Just In
- 7 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 7 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 8 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 9 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Lifestyle
12 ಲಕ್ಷ ಖರ್ಚು ಮಾಡಿದ ನಾಯಿಯಾದ ಜಪಾನಿನ ವ್ಯಕ್ತಿ!
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಲೆ ಏರಿಕೆ: ಭಾರತದಲ್ಲಿ ಹೋಂಡಾ ಕಾರುಗಳ ಬೆಲೆ ಮತ್ತಷ್ಟು ದುಬಾರಿ
ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಬೆಲೆ ಹೆಚ್ಚಿಸಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ.1 ರಿಂದ ಶೇ.2 ರಷ್ಟು ದರ ಹೆಚ್ಚಳ ಪಡೆದುಕೊಂಡಿವೆ.

ದೇಶಿಯ ಮಾರುಕಟ್ಟೆಯಲ್ಲಿನ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಂಪನಿಯು ಹೊಸ ದರಪಟ್ಟಿಯಲ್ಲಿ ಅಮೇಜ್, ಸಿಟಿ, ಜಾಝ್ ಮತ್ತು ಡಬ್ಲ್ಯು-ಆರ್ ಮಾದರಿಗಳ ಬೆಲೆ ಹೆಚ್ಚಿಸಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 21,600 ರೂ.ವರೆಗೆ ಹೆಚ್ಚಿಸಲಾಗಿದೆ.

ಹೊಸ ಕಾರುಗಳ ಉತ್ಪಾದನೆಗೆ ಬೇಕಿರುವ ಪ್ರಮುಖ ಬಿಡಿಭಾಗಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಳವಾಗುತ್ತಿರುವ ಪರಿಣಾಮವೇ ಹೊಸ ಕಾರುಗಳ ಬೆಲೆ ದುಬಾರಿಯಾಗುತ್ತಿದ್ದು, 2022ರಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ ಮಾಡಿದಂತಾಗಿದೆ.

ಹೊಸ ದರ ಪಟ್ಟಿಯಲ್ಲಿ ಜಾಝ್ ಮತ್ತು ಅಮೇಜ್ ಕಾರುಗಳ ಬೆಲೆಯಲ್ಲಿ ವಿವಿಧ ರೂಪಾಂತರಗಳ ಬೆಲೆಯಲ್ಲಿ ರೂ. 6,100 ರಿಂದ ರೂ.13 ಸಾವಿರದಷ್ಟು ಹೆಚ್ಚಳವಾಗಿದ್ದು, ಡಬ್ಲ್ಯುಆರ್-ವಿ ಕಾರಿನ ಬೆಲೆಯಲ್ಲಿ ವಿವಿಧ ರೂಪಾಂತರ ಬೆಲೆಯಲ್ಲಿ ರೂ. 5,500ರಿಂದ ರೂ.21,600 ಬೆಲೆ ಹೆಚ್ಚಿಸಲಾಗಿದೆ.

ಹೋಂಡಾ ಕಂಪನಿಯು ಐದನೇ ತಲೆಮಾರಿನ ಸಿಟಿ ಸೆಡಾನ್ ಮಾದರಿಯ ಬೆಲೆಯಲ್ಲಿ ವಿವಿಧ ಮಾದರಿಗಳಿಗೆ ಅನುಗುಣವಾಗಿ ರೂ.5 ಸಾವಿರದಿಂದ ರೂ. 5,800 ಬೆಲೆ ಹೆಚ್ಚಳವಾಗಿದ್ದು, 4ನೇ ತಲೆಮಾರಿನ ಸಿಟಿ ಸೆಡಾನ್ ಮಾದರಿಯ ಬೆಲೆಯಲ್ಲಿ ಯಾವುದೇ ಬೆಲೆ ಹೆಚ್ಚಳ ಮಾಡಲಾಗಿಲ್ಲ.

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಉತ್ಪಾದನಾ ವೆಚ್ಚವನ್ನು ಸರಿದೂಗಿಸಲ ದರ ಹೆಚ್ಚಿಸಲಾಗುತ್ತಿದೆ.

ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದ್ದು, ಕಳೆದ ಜನವರಿಯಲ್ಲಿ ದರ ಹೆಚ್ಚಿಸಿದ್ದ ಪ್ರಮುಖ ವಾಹನ ಉತ್ಪಾದನಾ ಕಂಪನಿಯು ಇದೀಗ ವರ್ಷದಲ್ಲಿ ಎರಡನೇ ಬಾರಿಗೆ ದರ ಹೆಚ್ಚಿಸಿವೆ.

