ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಹ್ಯುಂಡೈ ಇಂಡಿಯಾ(Hyundai India) ಕಂಪನಿಯು ತನ್ನ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ತಗ್ಗಿರುವ ಏರಿಳಿತವಾಗುತ್ತಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ಫೆಬ್ರವರಿ ಅವಧಿಗಾಗಿ ಹಲವು ಹೊಸ ಕೊಡುಗೆಗಳನ್ನು ಪ್ರಕಟಿಸಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಕೋವಿಡ್ ಪರಿಣಾಮ ಕುಸಿತ ಕಂಡಿದ್ದ ಹೊಸ ವಾಹನ ಮಾರಾಟ ಇದೀಗ ಸಾಕಷ್ಟು ಸುಧಾರಿಸಿದ್ದು, ಪ್ರಮುಖ ಕಾರು ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಂಡಿವೆ. ಹ್ಯುಂಡೈ ಕಂಪನಿಯು ಸಹ ವಿವಿಧ ಮಾದರಿಗಳೊಂದಿಗೆ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಾರು ಮಾರಾಟದಲ್ಲಿ ಸ್ಥಿರತೆಗಾಗಿ ಕಂಪನಿಯು ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಆಫರ್ ಘೋಷಣೆ ಮಾಡಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ವಿವಿಧ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ 2022ರ ಫೆಬ್ರವರಿ ಅವಧಿಗೆ ವಿವಿಧ ಆಫರ್‌ಗಳನ್ನು ನೀಡುತ್ತಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಹ್ಯುಂಡೈ ಕಂಪನಿಯು ಕೂಡಾ ಸ್ಯಾಂಟ್ರೋ, ಗ್ರಾಂಡ್ ಐ10 ನಿಯೋಸ್, ಐ20 ಮತ್ತು ಔರಾ ಕಾರುಗಳ ಮೇಲೆ ಉತ್ತಮ ಆಫರ್‌ಗಳನ್ನು ನೀಡುತ್ತಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಎಂಟ್ರಿ ಲೆವಲ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಗ್ರಾಂಡ್ ಐ10 ನಿಯೋಸ್ ಆವೃತ್ತಿಯ ಮೇಲೆ ಹ್ಯುಂಡೈ ಕಂಪನಿಯು ಗರಿಷ್ಠ ರೂ. 50 ಸಾವಿರ ತನಕ ಉಳಿತಾಯ ಅವಕಾಶ ನೀಡಿದ್ದು, ಎಕ್ಸ್‌ಚೆಂಜ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ಒಳಗೊಂಡಿರಲಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಔರಾ ಕಂಪ್ಯಾಕ್ಟ್ ಸೆಡಾನ್ ಕಾರು ಮಾದರಿಯ ಮೇಲೂ ಹ್ಯುಂಡೈ ಕಂಪನಿಯು ರೂ.50 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದ್ದು, ಔರಾ ಕಾರಿನ ಪೆಟ್ರೋಲ್ ಮತ್ತು ಡೀಸೆಲ್ ಎರಡು ವೆರಿಯೆಂಟ್‌ಗಳ ಮೇಲೂ ಗರಿಷ್ಠ ನಗದು ರಿಯಾಯ್ತಿ ಪಡೆದುಕೊಳ್ಳಬಹುದಾಗಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಜೊತೆಗೆ ಕಂಪನಿಯು ಔರಾ ಕಾರಿನ ಸಿಎನ್‌ಜಿ ಮಾದರಿಯ ಮೇಲೂ ಅತ್ಯುತ್ತಮ ಆಫರ್‌ಗಳನ್ನು ನೀಡುತ್ತಿದ್ದು, ನಿಗದಿತ ಅವಧಿಯ ಕಾರು ಖರೀದಿಸುವ ಗ್ರಾಹಕರಿಗೆ ಆಕರ್ಷಕ ಡಿಸ್ಕೌಂಟ್ ಜೊತೆ ಹೆಚ್ಚುವರಿ ವಾರಂಟಿ ಆಫರ್ ನೀಡಲಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಹ್ಯುಂಡೈ ಕಂಪನಿಯು ತನ್ನ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಸ್ಯಾಂಟ್ರೋ ಹ್ಯಾಚ್‌ಬ್ಯಾಕ್ ಕಾರು ಖರೀದಿಯ ಮೇಲೆ ರೂ.40 ಸಾವಿರದಷ್ಟು ಎಕ್ಸ್‌ಚೆಂಜ್ ಆಫರ್ ಮತ್ತು ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದ್ದು, ಸ್ಯಾಂಟ್ರೊ ಕಾರಿನ ಪೆಟ್ರೋಲ್ ಮಾದರಿಯ ಜೊತೆಗೆ ಸಿಎನ್‌ಜಿ ಮಾದರಿಯು ಸಹ ಹೊಸ ಆಫರ್ ಒಳಗೊಂಡಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಹೊಸ ಆಫರ್‌ಗಳಲ್ಲಿ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಹ್ಯುಂಡೈ ಕಂಪನಿಯು ರೂ. 40 ಸಾವಿರದಷ್ಟು ವಿವಿಧ ಆಫರ್‌ಗಳನ್ನು ನೀಡುತ್ತಿದ್ದು, ಹೊಸ ಆಫರ್‌ಗಳು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳ ಮೇಲೂ ಅನ್ವಯವಾಗಲಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಹೊಸ ಆಫರ್‌ಗಳಲ್ಲಿ ಸ್ಯಾಂಟ್ರೋ, ಔರಾ, ಗ್ರಾಂಡ್ ಐ10 ನಿಯೋಸ್ ಮತ್ತು ಐ20 ಹೊರತುಪಡಿಸಿ ವೆನ್ಯೂ, ಕ್ರೆಟಾ, ವೆರ್ನಾ, ಅಲ್ಕಾಜರ್ ಮತ್ತು ಕೊನಾ ಇವಿ ಕಾರುಗಳ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಇನ್ನು ಹ್ಯುಂಡೈ ಕಂಪನಿಯು ಕೋವಿಡ್‌ನಿಂದಾಗಿರುವ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಹೊಸ ಕಾರು ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ತಗ್ಗಿರುವ ಏರಿಳಿತವಾಗುತ್ತಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಹೊಸ ಕೊಡುಗೆಗಳನ್ನು ಪ್ರಕಟಿಸುತ್ತಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಹೊಸ ಕಾರುಗಳ ಖರೀದಿಗೆ ಡಿಸ್ಕೌಂಟ್ ಜೊತೆ ಹ್ಯುಂಡೈ ಕಾರು ಮಾಲೀಕರಿಗೆ ಕಂಪನಿಯ ನಿಗದಿತ ಅವಧಿಯಲ್ಲಿ ಬಿಡಿಭಾಗಗಳ ಸೇವೆಗಳನ್ನು ರಿಯಾಯ್ತಿ ದರದಲ್ಲಿ ಒದಗಿಸುತ್ತಿದ್ದು, ಗ್ರಾಹಕರು ಬಿಡಿಭಾಗಗಳ ಮೇಲೆ ಶೇ.10 ರಷ್ಟು, ಬಿಡಿಭಾಗಗಳ ಸೇವಾ ದರಗಳ ಮೇಲೆ ಶೇ.20 ರಷ್ಟು ರಿಯಾಯ್ತಿ ನೀಡುತ್ತಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಫೆಬ್ರವರಿ ತಿಂಗಳ ಭರ್ಜರಿ ಡಿಸ್ಕೌಂಟ್ ಘೋಷಣೆ

ಹೊಸ ಗ್ರಾಹಕರಿಗೆ ಮಾತ್ರವಲ್ಲ ಅಸ್ತಿತ್ವದಲ್ಲಿರುವ ಗ್ರಾಹಕರಿಗೂ ಉಳಿತಾಯಕ್ಕೆ ಅವಕಾಶ ನೀಡಿರುವ ಹ್ಯುಂಡೈ ಕಂಪನಿಯು ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ್ದು, ರಿಯಾಯ್ತಿ ದರದಲ್ಲಿ ಬಿಡಿಭಾಗಗಳ ಸೇವಾಗಳನ್ನು ಒದಗಿಸುತ್ತಿದೆ.

Article Published On: Monday, February 21, 2022, 11:40 [IST]
English summary
Hyundai india february 2022 discount on santro aura i10 and i20
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+