ಭಾರತದಲ್ಲಿ ಖರೀದಿಸಬಹುದಾದ ಕಡಿಮೆ ಬೆಲೆಯ ಅತ್ಯುತ್ತಮ ಎಸ್‍ಯುವಿಗಳಿವು..
ಹೊಸ ಕಾರನ್ನು ಖರೀದಿಸುವ ಗ್ರಾಹಕರು ಹೆಚ್ಚಾಗಿ ಎಸ್‌ಯುವಿ ಮಾದರಿಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಎಸ್‌ಯುವಿ ಮಾದರಿಗಳು ಅತ್ಯುತ್ತಮ ಪೀಚರ್ಸ್, ಪ್ರಾಯೋಗಿಕತೆ, ಕಾರ್ಯಕ್ಷಮತೆ ಮತ್ತು ಹೆಚ್ಚಿನ ಸ್ಪೇಸ್ ನಿಂದ ಕೂಡಿರುತ್ತದೆ. ಈ ಕಾರಣದಿಂದ ಇತ್ತೀಚೆಗೆ ಎಸ್‌ಯುವಿ ಮಾದರಿಗಳು ಹೆಚ್ಚು ಜನಪ್ರಿಯತೆಗಳಿಸುತ್ತಿದೆ.

ಕಾಂಪ್ಯಾಕ್ಟ್ ಎಸ್‍ಯುವಿ ಮತ್ತು ಮಿಡ್ ಸೈಜ್ ಎಸ್‍ಯುವಿ ವಿಭಾಗಗಳು ಭಾರತೀಯ ಕಾರು ಮಾರುಕಟ್ಟೆಯಲ್ಲಿ ಹೆಚ್ಚು ಸ್ಪರ್ಧಾತ್ಮಕ ಸ್ಥಳಗಳಾಗಿವೆ. ಮುಂದಿನ ದಿನಗಳಲ್ಲಿ ಈ ಎರಡು ವಿಭಾಗಗಳಲ್ಲಿ ಹೆಚ್ಚಿನ ಮಾದರಿಗಳು ಬಿಡುಗಡೆಯಾಗಲಿದೆ, ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಕಾರುಗಳ ಬೆಲೆಗಳು ಹೆಚ್ಚಾಗುತ್ತಿದೆ. ಆದರೂ ಕೆಲವು ಕೈಗೆಟುಕುವ ಅತ್ಯುತ್ತಮ ಎಸ್‍ಯುವಿಗಳಿವೆ, ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಒಬ್ಬರು ಖರೀದಿಸಬಹುದಾದ ಐದು ಅತ್ಯಂತ ಕೈಗೆಟುಕುವ ಎಸ್‍ಯುವಿಗಳ ಬಗ್ಗೆ ಇಲ್ಲಿದೆ ಮಾಹಿತಿ.

ಟಾಟಾ ಪಂಚ್
ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ತನ್ನ ಪಂಚ್ ಮೈಕ್ರೋ-ಎಸ್‌ಯುವಿಯನ್ನು ಬಿಡುಗಡೆ ಮಾಡಿತು. ಈ ಟಾಟಾ ಪಂಚ್ (Tata Punch) ಮೈಕ್ರೋ ಎಸ್‌ಯುವಿಯು ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಯಶಸ್ಸನ್ನು ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಟಾಟಾ ಪಂಚ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5.67 ಲಕ್ಷವಾಗಿದೆ.

ಭಾರತೀಯ ಮಾರುಕಟ್ಟೆಗೆ ಟಾಟಾದ ಹೊಸ ಉತ್ಪನ್ನ, ಪಂಚ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿ ವೇಗವಾಗಿ ಮಾರಾಟವಾಗುವ ಪಟ್ಟಿಗೆ ಏರಿದೆ. ಈ ಟಾಟಾ ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ. ಈ ಕಾರಿನಲ್ಲಿ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

ಈ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸುರಕ್ಷತಾ ರೇಟಿಂಗ್ಸ್ ಪಡೆದುಕೊಂಡಿದೆ.

ಈ ಪಂಚ್ ಎಸ್‍ಯುವಿ ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌ನಲ್ಲೂ ಅತ್ಯುತ್ತಮ ವಿನ್ಯಾಸವನ್ನು ಹೊಂದಿದೆ, ಪಂಚ್ ಮೈಕ್ರೋ ಎಸ್‌ಯುವಿಯ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗಲಿದೆ.

ನಿಸ್ಸಾನ್ ಮ್ಯಾಗ್ನೈಟ್
ನಿಸ್ಸಾನ್ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ. 1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇನ್ನು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100 ಬಿಎಚ್‌ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5.76 ಲಕ್ಷವಾಗಿದೆ.

ಈ ಎಸ್‍ಯುವಿಯಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ಹೊಂದಿದೆ,

ರೆನಾಲ್ಟ್ ಕಿಗರ್
ಹೆಚ್ಚು ಸ್ಪರ್ಧಾತ್ಮಕ ಸಬ್‌ಕಾಂಪ್ಯಾಕ್ಟ್ ಯುವಿ ವಿಭಾಗದಲ್ಲಿ ರೆನಾಲ್ಟ್ ಕಿಗರ್ ಬಿಡುಗಡೆಗೊಂಡು ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ. ಈ ರೆನಾಲ್ಟ್ ಕಿಗರ್ ಎಸ್‍ಯುವಿಯ ಆರಂಬಿಕ ಬೆಲೆಯು ರೂ.5.79 ಲಕ್ಷವಾಗಿದೆ,