ಹೊಸ ದರಪಟ್ಟಿಯಲ್ಲಿ ಎಂಟ್ರಿ ಲೆವಲ್ ಕಾರುಗಳ ಬೆಲೆಯು ರೂ. 5 ಸಾವಿರದಿಂದ ರೂ. 15 ಸಾವಿರ ತನಕ ಹೆಚ್ಚಳವಾಗಿದ್ದರೆ, ಮಧ್ಯಮ ಕ್ರಮಾಂಕದ ಕಾರುಗಳ ಬೆಲೆಯಲ್ಲಿ ರೂ. 10 ಸಾವಿರದಿಂದ ರೂ. 60 ಸಾವಿರ ತನಕ ಮತ್ತು ರೂ. 20 ಲಕ್ಷ ಮೌಲ್ಯ ಮೇಲ್ಪಟ್ಟ ಎಸ್‌ಯುವಿ ಕಾರುಗಳ ಬೆಲೆಯಲ್ಲಿ ರೂ.40 ಸಾವಿರ ರೂ.90 ಸಾವಿರ ತನಕ ದರ ಹೆಚ್ಚಳವಾಗಿವೆ.

ಐಷಾರಾಮಿ ಕಾರುಗಳ ಬೆಲೆಗಳಲ್ಲೂ ಕೂಡಾ ವಿವಿಧ ಮಾದರಿಗಳನ್ನು ಆಧರಿಸಿ ಶೇ.1 ರಿಂದ ಶೇ.3 ರ ತನಕ ದರ ಹೆಚ್ಚಳವಾಗಬಹುದಾಗಿದ್ದು, ರೂ.50 ಸಾವಿರದಿಂದ ರೂ. 2 ಲಕ್ಷದ ತನಕ ದರ ಹೆಚ್ಚಳವಾಗಿವೆ.

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಈ ಹಿಂದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿದ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ವಾಹನ ಉತ್ಪಾದನಾ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿವೆ.

ಹೊಸ ವಾಹನಗಳ ದರ ಹೆಚ್ಚಳಕ್ಕೆ ಪ್ರಮುಖ ಕಾರಣಗಳಲ್ಲಿ ಸೆಮಿಕಂಡಕ್ಟರ್ ಕೊರೆತೆ ಪ್ರಮುಖವಾಗಿದ್ದು, ಹೊಸ ಕಾರಿನ ಬೇಡಿಕೆಯು ಹೆಚ್ಚಿರುವ ಸಂದರ್ಭದಲ್ಲಿಯೇ ಆಟೋ ಕಂಪನಿಗಳಿಗೆ ಸೆಮಿಕಂಡಕ್ಟರ್ ಕೊರತೆಯು ತೀವ್ರವಾಗಿ ಕಾಡುತ್ತಿದೆ.

ಕೋವಿಡ್ ನಂತರ ಆರ್ಥಿಕ ಬೆಳವಣಿಗೆ ಸುಧಾರಿಸುತ್ತಿರುವುದರಿಂದ ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದೆ. ಹೊಸ ತಂತ್ರಜ್ಞಾನ ಪ್ರೇರಿತ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಿಗೂ ಬಿಸಿ ತಟ್ಟಿದ್ದು, ಪ್ರಮುಖ ವಾಹನಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದು ಆಟೋ ಉತ್ಪಾದನಾ ಕಂಪನಿಗಳ ಆದಾಯಕ್ಕೆ ಹೊಡೆತ ನೀಡುತ್ತದೆ.

ಚೀನಿ ಮಾರುಕಟ್ಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಆಮದುಗೊಳ್ಳುತ್ತಿದ್ದ ಎಲೆಕ್ಟ್ರಾನಿಕ್ ಚಿಪ್ ಪ್ರಮಾಣವನ್ನು ಕಡಿತಗೊಳಿಸಿರುವುದರಿಂದ ಇತರೆ ದೇಶಗಳಲ್ಲಿನ ಉತ್ಪಾದನಾ ಲಭ್ಯತೆ ಆಧರಿಸಿ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆಯೂ ಹೆಚ್ಚಳವಾಗುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್‌ಗಳಿಲ್ಲದೆ ಪ್ರಮುಖ ಕಾರು ಕಂಪನಿಯು ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿವೆ.

ಹೀಗಾಗಿ ಎಲೆಕ್ಟ್ರಾನಿಕ್ ಚಿಪ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವು ವಿಶ್ವಾದ್ಯಂತ ಪ್ರಮುಖ ಕಾರು ಕಂಪನಿಗಳಿಗೆ ಹೊಡೆತ ನೀಡುತ್ತಿದ್ದು, ಭಾರತದಲ್ಲೂ ದಿನಂಪ್ರತಿ ಸಾವಿರಾರು ಕಾರುಗಳನ್ನು ಉತ್ಪಾದಿಸುವ ಪ್ರಮುಖ ಕಂಪನಿಗಳ ಕಾರುಗಳ ಉತ್ಪಾದನೆಗೆ ಸಾಕಷ್ಟು ಹೊಡೆತ ನೀಡಿದೆ.