Just In
- 7 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 7 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 8 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 9 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Lifestyle
12 ಲಕ್ಷ ಖರ್ಚು ಮಾಡಿದ ನಾಯಿಯಾದ ಜಪಾನಿನ ವ್ಯಕ್ತಿ!
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2022ರ ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಕುಸಿತ ಕಂಡ ಹ್ಯುಂಡೈ
ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) 2022ರ ಮಾರ್ಚ್ ತಿಂಗಳ ಕಾರು ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ವರದಿಗಳ ಪ್ರಕಾರ, ಕಳೆದ ತಿಂಗಳು ಹ್ಯುಂಡೈ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ 44,600 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ 52,600 ಯುನಿಟ್‌ಗಳನ್ನು ಹ್ಯುಂಡೈ ಕಂಪನಿಯು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 15.20 ರಷ್ಟು ಕುಸಿತವನ್ನು ಕಂಡಿದೆ, ಕಂಪನಿಯು ಕಳೆದ ತಿಂಗಳು ಭಾರತದಿಂದ 10,687 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಕಳೆದ ವರ್ಷ ಇದೇ ತಿಂಗಳಲ್ಲಿ ರಫ್ತು ಮಾಡಿದ 12,021 ಯುನಿಟ್‌ಗಳಾಗಿತ್ತು. ಇದನ್ನು ಕಳೆದ ತಿಂಗಳ ಕಂಪನಿಯ ರಫ್ತಿಗೆ ಹೋಲಿಸಿದರೆ ಶೇಕಡಾ 11.09 ರಷ್ಟು ಕಡಿಮೆಯಾಗಿದೆ.

ಹಣಕಾಸು ವರ್ಷ 2022 ಮಾರಾಟಕ್ಕೆ ಬಂದರೆ, ಕಂಪನಿಯು ಶೇಕಡಾ 2.1 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ, ಇದು ಒಂದು ವರ್ಷದ ಹಿಂದಿನ ಅವಧಿಯಲ್ಲಿ ಮಾರಾಟವಾದ 4,71,535 ಯುನಿಟ್‌ಗಳಿಗೆ ಹೋಲಿಸಿದರೆ ದೇಶೀಯ ಮಾರುಕಟ್ಟೆಯಲ್ಲಿ 4,81,500 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಅದೇ ಹಣಕಾಸು ವರ್ಷದಲ್ಲಿ ಹ್ಯುಂಡೈನ ರಫ್ತುಗಳು 23.9 ರಷ್ಟು ಏರಿಕೆಯಾಗಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ ಮಾರಾಟವಾದ 1,04,342 ಯುನಿಟ್‌ಗಳಿಗೆ ಹೋಲಿಸಿದರೆ ಹಣಕಾಸು ವರ್ಷ 2022 ರಲ್ಲಿ ಸಾಗಿಸಲಾದ 1,29,260 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಒಂದು ವರ್ಷದ ಹಿಂದೆ ಇದೇ ಅವಧಿಯಲ್ಲಿ ಮಾರಾಟವಾದ 5,75,877 ಯುನಿಟ್‌ಗಳಿಗೆ ಹೋಲಿಸಿದರೆ ಕಾರು ತಯಾರಕರ ಸಂಚಿತ ಮಾರಾಟವು 2022 ರಲ್ಲಿ 6.1 ರಷ್ಟು ಏರಿಕೆಯಾಗಿದೆ,

ಸೆಮಿಕಂಡಕ್ಟರ್ ಚಿಪ್ ಕೊರತೆಯು ಭಾರತದಲ್ಲಿನ ಕಾರು ತಯಾರಕರಿಗೆ ಹಾನಿಯನ್ನುಂಟುಮಾಡುವುದನ್ನು ಮುಂದುವರೆಸಿದೆ. ಇದರಿಂದ ವಾಹನ ಉತ್ಪಾದನೆ ಮತ್ತು ಮಾರಾಟದ ಮೇಲೆ ಪರಿಣಾಮವನ್ನು ಬೀರುವುದನ್ನು ಮುಂದುವರೆದಿದೆ..

