srirasthu Shubhamasthu ; ಶಾರ್ವರಿ ಹಿನ್ನೆಲೆ ಹೇಳಿದ ಮಹೇಶ : ಅತ್ತೆಯನ್ನು ಅನಾಥೆ ಎಂದ ದೀಪಿಕಾ..!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳು...
ಜನಪ್ರಿಯ ವಾಹನ ತಯಾರಕ ಕಂಪನಿಯಾದ ಕಿಯಾ ಇಂಡಿಯಾ(Kia India) 2022ರ ಸೆಪ್ಟೆಂಬರ್ ತಿಂಗಳ ಕಾರು ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ವರದಿಗಳ ಪ್ರಕಾರ, ಕಿಯಾ ಇಂಡಿಯಾ ಕಂಪನಿಯು 2022ರ ಸೆಪ್ಟೆಂಬರ್ ತಿಂಗಳಿನಲ್ಲಿ 25,857 ಯುನಿಟ್ಗಳನ್ನು ಮಾರಾಟ ಮಾಡಿದೆ. ಕಳೆದ ತಿಂಗಳು ಕಿಯಾ ಕಾರುಗಳು ಭರ್ಜರಿ ಮಾರಾಟವನ್ನು ಕಂಡಿದೆ.
ಭಾರತದಲ್ಲಿ ಮಾರುತಿ ಸುಜುಕಿಯಂತಹ ಕಾರುಗಳೊಂದಿಗೆ ಸ್ಪರ್ಧಿಸುವ ದೇಶದ ಪ್ರಮುಖ ವಾಹನ ತಯಾರಕರಲ್ಲಿ ಕಿಯಾ ಇಂಡಿಯಾ ಒಂದಾಗಿದೆ. ಕಿಯಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಪ್ರಮುಖ ಕಾರು ಉತ್ಪನ್ನಗಳ ತಂತ್ರಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸುತ್ತಿದೆ. ಆದರೆ ಕಳೆದ ತಿಂಗಳು ಕೆಲವು ಕಿಯಾ ಕಾರುಗಳು ಉತ್ತಮ ಮಾರಾಟವನ್ನು ಕಂಡಿದೆ. ಕಳೆದ ತಿಂಗಳು (ಸೆಪ್ಟೆಂಬರ್) ಅತಿ ಹೆಚ್ಚು ಮಾರಾಟವಾದ ಟಾಪ್-3 ಕಿಯಾ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಕಿಯಾ ಸೆಲ್ಟೋಸ್
2022 ಸೆಪ್ಟೆಂಬರ್ ತಿಂಗಳಿನಲ್ಲಿ ಕಿಯಾ ಸೆಲ್ಟೋಸ್ ಎಸ್ಯುವಿಯ 11,000 ಯುನಿಟ್ ಮಾರಾಟ ಮಾಡಿದೆ. ಒಟ್ಟಾರೆ ಮಾರಾಟದ 60 ಪ್ರತಿಶತದಷ್ಟು ಈ ಎಸ್ಯುವಿಯ ಪಾಲನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ, ಕಿಯಾ ಇಂಡಿಯಾ ಸೆಲ್ಟೋಸ್ ಲೈನ್ ಅಪ್ ಅನ್ನು ಹೊಸ ಸ್ಟ್ಯಾಂಡರ್ಡ್ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಎಲ್ಲಾ ನಾಲ್ಕು ಚಕ್ರಗಳಲ್ಲಿ ಆರು ಏರ್ಬ್ಯಾಗ್ಗಳು ಮತ್ತು ಡಿಸ್ಕ್ ಬ್ರೇಕ್ಗಳೊಂದಿಗೆ ನವೀಕರಿಸಿದೆ.
ಕಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಮಾದರಿ ಸೆಲ್ಟೋಸ್ ಎಸ್ಯುವಿಯಾಗಿದೆ. ಈ ಸೆಲ್ಟೋಸ್ ಎಸ್ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಭಾರತೀಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಕಿಯಾ ಸೆಲ್ಟೋಸ್ ಎಸ್ಯುವಿಯು ಯಶ್ವಸಿಯಾಗಿದೆ. ಭಾರತದ ಗ್ರಾಹಕರು ಈ ಎಸ್ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್ಗಳಿಗೆ ಫುಲ್ ಫಿದಾ ಆಗಿದ್ದಾರೆ.
ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿದೆ. ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಸೆಲ್ಟೋಸ್ ಯಶಸ್ಸು ದೇಶದಲ್ಲಿ ದಕ್ಷಿಣ ಕೊರಿಯಾದ ವಾಹನ ತಯಾರಕರಾದ ಕಿಯಾಗೆ ಅಡಿಪಾಯ ಹಾಕಿತು. ಪ್ರಸ್ತುತ ಕಿಯಾ ಸೆಲ್ಟೋಸ್ ಎಸ್ಯುವಿಯನ್ನು ಹಲವು ಎಂಜಿನ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ,
ಇದರಲ್ಲಿ 1.5 ಲೀಟರ್ ಪೆಟ್ರೋಲ್, 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಗಳಾಗಿವೆ. ಈ ಎಸ್ಯುವಿ ಮಾದರಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿಎಚ್ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್ಪಿ ಪವರ್ ಮತ್ತು 242 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಎಲ್ಲಾ ಎಂಜಿನ್ ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಅನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಸಿವಿಟಿ, 1.5 ಲೀಟರ್ ಡೀಸೆಲ್ಗೆ ಐವಿಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ಗಳನ್ನು ನೀಡಲಾಗಿದೆ.
