ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಇಂಡಿಯಾ 2022ರ ಜೂನ್ ತಿಂಗಳಿನ ಕಾರು ಮಾರಾಟ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ. ಇದರ ಪ್ರಕಾರ, ಜಪಾನಿನ ಕಾರು ತಯಾರಕರು ಕಳೆದ ತಿಂಗಳು ಒಟ್ಟು 10,336 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ.

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಈ ಪೈಕಿ 7,834 ಯುನಿಟ್‌ಗಳು ದೇಶೀಯ ಮಾರುಕಟ್ಟೆಯಲ್ಲಿ ಮಾರಾಟವಾಗಿವೆ. ಮೇ ತಿಂಗಳಲ್ಲಿ ಹೋಂಡಾ 8,188 ಯುನಿಟ್‌ಗಳನ್ನು ಮಾರಾಟ ಮಾಡಿದ್ದರಿಂದ ದೇಶೀಯ ಮಾರಾಟದ ಅಂಕಿ ಅಂಶವು ತಿಂಗಳಿನಿಂದ ತಿಂಗಳಿಗೆ ಶೇಕಡಾ 4.3 ರಷ್ಟು ಕುಸಿತವನ್ನು ಕಂಡಿದೆ. ಆದರೆ ವರ್ಷದಿಂದ ವರ್ಷಕ್ಕೆ 64.3 ಶೇಕಡಾ ಬೆಳವಣಿಗೆಯನ್ನು ಕಂಡಿತು. 2021ರ ಜೂನ್ ತಿಂಗಳಿನಲ್ಲಿ ಕಾರೋನಾ ಸೋಂಕು ಹೆಚ್ಚಳದಿಂದ ಕಾರು ಮಾರಾಟದ ಮೇಲೆ ಪರಿಣಾಮವನ್ನು ಬೀರಿತು.

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್‌ನ ಮಾರ್ಕೆಟಿಂಗ್ ಮತ್ತು ಸೇಲ್ಸ್ ವಿಭಾಗದ ನಿರ್ದೇಶಕ ಯುಯಿಚಿ ಮುರಾಟಾ, "ಆಟೋಮೋಟಿವ್ ಮಾರಾಟದ ಬಳಕೆಯ ವಿಷಯದಲ್ಲಿ ಉದ್ಯಮವು ಉತ್ತಮ ತಿಂಗಳನ್ನು ಗಮನಿಸಿರುವುದರಿಂದ ಹೋಂಡಾ ಕಾರುಗಳ ಬೇಡಿಕೆಯ ಪ್ರವೃತ್ತಿಯು ದೃಢವಾಗಿ ಉಳಿದಿದೆ.

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಚಿಪ್ ಕೊರತೆ ಸೇರಿದಂತೆ ಪೂರೈಕೆ ಬದಿಯ ಸವಾಲುಗಳು ಜೂನ್‌ನಲ್ಲಿ ನಮ್ಮ ಉತ್ಪಾದನೆ ಮತ್ತು ರವಾನೆಗಳ ಮೇಲೆ ಪರಿಣಾಮ ಬೀರುವುದನ್ನು ಮುಂದುವರೆಸಿದೆ. ದುರದೃಷ್ಟವಶಾತ್, ಈ ಪರಿಸ್ಥಿತಿಯು ಇನ್ನೂ ಮುಂದುವರಿದಿದೆ ಮತ್ತು ಚೇತರಿಕೆಯ ಸ್ಪಷ್ಟ ಚಿಹ್ನೆಗಳು ಇನ್ನೂ ಗೋಚರಿಸುವುದಿಲ್ಲ.

