ಮೇ ಅವಧಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ ಹ್ಯುಂಡೈ
ಹ್ಯುಂಡೈ ಇಂಡಿಯಾ(Hyundai India) ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿ ಮೇಲೆ ಮೇ ಅವಧಿಗಾಗಿ ಹಲವು ಹೊಸ ಆಫರ್ ಪ್ರಕಟಿಸಿದ್ದು, ಪ್ರೀಮಿಯಂ ಕಾರುಗಳ ಖರೀದಿಗೆ ಪೂರಕವಾದ ಹಲವು ಆಫರ್ ನೀಡುತ್ತಿದೆ.

ಸೆಮಿಕಂಡಕ್ಟರ್ ಪರಿಣಾಮ ಕುಸಿತ ಕಂಡಿದ್ದ ಹೊಸ ವಾಹನ ಮಾರಾಟ ಇದೀಗ ಸಾಕಷ್ಟು ಸುಧಾರಿಸಿದ್ದು, ಪ್ರಮುಖ ಕಾರು ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಂಡಿವೆ. ಹ್ಯುಂಡೈ ಕಂಪನಿಯು ಸಹ ವಿವಿಧ ಮಾದರಿಗಳೊಂದಿಗೆ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಾರು ಮಾರಾಟದಲ್ಲಿ ಸ್ಥಿರತೆಗಾಗಿ ಕಂಪನಿಯು ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಆಫರ್ ಘೋಷಣೆ ಮಾಡಿದೆ.

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ವಿವಿಧ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ 2022ರ ಮೇ ಅವಧಿಗೆ ವಿವಿಧ ಆಫರ್‌ಗಳನ್ನು ನೀಡುತ್ತಿದೆ.

ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ಲಭ್ಯವಿದೆ.

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಹ್ಯುಂಡೈ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳಾದ ಸ್ಯಾಂಟ್ರೋ, ಗ್ರಾಂಡ್ ಐ10 ನಿಯೋಸ್ ಮತ್ತು ಔರಾ ಕಾರುಗಳ ಮೇಲೆ ಉತ್ತಮ ಆಫರ್‌ಗಳನ್ನು ನೀಡುತ್ತಿದೆ.

ಹ್ಯುಂಡೈ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಸ್ಯಾಂಟ್ರೋ ಹ್ಯಾಚ್‌ಬ್ಯಾಕ್ ಕಾರು ಖರೀದಿಯ ಮೇಲೆ ರೂ.28 ಸಾವಿರದಷ್ಟು ಎಕ್ಸ್‌ಚೆಂಜ್ ಆಫರ್ ಮತ್ತು ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದ್ದು, ಸ್ಯಾಂಟ್ರೊ ಕಾರಿನ ಪೆಟ್ರೋಲ್ ಮಾದರಿಯ ಜೊತೆಗೆ ಸಿಎನ್‌ಜಿ ಮಾದರಿಯು ಸಹ ಹೊಸ ಆಫರ್ ಒಳಗೊಂಡಿದೆ.

ಎಂಟ್ರಿ ಲೆವಲ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಗ್ರಾಂಡ್ ಐ10 ನಿಯೋಸ್ ಆವೃತ್ತಿಯ ಮೇಲೆ ಹ್ಯುಂಡೈ ಕಂಪನಿಯು ಗರಿಷ್ಠ ರೂ. 48 ಸಾವಿರ ತನಕ ಉಳಿತಾಯ ಅವಕಾಶ ನೀಡಿದ್ದು, ಹೊಸ ಆಫರ್‌ಗಳು ಎಕ್ಸ್‌ಚೆಂಜ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ಒಳಗೊಂಡಿರಲಿದೆ.

ಹೊಸ ಆಫರ್‌ಗಳಲ್ಲಿ ಔರಾ ಕಂಪ್ಯಾಕ್ಟ್ ಸೆಡಾನ್ ಕಾರು ಮಾದರಿಯ ಮೇಲೂ ಹ್ಯುಂಡೈ ಕಂಪನಿಯು ರೂ. 48 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದ್ದು, ಔರಾ ಕಾರಿನ ಪೆಟ್ರೋಲ್ ಮತ್ತು ಡೀಸೆಲ್ ಎರಡು ವೆರಿಯೆಂಟ್‌ಗಳ ಮೇಲೂ ಗರಿಷ್ಠ ನಗದು ರಿಯಾಯ್ತಿ ಪಡೆದುಕೊಳ್ಳಬಹುದಾಗಿದೆ.

