ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹ್ಯುಂಡೈ ಮೋಟಾರ್ಸ್(Hyundai) ಕಂಪನಿಯು ತನ್ನ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ತಗ್ಗಿರುವ ಏರಿಳಿತವಾಗುತ್ತಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಹೊಸ ಕೊಡುಗೆಗಳನ್ನು ಪ್ರಕಟಿಸುತ್ತಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಕೋವಿಡ್ ಪರಿಣಾಮ ಕುಸಿತ ಕಂಡಿದ್ದ ಹೊಸ ವಾಹನ ಮಾರಾಟ ಇದೀಗ ಸಾಕಷ್ಟು ಸುಧಾರಿಸಿದ್ದು, ಪ್ರಮುಖ ಕಾರು ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಂಡಿವೆ. ಹ್ಯುಂಡೈ ಕಂಪನಿಯು ಸಹ ಹೊಸ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಾರು ಮಾರಾಟದಲ್ಲಿ ಸ್ಥಿರತೆಗಾಗಿ ಕಂಪನಿಯು ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಕೊಡುಗೆಗಳನ್ನು ಪ್ರಕಟಿಸಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ 2022ರ ಜನವರಿ ಅವಧಿಗೆ ವಿವಿಧ ಆಫರ್‌ಗಳನ್ನು ನೀಡುತ್ತಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಹೊಸ ವರ್ಷ ಮತ್ತು ಸಂಕ್ರಾಂತಿ ವಿಶೇಷತೆಗಾಗಿ ಹವಾರು ಆಫರ್‌ಗಳನ್ನು ಘೋಷಣೆ ಮಾಡಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹ್ಯುಂಡೈ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಹ್ಯುಂಡೈ ಕಂಪನಿಯು ಸ್ಯಾಂಟ್ರೋ, ಗ್ರಾಂಡ್ ಐ10 ನಿಯೋಸ್, ಐ20 ಮತ್ತು ಔರಾ ಕಾರುಗಳ ಮೇಲೆ ಉತ್ತಮ ಆಫರ್‌ಗಳನ್ನು ನೀಡಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಎಂಟ್ರಿ ಲೆವಲ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಗ್ರಾಂಡ್ ಐ10 ನಿಯೋಸ್ ಆವೃತ್ತಿಯ ಮೇಲೆ ಹ್ಯುಂಡೈ ಕಂಪನಿಯು ಗರಿಷ್ಠ ರೂ. 50 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ಎಕ್ಸ್‌ಚೆಂಜ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ಒಳಗೊಂಡಿರಲಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಔರಾ ಕಂಪ್ಯಾಕ್ಟ್ ಸೆಡಾನ್ ಕಾರು ಮಾದರಿಯ ಮೇಲೆ ಹ್ಯುಂಡೈ ಕಂಪನಿಯು ರೂ.50 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದ್ದು, ವಾಣಿಜ್ಯ ಬಳಕೆಗಾಗಿ ಖರೀದಿಗೆ ಲಭ್ಯವಿರುವ ಎಕ್ಸೆಂಟ್ ಪ್ರೈಮ್ ಕಾರು ಮಾದರಿಯ ಮೇಲೂ ಗರಿಷ್ಠ ನಗದು ರಿಯಾಯ್ತಿ ಪಡೆದುಕೊಳ್ಳಬಹುದಾಗಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಜೊತೆಗೆ ಕಂಪನಿಯು ಔರಾ ಕಾರಿನ ಸಿಎನ್‌ಜಿ ಮಾದರಿಯ ಮೇಲೂ ಅತ್ಯುತ್ತಮ ಆಫರ್‌ಗಳನ್ನು ನೀಡುತ್ತಿದ್ದು, ನಿಗದಿತ ಅವಧಿಯ ಕಾರು ಖರೀದಿಸುವ ಗ್ರಾಹಕರಿಗೆ ಆಕರ್ಷಕ ಡಿಸ್ಕೌಂಟ್ ಜೊತೆ ಹೆಚ್ಚುವರಿ ವಾರಂಟಿ ಆಫರ್ ನೀಡಲಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹಾಗೆಯೇ ಹ್ಯುಂಡೈ ಕಂಪನಿಯು ತನ್ನ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಸ್ಯಾಂಟ್ರೋ ಹ್ಯಾಚ್‌ಬ್ಯಾಕ್ ಕಾರು ಖರೀದಿಯ ಮೇಲೆ ರೂ.40 ಸಾವಿರದಷ್ಟು ಎಕ್ಸ್‌ಚೆಂಜ್ ಆಫರ್ ಮತ್ತು ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದ್ದು, ಸ್ಯಾಂಟ್ರೊ ಕಾರಿನ ಸಿಎನ್‌ಜಿ ಮಾದರಿಯು ಸಹ ಹೊಸ ಆಫರ್ ಒಳಗೊಂಡಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಆಫರ್‌ಗಳಲ್ಲಿ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ. 40 ಸಾವಿರದಷ್ಟು ವಿವಿಧ ಆಫರ್‌ಗಳನ್ನು ನೀಡುತ್ತಿದ್ದು, ಹೊಸ ಆಫರ್‌ಗಳು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳ ಮೇಲೂ ಅನ್ವಯವಾಗಲಿದೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಆಫರ್‌ಗಳಲ್ಲಿ ಸ್ಯಾಂಟ್ರೋ, ಔರಾ, ಗ್ರಾಂಡ್ ಐ10 ನಿಯೋಸ್ ಮತ್ತು ಐ20 ಹೊರತುಪಡಿಸಿ ವೆನ್ಯೂ, ಕ್ರೆಟಾ, ವೆರ್ನಾ, ಅಲ್ಕಾಜರ್ ಮತ್ತು ಕೊನಾ ಇವಿ ಕಾರುಗಳ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಇನ್ನು ಹ್ಯುಂಡೈ ಕಂಪನಿಯು ಭಾರತದಲ್ಲಿ 25ನೇ ವರ್ಷ ಪೂರ್ಣಗೊಳಿಸಿದ ಸಂಭ್ರಮದಲ್ಲಿ ಅಸ್ತಿತ್ವ ಗ್ರಾಹಕರಿಗೆ ಮತ್ತು ಹೊಸ ಕಾರು ಖರೀದಿದಾರರಿಗೂ ಹಲವಾರು ಆಫರ್ಗಳನ್ನು ಘೋಷಣೆ ಮಾಡಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.

ಹೊಸ ವರ್ಷದ ಆಫರ್: ಹ್ಯುಂಡೈ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹ್ಯುಂಡೈ ಕಂಪನಿಯು ಹೊಸ ಕಾರು ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ತಗ್ಗಿರುವ ಏರಿಳಿತವಾಗುತ್ತಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಹೊಸ ಕೊಡುಗೆಗಳನ್ನು ಪ್ರಕಟಿಸುತ್ತಿದೆ. ಹೊಸ ಕಾರುಗಳ ಖರೀದಿಗೆ ಡಿಸ್ಕೌಂಟ್ ಜೊತೆ ಹ್ಯುಂಡೈ ಕಾರು ಮಾಲೀಕರಿಗೆ ಕಂಪನಿಯ ನಿಗದಿತ ಅವಧಿಯಲ್ಲಿ ಬಿಡಿಭಾಗಗಳ ಸೇವೆಗಳನ್ನು ರಿಯಾಯ್ತಿ ದರದಲ್ಲಿ ಒದಗಿಸುತ್ತಿದ್ದು, ಗ್ರಾಹಕರು ಬಿಡಿಭಾಗಗಳ ಮೇಲೆ ಶೇ.10 ರಷ್ಟು, ಬಿಡಿಭಾಗಗಳ ಸೇವಾ ದರಗಳ ಮೇಲೆ ಶೇ.20 ರಷ್ಟು ರಿಯಾಯ್ತಿ ನೀಡಿದೆ.

More from DriveSpark

Article Published On: Tuesday, January 11, 2022, 21:21 [IST]
English summary
Hyundai india cars offers for january 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+