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ನಮ್ಮ ಇತ್ತೀಚಿನ ಉತ್ಪನ್ನ ಕೊಡುಗೆ, ಹೊಸ ಸಿಟಿ ಇ: HEV, ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಮತ್ತು ಅದರ ಪ್ರಯೋಜನಗಳ ಕಡೆಗೆ ಗ್ರಾಹಕರ ಗಮನ ಮತ್ತು ಆಸಕ್ತಿಯನ್ನು ಸೆಳೆಯುವುದನ್ನು ಮುಂದುವರೆಸಿದೆ. ಈ ಸೆಲ್ಫೆ ಚಾರ್ಜಿಂಗ್ ಎಲೆಕ್ಟ್ರಿಕ್ ಹೈಬ್ರಿಡ್ ತಂತ್ರಜ್ಞಾನವು ಮಾರುಕಟ್ಟೆಯಲ್ಲಿ ಬಲವಾದ ಸ್ವೀಕಾರವನ್ನು ಪಡೆಯುತ್ತದೆ ಮತ್ತು ಇದು ಎಲೆಕ್ಟ್ರಿಕರಣ ಭವಿಷ್ಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನಾವು ನಂಬುತ್ತೇವೆ ಎಂದು ಹೇಳಿದರು.

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

2022ರ ಜೂನ್ ತಿಂಗಳಿನಲ್ಲಿ ಹೋಂಡಾ 2,502 ಯುನಿಟ್‌ಗಳನ್ನು ರಫ್ತು ಮಾಡಿದೆ, ಈ ಅಂಕಿ ಅಂಶವು 23.1 ಪ್ರತಿಶತದಷ್ಟು ತಿಂಗಳ-ಮಾಸಿಕ ಬೆಳವಣಿಗೆಯನ್ನು ಕಂಡಿದೆ. ಜೂನ್ 2021 ರಲ್ಲಿ ಹೋಂಡಾ ಕೇವಲ 1,241 ಯುನಿಟ್‌ಗಳನ್ನು ರಫ್ತು ಮಾಡಿದೆ ಮತ್ತು ಜೂನ್ 2022 ರಲ್ಲಿ ಎರಡು ಪಟ್ಟು ಹೆಚ್ಚು ಕಾರುಗಳನ್ನು ರಫ್ತು ಮಾಡುವಲ್ಲಿ ಯಶಸ್ವಿಯಾಗಿದೆ, ಇದು 101.6 ಶೇಕಡಾ ಬೆಳವಣಿಗೆಯನ್ನು ವರದಿ ಮಾಡಿದೆ.

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಇನ್ನು ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯ ಅಧಿಕಾರಿಗಳು ಕೆಲವು ತಿಂಗಳ ಹಿಂದೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಸಚಿವರು ಅಧಿಕಾರಿಗಳನ್ನು ಭೇಟಿ ಮಾಡುವುದರ ಹೊರತಾಗಿ ಕಂಪನಿಯ ಇತ್ತೀಚಿನ ಬಿಡುಗಡೆಯಾದ ಹೊಸ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಅನ್ನು ಪರಿಶೀಲಿಸಿದ್ದಾರೆ ಎಂದು ಕಂಪನಿಯು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದೆ. ಕಂಪನಿಯು ಟ್ವೀಟ್‌ನಲ್ಲಿ,

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಇದು ನಮಗೆ ಹೆಮ್ಮೆಯ ಕ್ಷಣವಾಗಿದೆ, ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ತಮ್ಮ ಬಿಡುವಿಲ್ಲದ ಸಮಯದ ನಡುವೆ ಇದಕ್ಕೆ ಸಮಯ ಮೀಸಲಿಟ್ಟು ಹೋಂಡಾ ಸಿಟಿ ಹೈಬ್ರಿಡ್ ಅನ್ನು ಪರಿಶೀಲಿಸಿದರು ಎಂದು ತಿಳಿಸಿದೆ. ಈಓ ಹೊಸ ಹೋಂಡಾ ಸಿಟಿಯು ಪೆಟ್ರೋಲ್ ವೇರಿಯಂಟ್‌ನಂತೆಯೇ ಕಾಣುತ್ತಿದೆಯಾದರೂ, ಸ್ಟ್ಯಾಂಡರ್ಡ್ ಮಾಡೆಲ್‌ಗೆ ಹೋಲಿಸಿದರೆ ಸ್ಪೋರ್ಟಿಯರ್ ಆಗಿ ಕಾಣುವ ಕೆಲವು ಸೂಕ್ಷ್ಮ ಬದಲಾವಣೆಗಳಿವೆ.

