ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಹ್ಯುಂಡೈ ಇಂಡಿಯಾ(Hyundai India) ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿ ಮೇಲೆ ಜುಲೈ ಅವಧಿಗಾಗಿ ಹಲವು ಹೊಸ ಆಫರ್ ಪ್ರಕಟಿಸಿದ್ದು, ಪ್ರೀಮಿಯಂ ಕಾರುಗಳ ಖರೀದಿಗೆ ಪೂರಕವಾದ ಹಲವು ಆಫರ್ ನೀಡುತ್ತಿದೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಸೆಮಿಕಂಡಕ್ಟರ್ ಪರಿಣಾಮ ಕುಸಿತ ಕಂಡಿದ್ದ ಹೊಸ ವಾಹನಗಳ ಮಾರಾಟ ಇದೀಗ ಸಾಕಷ್ಟು ಸುಧಾರಿಸಿದ್ದು, ಪ್ರಮುಖ ಕಾರು ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಂಡಿವೆ. ಹ್ಯುಂಡೈ ಕಂಪನಿಯು ಸಹ ವಿವಿಧ ಮಾದರಿಗಳೊಂದಿಗೆ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಾರು ಮಾರಾಟದಲ್ಲಿ ಸ್ಥಿರತೆಗಾಗಿ ಕಂಪನಿಯು ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಆಫರ್ ಘೋಷಣೆ ಮಾಡಿದೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ವಿವಿಧ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ 2022ರ ಮೇ ಅವಧಿಗೆ ವಿವಿಧ ಆಫರ್‌ಗಳನ್ನು ನೀಡುತ್ತಿವೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ಲಭ್ಯವಿದೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಹ್ಯುಂಡೈ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳಾದ ಗ್ರಾಂಡ್ ಐ10 ನಿಯೋಸ್, ಔರಾ ಮತ್ತು ವೆರ್ನಾ ಕಾರುಗಳ ಮೇಲೆ ಉತ್ತಮ ಆಫರ್‌ಗಳನ್ನು ನೀಡುತ್ತಿದೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಹ್ಯುಂಡೈ ಕಂಪನಿಯು ತನ್ನ ಜನಪ್ರಿಯ ಕಾರುಗಳ ಮೇಲೆ ರೂ.20 ಸಾವಿರದಿಂದ ರೂ. 35 ಸಾವಿರ ತನಕ ಎಕ್ಸ್‌ಚೆಂಜ್ ಆಫರ್ ಮತ್ತು ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದ್ದು, ಪೆಟ್ರೋಲ್ ಮಾದರಿಗಳ ಜೊತೆಗೆ ಸಿಎನ್‌ಜಿ ಮಾದರಿಗಳು ಸಹ ಹೊಸ ಆಫರ್ ಒಳಗೊಂಡಿವೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಎಂಟ್ರಿ ಲೆವಲ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಗ್ರಾಂಡ್ ಐ10 ನಿಯೋಸ್ ಆವೃತ್ತಿಯ ಮೇಲೆ ಹ್ಯುಂಡೈ ಕಂಪನಿಯು ಗರಿಷ್ಠ ರೂ. 48 ಸಾವಿರ ತನಕ ಉಳಿತಾಯ ಅವಕಾಶ ನೀಡಿದ್ದು, ಹೊಸ ಆಫರ್‌ಗಳು ಎಕ್ಸ್‌ಚೆಂಜ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ಒಳಗೊಂಡಿರಲಿದೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಹೊಸ ಆಫರ್‌ಗಳಲ್ಲಿ ಔರಾ ಕಂಪ್ಯಾಕ್ಟ್ ಸೆಡಾನ್ ಕಾರು ಮಾದರಿಯ ಮೇಲೂ ಹ್ಯುಂಡೈ ಕಂಪನಿಯು ರೂ. 