ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಜನಪ್ರಿಯ ಮತ್ತು ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಕಳೆದ ತಿಂಗಳ ಮಾರಾಟದಲ್ಲಿಯು ಪಾರುಪತ್ಯ ಮುಂದುವರೆಸಿದೆ. ಮಾರುತಿ ಸುಜುಕಿ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿ ಮಾಸಿಕ ಪ್ರಯಾಣಿಕ ಕಾರು ಮಾರಾಟ ಪಟ್ಟಿಯಲ್ಲಿ ಪ್ರಾಬಲ್ಯ ಹೊಂದಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ತನ್ನ ಸರಣಿಯಲ್ಲಿ ಹಲವು ವೈವಿಧ್ಯಮಯ ಮಾದರಿಗಳನ್ನು ಹೊಂದಿದೆ. ಮಾರುತಿ ಸುಜುಕಿ ಕಂಪನಿಯ ಬಹುತೇಕ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯತೆ ಗಳಿಸುವಲ್ಲಿ ಯಶ್ವಸಿಯಾಗಿದೆ. ಇಂಡೋ-ಜಪಾನೀಸ್ ವಾಹನ ತಯಾರಕರು ಕಳೆದ ತಿಂಗಳು ಮಾರಾಟದ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದರು, ಅದೂ ಸಹ ಎಲ್ಲಾ ಪ್ರತಿಸ್ಪರ್ಧಿ ಕಾರು ತಯಾರಕರಿಗಿಂತ ಆರಾಮದಾಯಕ ಮುನ್ನಡೆ ಸಾಧಿಸಿದೆ. 2022ರ ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಅಗ್ರ ಮೂರು ಮಾರುತಿ ಸುಜುಕಿ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಮಾರುತಿ ಸುಜುಕಿ ಬಲೆನೊ

ಕಳೆದ ತಿಂಗಳ ಕಾರು ಮಾರಾಟದಲ್ಲಿ ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್, ಬಲೆನೊ ಮಾದರಿಯು ವ್ಯಾಗನ್‌ಆರ್ ಅನ್ನು ಹಿಂದಿಕ್ಕಿದೆ. 2022ರ ಆಗಸ್ಟ್ ತಿಂಗಳಿನಲ್ಲಿ ಬಲೆನೊ ಮಾದರಿಯ 8,418 ಯುನಿಟ್ ಗಳು ಮಾರಾಟವಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 15,646 ಯುನಿಟ್ ಮಾರಾಟವಾಗಿದೆ, ಇದರಿಂದಾಗಿ ಶೇಕಡಾ 18 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಮಾರುತಿ ಸುಜುಕಿ ದೇಶದಲ್ಲಿ ಬಲೆನೊ ಫೇಸ್‌ಲಿಫ್ಟ್ ಅನ್ನು ತಾಜಾ ವಿನ್ಯಾಸ ಮತ್ತು ವೈಶಿಷ್ಟ್ಯಗಳ ನವೀಕರಣಗಳೊಂದಿಗೆ ಪರಿಚಯಿಸಿತು. ಈ ಬಲೆನೊ ಫೇಸ್‌ಲಿಫ್ಟ್ ಮಾದರಿಯ ವಿನ್ಯಾಸದಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗೊಂಡಿದ್ದು, ನೆಕ್ಸಾವೆವ್ ಹನಿಕೊಂಬ್ ಗ್ರಿಲ್, ಫ್ಲಾಟರ್ ಕ್ಲಾಮ್‌ಶೆಲ್ ಬಾನೆಟ್ ಮತ್ತು ಪರಿಷ್ಕೃತ ಮುಂಭಾಗದ ಬಂಪರ್ ಜೊತೆಗೆ ದೊಡ್ಡ ಫಾಗ್ ಲ್ಯಾಂಪ್ ಹೌಸಿಂಗ್‌ಗಳನ್ನು ಹೊಂದಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಈ ಬಲೆನೊ ಕಾರಿನಲ್ಲಿ ಸೈಡ್ ಪ್ರೊಫೈಲ್ ಹಿಂದಿನ ಮಾದರಿಯಂತೆಯೇ ಕಂಡರೂ ಕ್ರೋಮ್ ಸ್ಟ್ರಿಪ್ ಅನ್ನು ಹೊರತುಪಡಿಸಿ ಈಗ ಕೆಳಗಿನ ವಿಂಡೋ ಲೈನ್‌ನಿಂದ ಹಿಂದಿನ ಕ್ವಾರ್ಟರ್ ಗ್ಲಾಸ್‌ಗೆ ಚಲಿಸುವಂತೆ ವಿನ್ಯಾಸಗೊಳಿಸಲಾಗಿದೆ. ಹಿಂಭಾಗದಲ್ಲಿ ಹೊಸ ಬಲೆನೊ ಹೊಸ ಟೈಲ್‌ಗೇಟ್ ವಿನ್ಯಾಸ, ಹೊಸ ಸಿ-ಆಕಾರದ ಎಲ್‌ಇಡಿ ಟೈಲ್-ಲೈಟ್‌ಗಳು ಮತ್ತು ರಿಪ್ರೊಫೈಲ್ಡ್ ರಿಯರ್ ಬಂಪರ್‌ನೊಂದಿಗೆ ಬಲೆನೊ ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರಾಂಡ್ಯೂರ್ ಗ್ರೇ, ಸೆಲೆಸ್ಟಿಯಲ್ ಬ್ಲೂ, ಓಪ್ಯುಲೆಂಟ್ ರೆಡ್ ಮತ್ತು ಲಕ್ಸ್ ಬೀಜ್ ಎನ್ನುವ ಆರು ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಹೊಸ ವೈಶಿಷ್ಟ್ಯತೆಗಳಲ್ಲಿ ಮರುವಿನ್ಯಾಸಗೊಳಿಸಲಾದ ಡ್ಯಾಶ್‌ಬೋರ್ಡ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಕನೆಕ್ಟಿವಿಟಿಯೊಂದಿಗೆ 9.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹಿಂದಿನ ಮಾದರಿಗಳಿಂತೆ ಎಸಿ ವೆಂಟ್‌ಗಳು, ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್‌, ಹೆಡ್ ಅಪ್ ಡಿಸ್ಪ್ಲೇ (ಹೆಚ್‌ಯುಡಿ) ಅನ್ನು ಹೊಂದಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಇನ್ನು ಹೆಚ್ಚುವರಿ ಏರ್‌ಬ್ಯಾಗ್ ಸೌಲಭ್ಯದ ಜೊತೆಗೆ ಹೊಸ ಬಲೆನೊದಲ್ಲಿ ಹೊಸ ಸುರಕ್ಷತಾ ವೈಶಿಷ್ಟ್ಯಗಳಲ್ಲಿ ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ಎಬಿಎಸ್, ಕೀ ಲೆಸ್ ಎಂಟ್ರಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಇಎಸ್‌ಪಿ ಮತ್ತು ಇಬಿಡಿ ಸಹ ಸೇರ್ಪಡೆಯಾಗಲಿದ್ದು, ಸುಜುಕಿ ಕಾರ್ ಕನೆಕ್ಟ್ ತಂತ್ರಜ್ಞಾನದಲ್ಲೂ ಸಹ ಸುಧಾರಿತ ವೈಶಿಷ್ಟ್ಯತೆಗಳನ್ನು ನೀಡಿದೆ. ಮಾರುತಿ ಸುಜುಕಿ ಕಂಪನಿಯ ಹೊಸ ಸುಜುಕಿ ಕನೆಕ್ಟ್ ಟೆಕ್ನಾಲಜಿ ಮೂಲಕ ಒಂದೇ ಸೂರಿನಡಿ 40ಕ್ಕೂ ಹೆಚ್ಚು ತಾಂತ್ರಿಕ ಸೌಲಭ್ಯಗಳನ್ನು ಸ್ಮಾರ್ಟ್‌ಫೋನ್ ಮೂಲಕವೇ ನಿರ್ವಹಣೆ ಮಾಡಬಹುದಾಗಿದ್ದು, ಅಮೆಜಾನ್ ಅಲೆಕ್ಸಾ ವಾಯ್ಸ್ ಕಮಾಂಡ್ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದು.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಮಾರುತಿ ವ್ಯಾಗನ್‌ಆರ್‌

ಮಾರುತಿ ಸುಜುಕಿಯ ಮಾರಾಟಕ್ಕೆ ವ್ಯಾಗನ್‌ಆರ್‌ ಪ್ರಮುಖ ಕೊಡುಗೆದಾರರಲ್ಲಿ ಒಂದಾಗಿದೆ. ಕಂಪನಿಯು ಕಳೆದ ತಿಂಗಳು ವ್ಯಾಗನ್‌ಆರ್‌ನ 18,398 ಯುನಿಟ್‌ಗಳನ್ನು ಮಾರಾಟ ಮಾಡಿದೆ, 2021ರ ಆಗಸ್ಟ್ ತಿಂಗಳಿನಲ್ಲಿ 9,628 ಯುನಿಟ್ ಮಾರಾಟಗಳನ್ನು ಮಾಡಿದೆ, ಆ ಮೂಲಕ 91 ಪ್ರತಿಶತದಷ್ಟು ಬಲವಾದ ಬೆಳವಣಿಗೆಯನ್ನು ದಾಖಲಿಸಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ವ್ಯಾಗನ್‌ಆರ್‌ ದೇಶದಲ್ಲಿನ ಹೆಚ್ಚಿನ ಇಂಧನ ಬೆಲೆಗಳಿಂದಾಗಿ CNG ಆಯ್ಕೆಯನ್ನು ಹುಡುಕುತ್ತಿರುವ ಖರೀದಿದಾರರಲ್ಲಿ ವಿಶೇಷವಾಗಿ ಜನಪ್ರಿಯ ಆಯ್ಕೆಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವ್ಯಾಗನ್‍ಆರ್ ಸುಮಾರು ಎರಡು ದಶಕಗಳಿಂದ ಮಾರಾಟದಲ್ಲಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಈ ವ್ಯಾಗನ್‍ಆರ್ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ ದೇಶದಲ್ಲಿ ಪ್ರಾರಂಭಿಸಿದಾಗಿನಿಂದಲೂ ಕೂಡ ಉತ್ತಮ ಬೇಡಿಕೆಯಿಂದ ಮಾರಾಟವಾಗುತ್ತಿದೆ. ಈಗ ಮೂರನೇ ತಲೆಮಾರಿನ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ. ಮಾರುತಿ ಸುಜುಕಿ ವ್ಯಾಗನ್ಆರ್ ಕಾರನ್ನು ಅದೇ 1.0-ಲೀಟರ್ ಮತ್ತು 1.2-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಗಳ ಆಯ್ಕೆಯಲ್ಲಿ ಮಾರಾಟ ಮಾಡಲಾಗುತ್ತದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಎಸ್-ಸಿಎನ್‌ಜಿ ಮಾದರಿಯಲ್ಲಿ 1.0-ಲೀಟರ್ 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದು 58 ಬಿಹೆಚ್‌ಪಿ ಮತ್ತು 78 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ ಜೋಡಿಸಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಮಾರುತಿ ಸ್ವಿಫ್ಟ್

ದೇಶಿಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವಿಫ್ಟ್ ಕಳೆದ 15 ವರ್ಷದಿಂದ ದೇಶಿಯ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಆಗಸ್ಟ್‌ನಲ್ಲಿ ಶೇಕಡಾ 10 ರಷ್ಟು ಕುಸಿತದ ಹೊರತಾಗಿಯೂ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ. ಸೆಮಿಕಂಡಕ್ಟರ್ ಪೂರೈಕೆಯಲ್ಲಿನ ಕೊರತೆಯಿಂದಾಗಿ ಮಾರಾಟದಲ್ಲಿನ ಈ ಕುಸಿತಕ್ಕೆ ಕಾರಣವಾಗಿದೆ. 2021ರ ಆಗಸ್ಟ್ ತಿಂಗಳಿನಲ್ಲಿ ಮಾರಾಟವಾದ 12,483 ಯುನಿಟ್ ಮಾರಾಟಕ್ಕೆ ಹೋಲಿಸಿದರೆ ಕಂಪನಿಯು ಕಳೆದ ತಿಂಗಳು 11,275 ಯೂನಿಟ್‌ಗಳನ್ನು ಮಾರಾಟ ಮಾಡಿದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಈ ಮಾರುತಿ ಸ್ವಿಫ್ಟ್ ಕಾರಿನಲ್ಲಿ 1.2 ಎಲ್ ಡ್ಯುಯಲ್‌ಜೆಟ್ ಪೆಟ್ರೋಲ್ ಇಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಮೋಟಾರ್ ಅನ್ನು ಸ್ಟಾರ್ಟ್/ಸ್ಟಾಪ್ ಫಂಕ್ಷನ್ ಮೂಲಕ ಹೆಚ್ಚಿಸಲಾಗಿದ್ದು ಅದು ಇಂಧನ ಕ್ಷಮತೆಯನ್ನು ಹೆಚ್ಚಿಸುತ್ತದೆ.

ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು..

ಇದು ARAI- ಪ್ರಮಾಣೀಕೃತ ಮೈಲೇಜ್ ಅನ್ನು 23.20 ಕಿ.ಮೀ ಆಗಿದೆ. ಇನ್ನು ಈ ಎಂಜಿನ್ ನೊಂದಿಗೆ ಮ್ಯಾನುಯಲ್ ಗೇರ್ ಬಾಕ್ಸ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಆಗಸ್ಟ್‌ನಲ್ಲಿ ಮಾರುತಿ ಸುಜುಕಿಯು ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನಲ್ಲಿ ಎಸ್-ಸಿಎನ್‌ಜಿ ರೂಪಾಂತರವನ್ನು ಸಹ ಪರಿಚಯಿಸಿತು, ಇದು ಈ ತಿಂಗಳ ಮಾರಾಟವನ್ನು ಇನ್ನಷ್ಟು ಹೆಚ್ಚಿಸಲಿದೆ.

Article Published On: Monday, September 12, 2022, 11:08 [IST]
English summary
Here is list maruti suzuki top 3 bestselling cars in august 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+