ಹ್ಯುಂಡೈ ಮೋಟಾರ್ ಇಂಡಿಯಾ ಸಹ ಫೆಬ್ರವರಿ 2022 ರಲ್ಲಿ 53,159 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ವರ್ಷದ ಹಿಂದೆ ಇದೇ ತಿಂಗಳಲ್ಲಿ ಮಾರಾಟವಾದ 61,800 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡಾ 14 ರಷ್ಟು ಮಾರಾಟ ಕುಸಿತವನ್ನು ವರದಿ ಮಾಡಿದೆ.

ಇತರ ಕಾರು ಉತ್ಪಾದಕರಂತೆಯೇ, ಹ್ಯುಂಡೈ ಸೆಮಿಕಂಡಕ್ಟರ್ ಕೊರತೆಯ ಸಮಸೆಯಿಂದ ಕಾರು ಉತ್ಪಾದನೆಯ ಮೇಲೆ ಪರಿಣಾಮ ಬೀರಿರುವುದರಿಂದ ಕಾರಿನ ವೈಟಿಂಗ್ ಪಿರೀಡ್ ಹೆಚ್ಚಾಗುತ್ತಿದೆ. ಇದರಿಂದ ಗ್ರಾಹಕರು ಇತರ ಕಡೆ ಹೋಗುತ್ತಾರೆ.

ಹ್ಯುಂಡೈ ಭಾರತೀಯ ಮಾರುಕಟ್ಟೆಯಲ್ಲಿ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾಗಿದೆ, ಹ್ಯುಂಡೈ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹಲವು ವಿಭಾಗದಲ್ಲಿ ತಮ್ಮ ಕಾರುಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಕೊರಿಯನ್ ಕಾರು ತಯಾರಕರ ಕಾರುಗಳು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ.

ಹ್ಯುಂಡೈ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್‌ಗಳಾದ ಸ್ಯಾಂಟ್ರೋ, ಗ್ರ್ಯಾಂಡ್ ಐ10 ಮತ್ತು ನಿಯೋಸ್ ಅನ್ನು ಮಾರಾಟ ಮಾಡುತ್ತಿದೆ, ಇನ್ನು ಹ್ಯುಂಡೈ ಕಂಪನಿಯ ಕ್ರೆಟಾ ಈಗ ಮಿಡ್ ಸೈಜ್ ಎಸ್‍ಯುವಿ ವಿಭಾಗದಲ್ಲಿ ಪಾರುಪತ್ಯ ಸಾದಿಸುತ್ತಿದೆ, ಹ್ಯುಂಡೈ ಕಂಪನಿಯು ಹಲವು ಜನಪ್ರಿಯ ಮಾದರಿಗಳು ಭಾರತದಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ.

ಇನ್ನು ಹ್ಯುಂಡೈ ಕಂಪನಿಯು ತನ್ನ ಪೋರ್ಟ್‌ಫೋಲಿಯೊವನ್ನು ಬಲಪಡಿಸಲು ಈ ವರ್ಷದ ಅವಧಿಯಲ್ಲಿ ಹೊಸ ಮಾದರಿಗಳನ್ನು ತರುವ ಸಾಧ್ಯತೆಯಿದೆ .ಹುಂಡೈ ಮುಂಬರುವ ತಿಂಗಳುಗಳಲ್ಲಿ ವೆನ್ಯೂ ಕಾಂಪ್ಯಾಕ್ಟ್ ಎಸ್‌ಯುವಿಯ ಫೇಸ್‌ಲಿಫ್ಟೆಡ್ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಇಂಡೋನೇಷ್ಯಾದಲ್ಲಿ ಈಗಾಗಲೇ ಮಾರಾಟದಲ್ಲಿರುವ ಕ್ರೆಟಾ ಮಿಡ್ ಸೈಜ್ ಎಸ್‍ಯುವಿಯು ಹೆಚ್ಚು ನವೀಕರಿಸಿದ ಆವೃತ್ತಿಯನ್ನು ಅನುಸರಿಸಬಹುದು. ಮುಂಬರುವ ವೆನ್ಯೂ ಮತ್ತು ಕ್ರೆಟಾವು ಜಾಗತಿಕ ಟ್ಯೂಸಾನ್ ನಿಂದ ಸಾಕಷ್ಟು ಸ್ಫೂರ್ತಿಯನ್ನು ಪಡೆದುಕೊಳ್ಳುವ ಬ್ರ್ಯಾಂಡ್‌ನ ಇತ್ತೀಚಿನ ಸೆನ್ಸೌಸ್ ಸ್ಪೋರ್ಟಿನೆಸ್ ವಿನ್ಯಾಸದ ತತ್ವಕ್ಕೆ ಅಂಟಿಕೊಳ್ಳುತ್ತದೆ.

