Just In
Don't Miss!
- News
Breaking; ತೈಲ ಕೊರತೆ, ಶ್ರೀಲಂಕಾದಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ
- Movies
ಕೌಟುಂಬಿಕ ಸಮಸ್ಯೆ ಬದಿಗೊತ್ತಿ 'ಮಾವು-ಬೇವು' ಕಥೆ ಹೇಳಲು ಹೊರಟ ಸುಚೇಂದ್ರ ಪ್ರಸಾದ್!
- Sports
ಕಿವೀಸ್ ವಿರುದ್ಧ ಮತ್ತೊಂದು ಭರ್ಜರಿ ಜಯ ಸಾಧಿಸಿದ ಇಂಗ್ಲೆಂಡ್: ನ್ಯೂಜಿಲೆಂಡ್ಗೆ ವೈಟ್ವಾಶ್ ಮುಖಭಂಗ
- Lifestyle
ನಿಮ್ಮಿಬ್ಬರ ಸಂಬಂಧ ಹೀಗಿದ್ದರೆ ಒಟ್ಟಿಗಿದ್ದು ಪಡುವ ನರಕಕ್ಕಿಂತ ಗುಡ್ಬೈ ಹೇಳುವುದೇ ಬೆಸ್ಟ್!
- Finance
ಜೂ.27ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Education
UAS Dharwad Recruitment 2022 : ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಜು.2ಕ್ಕೆ ನೇರ ಸಂದರ್ಶನ
- Technology
‘ಫಾಸ್ಟ್ಯಾಗ್' ನಲ್ಲಿರುವ ಹಣವನ್ನು ಕದಿಯಬಹುದಾ? ವೈರಲ್ ವೀಡಿಯೊದ ಅಸಲಿಯತೆ ಏನು?
- Travel
ನಾಡ ಹಬ್ಬ ಮೈಸೂರು ದಸರಾ - ನವರಾತ್ರಿ ಉತ್ಸವ 2022
ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್-5 ಡೀಸೆಲ್ ಕಾರುಗಳಿವು..
ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ಜನಪ್ರಿಯ ವಾಹನ ತಯಾರಕ ಕಂಪನಿಗಳು ತಮ್ಮ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಮುಂದಾಗುತ್ತಿವೆ. ಮುಂದಿನ ದಿನಗಳಲ್ಲಿ ಹಲವು ಹೊಸ ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿವೆ.

ಭಾರತೀಯ ಮಾರುಕಟ್ಟೆಯಲ್ಲಿ ಡೀಸೆಲ್ ಚಾಲಿತ ವಾಹನಗಳು ಹೆಚ್ಚು ಜನಪ್ರಿಯವಾಗಿತ್ತು. .ಆದರೆ ಇಂದಿನ ದಿನಗಳಲ್ಲಿ ಅವುಗಳ ಲಭ್ಯತೆ ಕಡಿಮೆಯಾಗುತ್ತಿದೆ. ವಿವಿಧ ವಾಹನ ತಯಾರಕರು ಡೀಸೆಲ್ ಕಾರುಗಳನ್ನು ಸ್ಥಗಿತಗೊಳಿಸಿದೆ. ಇದಕ್ಕೆ ಪ್ರಮುಖ ಕಾರಣ ಹಿಂದಿನ ವರ್ಷ ಜಾರಿಯಾದ ಬಿಎಸ್6 ಮಾಲಿನ್ಯ ನಿಯಮವಾಗಿದೆ. ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕೂಡ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಇದರ ನಡುವೆ ಹಲವಾರು ಜನಪ್ರಿಯ ಕಂಪನಿಗಳ ಡೀಸೆಲ್ ಕಾರುಗಳು ಬಿಡುಗಡೆಯಾಗಲಿದೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಟಾಪ್-5 ಡೀಸೆಲ್ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಹ್ಯುಂಡೈ ಕ್ರೆಟಾ
ಹ್ಯುಂಡೈ ಕ್ರೆಟಾ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಅತ್ಯಂತ ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್ ಗಳ ಮೂಲಕ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾದ ಜನಪ್ರಿಯ ಮಾದರಿಯಾಗಿದೆ.

