ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಹೊಸ ವರ್ಷದಲ್ಲಿ ತನ್ನ ಪ್ರಮುಖ ಕಾರುಗಳ ಬೆಲೆ ಹೆಚ್ಚಳ ಮಾಡಿರುವುದಾಗಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಜನವರಿ 1ರಿಂದಲೇ ಅನ್ವಯಿಸುವಂತೆ ಹೊಸ ಕಾರುಗಳ ದರ ಏರಿಕೆ ಮಾಡಿರುವುದಾಗಿ ಘೋಷಣೆ ಮಾಡಿದೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಆಟೋ ಬಿಡಿಭಾಗಗಳ ವೆಚ್ಚವು ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಹೋಂಡಾ ಕಾರ್ಸ್ ಕಂಪನಿಯು ಕೂಡಾ ಇದೀಗ ತನ್ನ ಪ್ರಮುಖ ಕಾರು ಮಾದರಿಯ ಬೆಲೆ ಹೆಚ್ಚಿಸಿದೆ. ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ.0.50 ರಿಂದ ಶೇ. 1 ರಷ್ಟು ಹೆಚ್ಚಳ ಮಾಡಲಾಗಿದ್ದು, ಹೊಸ ವರ್ಷ ಮತ್ತು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಜನವರಿ 1ರಿಂದ ಬೆಲೆ ಅನ್ವಯವಾಗುವಂತೆ ಹೊಸ ದರ ಪಟ್ಟಿ ಪ್ರಕಟಿಸಿರುವ ಹೋಂಡಾ ಕಾರ್ಸ್ ಕಂಪನಿಯು ಅಮೇಜ್, ಜಾಝ್, ಡಬ್ಲ್ಯುಆರ್-ವಿ ಮತ್ತು ಸಿಟಿ ಸೆಡಾನ್ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಹೋಂಡಾ ಕಂಪನಿಯ ಹೊಸ ದರ ಪಟ್ಟಿಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.3 ಸಾವಿರದಿಂದ ರೂ. 7 ಸಾವಿರದಷ್ಟು ದುಬಾರಿಯಾಗಿದ್ದು, ಸಿಟಿ ಸೆಡಾನ್ ಮಾದರಿಯಲ್ಲಿ ಮಾತ್ರ ಪ್ರತಿ ವೆರಿಯೆಂಟ್‌ಗಳ ಬೆಲೆಯಲ್ಲೂ ರೂ. 7 ಸಾವಿರ ತನತ ದರ ಹೆಚ್ಚಿಸಿದೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ದರ ಹೆಚ್ಚಳ ಘೋಷಣೆ ಮಾಡಿರುವ ಇತರೆ ಕಾರು ಕಂಪನಿಗಳ ಶೇಕಡಾವಾರು ದರ ಹೆಚ್ಚಳಕ್ಕಿಂತಲೂ ಕಡಿಮೆ ಎನ್ನಬಹುದಾಗಿದ್ದು, ಪ್ರಮುಖ ಕಾರು ಕಂಪನಿಗಳು ಜನವರಿ ತಿಂಗಳಿನ ಬೆಲೆ ಹೆಚ್ಚಳ ಪಟ್ಟಿಯಲ್ಲಿ ಶೇ.1 ರಿಂದ ಶೇ. 3ರ ತನಕ ಹೆಚ್ಚಳ ಮಾಡಿವೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಕೋವಿಡ್‌ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಹುತೇಕ ವಾಹನ ತಯಾರಿಕಾ ಕಂಪನಿಗಳು ಮೂರರಿಂದ ನಾಲ್ಕು ಬಾರಿ ದರ ಹೆಚ್ಚಿಸಿವೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಮೂಲ ಬೆಲೆಯಲ್ಲಿ ಶೇ.1 ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿರುವುದರಿಂದ ಕಳೆದ ಕೆಲ ತಿಂಗಳಿನಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿ ರೂ. 40 ಸಾವಿರದಿಂದ ರೂ. 80 ಸಾವಿರದಷ್ಟು ಮತ್ತು ಮಧ್ಯಮ ಕ್ರಮಾಂಕದ ಕಾರುಗಳು ರೂ. 50 ಸಾವಿರದಿಂದ ರೂ. 1.20 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಹಾಗೆಯೇ ಕಳೆದ ವರ್ಷದಲ್ಲಿ ಐಷಾರಾಮಿ ಕಾರುಗಳ ಬೆಲೆಯು ವಿವಿಧ ಮಾದರಿಗಳಿಗೆ ಅನುಗುಣವಾಗಿ ರೂ. 1 ಲಕ್ಷದಿಂದ ರೂ. 4 ಲಕ್ಷದ ತನಕ ದರ ಹೆಚ್ಚಳವಾಗಿದ್ದು, ಇದೀಗ ಸೆಮಿ ಕಂಡಕ್ಟರ್‌ಗಳ ಕೊರತೆಯೂ ಕಾರುಗಳ ಬೆಲೆಯಲ್ಲಿ ಮತ್ತೆ ಹೆಚ್ಚಳಕ್ಕೆ ಕಾರಣವಾಗಿದೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಇನ್ನು ಹೋಂಡಾ ಕಾರ್ಸ್ ಇಂಡಿಯಾ ಕಾರು ಕಂಪನಿಯು ಪ್ರಮುಖ ಕಾರುಗಳ ಮೂಲ ಬೆಲೆಯಲ್ಲಿ ಹೆಚ್ಚಳ ಮಾಡುವುದರ ಜೊತೆ ಜೊತಗೆ ಕಾರು ಖರೀದಿ ಮೇಲೆ ಹೊಸ ವರ್ಷ ಮತ್ತು ಸಂಕ್ರಾಂತಿ ಹಬ್ಬದ ವಿಶೇಷವಾಗಿ ವಿವಿಧ ಆಫರ್‌ಗಳನ್ನು ನೀಡುತ್ತಿದೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಕೋವಿಡ್ ಎರಡನೇ ಅಲೆ ಪರಿಣಾಮ ಕಳೆದ ವರ್ಷದ ಮಧ್ಯಂತರದಲ್ಲಿ ಕುಸಿತ ಕಂಡಿದ್ದ ಹೊಸ ವಾಹನ ಮಾರಾಟ ಇದೀಗ ಸಾಕಷ್ಟು ಸುಧಾರಿಸಿದ್ದು, ಪ್ರಮುಖ ಕಾರು ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಂಡಿವೆ. ಹೋಂಡಾ ಕಾರ್ಸ್ ಕಂಪನಿಯು ಸಹ ಹೊಸ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಾರು ಮಾರಾಟದಲ್ಲಿ ಸ್ಥಿರತೆಗಾಗಿ ಕಂಪನಿಯು ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಕೊಡುಗೆಗಳನ್ನು ಪ್ರಕಟಿಸುತ್ತಿವೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ 2022ರ ಜನವರಿ ಅವಧಿಗೆ ವಿವಿಧ ಆಫರ್‌ಗಳನ್ನು ನೀಡುತ್ತಿದೆ.

ದುಬಾರಿ ದುನಿಯಾ: ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ ಹೋಂಡಾ ಕಾರ್ಸ್ ಇಂಡಿಯಾ

ಹೋಂಡಾ ಕಂಪನಿಯ ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿದ್ದು, ಅಮೇಜ್ ಕಂಪ್ಯಾಕ್ಟ್ ಸೆಡಾನ್, ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ಡಬ್ಲ್ಯುಆರ್-ವಿ ಕಾರುಗಳ ಮೇಲೆ ಗರಿಷ್ಠ ರೂ.35 ಸಾವಿರ ತನಕ ಡಿಸ್ಕೌಂಟ್ ನೀಡುತ್ತಿದೆ.

Article Published On: Monday, January 10, 2022, 12:02 [IST]
English summary
Honda cars price hiked upto rs 7000 details
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+