Just In
- 27 min ago
ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಲು ಹೊಸ ರೂಪದಲ್ಲಿ ಬರುತ್ತಿದೆ ಮಾರುತಿ ಆಲ್ಟೋ ಕೆ10
- 32 min ago
ಹೊಸ ಆಕ್ಟಿವಾ ಟೀಸರ್ ಬಿಟ್ಟು ನಿರೀಕ್ಷೆ ಹೆಚ್ಚಿಸಿದ ಹೋಂಡಾ: ಆಕ್ಟಿವಾ 7G ಆಗಿರಬಹುದೇ?
- 1 hr ago
ಇವಿ ಸ್ಕೂಟರ್ಗಳ ಬೆಲೆ ನಿಯಂತ್ರಿಸಲು ಬೃಹತ್ ಯೋಜನೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್
- 2 hrs ago
ಹೊಸ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಇಂದು ಬಿಡುಗಡೆ: ಹೇಗರಲಿವೆ ವಿನ್ಯಾಸ, ಬೆಲೆ, ವೈಶಿಷ್ಟ್ಯಗಳು!
Don't Miss!
- Technology
ಸದ್ದಿಲ್ಲದೇ ಮತ್ತೆ ಹೊಸ ಪ್ಲ್ಯಾನ್ ಪರಿಚಯಿಸಿದ 'ಜಿಯೋ'!..180GB ಡೇಟಾ ಪಕ್ಕಾ!
- Movies
ನೇರ ನುಡಿಯ ಸ್ವಾಭಿಮಾನಿ ಗಾಯಕ ಶಿವಮೊಗ್ಗ ಸುಬ್ಬಣ್ಣ: ಗಾಯಕಿ ಬಿ. ಕೆ ಸುಮಿತ್ರಾ ಸಂದರ್ಶನ
- Finance
ತೆರಿಗೆ ದರ ವಿಚಾರದಲ್ಲಿ ಹಿರಿಯ ನಾಗರಿಕರಿಗೆ ಪ್ರಯೋಜನ ನೋಡಿ!
- News
Breaking: ಧರ್ಮಗುರು ರಹೀಮುಲ್ಲಾ ಹಕ್ಕಾನಿ ಹತ್ಯೆ ಹೊಣೆ ಹೊತ್ತ ಐಸಿಸ್
- Sports
Asia Cup 2022: ರಾಹುಲ್ ಅಲ್ಲ, ಈತ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಲಿ; ಪಾಕ್ ಕ್ರಿಕೆಟಿಗ
- Travel
ಮಕ್ಕಳ ಜೊತೆ ಭೇಟಿ ಕೊಡಬಹುದಾದ ಕರ್ನಾಟಕದಲ್ಲಿಯ ಮೋಜಿನ ಸ್ಥಳಗಳು
- Lifestyle
ಹಣ್ಣು ಹೇಗೆ ಸೇವಿಸಬೇಕು? : ಹಣ್ಣು ಸೇವನೆ ವೇಳೆ ಈ ರೀತಿಯ ಮಿಸ್ಟೇಕ್ ನೀವು ಮಾಡುತ್ತಿದ್ದರೆ ಕೂಡಲೇ ನಿಲ್ಲಿಸಿ
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಹೊಸ ಮಾದರಿ ಬಿಡುಗಡೆಗೂ ಮುನ್ನ ಕೊನಾ ಇವಿಯಲ್ಲಿ ಎರಡು ಹೊಸ ಬಣ್ಣಗಳ ಆಯ್ಕೆ ನೀಡಿದ ಹ್ಯುಂಡೈ
ಹ್ಯುಂಡೈ ಇಂಡಿಯಾ ಕಂಪನಿಯು ಕೊನಾ ಇವಿ ಮೂಲಕ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಹೊಂದಿದ್ದು, ಕಂಪನಿಯು ಹೊಸ ಇವಿ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ಹೊಸ ಬಣ್ಣಗಳ ಆಯ್ಕೆ ನೀಡಿದೆ.

ಕೊನಾ ಇವಿ ಕಾರು ಮಾದರಿಯು ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ತುಸು ದುಬಾರಿ ಬೆಲೆ ಹೊಂದಿದ್ದು, ದುಬಾರಿ ಬೆಲೆ ನಡುವೆಯೂ ಕೊನಾ ಇವಿ ಉತ್ತಮ ಬೇಡಿಕೆ ಕಾಯ್ದುಕೊಂಡಿದೆ. ಇತರೆ ಕಾರು ಮಾದರಿಗಳಿಗೆ ಹೋಲಿಕೆ ಮಾಡಿದರೆ ಕೊನಾ ಇವಿ ಬೇಡಿಕೆ ಸಣ್ಣ ಪ್ರಮಾಣದಲ್ಲಿದ್ದರೂ ಇವಿ ಕಾರುಗಳ ಮಾರಾಟದಲ್ಲಿ ಕೊನಾ ಇವಿ ಮಾರಾಟವು ಹ್ಯುಂಡೈ ಬ್ರಾಂಡ್‌ಗೆ ಉತ್ತಮ ಉಪಸ್ಥಿತಿ ತಂದುಕೊಟ್ಟಿದೆ.