2022ರ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್(Hyundai Creta Facelift) ಎಸ್‍ಯುವಿಯು ಹೊಸ ನವೀಕರಣಗಳನ್ನು ಪಡೆದುಕೊಂಡಿದೆ. ಬ್ರ್ಯಾಂಡ್ ಈಗ ಕಾರಿನ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಹುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ಈ ಕ್ಯಾಲೆಂಡರ್ ವರ್ಷದ ದ್ವಿತೀಯಾರ್ಧದಲ್ಲಿ ಕ್ರೆಟಾದ ಫೇಸ್‌ಲಿಫ್ಟೆಡ್ ಆವೃತ್ತಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಈ ಹೊಸ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯು ಪ್ರಮುಖ ನವೀಕರಣಗಳನ್ನು ಪಡೆದುಕೊಂಡಿದೆ. ಪ್ರಮುಖವಾಗಿ ಸ್ಪೋರ್ಟಿ ವಿನ್ಯಾಸ ಮತ್ತು ಹೊಸ ಫೀಚರ್ಸ್ ಗಳನ್ನು ಪಡೆಯಲಿವೆ. 1.5 ಲೀಟರ್ CRDi ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಇನ್ನು ಗೇರ್ ಬಾಕ್ಸ್ ಆಯ್ಕೆಗಳು ಪ್ರಸ್ತುತ ಮಾದರಿಯಂತೆ ಇರಬಹುದು ಎಂದು ನಿರೀಕ್ಷಿಸುತ್ತೇವೆ.

ಜೀಪ್ ಮೆರಿಡಿಯನ್
ಈ ಮೆರಿಡಿಯನ್ ಜನಪ್ರಿಯ ಕಂಪಾಸ್ ಎಸ್‍ಯುವಿಯನ್ನು ಆಧರಿಸಿದೆ. ಈ ಹೊಸ ಜೀಪ್ ಮೆರಿಡಿಯನ್ ಅನ್ನು ಈ ವರ್ಷದ ಮೇ ತಿಂಗಳಿನಲ್ಲಿ ಮಹಾರಾಷ್ಟ್ರದ ಪುಣೆ ಬಳಿಯ ಬ್ರಾಂಡ್‌ನ ರಂಜನ್‌ಗಾಂವ್ ಘಟಕದಲ್ಲಿ ಉತ್ಪಾದಿಸಲಿದೆ. ಇದೇ ಮೇ ತಿಂಗಳಿನಲ್ಲಿ ಈ ಹೊಸ ಎಸ್‍ಯುವಿಯು ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಜೀಪ್ ಮೆರಿಡಿಯನ್ ಮಾದರಿ ದಕ್ಷಿಣ ಅಮೆರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುವ ಜೀಪ್ ಕಮಾಂಡರ್‌ನೊಂದಿಗೆ ಹಲವಾರು ಸಾಮಾನ್ಯತೆಯನ್ನು ಹೊಂದಿದೆ. ಸಾಮಾನ್ಯ ಕಂಪಾಸ್‌ಗೆ ಹೋಲಿಸಿದರೆ ಇದು ವಿನ್ಯಾಸ ಬದಲಾವಣೆಗಳನ್ನು ಹೊಂದಿರುತ್ತದೆ.