23 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದ್ದು, ಔರಾ ಕಾರಿನ ಪೆಟ್ರೋಲ್ ಮತ್ತು ಸಿಎನ್‌ಜಿ ಎರಡು ವೆರಿಯೆಂಟ್‌ಗಳ ಮೇಲೂ ಗರಿಷ್ಠ ನಗದು ರಿಯಾಯ್ತಿ ಪಡೆದುಕೊಳ್ಳಬಹುದಾಗಿದೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಔರಾ ಮತ್ತು ಗ್ರಾಂಡ್ ಐ10 ನಿಯೋಸ್ ಮಾದರಿಗಳ ನಂತರ ಐ20 ಮಾದರಿಯ ಮೇಲೆ ರೂ. 20 ಸಾವಿರದಷ್ಟು ಡಿಸ್ಕೌಂಟ್ ಲಭ್ಯವಿದ್ದರೆ ವೆರ್ನಾ ಮಾದರಿಯ ಮೇಲೆ ರೂ. 20 ಸಾವಿರ ತನಕ ಡಿಸ್ಕೌಂಟ್ ನೀಡುತ್ತಿದೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಹೊಸ ಆಫರ್‌ಗಳಲ್ಲಿ ಔರಾ, ಗ್ರಾಂಡ್ ಐ10 ನಿಯೋಸ್, ಐ20 ಮತ್ತು ವೆರ್ನಾ ಹೊರತುಪಡಿಸಿ ವೆನ್ಯೂ, ಕ್ರೆಟಾ, ಅಲ್ಕಾಜರ್ ಮತ್ತು ಕೊನಾ ಇವಿ ಕಾರುಗಳ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಇನ್ನು ಹ್ಯುಂಡೈ ಕಂಪನಿಯು ಹೊಸ ಕಾರು ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿದ್ದು, ಕಳೆದ ತಿಂಗಳು ಕಂಪನಿಯು ಒಟ್ಟು 49,001 ವಾಹನಗಳನ್ನು ಮಾರಾಟ ಮಾಡುವ ಮೂಲಕ ಟಾಟಾ ಮೋಟಾರ್ಸ್ ಅನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಮರಳಿ ಬಂದಿದೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಕಳೆದ ವರ್ಷದ ಜೂನ್ ತಿಂಗಳಿನಲ್ಲಿ 40,496 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ. 21 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಹ್ಯುಂಡೈನ ಮಾರಾಟ ಸಂಖ್ಯೆಯು ಕಳೆದ ತಿಂಗಳು ವರ್ಷದಿಂದ ವರ್ಷಕ್ಕೆ ಶೇ. 21 ರಷ್ಟು (8,505 ಯುನಿಟ್‌ಗಳು) ಹೆಚ್ಚಾಗಿದೆ. ಹುಂಡೈನ ಮಾರಾಟವು 2022ರ ಮೇ ತಿಂಗಳಿಗೆ ಹೋಲಿಸಿದರೆ 42,293 ಯುನಿಟ್‌ಗಳೊಂದಿಗೆ ಶೇಕಡಾ.15.86 (6,708 ಯುನಿಟ್‌ಗಳು) ಹೆಚ್ಚಾಗಿದೆ.

ಜುಲೈ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ

ಮಾರಾಟದ ಸಂಖ್ಯೆಯಲ್ಲಿನ ಈ ಹೆಚ್ಚಳವು ಟಾಟಾ ಮೋಟಾರ್ಸ್‌ನಿಂದ ಮಾರಾಟ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಮರಳಿ ಪಡೆಯಲು ಹುಂಡೈ ಯಶಸ್ವಿಯಾಗಿದ್ದು, ಹ್ಯುಂಡೈ ಕಾರುಗಳ ಮಾರಾಟವು ಹೆಚ್ಚಾಗುತ್ತಿದೆ.

Article Published On: Wednesday, July 13, 2022, 8:45 [IST]
English summary
Hyundai india july 2022 offers on grand i10 aura i20 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+