ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಹ್ಯುಂಡೈ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆಗೆ ಸಿದ್ದವಾಗುತ್ತಿದೆ.

Recommended Video

Mahindra Scorpio Classic Launched | Price At Rs 11.99 Lakh | Scorpio Classic Vs Scorpio N In Kannada

ಹ್ಯುಂಡೈ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಕಾರಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆಯ ಕುರಿತಾಗಿ ಹ್ಯುಂಡೈ ಇಂಡಿಯಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲವಾದರೂ ಲಭ್ಯವಾಗಿ ಸುದ್ದಿ ಮೂಲಗಳ ಪ್ರಕಾರ ಮುಂಬರುವ ನವೆಂಬರ್ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಬಹುದಾಗಿದೆ. ಫೇಸ್‌ಲಿಫ್ಟ್ ಆವೃತ್ತಿಯ ಮೂಲಕ ಕಂಪನಿಯು ಕೊನಾ ಇವಿ ಕಾರಿನಲ್ಲಿ ವಿಸ್ತರಿತ ಬ್ಯಾಟರಿ ಪ್ಯಾಕ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಲಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಭಾರತದಲ್ಲಿ ಮೊದಲ ಬಾರಿಗೆ 2019ರಲ್ಲಿ ಬಿಡುಗಡೆಯಾಗಿದ್ದ ಕೊನಾ ಇವಿ ಕಾರು ಮಾದರಿಯು ದುಬಾರಿ ಬೆಲೆ ನಡುವೆಯೂ ಉತ್ತಮ ಬೇಡಿಕೆ ಹೊಂದಿದ್ದು, ಫೇಸ್‌ಲಿಫ್ಟ್ ಆವೃತ್ತಿಯು ಹೊಸ ಬದಲಾವಣೆಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಪ್ರಸ್ತುತ ಮಾರುಕಟ್ಟೆಯಲ್ಲಿ ಕೊನಾ ಇವಿ ಕಾರು ಮಾದರಿಯು ಫೇಮ್ 2 ಸಬ್ಸಡಿಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 23.30 ಲಕ್ಷ ಬೆಲೆ ಹೊಂದಿದ್ದು, ಹೊಸದಾಗಿ ಬಿಡುಗಡೆಯಾಗಲಿರುವ 2022ರ ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ಯುರೋಪ್ ಮಾರುಕಟ್ಟೆಗಳಲ್ಲಿ ಈಗಾಗಲೇ ಭಾರೀ ಪ್ರಮಾಣದ ಮಾರಾಟ ಸಂಖ್ಯೆ ಹೊಂದಿರುವ ಕೊನಾ ಇವಿ ಕಾರು ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ನವೀಕೃತ ಮಾದರಿಯನ್ನು ಪರಿಚಯಿಸಿರುವ ಹ್ಯುಂಡೈ ಕಂಪನಿಯು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಕೊನಾ ಇವಿ ನವೀಕೃತ ಮಾದರಿಯನ್ನು ಯುಕೆಯಲ್ಲಿ ಸದ್ಯ ಭಾರತೀಯ ರೂಪಾಯಿ ಮೌಲ್ಯದ ಪ್ರಕಾರ ರೂ. 35 ಲಕ್ಷ ಬೆಲೆಯಲ್ಲಿ ಮಾರಾಟಗೊಳ್ಳುತ್ತಿದ್ದು, ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಪರಿಚಯಿಸಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕೊನಾ ಇವಿ ಕಾರು ಪ್ರಮುಖ ಫೀಚರ್ಸ್‌ಗಳ ಬದಲಾಣೆ ಹೊರತುಪಡಿಸಿ ಈ ಹಿಂದಿನಂತೆಯೇ ಎರಡು ಪ್ರಮುಖ ಬ್ಯಾಟರಿ ಆಯ್ಕೆಯನ್ನು ಹೊಂದಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 64kWh ಮತ್ತು 39.2kWh ಬ್ಯಾಟರಿ ಪ್ಯಾಕ್ ಜೋಡಿಸಲಾಗಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯು ಸದ್ಯ ಕೊನಾ ಇವಿ ಮಾದರಿಗಾಗಿ 64kWh ಮತ್ತು 39.2kWh ಬ್ಯಾಟರಿ ಪ್ಯಾಕ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭಾರತದಲ್ಲಿ ಮಾತ್ರ ಸದ್ಯಕ್ಕೆ 39.2kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಫೇಸ್‌ಲಿಫ್ಟ್ ಮಾದರಿಯೊಂದಿಗೆ ಹ್ಯುಂಡೈ ಕಂಪನಿಯು ಭಾರತದಲ್ಲಿ 64kWh ಬ್ಯಾಟರಿ ಪ್ಯಾಕ್ ಹೊಂದಿರುವ ಕೊನಾ ಇವಿ ಮಾದರಿಯನ್ನು ಬಿಡುಗಡೆ ಮಾಡಬಹುದಾದ ಸಾಧ್ಯತೆಗಳಿದ್ದು, ಇದು 39.2kWh ಮಾದರಿಗಿಂತಲೂ ತುಸು ದುಬಾರಿ ದರದೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರಲಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್ ಕಾರುಗಳಂತೆಯೇ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಜೊತೆಗೆ ಸಾಮಾನ್ಯ ಕಾರುಗಳಿಂತಲೂ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಇವಿ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಫೇಸ್‌ಲಿಫ್ಟ್ ಆವೃತ್ತಿಯು ಹೊಸ ವಿನ್ಯಾಸದ ಎಲ್ಇಡಿ ಡಿಆರ್‌ಎಲ್‌ಗಳು, ಟು ವರ್ಟಿಕಲ್ ಸ್ಲಾಟ್ ಹೊಂದಿರುವ ಬಂಪರ್, ಸಿಲ್ವರ್ ಆಕ್ಸೆಂಟ್ ಸೇರಿದಂತೆ ಪ್ರಮುಖ ಬದಲಾವಣೆಗಳೊಂದಿಗೆ ಎಲೆಕ್ಟ್ರಿಕ್ ಎಸ್‌ಯುವಿ ಪ್ರಿಯರನ್ನು ಆಕರ್ಷಿಸಲಿವೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಜೊತೆಗೆ ಹೊಸ ಕಾರಿನ ಹಿಂಭಾಗದ ವಿನ್ಯಾಸದಲ್ಲೂ ಪ್ರಮುಖ ಬದಲಾವಣೆಗಳಾಗಿದ್ದು, ಸ್ಪಿಟ್ ಟೈಲ್ ಲ್ಯಾಂಪ್ ಪ್ರತ್ಯೇಕಗೊಂಡಿರುವ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಸಿಗ್ನಲ್, ಆಕ್ಸಿಲರಿ ಟೈಲ್‌ಲ್ಯಾಂಪ್ ನೀಡಲಾಗುತ್ತಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಇದರೊಂದಿಗೆ ಹೊಸ ಕಾರಿನಲ್ಲಿ ಸುಧಾರಿತ ವಿನ್ಯಾಸದ ಅಲಾಯ್ ವೀಲ್ಹ್, ಆಕರ್ಷಕ ವಿನ್ಯಾಸದ ರೂಫ್ ರೈಲ್ಸ್ ನೀಡಲಾಗಿದ್ದು, ಹೊಸ ಕಾರಿನ ಒಳಭಾಗದಲ್ಲಿ ಫುಲ್-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಸರ್ಪೊಟ್ ಮಾಡುವ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೋಡಿಸಲಾಗಿದೆ.

ಭಾರತದಲ್ಲಿ ಹ್ಯುಂಡೈ ಕೊನಾ ಇವಿ ಫೇಸ್‌ ಲಿಫ್ಟ್ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಪ್ರಮುಖ ಸೇಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದ್ದು, ಹೊಸ ಕಾರಿನಲ್ಲಿ 6 ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ ಸೇರಿದಂತೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳಾದ ರಿಯರ್ ಟ್ರಾಫಿಕ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್‌ನಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ.

Most Read Articles

Kannada
English summary
Hyundai kona electric facelift to launch soon
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X