ಜೀಪ್ ಮೆರಿಡಿಯನ್‌ನ ಎಸ್‍ಯುವಿಯ ಮುಂಭಾಗವನ್ನು ಕಂಪಾಸ್‌ಗೆ ಹೋಲಿಸಿದರೆ ವಿಭಿನ್ನ ಸ್ಟೈಲಿಂಗ್ ಅಂಶಗಳೊಂದಿಗೆ ಇದು ಹೆಚ್ಚು ಮಸ್ಕ್ಲರ್ ಲುಕ್ ಅನ್ನು ಹೊಂದಿದೆ. ಜೀಪ್ ಮೆರಿಡಿಯನ್‌ನ ಮುಂಭಾಗದ ಫಾಸಿಕ ವಿಶಿಷ್ಟವಾದ ಕ್ರೋಮ್ ಸ್ಲೇಟೆಡ್ ಫ್ರಂಟ್ ಗ್ರಿಲ್, ಮಸ್ಕಲರ್ ಬಾನೆಟ್ ರಚನೆ, ಅಗಲವನ್ನು ಒಳಗೊಂಡ ದಪ್ಪ ಅಡ್ಡ ರೇಖೆಯೊಂದಿಗೆ ಸ್ಪೋರ್ಟಿ ಬಂಪರ್, ಅಗಲವಾದ ಸೆಂಟ್ರಲ್ ಏರ್ ಟೆಕ್ ಮತ್ತು ಬಾನೆಟ್‌ನ ಅಂಚಿನಲ್ಲಿ ಜೀಪ್ ಬ್ಯಾಡ್ಜ್ ಅನ್ನು ಹೊಂದಿದೆ.

ಈ ಹೊಸ ಮೆರಿಡಿಯನ್ ಎಸ್‍ಯುವಿಯಲ್ಲಿ 2.0 ಲೀಟರ್ ನಾಲ್ಕು-ಸಿಲಿಂಡರ್ ಮಲ್ಟಿಜೆಟ್ II ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 170 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಎಂಜಿನ್ ಅನ್ನು 6 ಸ್ಪೀಡ್ ಎಂಟಿ ಅಥವಾ ಎಟಿಯೊಂದಿಗೆ ಜೋಡಿಸಲಾಗುತ್ತದೆ. ಮೊದಲನೆಯದು 4×2 ಸಿಸ್ಟಮ್ ಮತ್ತು ಎರಡನೆಯದು 4×2 ಮತ್ತು 4×4 ಕಾನ್ಫಿಗರೇಶನ್‌ಗಳನ್ನು ಹೊಂದಿದೆ. ಇನ್ನು ಮೈಲ್ಡ್-ಹೈಬ್ರಿಡ್ ಅನ್ನು ಕೂಡ ಜೋಡಿಸಲಾಗುತ್ತದೆ.

ಟೊಯೊಟಾ ಹಿಲಕ್ಸ್
ಟೊಯೊಟಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಪಿಕ್ಅಪ್ ಟ್ರಕ್ ಈಗಾಗಲೇ ಡೀಲರ್‌ಶಿಪ್‌ಗಳಿಗೆ ಆಗಮಿಸಲು ಪ್ರಾರಂಭಿಸಿದೆ. ಈ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಟ್ರಕ್ ಮಾದರಿಯು ಎರಡು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಾಗುವ ನಿರೀಕ್ಷೆಯಿದೆ.

ಇದು 2.4 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 2.8-ಲೀಟರ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 204 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಹಿಲಕ್ಸ್ ಟಾಪ್ ರೂಪಾಂತರಗಳು AWD ಆಯ್ಕೆಯನ್ನು ಪಡೆಯುವ ನಿರೀಕ್ಷೆಯಿದೆ, ಇದು ಆಫ್-ರೋಡಿಂಗ್‌ಗೆ ಉತ್ತಮವಾಗಿರುತ್ತದೆ.

ಹ್ಯುಂಡೈ ಟ್ಯೂಸಾನ್
ಹ್ಯುಂಡೈ ತನ್ನ ನ್ಯೂ ಜನರೇಷನ್ ಟ್ಯೂಸಾನ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಹೊಸ ಟ್ಯೂಸಾನ್(Hyundai Tucson) ಆವೃತ್ತಿಯ ವಿನ್ಯಾಸದಲ್ಲಿ ಹಲವಾರು ಅಪ್ದೇಟ್ ಗಳನ್ನು ಮಾಡಲಾಗಿದೆ. ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಭಾರತದಲ್ಲಿ ಕಾಣಿಸಿಕೊಂಡ ಸ್ಪೈ ಚಿತ್ರ ಇತ್ತೀಚೆಗೆ ಬಹಿರಂಗವಾಗಿತ್ತು.