ಕಿಯಾ ಸೊನೆಟ್
2022 ಸೆಪ್ಟೆಂಬರ್ ತಿಂಗಳು ಕಿಯಾ ಸೊನೆಟ್ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಕಂಪನಿಯು ಕಳೆದ ತಿಂಗಳು ಭಾರತದಲ್ಲಿ ಕಿಯಾ ಸೊನೆಟ್ 9,291 ಯುನಿಟ್ಗಳನ್ನು ಮಾರಾಟ ಮಾಡಿದೆ, ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಈ ಎಸ್ಯುವಿಯಲ್ಲಿ ಹೊಸ ಕಾಸ್ಮೆಟಿಕ್ ಮತ್ತು ಫೀಚರ್ ಅಪ್ಗ್ರೇಡ್ಗಳೊಂದಿಗೆ ಸೊನೆಟ್ ಎಕ್ಸ್-ಲೈನ್ ಅನ್ನು ಪರಿಚಯಿಸಿತು.
ಈ ಹೊಸ ಟಾಪ್-ಸ್ಪೆಕ್ ಸೊನೆಟ್ ಎಕ್ಸ್-ಲೈನ್ ರೂಪಾಂತರವು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಕಿಯಾ ಇಂಡಿಯಾ ಕಂಪನಿಯು 2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಸೊನೆಟ್(Sonet) ಕಾಂಪ್ಯಾಕ್ಟ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಸೆಲ್ಟೋಸ್, ಕಾರ್ನಿವಲ್ ಬಳಿಕ ಕಿಯಾ ಮೋಟಾರ್ಸ್ ಮೂರನೇ ಮಾದರಿಯಾಗಿ ಸೊನೆಟ್ ಕಾಂಪ್ಯಾಕ್ಟ್ ಎಸ್ಯುವಿಯನ್ನು ಬಿಡುಗಡೆಗೊಳಿಸಿತ್ತು.
ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿತು. ಈ ಹೊಸ ಸಬ್ ಕಾಂಪ್ಯಾಕ್ಟ್ ಎಸ್ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಈ ಎಸ್ಯುವಿಯು ಅದರ ಬೆಲೆ ಮತ್ತು ವೈಶಿಷ್ಟ್ಯಗಳ ಕಾರಣದಿಂದಾಗಿ ಸಾಕಷ್ಟು ಗಮನ ಸೆಳೆಯಿತು .ಹೆಚ್ಚು ಸ್ಥಳೀಯವಾಗಿರುವ ಈ ಎಸ್ಯುವಿ ಕಳೆದ 21 ತಿಂಗಳುಗಳಲ್ಲಿ ಕಂಪನಿಗೆ ಅಗ್ರ ಮಾರಾಟಗಾರ ಎಂದು ಸಾಬೀತಾಗಿದೆ.
ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್ಯುವಿಯ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಯುನಿಟ್ ಮತ್ತು 1.0-ಲೀಟರ್ ಟರ್ಬೊ-ಚಾರ್ಜ್ಡ್ ಪೆಟ್ರೋಲ್ ಅನ್ನು ಹೊಂದಿದೆ. ಇದರಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ 84 ಬಿಹೆಚ್ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ನೀಡಲಾಗಿದೆ.
ಇನ್ನು ಈ ಟಾಪ್ ಸ್ಪೆಕ್ ಮಾದರಿಯಲ್ಲಿರುವ 1.0-ಲೀಟರ್ ಪೆಟ್ರೋಲ್ ಎಂಜಿನ್ 119 ಬಿಹೆಚ್ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಅಥವಾ 6-ಸ್ಪೀಡ್ ಐಎಂಟಿ ಅನ್ನು ಕೂಡ ಜೋಡಿಸಲಾಗಿದೆ. ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್ಯುವಿಯ ಡೀಸೆಲ್ ಎಂಜಿನ್ ಬಗ್ಗೆ ಹೇಳುವುದಾದರೆ, 1.5-ಲೀಟರ್ ಡೀಸೆಲ್ ಡಬ್ಲ್ಯುಜಿಟಿ ಎಂಜಿನ್ 99 ಬಿಹೆಚ್ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ವಿಜಿಟಿ ಎಂಜಿನ್ 114 ಬಿಹೆಚ್ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಕಿಯಾ ಕಾರೆನ್ಸ್
ಈ ಹೊಸ ಕಿಯಾ ಕಾರೆನ್ಸ್ ಸೆಪ್ಟೆಂಬರ್ 2022 ರಲ್ಲಿ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ವಾಹನ ತಯಾರಕರು ಕಳೆದ ತಿಂಗಳು ಕ್ಯಾರೆನ್ಸ್ನ 5,233 ಯುನಿಟ್ಗಳನ್ನು ಮಾರಾಟ ಮಾಡಿದ್ದಾರೆ.ಈ ವಾಹನವನ್ನು ಇತ್ತೀಚೆಗೆ GNCAP ಮೂಲಕ ಪರೀಕ್ಷಿಸಲಾಗಿದೆ.
ಸದ್ಯ ಕಿಯಾ ಕಾರೆನ್ಸ್ ಎಂಪಿವಿ ಮಾದರಿಯು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿರುವ ಎಂಪಿವಿ ಕಾರು ಮಾದರಿಯಾಗಿದ್ದು, ಈ ಹೊಸ ಎಂಪಿವಿ ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ.
ಕಿಯಾ ಕಾರೆನ್ಸ್ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಮಾದರಿಯಲ್ಲಿ ಪೆಟ್ರೋಲ್ ಮಾದರಿಗಳಿಂತಲೂ ಡೀಸೆಲ್ ಮಾದರಿಗಳಿಗೆ ಹೆಚ್ಚು ಬೇಡಿಕೆಯಿದೆ. ಹೊಸ ಕಾರಿನಲ್ಲಿ ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.