ಮಾರ್ಚ್ ಅವಧಿಗೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹೋಂಡಾ ಕಾರ್ಸ್
ಹೋಂಡಾ ಕಾರ್ಸ್ ಇಂಡಿಯಾ(Honda Cars India) ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿಯ ಮೇಲೆ ಮಾರ್ಚ್ ಅವಧಿಯ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಈ ತಿಂಗಳಾಂತ್ಯದ ತನಕ ಹೊಸ ಆಫರ್‌ಗಳು ಲಭ್ಯವಿರಲಿವೆ.

ಕೋವಿಡ್ ಮತ್ತು ಸೆಮಿಕಂಡಕ್ಟರ್ ಪರಿಣಾಮ ಹೊಸ ವಾಹನ ಮಾರಾಟವು ಏರಿಳಿತ ಕಾಣುತ್ತಿದ್ದು, ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಪ್ರಮುಖ ಕಾರು ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಂಡಿವೆ. ಹೋಂಡಾ ಕಾರ್ಸ್ ಕಂಪನಿಯು ಸಹ ಹೊಸ ಕಾರು ಮಾರಾಟದಲ್ಲಿ ಏಳಿತ ಅನುಭವಿಸುತ್ತಿದ್ದು, ಬೇಡಿಕೆಯಲ್ಲಿ ಸ್ಥಿರತೆಗಾಗಿ ತನ್ನ ಸಂಭಾವ್ಯ ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಕೊಡುಗೆಗಳನ್ನು ಪ್ರಕಟಿಸುತ್ತಿವೆ.

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ಮಾರ್ಚ್ ಅವಧಿಗಾಗಿ ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ವಿವಿಧ ಆಫರ್‌ಗಳನ್ನು ನೀಡುತ್ತಿದೆ.

ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅಮೇಜ್(Amaze), ಜಾಝ್(Jazz), ಡಬ್ಲ್ಯುಆರ್-ವಿ(WR-V), ಸಿಟಿ(City) ಸೇರಿದಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಎಲ್ಲಾ ಮಾದರಿಗಳ ಮೇಲೂ ವಿವಿಧ ಆಫರ್ ಘೋಷಣೆ ಮಾಡಿದೆ.

ಹೋಂಡಾ ಕಂಪನಿಯ ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿದ್ದು, ಅಮೇಜ್ ಕಂಪ್ಯಾಕ್ಟ್ ಸೆಡಾನ್, ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ಡಬ್ಲ್ಯುಆರ್-ವಿ ಕಾರುಗಳ ಮೇಲೆ ಗರಿಷ್ಠ ರೂ.35 ಸಾವಿರ ತನಕ ಡಿಸ್ಕೌಂಟ್ ನೀಡುತ್ತಿದೆ.

ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ಹೋಂಡಾ ಕಂಪನಿಯು ಎಎಂಟಿ ವರ್ಷನ್ ಸೇರಿದಂತೆ ಎಲ್ಲಾ ಮಾದರಿಗಳ ಮೇಲೂ ರೂ. 15 ಸಾವಿರ ಆಫರ್ ನೀಡುತ್ತಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್ ಸೇರಿದಂತೆ ಆಕ್ಸೆಸರಿಸ್ ಪ್ಯಾಕೇಜ್ ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್‌ಗಳಲ್ಲಿ ಕ್ರಾಸ್ಒವರ್ ಎಸ್‌ಯುುವಿ ಕಾರು ಮಾದರಿಯಾದ ಡಬ್ಲ್ಯುಆರ್-ವಿ ಮಾದರಿಯ ಎಲ್ಲಾ ಪೆಟ್ರೋಲ್ ರೂಪಾಂತರಗಳ ಮೇಲೂ ಹೋಂಡಾ ಕಂಪನಿಯು ರೂ. 26 ಸಾವಿರ ತನಕ ಆಫರ್ ನೀಡುತ್ತಿದ್ದು, ಇದರಲ್ಲಿ ಕ್ಯಾಶ್ ಬ್ಯಾಕ್ ಸೇರಿದಂತೆ ಉಚಿತ ಆಕ್ಸೆಸರಿಸ್ ಪ್ಯಾಕೇಜ್ ನೀಡುತ್ತಿದೆ.

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಹೋಂಡಾ ಜಾಝ್ ಮಾದರಿಯ ಎಲ್ಲಾ ರೂಪಾಂತರಗಳ ಮೇಲೂ ಗ್ರಾಹಕರಿಗೆ ರೂ. 33,158 ತನಕ ಆಫರ್ ಲಭ್ಯವಿದ್ದು, ಇದರಲ್ಲಿ ರೂ. 10 ಸಾವಿರ ಕ್ಯಾಶ್ ಬ್ಯಾಕ್ ಆಫರ್ ಸೇರಿದಂತೆ, ಎಕ್ಸ್‌ಚೆಂಜ್, ಉಚಿತ ಆಕ್ಸೆಸರಿಸ್ ಪ್ಯಾಕೇಜ್ ಸಹ ಲಭ್ಯವಿರಲಿದೆ.

ಇನ್ನುಳಿದಂತೆ ಹೋಂಡಾ ಹೊಸ ಆಫರ್ ಸಿಟಿ ಸೆಡಾನ್ ಆವೃತ್ತಿಯ ಮೇಲೂ ಹೋಂಡಾ ಕಂಪನಿಯು ಆಫರ್ ನೀಡುತ್ತಿದ್ದು, ಹೊಸ ಆಫರ್‌ಗಳಲ್ಲಿ ಸಿಟಿ ಕಾರಿನ ನ್ಯೂ ಜನರೇಷನ್ ಮೇಲೆ ರೂ. 35,596 ತನಕ ಆಫರ್ ಲಭ್ಯವಿವೆ.

ಹೋಂಡಾ ಕಂಪನಿಯು ಸದ್ಯ ಸಿಟಿ ಸೆಡಾನ್ ಮಾದರಿಯಲ್ಲಿ ನ್ಯೂ ಜನರೇಷನ್ ಸಿಟಿ ಮಾರಾಟದ ಜೊತೆಗೆ ನಾಲ್ಕನೇ ತಲೆಮಾರಿನ ಸಿಟಿ ಸೆಡಾನ್ ಕಾರಿನ ಮಾರಾಟವನ್ನು ಸಹ ಮುಂದುವರಿಸಿದ್ದು, ಹಳೆಯ ತಲೆಮಾರಿನ ಆವೃತ್ತಿಯು ರೂ. 20 ಸಾವಿರ ಮೌಲ್ಯದ ಆಫರ್ ನೀಡುತ್ತಿದೆ.

ಸದ್ಯ ಖರೀದಿಗೆ ಲಭ್ಯವಿರುವ ಹಳೆಯ ತಲೆಮಾರಿನ ಸಿಟಿ ಸೆಡಾನ್ ಮಾದರಿಯು ಕೆಲವೇ ಕೆಲವು ವೆರಿಯೆಂಟ್‌ಗಳನ್ನು ಮಾತ್ರ ಖರೀದಿಗೆ ಲಭ್ಯವಿದ್ದು, ಹೊಸ ಸಿಟಿ ಕಾರು ಮಾದರಿಯು ಮಾತ್ರ ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಅತ್ಯುತ್ತಮ ಬೇಡಿಕೆ ಹೊಂದಿದೆ.

ಇನ್ನು ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಹೊಸ ವರ್ಷದ ಆರಂಭದಲ್ಲಿ ವಿವಿಧ ಆಫರ್‌ಗಳ ಮೂಲಕ ಕಾರು ಮಾರಾಟವನ್ನು ಸುಧಾರಿಸುತ್ತಿದ್ದು, ಕಳೆದ ತಿಂಗಳು ಕಂಪನಿಯು ಒಟ್ಟು 9,524 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದೆ.

ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಹೋಂಡಾ ಕಂಪನಿಯು 10,311 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.7.6 ರಷ್ಟು ಕುಸಿತವನ್ನು ಕಂಡಿದೆ. ಇನ್ನು 2022ರ ಜನವರಿ ತಿಂಗಳಿನಲ್ಲಿ ಹೋಂಡಾ ಕಂಪನಿಯು 12,149 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಹೋಂಡಾ ಕಾರ್ಸ್ ಇಂಡಿಯಾವು ತಿಂಗಳಿನಿಂದ ತಿಂಗಳಿಗೆ ಶೇಕಡಾ 21.6 ರಷ್ಟು ಕುಸಿತವನ್ನು ಕಂಡಿದೆ.

ಸೆಮಿಕಂಡಕ್ಟರ್ ಚಿಪ್‌ಗಳ ನಿರಂತರ ಕೊರತೆಯು ವಾಹನ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ ಎಂದಿರುವ ಹೋಂಡಾ ಕಂಪನಿಯು ಶೀಘ್ರದಲ್ಲಿಯೇ ಸೆಮಿಕಂಡಕ್ಟರ್ ಕೊರತೆಗೆ ಪರಿಹಾರ ಸಿಗಲಿದೆ ಎನ್ನುವ ಭರವಸೆ ವ್ಯಕ್ತಪಡಿಸಿದೆ.


Click it and Unblock the Notifications