ಈ ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯಲ್ಲಿ ಕ್ರೋಮ್ ಸ್ಟ್ರಿಪ್ ಹೊಂದಿದೆ. ಈ ಎಸ್‍ಯುವಿಯ ಕೊನೆಯಲ್ಲಿ ವಿಶಿಷ್ಟವಾದ ಸಿ-ಪಿಲ್ಲರ್ ಆಕಾರವನ್ನು ರೂಪಿಸಿದೆ. ಈ ಹೊಸ ಎಸ್‍ಯುವಿಯ ಹಿಂದಿನ ಪ್ರೊಫೈಲ್‌ನಲ್ಲಿ ಉದ್ದವಾದ ಬೆಲ್ಟ್‌ಲೈನ್ಗಳಿವೆ. ಈ ಎಸ್‍ಯುವಿಯಲ್ಲಿ 19 ಇಂಚಿನ ವ್ಹೀಲ್ಸ್ ಅನ್ನು ಅಳವಡಿಸಿದೆ. ಈ ವ್ಹೀಲ್ ಗಳು ವಿಭಿನ್ನವಾದ ವಿನ್ಯಾಸದಿಂದ ಕೂಡಿದೆ. ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿ ಶಾರ್ಕ್ ಫಿನ್ ಆಂಟೆನಾ, ಬಾಡಿ ಕಲರ್‌ನಲ್ಲಿ ರೂಫ್-ರೈಲ್ ಮತ್ತು ಫ್ಲೋಟಿಂಗ್ ರೂಫ್‌ಲೈನ್ ಹೊಂದಿದೆ.

ಇನ್ನು ಹಿಂಭಾಗದಲ್ಲಿ ಅಗಲವಾಗಿ ಉದ್ದಕೂ ರೆಡ್ ಎಲ್ಇಡಿ ಲೈಟ್ ಅನ್ನು ಅಳವಡಿಸಿದೆ. ಇದು ಟೈಲ್-ಲ್ಯಾಂಪ್‌ಗಳನ್ನು ಕನೆಕ್ಟ್ ಆಗಿದೆ. ಇನ್ನು ಟ್ಯೂಸನ್ ಎಸ್‍ಯುವಿಯಲಿರುವ ಟೈಲ್-ಲೈಟ್ ಕ್ರೆಟಾದ ಟೈಲ್-ಲ್ಯಾಂಪ್‌ನ ವಿಕಾಸಗೊಂಡ ಆವೃತ್ತಿಯಂತೆ ಕಾಣುತ್ತದೆ.

ಮಹೀಂದ್ರಾ ಸ್ಕಾರ್ಪಿಯೋ
ಹೊಸ ಮಹೀಂದ್ರಾ ಸ್ಕಾರ್ಪಿಯೋ ನವೀಕರಿಸಲಾದ ಗ್ರಿಲ್‌ನೊಂದಿಗೆ ಅಡ್ಡಲಾಗಿ ಮತ್ತು ನಡುವೆ ಐದು ಲಂಬ ಸ್ಲೇಟ್ಗಳನ್ನು ನೀಡಲಾಗಿದೆ. ಇದರೊಂದಿಗೆ ಎರಡು ಭಾಗಗಳಲ್ಲಿ ಹೆಡ್‌ಲೈಟ್ ಘಟಕಗಳನ್ನು ನೀಡಲಾಗಿದ್ದು, ಅದನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ, ಕೆಳಗಿನ ಭಾಗದಲ್ಲಿ ಫಾಗ್ ಲೈಟ್ ಇರಿಸಲಾಗಿದೆ. ಅದರ ಪಕ್ಕದಲ್ಲಿ ನೋಂದಣಿ ಫಲಕವನ್ನು ಹಾಕಲಾಗಿದ್ದು, ವಾಹನವನ್ನು ಟೊಯಿಂಗ್ ಮಾಡಲು ಸಹ ಸಹಕಾರಿಯಾಗಿದೆ.

ಹೊಸ ಸ್ಕಾರ್ಪಿಯೋ ಕಾರು ಮಾದರಿಯ ಮಾರಾಜೋ ಎಂಪಿವಿ ಹೊಸ ಆವೃತ್ತಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ. ಈ ಎಸ್‍ಯುವಿಯಲ್ಲಿ 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಬಹುದು.