ಆಕರ್ಷಕ ವಿನ್ಯಾಸದಲ್ಲಿ ಹೊಸ ಹ್ಯುಂಡೈ ಗ್ರ್ಯಾಂಡ್ ಕ್ರೆಟಾ 7-ಸೀಟರ್ ಎಸ್‌ಯುವಿ ಬಿಡುಗಡೆ
ಹ್ಯುಂಡೈ ಕಂಪನಿಯು ತನ್ನ ಎಸ್‍ಯುವಿ ಪೋರ್ಟ್ಫೋಲಿಯೊವನ್ನು ಮತ್ತಷ್ಟು ಬಲಪಡಿಸಲು 7-ಸೀಟರ್ ಅಲ್ಕಾಜರ್ ಎಸ್‍ಯುವಿಯನ್ನು ಕಳೆದ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು, ಇದೀಗ ಹ್ಯುಂಡೈ ಕಂಪನಿಯು ಆಫ್ರಿಕಾದ ಮಾರುಕಟ್ಟೆಯಲ್ಲಿ ಗ್ರ್ಯಾಂಡ್ ಕ್ರೆಟಾ ಎಂಬ ಹೆಸರಿನಲ್ಲಿ ಅಲ್ಕಾಜರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದೆ.

ಹೊಸ ಹ್ಯುಂಡೈ ಗ್ರ್ಯಾಂಡ್ ಕ್ರೆಟಾ ಎಸ್‍ಯುವಿಯ ಆರಂಭಿಕ ಬೆಲೆಯು 449,900 ರಾಂಡ್ (ರೂ.23.37 ಲಕ್ಷ) ಆಗಿದೆ. ಈ ಗ್ರ್ಯಾಂಡ್ ಕ್ರೆಟಾ ಮಿಡ್ ಸೈಜ್ ಎಸ್‍ಯುವಿಯು ಭಾರತದ ಮಾರುಕಟ್ಟೆಯಲ್ಲಿ ಮಾರಾಟವಾಗುವ ಅಲ್ಕಾಜರ್ ಮಾದರಿಯಾಗಿದೆ ಮತ್ತು ಈಗಾಗಲೇ ಮೆಕ್ಸಿಕೋದಂತಹ ದೇಶಗಳಲ್ಲಿ ಲಭ್ಯವಿದೆ. ಮೂಲಭೂತವಾಗಿ ಈ ಎಸ್‍ಯುವಿಯು ಕ್ರೆಟಾದ ಮೂರು-ಸಾಲು ಆವೃತ್ತಿಯಾಗಿದೆ. ಈ ಎಸ್‍ಯುವಿ ಸ್ಟೈಲಿಂಗ್ ಮತ್ತು ವಿಶೇಷಣಗಳ ವಿಷಯದಲ್ಲಿ ಇಂಡಿಯಾ-ಸ್ಪೆಕ್ ಅಲ್ಕಾಜರ್‌ಗೆ ಹೋಲುತ್ತದೆ.

ಹೊಸ ಹ್ಯುಂಡೈ ಗ್ರ್ಯಾಂಡ್ ಕ್ರೆಟಾ ಎಸ್‍ಯುವಿ ಅಲ್ಕಾಜರ್‌ನಂತೆಯೇ ಅದೇ ರೀತಿಯ ವೈಶಿಷ್ಟ್ಯಗಳನ್ನು ಹೊಂದಿದೆ. ಹೊಸ ಹ್ಯುಂಡೈ ಕ್ರೆಟಾ ಗ್ರ್ಯಾಂಡ್ 7-ಸೀಟರ್ ಮಾದರಿಯು ಪ್ರಸ್ತುತ ತಲೆಮಾರಿನ ಹ್ಯುಂಡೈ ಕ್ರೆಟಾವನ್ನು ಆಧರಿಸಿದೆ, ಇದು ಆಯಾ ವಿಭಾಗದಲ್ಲಿ ಜನಪ್ರಿಯ ಮಾದರಿಯಾಗಿದೆ.

ಈ ಎಸ್‍ಯುವಿಯ ಒಳಭಾಗದಲ್ಲಿ ಉತ್ತಮ ಸ್ಪೇಸ್ ಅನ್ನು ಹೊಂದಿದೆ. 7 ಜನರು ಉತ್ತಮವಾಗಿ ಕುಳಿತು ಪ್ರಯಾಣಿಸಬಹುದು. ಈ ಹ್ಯುಂಡೈ ಕ್ರೆಟಾ ಗ್ರ್ಯಾಂಡ್ 7-ಸೀಟರ್ ಆಕರ್ಷಕ ವಿನ್ಯಾಸ, ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ. ಈ ಎಸ್‍ಯುವಿಯು ಹ್ಯುಂಡೈ ಕ್ರೆಟಾ ಗ್ರ್ಯಾಂಡ್ ಕ್ರೆಟಾವನ್ನು ಆಧರಿಸಿದೆ.

ಆದರೆ, ಅದರ ಕೆಲವು ಸ್ಪರ್ಧಿಗಳಿಗಿಂತ ಭಿನ್ನವಾಗಿ, ಹ್ಯುಂಡೈ ಎರಡೂ ಎಸ್‌ಯುವಿಗಳನ್ನು ಪ್ರತ್ಯೇಕಿಸಲು ಕಾರಿನಲ್ಲಿ ಕೆಲವು ಕಾಸ್ಮೆಟಿಕ್ ಮತ್ತು ಯಾಂತ್ರಿಕ ಬದಲಾವಣೆಗಳನ್ನು ಮಾಡಿದೆ. ಈ ಹ್ಯುಂಡೈ ಕ್ರೆಟಾ ಗ್ರ್ಯಾಂಡ್ 7-ಸೀಟರ್ ಮಾದರಿಯನ್ನು 6 ಮತ್ತು 7 ಆಸನಗಳ ಸಂರಚನೆಗಳಲ್ಲಿ ಅನ್ನು ನೀಡುತ್ತದೆ.

ಈ ಕ್ರೆಟಾ ಗ್ರ್ಯಾಂಡ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಸೀಟುಗಳನ್ನು ಸೆಂಟರ್ ಕನ್ಸೋಲ್‌ನೊಂದಿಗೆ ಪಡೆಯುತ್ತದೆ, ಇದರಲ್ಲಿ ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಕಪ್‌ಹೋಲ್ಡರ್‌ಗಳಿವೆ. ಎಲ್ಲಾ ಮೂರು ಸಾಲುಗಳ ಸೀಟುಗಳೊಂದಿಗೆ 180 ಲೀಟರ್ ಬೂಟ್ ಸ್ಪೇಸ್ ಅನ್ನು ಹೊಂದಿದೆ.

ಈ ಹೊಸ ಕ್ರೆಟಾ ಗ್ರ್ಯಾಂಡ್ 7-ಸೀಟರ್ ಮಾದರಿಯಲ್ಲಿ 579 ಲೀಟರ್ ನಷ್ಟು ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ. ಇದನ್ನು 1051 ಲೀಟರ್'ಗೆ ಹೆಚ್ಚಿಸಬಹುದು. ಇನ್ನು ಈ ಎಸ್‍ಯುವಿಯ ಡೈವಿಂಗ್ ಸೀಟ್ ಎಲೆಕ್ಟ್ರಿಕ್ ಆಗಿ ಅಡೆಜಸ್ಟ್ ಮಾಡಿಕೊಳ್ಳಬಹುದು. ಇದರ ಎರಡನೇ ಸಾಲಿನ ಸೀಟನ್ನು ಮಡಚುವ ಮೂಲಕ ಮೂರನೇ ಸಾಲಿನ ಸೀಟನ್ನು ಸುಲಭವಾಗಿ ಪ್ರವೇಶಿಸಬಹುದು,

ಎರಡನೇ ಸಾಲಿನ ಅಥವಾ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚು ಲೆಗ್ ರೂಂಗಾಗಿ ಎರಡನೇ ಸಾಲಿನ ಸೀಟುಗಳನ್ನು ಸರಿಹೊಂದಿಸಬಹುದು. ಗ್ರ್ಯಾಂಡ್ ಕ್ರೆಟಾ ಎಸ್‍ಯುವಿ ನೀಡುತ್ತಿರುವ ಮತ್ತೊಂದು ಆರಾಮದಾಯಕ ವೈಶಿಷ್ಟ್ಯವೆಂದರೆ ಎರಡನೇ ಸಾಲಿನ ಪ್ರಯಾಣಿಕರಿಗೆ ಟ್ರೇ ಟೇಬಲ್ ಲಭ್ಯವಿರುತ್ತದೆ,

ಈ ಎಸ್‍ಯುವಿಯಲ್ಲಿ ಪ್ರಯಾಣಿಕರಿಗೆ ಹುಂಡೈ ಎಸಿ ವೆಂಟ್‌ಗಳನ್ನು ನೀಡುತ್ತಿದ್ದು, ಕಾರಿನಲ್ಲಿ ಇಂಟಿಗ್ರೇಟೆಡ್ ಏರ್ ಪ್ಯೂರಿಫೈಯರ್ ಅನ್ನು ಸಹ ಅಳವಡಿಸಲಾಗಿದೆ. ಈ ಹೊಸ ಹ್ಯುಂಡೈ ಕ್ರೆಟಾ ಗ್ರ್ಯಾಂಡ್ ಎಸ್‍ಯುವಿಯು ಸ್ಪ್ಲಿಟ್-ಶೈಲಿಯ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಹನಿಕೊಂಬ್ ಗ್ರಿಲ್, ಹೊಸ ವಿನ್ಯಾಸದ ಬಂಪರ್ ವಿನ್ಯಾಸ, ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್, ವಿವಿಧ ಮಾದರಿಗಳಿಗೆ ಅನುಗುಣವಾಗಿ 17 ಮತ್ತು 18-ಇಂಚಿನ ಅಲಾಯ್ ವೀಲ್ಹ್, ರೂಫ್ ರೈಲ್ಸ್, ಫ್ಲಕ್ಸ್ ಸ್ಕಫ್ ಪ್ಲೇಟ್, ಶಾರ್ಕ್ ಫಿನ್ ಅಂಟೆನಾ ಮತ್ತು ಬಾಡಿ ಕ್ಲ್ಯಾಡಿಂಗ್ ಅನ್ನು ಹೊಂದಿದೆ.

ಇದರೊಂದಿಗೆ ಈ ಕ್ರೆಟಾ ಗ್ರ್ಯಾಂಡ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ, 10.25 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಬ್ಲ್ಯೂ ಲಿಂಕ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಕಮಾಂಡರ್, ಮೂರು ಸಾಲಿಗೂ ಎಸಿ ವೆಂಟ್ಸ್, ಬ್ಲೈಂಡ್ ವಿಂಡೋ ಮಾನಿಟರ್ ಮತ್ತು ಆ್ಯಂಬಿಯೆಂಟ್ ಲೈಟಿಂಗ್ ಅನ್ನು ಕೂಡ ಹೊಂದಿದೆ. ಇನ್ನು ಸೀಟ್ ಬ್ಲ್ಯಾಟ್ ಟೇಬಲ್, ಆಟೋ ಏರ್ ಪ್ಯೂರಿಫೈರ್, ರಿಮೋಟ್ ಎಂಜಿನ್ ಸ್ಟಾರ್ಟ್, ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಪೀಚರ್ಸ್ ಗಳನ್ನು ಕೂಡ ಹೊಂದಿವೆ.

ಕ್ರೂಸ್ ಕಂಟ್ರೋಲ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಬ್ಲೈಂಡ್ ವ್ಯೂ ಮಾನಿಟರ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಅಸಿಸ್ಟ್ ಕಂಟ್ರೋಲ್, ಎಬಿಎಸ್ ಜೊತೆ ಇಬಿಡಿ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್ ಗಳನ್ನು ಹೊಂದಿವೆ.

ಇನ್ನು ಈ ಹೊಸ ಹ್ಯುಂಡೈ ಕ್ರೆಟಾ ಗ್ರ್ಯಾಂಡ್ ಎಸ್‍ಯುವಿಯು 2.0-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 157 ಬಿಹೆಚ್‍ಪಿ ಪವರ್ ಮತ್ತು 191 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ನೀಡಲಾಗಿದೆ.

ಇನ್ನು ಭಾರತದಲ್ಲಿ ಮಾರಾಟವಾಗುವ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಈ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಭಾರತದಲ್ಲಿ ಮಾರಾಟವಾಗುವ ಹ್ಯುಂಡೈ ಅಲ್ಕಾಜರ್ ಎಸ್‍ಯುವಿ ಮಾದರಿಯು ಎಂಜಿ ಹೆಕ್ಟರ್, ಟಾಟಾ ಸಫಾರಿ ಮತ್ತು ಮಹೀಂದ್ರಾ XUV700 ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತಿದೆ. ಒಟ್ಟಾರೆಯಾಗಿ ಹ್ಯುಂಡೈ ಕ್ರೆಟಾ ಗ್ರ್ಯಾಂಡ್ ಎಸ್‍ಯುವಿ ಮಾದರಿ ಮತ್ತು ಅಲ್ಕಾಜರ್ ಎಸ್‍ಯುವಿಯು ಒಂದೇ ಆಗಿದೆ. ಆದರೆ ಇದನ್ನು ಭಿನ್ನ ಹೆಸರುಗಳಲ್ಲಿ ಮಾರಾಟಗೊಳಿಸುತ್ತಿದೆ.


Click it and Unblock the Notifications