ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಜಪಾನ್ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸರಣಿಯನ್ನು ವಿಸ್ತರಿಸಲು ಯೋಜಿಸುತ್ತಿದೆ. ಹೋಂಡಾ ಬ್ರ್ಯಾಂಡ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿರುವ ಮುಂದಿನ ಕಾರು ಸಿಟಿಯ ಹೈಬ್ರಿಡ್ ಆವೃತ್ತಿಯಾಗಿದೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಹೋಂಡಾ ಸಿಟಿ ಹೈಬ್ರಿಡ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ 2022ರ ಏಪ್ರಿಲ್ 14 ರಂದು 'ಸಿಟಿ ಇ:ಹೆಚ್‌ಇವಿ' ಹೆಸರಿನಲ್ಲಿ ಅನಾವರಣಗೊಳಿಸುವುದಾಗಿ ಹೋಂಡಾ ಕಂಪನಿಯು ಘೋಷಿಸಿದೆ. ಜಪಾನಿನ ಕಾರು ತಯಾರಕರು ಇನ್ನೂ ಅಧಿಕೃತ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿಲ್ಲ, ಆದರೆ ನಂತರದ ತಿಂಗಳಲ್ಲಿ, ಅಂದರೆ ಮೇ ನಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಇನ್ನು ಹೋಂಡಾ ಕಂಪನಿಯು ಸಿಟಿ ಹೈಬ್ರಿಡ್ ಕಾರನ್ನು ಇತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗಗಾಲೇ ಮಾರಾಟ ಮಾಡುತ್ತಿದೆ. ಹೋಂಡಾ ಸಿಟಿ ಹೈಬ್ರಿಡ್ ಕಾರು ಕಳೆದ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಗೊಳಿಸಲು ಉದ್ದೇಶಿಸಿತ್ತು.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಆದರೆ ಕರೋನಾ ಆತಂಕದಿಂದ ಈ ಹೈಬ್ರಿಡ್ ಕಾರಿನ ಬಿಡುಗಡೆಯನ್ನು ಮುಂದೂಡಲಾಗಿದೆ. ಈ ಹೊಸ ಹೋಂಡಾ ಸಿಟಿ ಹೈಬ್ರಿಡ್ ಕಾರು ಈ ವರ್ಷದ ಬಹುಶಃ ಮೇ ತಿಂಗಳಲ್ಲಿ ಬಿಡುಗಡೆಗೊಳಿಸಬಹುದು. ಹೋಂಡಾದ ಎಂಜಿನಿಯರ್‌ಗಳಿಗೆ ಹೋಂಡಾ ಸಿಟಿಯ ಹೈಬ್ರಿಡ್ ಆವೃತ್ತಿಯ ವಿವಿಧ ಗುಣಲಕ್ಷಣಗಳನ್ನು ಭಾರತೀಯ ರಸ್ತೆಗಳಿಗೆ ಸರಿಹೊಂದುವಂತೆ ಮತ್ತು ಇತರ ಹಲವು ಅಂಶಗಳನ್ನು ನವೀಕರಿಸುತ್ತಾರೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಹೊಸ ಹೋಂಡಾ ಸಿಟಿ ಹೈಬ್ರಿಡ್ ಕಾರಿನ ಕೆಲವು ವಿವರಗಳು ಮತ್ತು ವಿಶೇಷಣಗಳ ಕೆಲವು ಸುಳಿವುಗಳು ಬಹಿರಂಗವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಹೋಂಡಾ ಸಿಟಿ ಹೈಬ್ರಿಡ್ ಸಾಮಾನ್ಯ ಸಿಟಿಯಂತೆಯೇ (ಐದನೇ ತಲೆಮಾರಿನ ಮಾದರಿ) ವಿನ್ಯಾಸವನ್ನು ಹೊಂದಿರುತ್ತದೆ. ವಿಭಿನ್ನ ಮುಂಭಾಗದ ಗ್ರಿಲ್, ಮರುಹೊಂದಿಸಲಾದ ಬಂಪರ್‌ಗಳು ಮತ್ತು ವಿಭಿನ್ನ ಬ್ಯಾಡ್ಜ್‌ಗಳಂತಹ ಕೆಲವು ಸಣ್ಣ ವ್ಯತ್ಯಾಸಗಳು ಮಾತ್ರ ಇರುತ್ತವೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಈ ಹೋಂಡಾ ಸಿಟಿ ಹೈಬ್ರಿಡ್ ಕಾರು ಗ್ಲೋಸ್-ಬ್ಲ್ಯಾಕ್ ಫ್ರಂಟ್ ಗ್ರಿಲ್, ಫ್ರಂಟ್ ಮತ್ತು ರಿಯರ್ ಡಿಫ್ಯೂಸರ್ನಲ್ಲಿ ಕಾರ್ಬನ್-ಪ್ಯಾಟರ್ನ್ ಟ್ರಿಮ್, ಹೊಸ ಫಾಗ್ ಲ್ಯಾಂಪ್, ಹೊಸ ಮಿರರ್ ಕವರ್ ಮತ್ತು ಗ್ಲೋಸ್-ಬ್ಲ್ಯಾಕ್ ಫಿನಿಶ್‌ನಲ್ಲಿ ಡಕ್‌ಟೇಲ್ ಸ್ಪಾಯ್ಲರ್ ಅನ್ನು ಹೊಂದಿರುತ್ತದೆ. ಈ ಕಾರು ಡ್ಯುಯಲ್-ಟೋನ್ 16-ಇಂಚಿನ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿವೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಈ ಹೊಸ ಹೋಂಡಾ ಸಿಟಿ ಹೈಬ್ರಿಡ್ ಸ್ಟ್ಯಾಂಡರ್ಡ್ ಆಗಿ ಆಟೋಮ್ಯಾಟಿಕ್ ಎಲ್ಇಡಿ ಹೆಚ್ ಲ್ಯಾಂಪ್ ಗಳು, ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ಸ್, ಎಲ್ಇಡಿ ರಿಯರ್ ಲೈಟ್ಸ್, ಪುಶ್ ಸ್ಟಾರ್ಟ್ ನೊಂದಿಗೆ ಕೀಲೆಸ್ ಎಂಟ್ರಿ, ಸಿಂಗಲ್-ಜೋನ್ ಆಟೋ ಕ್ಲೈಮೇಟ್ ಕಂಟ್ರೋಲ್ ಅನ್ನು ಒಳಗೊಂಡಿವೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಈ ಹೋಂಡಾ ಸಿಟಿ ಹೈಬ್ರಿಡ್ ಕಾರಿನ ಹಿಂಭಾಗದ ಏರ್-ಕಾನ್ ವೆಂಟ್ಸ್, ಸ್ಟೀಯರಿಂಗ್ ಆಡಿಯೊ ಬಟನ್ ಮತ್ತು 8.0-ಇಂಚಿನ ಟಚ್ಸ್ಕ್ರೀನ್ ಹೆಡ್ ಯುನಿಟ್ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಎಂಟು ಸ್ಪೀಕರ್ ಆಡಿಯೊ ಸಿಸ್ಟಂನೊಂದಿಗೆ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಕೂಡ ಒಳಗೊಂಡಿರುತ್ತದೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಹೋಂಡಾ ಸಿಟಿ ಹೈಬ್ರಿಡ್ ಕಾರಿನಲ್ಲಿ ಹೆಚ್ಚುವರಿಯಾಗಿ, ಅಲ್ಟ್ರಾಸ್ಯೂಡ್ ಸೀಟುಗಳು, ಐ-ಎಂಎಂಡಿಗೆ ಡಿಕ್ಲೀರೇಶನ್ ಸೆಲೆಕ್ಟರ್ ಪ್ಯಾಡಲ್, ಲೆದರ್ ಸ್ಟೀರಿಂಗ್ ವ್ಹೀಲ್, ಗೇರ್ ಲಿವರ್ ಕನ್ಸೋಲ್, ಸೆಂಟರ್ ಟನಲ್ ಮತ್ತು ಡ್ಯಾಶ್‌ಬೋರ್ಡ್, ಅಲ್ಯೂಮಿನಿಯಂ ಸ್ಪೋರ್ಟ್ ಪೆಡಲ್‌ಗಳು. ಆರು ಏರ್‌ಬ್ಯಾಗ್‌ಗಳು, ವಿಎಸ್‌ಎ, ಹಿಲ್ ಸ್ಟಾರ್ಟ್ ಅಸಿಸ್ಟ್, ಎಮರ್ಜೆನ್ಸಿ ಸ್ಟಾಪ್ ಸಿಗ್ನಲ್ ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿವೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಹೊಸ ಹೋಂಡಾ ಸಿಟಿ ಹೈಬ್ರಿಡ್ ಮಾದರಿಯಲ್ಲಿ ಮಲ್ಟಿ-ಮೋಡ್ ಡ್ರೈವ್ (ಐ-ಎಂಎಂಡಿ) ಪವರ್‌ಟ್ರೇನ್ ಆಗಿದ್ದು ಅದು ಐ-ಡಿಸಿಡಿಯನ್ನು ಬದಲಾಯಿಸಿದೆ. ಇದು ಪೆಟ್ರೋಲ್ ಮೋಡ್, ಪೆಟ್ರೋಲ್-ಎಲೆಕ್ಟ್ರಿಕ್ ಹೈಬ್ರಿಡ್ ಮೋಡ್ ಮತ್ತು ಎಲೆಕ್ಟ್ರಿಕ್ ಮೋಡ್ ಆಗಿದೆ. ಇದರಲ್ಲಿ 1.5-ಲೀಟರ್ ಅಟ್ಕಿನ್ಸನ್-ಸೈಕಲ್ ಡಿಒಹೆಚ್‌ಸಿ ಐ-ವಿಟಿಇಸಿ ನಾಲ್ಕು-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಈ ಎಂಜಿನ್ 98 ಬಿಹೆಚ್‍ಪಿ ಪವರ್ ಮತ್ತು 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ ಮತ್ತು ಎರಡು ಮೋಟರ್‌ಗಳಿಗೆ ಹೊಂದಿಕೆಯಾಗುತ್ತದೆ. ಇನ್ನು ಈ ಎಲೆಕ್ಟ್ರಿಕ್ ಮೋಟರ್ ಅಸಿಸ್ಟ್ ಜನರೇಟರ್ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅದು ಸ್ಟಾರ್ಟರ್ ಆಗಿ ಕಾರ್ಯನಿರ್ವಹಿಸುತ್ತದೆ. ಇನ್ನು ದೊಡ್ಡದಾದ ಎರಡನೇ ಮೋಟರ್ 108 ಬಿಹೆಚ್‍ಪಿ ಪವರ್ ಮತ್ತು 253 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಹೆಚ್ಚಿನ ಪರ್ಫಾಮೆನ್ಸ್ ಸ್ಥಿತಿಗತಿಗಳಂತೆ ಎಂಜಿನ್ ಹೆಚ್ಚಿನ ವೇಗದಲ್ಲಿ ನೇರ ಡ್ರೈವ್ ನೀಡಬಲ್ಲದು, ಇದು ಮೋಟಾರ್‌ಗಿಂತ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಈ ಹೊಸ ಎಲೆಕ್ಟ್ರಿಕ್-ಹೈಬ್ರಿಡ್ ಸೆಟಪ್ ಸಿಟಿ ಕಾರು ಕೇವಲ 9.9 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಈ ಹೊಸ ಹೋಂಡಾ ಸಿಟಿ ಆರ್‌ಎಸ್ ಇ:ಹೆಚ್‌ಇವಿ ಕಾರು 173 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿರುತ್ತದೆ. ಈ ಹೈಬ್ರಿಡ್ ಕಾರು 27 ಕಿ.ಮೀ.ಗೂ ಹೆಚ್ಚು ಮೈಲೇಜ್ ನೀಡುತ್ತದೆ ಎಂದು ಹೇಳಲಾಗಿದೆ, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರು ಕೂಡ ಉತ್ತಮ ಮೈಲೇಜ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.

ಅಧಿಕ ಮೈಲೇಜ್, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಹೈಬ್ರಿಡ್ ಕಾರು

ಕಳೆದ ತಿಂಗಳು ಹೋಂಡಾ ಕಂಪನಿಯು ಒಟ್ಟು 8,832 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು 8,172 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇಕಡಾ 8 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಹೋಂಡಾ ಸಿಟಿ ಹೈಬ್ರಿಡ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರಾಟದಲ್ಲಿ ಕಂಪನಿಗೆ ಮಾರಾಟದಲ್ಲಿ ಕೊಡುಗೆಯನ್ನು ನೀಡುತ್ತದೆ.

Most Read Articles

Kannada
Read more on ಹೋಂಡಾ honda
English summary
Honda to provide new driving modes for new city ehev sedan details
Story first published: Friday, April 8, 2022, 15:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X