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಇನ್ನು ಹೋಂಡಾ ಭಾರತೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಸರಣಿಯಲ್ಲಿ ಯಾವುದೇ ಎಸ್‍ಯುವಿಯನ್ನು ಹೊಂದಿಲ್ಲ ಮತ್ತು ಕಳೆದ ವರ್ಷ ಹೋಂಡಾ ಸರಣಿಯಿಂದ ಸಿಆರ್-ವಿ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು. ಹೋಂಡಾ ಕಂಪನಿಯು ಭಾರತದಲ್ಲಿ ಎಸ್‍ಯುವಿ ಮಾದರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿತಿಲ್ಲ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಎಸ್‍ಯುವಿ ಮಾದರಿಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ, ಇದರಿಂದ ಹೋಂಡಾ ಕಂಪನಿಯು ಹೊಸ ಎಸ್‍ಯುವಿ ಮಾದರಿಯನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ,

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಇನ್ನು ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿಯ ಮೇಲೆ ಜುಲೈ ಅವಧಿಯ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಈ ತಿಂಗಳಾಂತ್ಯದ ತನಕ ಹೊಸ ಆಫರ್‌ಗಳು ಲಭ್ಯವಿರಲಿವೆ. ಸೆಮಿಕಂಡಕ್ಟರ್ ಪರಿಣಾಮ ಹೊಸ ವಾಹನ ಮಾರಾಟದಲ್ಲಿ ಕಳೆದ ಕೆಲ ತಿಂಗಳಿನಿಂದ ಏರಿಳಿತ ಕಾಣುತ್ತಿದ್ದು, ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಪ್ರಮುಖ ಕಾರು ಕಂಪನಿಗಳು ಉತ್ತಮ ಬೇಡಿಕೆಯೊಂದಿಗೆ ಮಾರಾಟದಲ್ಲಿ ಮುನ್ನುಗ್ಗುತ್ತಿವೆ. ಹೋಂಡಾ ಕಾರ್ಸ್ ಕಂಪನಿಯು ಸಹ ಹೊಸ ಕಾರು ಮಾರಾಟದಲ್ಲಿ ಉತ್ತಮ ಮುನ್ನಡೆ ಕಾಯ್ದುಕೊಂಡಿದೆ.

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಕಾರು ಬೇಡಿಕೆಯಲ್ಲಿನ ಸ್ಥಿರತೆಗಾಗಿ ತನ್ನ ಸಂಭಾವ್ಯ ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಕೊಡುಗೆಗಳನ್ನು ಪ್ರಕಟಿಸಿದೆ. ಹೊಸ ನವೀಕರಣಗಳೊಂದಿಗೆ 2022ರ ಹೋಂಡಾ ಹೆಚ್‍ಆರ್-ವಿ ಎಸ್‍ಯುವಿ ಬಿಡುಗಡೆ. ಈ ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅಮೇಜ್(Amaze), ಜಾಝ್(Jazz), ಡಬ್ಲ್ಯುಆರ್-ವಿ(WR-V), ಸಿಟಿ(City) ಸೇರಿದಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಎಲ್ಲಾ ಮಾದರಿಗಳ ಮೇಲೂ ವಿವಿಧ ಆಫರ್ ಘೋಷಣೆ ಮಾಡಿದೆ.

ಜೂನ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಸೆಮಿಕಂಡಕ್ಟರ್ ಪರಿಣಾಮ ಹೊಸ ವಾಹನ ಮಾರಾಟವು ಏರಿಳಿತ ಕಾಣುತ್ತಿದೆ. ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಪ್ರಮುಖ ಕಾರು ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಂಡಿವೆ. ಹೋಂಡಾ ಕಾರ್ಸ್ ಕಂಪನಿಯು ಸಹ ಹೊಸ ಕಾರು ಮಾರಾಟದಲ್ಲಿ ಏರಿ ಇಳಿತ ಅನುಭವಿಸುತ್ತಿದೆ.

Most Read Articles

Kannada
Read more on ಹೋಂಡಾ honda
English summary
Honda cars india registers 64 percent growth in june 2022 sales details
Story first published: Wednesday, July 6, 2022, 17:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X