ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಎಲೆಕ್ಟ್ರಿಕ್ ವಾಹನಗಳಿಗೆ ಸಮರ್ಥವಾದ ಚಾರ್ಜಿಂಗ್ ಸೌಲಭ್ಯಗಳನ್ನು ಒದಗಿಸಲು ಪ್ರಮುಖ ಕಂಪನಿಗಳು ಚಾರ್ಜಿಂಗ್ ನಿಲ್ದಾಣಗಳ ಜೊತೆಗೆ ಬ್ಯಾಟರಿ ವಿನಿಯಮ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಹೋಂಡಾ ಅಂಗಸಂಸ್ಥೆಯಾದ ಹೋಂಡಾ ಪವರ್‌ಪ್ಯಾಕ್ ಎನರ್ಜಿ ಕಂಪನಿಯು ಇದೀಗ ಬ್ಯಾಟರಿ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಹೋಂಡಾ ಗ್ರೂಪ್‌ನ ಅಂಗಸಂಸ್ಥೆಯಾಗಿರುವ ಹೋಂಡಾ ಪವರ್‌ಪ್ಯಾಕ್ ಎನರ್ಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್(HEID) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸಹಯೋಗದಲ್ಲಿ ಬ್ಯಾಟರಿ ವಿನಿಮಯ ಸೇವೆಯನ್ನು ನಮ್ಮ ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಹಿಂದೂಸ್ತಾನ್ ಪೆಟ್ರೋಲಿಯಂ ನಿಲ್ದಾಣವೊಂದರಲ್ಲಿ ಸಹಭಾಗಿತ್ವದ ಬ್ಯಾಟರಿ ವಿನಿಯಮ ಕೇಂದ್ರಕ್ಕೆ ಚಾಲನೆ ನೀಡಲಾಗಿದ್ದು, ಹೊಸ ಬ್ಯಾಟರಿ ವಿನಿಮಯ ಕೇಂದ್ರದ ಮೂಲಕ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಪ್ರಸ್ತುತ ಬ್ಯಾಟರಿ ಸ್ವಾಪ್ ಸೇವೆಯನ್ನು ಹೋಂಡಾ ಕಂಪನಿಯು ಇ-ರಿಕ್ಷಾ ಮಾತ್ರ ಮಾತ್ರ ಒದಗಿಸಲಾಗುತ್ತಿದ್ದು, ಹಂತ-ಹಂತವಾಗಿ ಇದು ಇವಿ ಸ್ಕೂಟರ್ ಮತ್ತು ಬೈಕ್ ಮಾದರಿಗಳಿಗೂ ವಿಸ್ತರಿಸಬಹುದಾಗಿದೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಹೊಸ ಬ್ಯಾಟರಿ ವಿನಿಯಮ ಕೇಂದ್ರದಿಂದಾಗಿ ಮುಂಬರುವ ದಿನಗಳಲ್ಲಿ ಇ-ವಾಹನಗಳ ಬೆಲೆ ಇಳಿಕೆ ಸಾಧ್ಯತೆಗಳ ಬಗ್ಗೆ ಹೋಂಡಾ ಕಂಪನಿಯು ಮಾಹಿತಿ ಹಂಚಿಕೊಂಡಿದೆ. ಬ್ಯಾಟರಿ ವಿನಿಯಮ ಲಭ್ಯವಿರುವುದರಿಂದ ಇನ್ಮುಂದೆ ಇವಿ ರಿಕ್ಷಾ ಖರೀದಿಸುವ ಗ್ರಾಹಕರು ಬ್ಯಾಟರಿ ರಹಿತವಾಗಿ ಇ ರಿಕ್ಷಾ ಖರೀದಿಸುವ ಮೂಲಕ ಬ್ಯಾಟರಿ ಸೌಲಭ್ಯಕ್ಕಾಗಿ ವಿನಿಯಮ ಕೇಂದ್ರದಲ್ಲಿ ಚಂದಾದಾರರಾಗಬಹುದಾಗಿದೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಬ್ಯಾಟರಿ ಕಾರಣಕ್ಕಾಗಿ ಹೆಚ್ಚಿನ ಬೆಲೆ ಹೊಂದಿರುವ ಇ ರಿಕ್ಷಾಗಳಿಗೆ ಬ್ಯಾಟರಿ ವಿನಿಯಮ ಕೇಂದ್ರವು ವರವಾಗಲಿದ್ದು, ಬ್ಯಾಟರಿಯನ್ನು ದುಬಾರಿ ಮೊತ್ತಕ್ಕೆ ಸ್ವಂತಕ್ಕೆ ಖರೀದಿಸುವ ಬದಲು ಅತಿ ಕಡಿಮೆ ಬೆಲೆಗಳಲ್ಲಿ ಚಂದಾದಾರರಾಗಿ ಬಳಕೆ ಮಾಡಿಕೊಳ್ಳಬಹುದಾಗಿದೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಬ್ಯಾಟರಿ ಸೌಲಭ್ಯಕ್ಕಾಗಿ ಚಂದಾದಾರರಾಗುವ ಗ್ರಾಹಕರಿಗೆ ಒಟ್ಟು ಎರಡು ಬ್ಯಾಟರಿ ಪ್ಯಾಕ್ ಸಿಗಲಿದ್ದು, ಒಂದು ಖಾಲಿಯಾದ ನಂತರ ಚಾರ್ಜ್ ಮಾಡಲಾದ ಬ್ಯಾಟರಿ ಜೊತೆಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಸಾಮಾನ್ಯ ಚಾರ್ಜಿಂಗ್ ನಿಲ್ದಾಣದಲ್ಲಿ ಚಾರ್ಜಿಂಗ್‌ಗಾಗಿ ಗಂಟೆಗಟ್ಟಲೇ ನಿಲ್ಲಬೇಕಾದ ಪರಿಸ್ಥಿತಿ ತಪ್ಪಿಸಲು ಬ್ಯಾಟರಿ ವಿನಿಯಮ ಕೇಂದ್ರಗಳು ಸಾಕಷ್ಟು ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ಹೋಂಡಾ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಮಹತ್ವದ ಯೋಜನೆಗೆ ಚಾಲನೆ ನೀಡಿವೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಹೋಂಡಾ ಬ್ಯಾಟರಿ ವಿನಿಯಮ ಸೇವೆಯನ್ನು ಆರಂಭದಲ್ಲಿ ಬೆಂಗಳೂರಿನಲ್ಲಿ ಆರಂಭಿಸಿದ್ದು, ಕಾರ್ಯಾಚರಣೆ ಯಶಸ್ವಿ ನಂತರ ಇದನ್ನು ಇತರೆ ಮಹಾನಗರಗಳಲ್ಲೂ ಪ್ರಾರಂಭಿಸಲು ಸಿದ್ದತೆ ನಡೆಸಲಾಗಿದೆ. ಹೋಂಡಾ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ಫೆಬ್ರವರಿಯಲ್ಲಿಯೇ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಭಾರತದಲ್ಲಿ ಇ-ಮೊಬಿಲಿಟಿಯನ್ನು ವೇಗಗೊಳಿಸಲು ಎರಡು ಕಂಪನಿಗಳು ಸಾಮಾನ್ಯ ಉದ್ದೇಶದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿವೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