ಜೊತೆಗೆ ಕಂಪನಿಯು ಔರಾ ಕಾರಿನ ಸಿಎನ್‌ಜಿ ಮಾದರಿಯ ಮೇಲೂ ಅತ್ಯುತ್ತಮ ಆಫರ್‌ಗಳನ್ನು ನೀಡುತ್ತಿದ್ದು, ನಿಗದಿತ ಅವಧಿಯ ಕಾರು ಖರೀದಿಸುವ ಗ್ರಾಹಕರಿಗೆ ಆಕರ್ಷಕ ಡಿಸ್ಕೌಂಟ್ ಜೊತೆ ಹೆಚ್ಚುವರಿ ವಾರಂಟಿ ಆಫರ್ ನೀಡಲಿದೆ.

ಹೊಸ ಆಫರ್‌ಗಳಲ್ಲಿ ಸ್ಯಾಂಟ್ರೋ, ಔರಾ, ಗ್ರಾಂಡ್ ಐ10 ನಿಯೋಸ್ ಮತ್ತು ಹೊರತುಪಡಿಸಿ ಐ20, ವೆನ್ಯೂ, ಕ್ರೆಟಾ, ವೆರ್ನಾ, ಅಲ್ಕಾಜರ್ ಮತ್ತು ಕೊನಾ ಇವಿ ಕಾರುಗಳ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ.

ಇನ್ನು ಹ್ಯುಂಡೈ ಕಂಪನಿಯು ಕೋವಿಡ್‌ನಿಂದಾಗಿರುವ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಹೊಸ ಕಾರು ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ಹೆಚ್ಚುತ್ತಿರುವ ಬಿಡಿಭಾಗಗಳ ಆಮದು ಮೇಲಿನ ಸುಂಕ ಹೆಚ್ಚಿರುವುದರಿಂದ ಬೆಲೆ ಹೆಚ್ಚಳ ಸಹ ಘೋಷಣೆ ಮಾಡಿದೆ.

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಬೆಲೆ ಹೆಚ್ಚಳ ಘೋಷಿಸಿದ್ದು, ಹೊಸ ಕಾರುಗಳ ದರ ಮೇ 1ರಿಂದ ಅನ್ವಯಿಸುವಂತೆ ಏರಿಕೆ ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಬೆಲೆ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯನ್ನು ಹೆಚ್ಚಿಸಿದೆ.

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ತಮ್ಮ ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಹೊಸ ದರ ಪಟ್ಟಿ ಪ್ರಕಾರ ಕ್ರೆಟಾ ಎಸ್‌ಯುವಿ ಮಾದರಿಯು ಹೆಚ್ಚಿನ ಮಟ್ಟದ ದರ ಏರಿಕೆ ಪಡೆದುಕೊಂಡರೆ ವೆರ್ನಾ ಸೆಡಾನ್ ಮಾದರಿಯಲ್ಲಿ ಅಲ್ಪ ಪ್ರಮಾಣದ ದರ ಏರಿಕೆ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಕ್ರೆಟಾ ಕಾರಿನ ಬೆಲೆಯು ವಿವಿಧ ವೆರಿಯೆಂಟ್‌ಗಳಲ್ಲಿ ಗರಿಷ್ಠ ರೂ.27 ಸಾವಿರ ಹೆಚ್ಚಳವಾಗಿದ್ದು, ವೆನ್ಯೂ ಮಾದರಿಯ ಬೆಲೆಯಲ್ಲಿ ಗರಿಷ್ಠ ರೂ. 12 ಸಾವಿರ ಮತ್ತು ಅಲ್ಕಾಜರ್ ಎಸ್‌ಯುವಿ ಬೆಲೆಯಲ್ಲಿ ಗರಿಷ್ಠ ರೂ. 10,100 ತನಕ ಹೆಚ್ಚಳವಾಗಿದೆ.


Click it and Unblock the Notifications