ಹ್ಯುಂಡೈ ಕ್ರೆಟಾ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಅತ್ಯಂತ ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್ ಗಳ ಮೂಲಕ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾದ ಜನಪ್ರಿಯ ಮಾದರಿಯಾಗಿದೆ. ಹೊಸ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯನ್ನು 2021ರ ಗೈಕಿಂಡೋ ಇಂಡೋನೇಷ್ಯಾ ಇಂಟರ್‌ನ್ಯಾಶನಲ್ ಆಟೋ ಶೋ ನಲ್ಲಿ ಜಾಗತಿಕವಾಗಿ ಇತ್ತೀಚೆಗೆ ಹ್ಯುಂಡೈ ಕಂಪನಿಯು ಅನಾವರಣಗೊಳಿಸಿತ್ತು.

ಇರೊಂದಿಗೆ 2022ರ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯು ಹೊಸ ನವೀಕರಣಗಳನ್ನು ಪಡೆದುಕೊಂಡಿದೆ. ಹುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ ಈ ಕ್ಯಾಲೆಂಡರ್ ವರ್ಷದ ದ್ವಿತೀಯಾರ್ಧದಲ್ಲಿ ಕ್ರೆಟಾದ ಫೇಸ್‌ಲಿಫ್ಟೆಡ್ ಆವೃತ್ತಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಹೊಸ ನ್ಯೂ ಜನರೇಷನ್ ಟ್ಯೂಸಾನ್ ಮಾದರಿಯಂತೆ ಸ್ಪೋರ್ಟಿನೆಸ್ ವಿನ್ಯಾಸವನ್ನು ಕ್ರೆಟಾ ಫೇಸ್‌ಲಿಫ್ಟ್ ಪಡೆದುಕೊಂಡಿದೆ. ಹೆಚ್ಚು ಯುವ ಗ್ರಾಹಕರನ್ನು ಸೆಳೆಯುವಂತಿದೆ. ಅದರ ಮುಂಭಾಗವು ಹ್ಯುಂಡೈ ಕ್ರೆಟಾ ಗ್ರ್ಯಾಂಡ್ ಮಾದರಿಯಿಂದ ಎರವಲು ಪಡೆದುಕೊಂಡಿದೆ. 2022ರ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿ ಹೊಸ ಪ್ಯಾರಾಮೆಟ್ರಿಕ್ ಜ್ಯುವೆಲ್ ಪ್ಯಾಟರ್ನ್ ಗ್ರಿಲ್ ಅನ್ನು ಹೊಂದಿದ್ದು ಅದು ಎಲ್‌ಇಡಿ ಡಿಆರ್‌ಎಲ್ ಗಳನ್ನು ಸಂಯೋಜಿಸುತ್ತದೆ.

ಹ್ಯುಂಡೈ ಕಂಪನಿಯು ಹಲವಾರು ಕಾರಣಗಳಿಂದ 2022ರ ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಕುಸಿತವನ್ನು ಕಂಡಿದೆ. ಆದರೆ ಮುಂದಿನ ದಿನಗಳಲ್ಲಿ ಹ್ಯುಂಡೈ ಕಾರುಗಳ ಮಾರಾಟ ಹೆಚ್ಚಾಗಬಹುದು. ಅಲ್ಲದೇ ಹೊಸ ಮಾದರಿಗಳನ್ನು ಹ್ಯುಂಡೈ ಕಂಪನಿಯು ಬಿಡುಗಡೆಗೊಳಿಸಲಿದೆ. ಹೊಸ ಹ್ಯುಂಡೈ ಕಾರುಗಳು ಮಾರಾಟದಲ್ಲಿ ಕಂಪನಿಗೆ ಹೆಚ್ಚಿನ ಕೊಡುಗೆಯನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.