ಈ ರೆನಾಲ್ಟ್ ಕಿಗರ್ ಕಾರಿನಲ್ಲಿ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಎಂಜಿನ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಸಾಮಾನ್ಯ ಪೆಟ್ರೋಲ್ ಎಂಜಿನ್ 72 ಬಿಹೆಚ್ಪಿ ಪವರ್ ಮತ್ತು ಟರ್ಬೋ ಪೆಟ್ರೋಲ್ ಎಂಜಿನ್ 100 ಬಿಜೆಚ್‍ಪಿ ಪವರ್ ಅನ್ನು ಉತ್ಪಾಸುತ್ತದೆ. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಕಿಗರ್ ಎಸ್‍ಯುವಿ ಪ್ರತಿಸ್ಪರ್ಧಿಮಾದರಿಗಳಂತೆ ಹಲವಾರು ಆಕರ್ಷಕ ಫೀಚರ್ಸ್ ಗಳನ್ನು ಒಳಗೊಂಡಿದೆ. ಈ ಕಿಗರ್ ಕಾರಿನಲ್ಲಿ ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್ ಮತ್ತು ರೂಫ್‌ರೈಲ್ಸ್ ಅನ್ನು ಒಳಗೊಂಡಿದೆ.

ಈ ಕಿಗರ್ ಎಸ್‍ಯುವಿಯಲಿ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿದ್ದು ಕಾರಿನ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಮತ್ತು 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ ಅನ್ನು ಒಳಗೊಂಡಿದೆ.

ಕಿಯಾ ಸೊನೆಟ್
ಕಿಯಾ ಸೊನೆಟ್ ಎಸ್‍ಯುವಿಯು ಎರಡು ಟ್ರಿಮ್‌ಗಳಲ್ಲಿ 17 ರೂಪಾಂತರಗಳಲ್ಲಿ ಲಭ್ಯವಿದೆ. ಇದು ಟೆಕ್ ಲೈನ್ ಮತ್ತು ಜಿಟಿ -ಲೈನ್ ಅನ್ನು ಪವರ್‌ಟ್ರೇನ್‌ಗಳು ಮತ್ತು ಟ್ರಾನ್ಸ್‌ಮಿಷನ್‌ಗಳ ಆಧಾರದ ಮೇಲೆ ಹಲವಾರು ಆಯ್ಕೆಗಳಲ್ಲಿ ವರ್ಗೀಕರಿಸಲಾಗಿದೆ. ಈ ಎಸ್‍ಯುವಿಯ ಆರಂಬಿಕ ಬೆಲೆಯು ರೂ.6.95 ಲಕ್ಷವಾಗಿದೆ,

ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಯುನಿಟ್ ಮತ್ತು 1.0-ಲೀಟರ್ ಟರ್ಬೊ-ಚಾರ್ಜ್ಡ್ ಪೆಟ್ರೋಲ್ ಅನ್ನು ಹೊಂದಿದೆ. ಇದರೊಂದಿಗೆ 1.2-ಲೀಟರ್ ಎಂಜಿನ್ 84 ಬಿಹೆಚ್ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ

ಇನ್ನು ಸೊನೆಟ್ ಎಸ್‍ಯುವಿಯ ಟಾಪ್ ಸ್ಪೆಕ್ ಮಾದರಿಯಲ್ಲಿರುವ 1.0-ಲೀಟರ್ ಎಂಜಿನ್ 119 ಬಿಹೆಚ್ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಅಥವಾ 6-ಸ್ಪೀಡ್ ಐಎಂಟಿ ಅನ್ನು ಜೋಡಿಸಲಾಗಿದೆ.

ಈ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯ ಡೀಸೆಲ್ ಎಂಜಿನ್ ಬಗ್ಗೆ ಹೇಳುವುದಾದರೆ, 1.5-ಲೀಟರ್ ಡೀಸೆಲ್ ಡಬ್ಲ್ಯುಜಿಟಿ ಎಂಜಿನ್ 99 ಬಿಹೆಚ್ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ವಿಜಿಟಿ ಎಂಜಿನ್ 114 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹ್ಯುಂಡೈ ವೆನ್ಯೂ
ಕೊರಿಯನ್ ವಾಹನ ತಯಾರಕ, ಹ್ಯುಂಡೈ 2019ರ ಆರಂಭದಲ್ಲಿ ಭಾರತದಲ್ಲಿ ವೆನ್ಯೂ ಸಬ್ -4 ಮೀಟರ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆ ಮಾಡಿತ್ತು. ಇದು ಪ್ರಸ್ತುತ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ, ಸಬ್-4 ಮೀಟರ್ ಎಸ್‌ಯುವಿ ಎಲ್ಲಾ-ಹೊಸ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಈ ಎಸ್‍ಯುವಿಯ ಆರಂಬಿಕ ಬೆಲೆಯು ರೂ.6.99 ಲಕ್ಷವಾಗಿದೆ,

ಈ ಹ್ಯುಂಡೈ ವೆನ್ಯೂ ಎಸ್‍ಯುವಿಯಲ್ಲಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಹೊಂದಿವೆ. ನ್ಯಾಚುರಲ್-ಆಕಾಂಕ್ಷೆಯ ಪೆಟ್ರೋಲ್ ಮಾದರಿಯು 17.52 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಟರ್ಬೋಚಾರ್ಜ್ಡ್ ಪೆಟ್ರೋಲ್ ಮ್ಯಾನುಯಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳು ಕ್ರಮವಾಗಿ 18.2 ಕಿ.ಮೀ ಮತ್ತು 18.15 ಕಿ,ಮೀ ಮೈಲೇಜ್ ಅನ್ನು ನೀಡುತ್ತದೆ, ಇನ್ನು ಡೀಸೆಲ್ ಮಾದರಿಯು 23.4 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ,


Click it and Unblock the Notifications