ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ನಗರಗಳಲ್ಲಿ ತನ್ನ ಮಾರಾಟ ಸೌಲಭ್ಯವನ್ನು ವಿಸ್ತರಣೆ ಮಾಡುತ್ತಿದ್ದು, ಮಾರಾಟ ಸೌಲಭ್ಯ ವಿಸ್ತರಣೆಯೊಂದಿಗೆ ಗ್ರಾಹಕರಿಗೆ ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ಸೌಲಭ್ಯವನ್ನು ಸಹ ಬಲಪಡಿಸುತ್ತಿದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಇವಿ ವಾಹನಗಳಿಗೆ ಪೂರಕವಾಗಿ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುವತ್ತ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವಿ ದ್ವಿಚಕ್ರ ವಾಹನ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೀರೋ ಎಲೆಕ್ಟ್ರಿಕ್ ಸಹ ವಿವಿಧ ಕಂಪನಿಗಳ ಜೊತೆಗೂಡಿ ಬೃಹತ್ ಪ್ರಮಾಣದಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳ ಜಾಲ ತೆರೆಯುವ ಯೋಜನೆಗೆ ಚಾಲನೆ ನೀಡಿದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳ ಹೆಚ್ಚಳಕ್ಕೆ ಪ್ರಮುಖ ಕಂಪನಿಗಳು ವಿಶೇಷ ಆಸಕ್ತಿ ವಹಿಸಿವೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಹೀಗಾಗಿ ಇವಿ ವಾಹನಗಳು ಹೆಚ್ಚುತ್ತಿರುವಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಈಗಾಗಲೇ ಪ್ರಮುಖ ಕಂಪನಿಗಳೊಂದಿಗೆ ಮುಂದಿನ ಮೂರು ವರ್ಷದಲ್ಲಿ ಒಟ್ಟು 1 ಲಕ್ಷಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಯೋಜನೆಯಲ್ಲಿದ್ದು, ಇದೀಗ ಕಂಪನಿಯು ರಿವೋಸ್ ಕಂಪನಿಯೊಂದಿನ ಪಾಲುದಾರಿಕೆ ಯೋಜನೆ ಅಡಿ 50 ಸಾವಿರ ಬೋಲ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಬೋಲ್ಟ್ ಚಾರ್ಜಿಂಗ್ ನಿಲ್ದಾಣವನ್ನು ಅಳವಡಿಸಿಕೊಳ್ಳಲು ಬಯಸುವ ಬಳಕೆದಾರರಿಗೆ ಹೀರೋ ಎಲೆಕ್ಟ್ರಿಕ್ ಕಂಪನಿಯು ಪ್ರತ್ಯೇಕ ಆ್ಯಪ್ ಮೂಲಕ ಚಾರ್ಜಿಂಗ್ ಸೌಲಭ್ಯಗಳ ಮಾಹಿತಿಯನ್ನು ಒದಗಿಸಲಿದ್ದು, ಮುಂದಿನ ಎರಡು ವರ್ಷಗಳ ಅವಧಿಗೆ ಹೊಸ ಪಾಲುದಾರಿಕೆ ಅಡಿ 50 ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲಿದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಇದರ ಜೊತೆಗೆ ಹೀರೋ ಎಲೆಕ್ಟ್ರಿಕ್ ಕಂಪನಿಯು ತನ್ನ 2,000 ಗ್ರಾಹಕರ ಮನೆಗಳಲ್ಲಿ ಬೋಲ್ಟ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಉಚಿತವಾಗಿ ಸ್ಥಾಪಿಸುವ ಘೋಷಣೆ ಮಾಡಿದ್ದು, ಹೀರೋ ಎಲೆಕ್ಟ್ರಿಕ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಬೋಲ್ಟ್ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿಯನ್ನು ಸಂಯೋಜಿಸಲಾಗುತ್ತದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಚಾರ್ಜಿಂಗ್ ಸ್ಟೇಷನ್‌ಗಳನ್ನು ಪತ್ತೆಹಚ್ಚಲು, ಸ್ಲಾಟ್‌ಗಳನ್ನು ಕಾಯ್ದಿರಿಸಲು ಮತ್ತು ಪಾವತಿಗಳನ್ನು ಮಾಡಲು ಹೊಸ ಅಪ್ಲಿಕೇಶನ್ ಸಹಕಾರಿಯಾಗಲಿದ್ದು, ಹೀರೋ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್‌ಗಳ ಬಳಕೆಯನ್ನು ಸುಲಭಗೊಳಿಸಲು ಚಂದಾದಾರಿಕೆ ಆಧಾರಿತ ಯೋಜನೆಗಳನ್ನು ಸಹ ಪ್ರಕಟಿಸುತ್ತದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಇನ್ನು ಎಲೆಕ್ಟ್ರಿಕ್ ವಾಹನ ಕಂಪನಿಗಳು ದುಬಾರಿ ಇಂಧನ ಪರಿಣಾಮ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ದೇಶದ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಕೂಡಾ ಕಳೆದ ವರ್ಷದಿಂದಲೂ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯೂ ಕೂಡಾ ಹೆಚ್ಚಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಇವಿ ಸ್ಕೂಟರ್ ಉತ್ಪಾದನೆಯನ್ನು ಆರಂಭಿಸಿ ಸುಮಾರು 13 ವರ್ಷಗಳನ್ನು ಪೂರೈಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದುವರೆಗೆ 4 ಲಕ್ಷ ಯುನಿಟ್‌ಗಳಿಗೂ ಹೆಚ್ಚು ಇವಿ ವಾಹನಗಳನ್ನು ಮಾರಾಟ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಇವಿ ಉತ್ಪನ್ನಗಳಲ್ಲಿ ಹಲವಾರು ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ದೇಶಾದ್ಯಂತ 50 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಕಂಪನಿಯು ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಈ ಹಿಂದಿನ ಹತ್ತು ವರ್ಷಗಳಲ್ಲಿ ವಾಹನ ಮಾರಾಟ ಪ್ರಮಾಣವು ಕಳೆದ ಎರಡು ವರ್ಷಗಳಲ್ಲಿಯೇ ದ್ವಿಗುಣಗೊಂಡಿದೆ.

More from DriveSpark

Article Published On: Wednesday, April 20, 2022, 17:11 [IST]
English summary
Hero electric and bolt partnership to install 50000 ev charging stations soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+