ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ದಕ್ಷಿಣ ಕೊರಿಯಾದ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಪ್ರಯಾಣಿಕ ಕಾರು ಮಾರಾಟ ಆರಂಭಿಸಿ ಯಶಸ್ವಿ 25 ವರ್ಷಗಳನ್ನು ಪೂರೈಸಿದ್ದು, ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ದೇಶದ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿ ಮುಂಚೂಣಿ ಸಾಧಿಸುತ್ತಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ದೇಶಿಯ ಮಾರುಕಟ್ಟೆಗೆ ಮೊದಲ ಬಾರಿಗೆ 1996ರಲ್ಲಿ ಪ್ರವೇಶಿಸಿದ್ದ ಹ್ಯುಂಡೈ ಮೋಟಾರ್ಸ್ ಕಂಪನಿಯು ಹಲವಾರು ಸವಾಲುಗಳು ಮತ್ತು ಭಾರೀ ಪ್ರತಿಸ್ಪರ್ಧೆ ನಡುವೆಯೂ ಪ್ರಸ್ತುತ ಮಾರುಕಟ್ಟೆಯಲ್ಲಿ ಹೆಚ್ಚು ಕಾರು ಮಾರಾಟ ಪಾಲು ಹೊಂದಿರುವ ದೇಶದ 2ನೇ ಅತಿದೊಡ್ಡ ಕಾರು ಉತ್ಪಾದನೆ ಮತ್ತು ಮಾರಾಟ ಕಂಪನಿಯಾಗಿ ಹೊರಹೊಮ್ಮಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಸ್ಯಾಂಟ್ರೊ ಕಾರು ಮಾದರಿಯ ಉತ್ಪಾದನೆಯೊಂದಿಗೆ ವಿವಿಧ ಕಾರು ಮಾದರಿಗಳ ಮಾರಾಟದ ಮೂಲಕ ಸದ್ಯ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಭಾರತದಲ್ಲಿ ಇದುವರೆಗೆ ಹ್ಯುಂಡೈ ಕಂಪನಿಯು ಸುಮಾರು 12 ಲಕ್ಷಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಕಾರು ಮಾರಾಟ ಆರಂಭಿಸಿದ ಆರಂಭದಲ್ಲಿ ವಾರ್ಷಿಕವಾಗಿ 8 ಸಾವಿರ ಕಾರುಗಳ ಮಾರಾಟ ಹೊಂದಿದ್ದ ಕಂಪನಿಯು ಕಳೆದ ಕೆಲ ವರ್ಷಗಳಿಂದ ವಾರ್ಷಿಕವಾಗಿ 2 ಲಕ್ಷದಿಂದ 3 ಲಕ್ಷ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಎಸ್‌ಯುವಿ ಕಾರುಗಳ ಬೇಡಿಕೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಭಾರತದಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಹತ್ತು ಕಾರು ಆವೃತ್ತಿಗಳ ಮಾರಾಟ ಮಾಡುತ್ತಿರುವ ಹ್ಯುಂಡೈ ಕಂಪನಿಯು ಶೇ. 18ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಸದ್ಯ ಹ್ಯುಂಡೈ ಕಂಪನಿಯು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಹ್ಯುಂಡೈ ಎಸ್‌ಯುವಿ ವಿಭಾಗದಲ್ಲಿ ಟ್ಯುಸಾನ್, ಕ್ರೆಟಾ, ಕೊನಾ ಎಲೆಕ್ಟ್ರಿಕ್, ವೆನ್ಯೂ ಮತ್ತು ಹೊಸ ಅಲ್ಕಾಜರ್ ಕಾರುಗಳಿದ್ದು, ಹ್ಯುಂಡೈ ಕಾರುಗಳ ಮಾರಾಟದಲ್ಲಿ ಎಸ್‌ಯುವಿ ಕಾರು ಮಾದರಿಯ ಪಾಲು ಹೆಚ್ಚಿದೆ. ಹ್ಯುಂಡೈ ಎಸ್‌ಯುವಿ ಕಾರು ವಿಭಾಗದಲ್ಲಿ ಕ್ರೆಟಾ ಕಾರು ಮಾದರಿಯೊಂದೆ ಸುಮಾರು 7 ಲಕ್ಷ ಯುನಿಟ್ ಮಾರಾಟ ದಾಖಲೆಯನ್ನು ಹೊಂದಿದ್ದು, 2021ರಲ್ಲಿ ವಿವಿಧ ಎಸ್‌ಯುವಿ ಮಾದರಿಗಳೊಂದಿಗೆ ಹ್ಯುಂಡೈ ಕಂಪನಿಯು ಸುಮಾರು 2.52 ಲಕ್ಷ ಯುನಿಟ್ ಮಾರಾಟ ಮಾಡಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ನ್ಯೂ ಜನರೇಷನ್ ಕ್ರೆಟಾ ಕಾರು ಮಾದರಿಯು ಹ್ಯುಂಡೈ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, 2021ರಲ್ಲಿ ಕ್ರೆಟಾ ಮಾದರಿಯು 1.25 ಲಕ್ಷ ಯುನಿಟ್ ಮಾರಾಟಗೊಂಡರೆ, ವೆನ್ಯೂ 1.08 ಲಕ್ಷ ಯುನಿಟ್ ಮತ್ತು ಹೊಸ ಅಲ್ಕಾಜರ್ ಕಾರು ಮಾದರಿಯು 17,700 ಯುನಿಟ್ ಮಾರಾಟಗೊಂಡಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಕಳೆದ ಎರಡು ವರ್ಷಗಳಿಂದ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಹ್ಯುಂಡೈ ಕಂಪನಿಯು ಮಹೀಂದ್ರಾ ಕಂಪನಿಗೆ ತೀವ್ರ ಪೈಪೋಟಿ ನೀಡಿದೆ. ಎಸ್‌ಯುವಿ ಮಾರಾಟದಲ್ಲಿ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಮಹೀಂದ್ರಾ ಕಂಪನಿಯು ಹ್ಯುಂಡೈ ಹೊಸ ಕ್ರೆಟಾ ಮತ್ತು ವೆನ್ಯೂ ಕಾರುಗಳ ಮಾರಾಟ ಹೆಚ್ಚಳ ನಂತರ ಎರಡನೇ ಸ್ಥಾನಕ್ಕೆ ಕುಸಿತಕಂಡಿದ್ದು, ಮಹೀಂದ್ರಾ ಕಂಪನಿಯು ಬೊಲೆರೊ, ಎಕ್ಸ್‌ಯುವಿ700, ಎಕ್ಸ್‌ಯುವಿ300, ಥಾರ್, ಸ್ಕಾರ್ಪಿಯೋ ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಕಾಯ್ದುಕೊಂಡಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾರಾಟದಲ್ಲಿ ಸದ್ಯ ಹ್ಯುಂಡೈ ಮತ್ತು ಮಹೀಂದ್ರಾ ಕಂಪನಿಗಳ ನಡುವೆ ಉತ್ತಮ ಪೈಪೋಟಿ ನಡೆಯುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಪಂಚ್, ಹೊಸ ನೆಕ್ಸಾನ್ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ಸಹ ಎಸ್‌ಯುವಿ ಮಾದರಿಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಬಜೆಟ್ ಕಾರು ಮಾದರಿಗಳೊಂದಿಗೆ ಪ್ರೀಮಿಯಂ ಕಾರು ಮಾದರಿಗಳ ಮಾರಾಟದ ಮೇಲೂ ಹೆಚ್ಚಿನ ಗಮನಹರಿಸಿರುವ ಹ್ಯುಂಡೈ ಕಂಪನಿಯು ಭವಿಷ್ಯ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಉತ್ಪಾದನಾ ವಿಸ್ತರಣೆಗಾಗಿ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಇನ್ನು ಭಾರತವನ್ನು ಪ್ರಮುಖ ಆಟೋಮೊಬೈಲ್ ಹಬ್ ಆಗಿ ಜನಪ್ರಿಯತೆ ತಂದುಕೊಡುವಲ್ಲಿ ಹ್ಯುಂಡೈ ಕಂಪನಿಯ ಪಾತ್ರ ಪ್ರಮುಖವಾಗಿದ್ದು, ಭಾರತದಿಂದಲೇ ಹ್ಯುಂಡೈ ಕಂಪನಿಯು ಸುಮಾರು 80 ರಾಷ್ಟ್ರಗಳಿಗೆ ಕಾರುಗಳ ಪೂರೈಕೆಯ ಸೌಲಭ್ಯವನ್ನು ಹೊಂದಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಚೆನ್ನೈ ಹೊರವಲಯದಲ್ಲಿರುವ ಇರುಂಗಟ್ಟುಕೊಟೈನಲ್ಲಿ ಕಾರು ಉತ್ಪಾದನಾ ಘಟಕ ಆರಂಭಿಸುವ ಮೂಲಕ ಆರಂಭದಲ್ಲಿ ಕೆಲವೇ ಕೆಲವು ನಗರಗಳಲ್ಲಿ ಮಾರಾಟ ಆರಂಭಿಸಿದ್ದ ಹ್ಯುಂಡೈ ಕಂಪನಿಯು ಇದೀಗ ದೇಶಾದ್ಯಂತ 1154 ಮಾರಾಟ ಮಳಿಗೆಗಳನ್ನು ಮತ್ತು 1298 ಅಧಿಕೃತ ಸರ್ವಿಸ್ ಸೆಂಟರ್‌ಗಳ ಸೇವೆ ಹೊಂದಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿರುವ ಹ್ಯುಂಡೈ ಕಂಪನಿಯು ಆರಂಭದಲ್ಲಿ ಸ್ಯಾಂಟ್ರೊ ಆರಂಭಿಸುವುದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಕ್ರೆಟಾ, ವೆನ್ಯೂ, ಐ20, ಐ10 ಕಾರುಗಳ ಮೂಲಕ ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಕರೋನಾ ವೈರಸ್ ಭೀತಿ ನಡುವೆಯೂ ವಾಹನ ಮಾರಾಟದಲ್ಲಿ ಹಲವು ಹೊಸ ಬದಲಾಣೆಗಳನ್ನು ಪರಿಚಯಿಸಿದ ಹ್ಯುಂಡೈ ಕಂಪನಿಯು ಸಂಕಷ್ಟದ ಪರಿಸ್ಥಿತಿಯಲ್ಲೂ ಹೊಸ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದಕೊಂಡಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹ್ಯುಂಡೈ

ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಸ್ಯಾಂಟ್ರೋ, ಗ್ರಾಂಡ್ ಐ10 ನಿಯೋಸ್, ಐ20, ಐರಾ, ವೆರ್ನಾ, ಎಲಾಂಟ್ರಾ, ವೆನ್ಯೂ, ಕ್ರೆಟಾ, ಅಲ್ಕಾಜರ್, ಟ್ಯುಸಾನ್ ಮತ್ತು ಕೊನಾ ಎಲೆಕ್ಟ್ರಿಕ್ ಕಾರು ಮಾದರಿಗಳ ಮಾರಾಟ ಹೊಂದಿರುವ ಹ್ಯುಂಡೈ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಎಸ್‌ಯುವಿ ಮಾದರಿಗಳನ್ನು ಬಿಡುಗಡೆ ಮಾಡಲಿದೆ.

Most Read Articles

Kannada
English summary
Hyundai becomes top selling suv brand in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X