ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಭಾರತದಲ್ಲಿ ಮಾರುತಿ ಸುಜುಕಿ, ಹ್ಯುಂಡೈ ಕಾರುಗಳೊಂದಿಗೆ ಸ್ಪರ್ಧಿಸುವ ದೇಶದ ಪ್ರಮುಖ ವಾಹನ ತಯಾರಕರಲ್ಲಿ ಟಾಟಾ ಮೋಟಾರ್ಸ್ ಒಂದಾಗಿದೆ. ಟಾಟಾ ಮೋಟಾರ್ಸ್ ಇತ್ತೀಚೆಗೆ 2022ರ ಸೆಪ್ಟೆಂಬರ್ ತಿಂಗಳ ವಾಹನ ಮಾರಾಟದ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಟಾಟಾ ಕಂಪನಿಯು ಶೇ. 85.21 ರಷ್ಟು ಬೆಳವಣಿಗೆಯೊಂದಿಗೆ 47,654 ಕಾರುಗಳನ್ನು ಮಾರಾಟ ಮಾಡಿದೆ. ಸೆಮಿಕಂಡಕ್ಟರ್ ಪೂರೈಕೆಯಲ್ಲಿನ ಕೊರತೆ ನಡುವೆಯೂ ಕಳೆದ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ 25,730 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಈ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ 47,654 ಯುನಿಟ್ ಕಾರುಗಳ ಮಾರಾಟದ ಮೂಲಕ ಶೇ. 85.21 ರಷ್ಟು ಬೆಳವಣಿಗೆ ಸಾಧಿಸಿದೆ. 2022ರ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಅಗ್ರ ಮೂರು ಟಾಟಾ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಟಾಟಾ ನೆಕ್ಸಾನ್

ಟಾಟಾ ನೆಕ್ಸಾನ್(Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ತಿಂಗಳಿನಲ್ಲಿ ಟಾಟಾ ನೆಕ್ಸಾನ್ ಮಾದರಿಯ 14,518 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

2021ರ ಸೆಪ್ಟೆಂಬರ್ ತಿಂಗಳಿನಲ್ಲಿ ನೆಕ್ಸಾನ್ ಮಾದರಿಯ 9,211 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.58 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಈ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಐಸಿಇ ಮತ್ತು ಎಲೆಕ್ಟ್ರಿಕ್ ಆವೃತ್ತಿಗಳಿಗೆ ಟಾಟಾ ಮೋಟಾರ್ಸ್ ಬಲವಾದ ಬೇಡಿಕೆಯನ್ನು ಮುಂದುವರೆಸಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಈ ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ. ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು. 2020ರ ಆರಂಭದಲ್ಲಿ ಫೇಸ್ ಲಿಫ್ಟ್ ನೆಕ್ಸಾನ್ ಆಗಮನದಿಂದ ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೇಡಿಕೆಯು ಹೆಚ್ಚಾಗುತ್ತಿದೆ. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಪ್ಯೂರ್ ಸಿಲ್ವರ್ ಬಣ್ಣದ ಆಯ್ಜೆಯನ್ನು ಇತ್ತೀಚೆಗೆ ಸ್ಥಗಿತಗೊಳಿಸಿತ್ತು ಇದು ಎಲ್ಲಾ ರೂಪಾಂತರಗಳೊಂದಿಗೆ ಲಭ್ಯವಿತ್ತು. ಇನ್ನು ಈ ಬಣ್ಣವನ್ನು ಹೊರತುಪಡಿಸಿ ಟಾಟಾ ನೆಕ್ಸಾನ್ ಅಟ್ಲಾಸ್ ಬ್ಲ್ಯಾಕ್, ಪೊಲಿಜ್ ಗ್ರೀನ್, ಕ್ಯಾಲ್ಗರಿ ವೈಟ್, ಫ್ಲೇಮ್ ರೆಡ್ ಮತ್ತು ಡೇಟೋನಾ ಗ್ರೇ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರಲಿದೆ. ಈ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯು ದೇಶದಲ್ಲೇ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಲಭ್ಯವಿದೆ