ಹೀಗಾಗಿ ಕಡಿಮೆ ಪ್ರಮಾಣದ ಬೇಡಿಕೆ ನಡುವೆಯೂ ಕೊನಾ ಇವಿ ಮಾದರಿಯ ಮಾರಾಟವನ್ನು ಮುಂದುವರಿಸುತ್ತಿರುವ ಹ್ಯುಂಡೈ ಕಂಪನಿಯು ಶೀಘ್ರದಲ್ಲಿ ಉನ್ನತೀಕರಿಸಿದ ಮಾದರಿಯನ್ನು ಪರಿಚಯಿಸುತ್ತಿದ್ದು, ಹೊಸ ಮಾದರಿಯ ಬಿಡುಗಡೆಗೂ ಮುನ್ನ ಕಂಪನಿಯು ಕೊನಾ ಇವಿ ಮಾದರಿಯಲ್ಲಿ ಎರಡು ಹೊಸ ಬಣ್ಣಗಳ ಆಯ್ಕೆ ನೀಡಿದೆ.

ಕೊನಾ ಇವಿಯಲ್ಲಿ ಈ ಹಿಂದೆ ಪೊಲಾರ್ ವೈಟ್, ಪ್ಯಾಂಥಮ್ ಬ್ಲ್ಯಾಕ್, ಟೈಪೋನ್ ಸಿಲ್ವರ್ ಮತ್ತು ಪೋಲಾರ್ ವೈಟ್ ಹಾಗೂ ಪ್ಯಾಂಥಮ್ ಬ್ಲ್ಯಾಕ್ ಡ್ಯುಯಲ್ ಟೋನ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದ ಹ್ಯುಂಡೈ ಕಂಪನಿಯು ಟೈಪೋನ್ ಸಿಲ್ವರ್ ಮಾದರಿಯನ್ನು ಇದೀಗ ಸ್ಥಗಿತಗೊಳಿಸಿ ಎರಡು ಹೊಸ ಬಣ್ಣಗಳ ಆಯ್ಕೆ ನೀಡಿದೆ.

ಫ್ಲೈರಿ ರೆಡ್ ಜೊತೆ ಪ್ಯಾಂಥಮ್ ಬ್ಲ್ಯಾಕ್ ಮತ್ತು ಟೈಟಾನ್ ಗ್ರೇ ಜೊತೆ ಪ್ಯಾಂಥಮ್ ಬ್ಲ್ಯಾಕ್ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ನೀಡಿದ್ದು, ಹೊಸ ಬಣ್ಣಗಳ ಆಯ್ಕೆ ಹೊರತಾಗಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಜೊತೆಗೆ ಹೊಸ ಬಣ್ಣಗಳಿಗಾಗಿ ಯಾವುದೇ ಬೆಲೆ ಏರಿಕೆ ಕೂಡಾ ಮಾಡಲಾಗಿಲ್ಲ.

ಪ್ರಸ್ತುತ ಮಾರುಕಟ್ಟೆಯಲ್ಲಿ ಕೊನಾ ಇವಿ ಕಾರು ಮಾದರಿಯು ಸಬ್ಸಡಿ ದರದೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 23.30 ಲಕ್ಷ ಬೆಲೆ ಹೊಂದಿದ್ದು, ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ 2022ರ ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಇನ್ನು ಯುರೋಪ್ ಮಾರುಕಟ್ಟೆಗಳಲ್ಲಿ ಈಗಾಗಲೇ ಭಾರೀ ಪ್ರಮಾಣದ ಮಾರಾಟ ಸಂಖ್ಯೆ ಹೊಂದಿರುವ ಹ್ಯುಂಡೈ ಕೊನಾ ಇವಿ ಕಾರು ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ನವೀಕೃತ ಮಾದರಿಯನ್ನು ಪರಿಚಯಿಸಿರುವ ಹ್ಯುಂಡೈ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಭಾರತದಲ್ಲೂ ನವೀಕೃತ ಕೊನಾ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆ ನಡೆಸಿದೆ.

ಕೊನಾ ಇವಿ ನವೀಕೃತ ಮಾದರಿಯನ್ನು ಯುಕೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ರೂ. 33.58 ಲಕ್ಷಕ್ಕೆ ಬಿಡುಗಡೆ ಮಾಡಿದ್ದ ಹ್ಯುಂಡೈ ಕಂಪನಿಯು ಹೊಸ ಕಾರನ್ನು ಭಾರತದಲ್ಲೂ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಪರಿಚಯಿಸಲಿದೆ.

ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಪ್ರಮುಖ ತಾಂತ್ರಿಕ ಅಂಶಗಳನ್ನು ಪರಿಚಯಿಸಲಾಗಿದ್ದು, ಹೊಸ ವಿನ್ಯಾಸದ ಎಲ್ಇಡಿ ಡಿಆರ್‌ಎಲ್‌ಗಳು, ಟು ವರ್ಟಿಕಲ್ ಸ್ಲಾಟ್ ಹೊಂದಿರುವ ಬಂಪರ್, ಸಿಲ್ವರ್ ಆಕ್ಸೆಂಟ್ ಸೇರಿದಂತೆ ಪ್ರಮುಖ ಬದಲಾವಣೆಗಳು ಎಲೆಕ್ಟ್ರಿಕ್ ಎಸ್‌ಯುವಿ ಪ್ರಿಯರನ್ನು ಆಕರ್ಷಿಸಲಿವೆ. ಜೊತೆಗೆ ಹೊಸ ಕಾರಿನ ಹಿಂಭಾಗದ ವಿನ್ಯಾಸದಲ್ಲೂ ಪ್ರಮುಖ ಬದಲಾವಣೆಗಳಾಗಿದ್ದು, ಸ್ಪಿಟ್ ಟೈಲ್ ಲ್ಯಾಂಪ್ ಪ್ರತ್ಯೇಕಗೊಂಡಿರುವ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಸಿಗ್ನಲ್, ಆಕ್ಸಿಲರಿ ಟೈಲ್‌ಲ್ಯಾಂಪ್ ನೀಡಲಾಗಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಸುಧಾರಿತ ವಿನ್ಯಾಸದ ಅಲಾಯ್ ವೀಲ್ಹ್, ಆಕರ್ಷಕ ವಿನ್ಯಾಸದ ರೂಫ್ ರೈಲ್ಸ್ ನೀಡಲಾಗಿದ್ದು, ಹೊಸ ಕಾರಿನ ಒಳಭಾಗದಲ್ಲಿ ಫುಲ್-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಸರ್ಪೊಟ್ ಮಾಡುವ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೋಡಿಸಲಾಗಿದೆ.

ಹೊಸ ಕಾರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಪ್ರಮುಖ ಸೇಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದ್ದು, ಹೊಸ ಕಾರಿನಲ್ಲಿ 6 ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ ಸೇರಿದಂತೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳಾದ ರಿಯರ್ ಟ್ರಾಫಿಕ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್‌ನಂತಹ ಸೌಲಭ್ಯ ಹೊಂದಿದೆ.

ಹೊಸ ಕೊನಾ ಇವಿ ಕಾರು ಪ್ರಮುಖ ಫೀಚರ್ಸ್‌ಗಳ ಬದಲಾಣೆ ಹೊರತುಪಡಿಸಿ ಈ ಹಿಂದಿನಂತೆಯೇ ಎರಡು ಪ್ರಮುಖ ಬ್ಯಾಟರಿ ಆಯ್ಕೆಯನ್ನು ಹೊಂದಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 64kWh ಮತ್ತು 39.2kWh ಬ್ಯಾಟರಿ ಪ್ಯಾಕ್ ಜೋಡಿಸಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯು ಸದ್ಯ ಕೊನಾ ಇವಿ ಮಾದರಿಗಾಗಿ 64kWh ಮತ್ತು 39.2kWh ಬ್ಯಾಟರಿ ಪ್ಯಾಕ್ ಮಾರಾಟ ಮಾಡುತ್ತಿದ್ದು, ಭಾರತದಲ್ಲಿ ಮಾತ್ರ ಸದ್ಯಕ್ಕೆ 39.2kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಫೇಸ್‌ಲಿಫ್ಟ್ ಮಾದರಿಯೊಂದಿಗೆ ಹ್ಯುಂಡೈ ಕಂಪನಿಯು ಭಾರತದಲ್ಲಿ 64kWh ಬ್ಯಾಟರಿ ಪ್ಯಾಕ್ ಹೊಂದಿರುವ ಕೊನಾ ಇವಿ ಮಾದರಿಯನ್ನು ಬಿಡುಗಡೆ ಮಾಡಬಹುದಾದ ಸಾಧ್ಯತೆಗಳಿದ್ದು, ಇದು 39.2kWh ಮಾದರಿಗಿಂತಲೂ ತುಸು ದುಬಾರಿ ದರದೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರಲಿದೆ.

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್ ಕಾರುಗಳಂತೆಯೇ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

ಜೊತೆಗೆ ಸಾಮಾನ್ಯ ಕಾರುಗಳಿಂತಲೂ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಇವಿ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.