2023ರ ವೇಳೆಗೆ ಬೆಂಗಳೂರಿನ ಸುಮಾರು 70ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳಲ್ಲಿ ಭಾರತದ ಅತಿದೊಡ್ಡ ಬ್ಯಾಟರಿ ಸ್ವಾಪ್ ನೆಟ್‌ವರ್ಕ್ ಅನ್ನು ಸ್ಥಾಪಿಸಲು ಕಂಪನಿಯು ಯೋಜನೆ ರೂಪಿಸಿದ್ದು, ಹೆಚ್ಚುವರಿಯಾಗಿ ಪ್ರತಿಕ್ರಿಯೆಯ ಆಧಾರದ ಮೇಲೆ ಇತರೆ ಪ್ರಮುಖ ಭಾರತೀಯ ನಗರಗಳಿಗೆ ಸೇವೆಗಳನ್ನು ವಿಸ್ತರಿಸುವ ಕಾರ್ಯತಂತ್ರ ರೂಪಿಸಲಾಗಿದೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಭಾರತವು ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾಗಲಿದ್ದು, ಕಳೆದ ಕೆಲ ವರ್ಷಗಳಲ್ಲಿ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ದ್ವಿಚಕ್ರ ವಾಹನಗಳ ವಿಭಾಗದಲ್ಲಿ ಭಾರೀ ಪ್ರಮಾಣದ ಉತ್ಪಾದನೆಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಹೆಚ್ಚುತ್ತಿರುವ ಇಂಧನ ದರಗಳು ಮತ್ತು ಮಾಲಿನ್ಯದ ಕಾರಣಕ್ಕೆ ಹೊಸ ವಾಹನ ಖರೀದಿದಾರರು ಪರಿಸರ ಸ್ನೇಹಿಯಾಗಿರುವ ಮತ್ತು ಕಡಿಮೆ ವೆಚ್ಚದಾಯಕವಾಗಿರುವ ಇವಿ ವಾಹನಗಳ ಬಳಕೆಗೆ ಆದ್ಯತೆ ನೀಡುತ್ತಿದ್ದು, ಚಾರ್ಜಿಂಗ್ ನಿಲ್ದಾಣಗಳು ಹೆಚ್ಚುತ್ತಿರುವಂತೆ ಇವಿ ವಾಹನ ನೋಂದಣಿ ಸಂಖ್ಯೆ ಕೂಡಾ ಸಾಕಷ್ಟು ಸುಧಾರಣೆ ಕಂಡಿದೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಇಂಧನ ಆಧರಿತ ವಾಹನಗಳ ಮಾರಾಟಕ್ಕೆ ಹೋಲಿಕೆ ಮಾಡಿದರೆ ಇವಿ ವಾಹನಗಳ ಮಾರಾಟವು ಸಾಕಷ್ಟು ಕಡಿಮೆ ಪ್ರಮಾಣದಲ್ಲಿದ್ದರೂ ಇದರ ಪ್ರಮಾಣ ಮುಂಬರುವ ದಿನಗಳಲ್ಲಿ ವೇಗವಾಗಿ ಬದಲಾಗುವ ನೀರಿಕ್ಷೆಗಳಿದ್ದು, ಅದರಲ್ಲೂ ಇವಿ ದ್ವಿಚಕ್ರ ವಾಹನಗಳು ಮುಂಬರುವ ಕೆಲವೇ ವರ್ಷಗಳಲ್ಲಿ ಭಾರೀ ಪ್ರಮಾಣದಲ್ಲಿ ಮಾರಾಟಗೊಳ್ಳಲಿವೆ.

ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ

ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸಲು ಸರ್ಕಾರಗಳು ಹೆಚ್ಚಿನ ಮಟ್ಟದ ಪ್ರೊತ್ಸಾಹ ಯೋಜನೆಗಳ ಜೊತೆ ಹೆಚ್ಚಿನ ಮಟ್ಟದ ಚಾರ್ಜಿಂಗ್ ನಿಲ್ದಾಣಗಳು ಮತ್ತು ಹೆಚ್ಚಿನ ಶ್ರೇಣಿ ಹೊಂದಿರುವ ಇವಿ ಮಾದರಿಗಳು ಮಾರುಕಟ್ಟೆ ಪ್ರವೇಶಿಸುವುದು ಅವಶ್ಯವಿದೆ.

Most Read Articles

Kannada
English summary
Honda and hindustan petroleum inaugurated battery swapping stations in bangalore
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X