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಟಾಟಾ ಪಂಚ್

ಈ ಪಂಚ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿ 2022ರ ಸೆಪ್ಟೆಂಬರ್ ತಿಂಗಳಿನಲ್ಲಿ ಎರಡನೇ ಸ್ಥಾನವನ್ನು ಉಳಿಸಿಕೊಂಡಿದೆ. ಭಾರತೀಯ ವಾಹನ ತಯಾರಕರು ಕಳೆದ ತಿಂಗಳು ಪಂಚ್‌ನ 12,251 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆಯಾದಾಗಿನಿಂದ ಈ ವಾಹನವು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಈ ಟಾಟಾ ಪಂಚ್ (Tata Punch) ಮೈಕ್ರೋ ಎಸ್‌ಯುವಿಯು ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಯಶಸ್ಸನ್ನು ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಟಾಟಾ ಪಂಚ್ ಮಾದರಿಯು ನೂತನ ಫೀಚರ್ಸ್, ಬಜೆಟ್ ಬೆಲೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಮೈಕ್ರೊ ಎಸ್‌ಯುವಿಯಾಗಿದೆ. ಇನ್ನು ಈ ಹೊಸ ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಕೂಡ ಪೈಪೋಟಿ ನೀಡುತ್ತದೆ. ಪಂಚ್ ಮೈಕ್ರೋ-ಎಸ್‌ಯುವಿಯು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ. ಈ ಮೈಕ್ರೋ-ಎಸ್‌ಯುವಿಯಲ್ಲಿ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಈ 1.2-ಲೀಟರ್ ಎಂಜಿನ್ 83 ಬಿಎಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಕೂಡ ಲಭ್ಯವಿದೆ,

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಇನ್ನು ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿಯಲ್ಲಿ ಸಹ ಗರಿಷ್ಠ ಮಟ್ಟದ ಸುರಕ್ಷತಾ ರೇಟಿಂಗ್ಸ್ ಪಡೆದುಕೊಂಡಿದೆ. ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲೂ ಅತ್ಯುತ್ತಮ ವಿನ್ಯಾಸವನ್ನು ಹೊಂದಿದೆ, ಪಂಚ್ ಮೈಕ್ರೋ ಎಸ್‌ಯುವಿಯ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಂಡರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗುತ್ತಿದೆ. ಈ ಕಾರಿನ ಬೆಸ್ ರೂಪಾಂತರದಲ್ಲಿಯು ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...

ಟಾಟಾ ಟಿಯಾಗೋ

ಟಾಟಾದ ಎಂಟ್ರಿ ಲೆವೆಲ್ ಟಿಯಾಗೋ ಕಳೆದ ತಿಂಗಳು ಕಂಪನಿಗೆ ಮೂರನೇ ಅತಿ ಹೆಚ್ಚು ಮಾರಾಟವಾದ ಮಾದರಿಯಾಗಿದೆ. ಕಂಪನಿಯು 2022ರ ಸೆಪ್ಟೆಂಬರ್ ತಿಂಗಳಿನಲ್ಲಿ ಟಿಯಾಗೊದ 6,936 ಯುನಿಟ್‌ಗಳನ್ನು ಕಳೆದ ವರ್ಷದ ಇದೇ ಅವಧಿಯಲ್ಲಿ 5,121 ಯುನಿಟ್ ಮಾರಾಟಕ್ಕೆ ಹೋಲಿಸಿದರೆ ಮಾರಾಟ ಮಾಡಿತು, ಆ ಮೂಲಕ 35 ಪ್ರತಿಶತದಷ್ಟು ಬೆಳವಣಿಗೆಯನ್ನು ಸಾಧಿಸಿದೆ.

Article Published On: Friday, October 14, 2022, 11:29 [IST]
English summary
Here is list tata top 3 bestselling cars in september 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+