Just In
- 5 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 8 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 8 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 9 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಟಾ ಪಂಚ್ಗೆ ಪ್ರತಿಸ್ಪರ್ಧಿಯಾಗಿ ಬರುತ್ತಿದೆ ಹೊಸ ಹ್ಯುಂಡೈ ಕಾರು
ಹ್ಯುಂಡೈ ಭಾರತೀಯ ಮಾರುಕಟ್ಟೆಯಲ್ಲಿ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾಗಿದೆ, ಹ್ಯುಂಡೈ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹಲವು ವಿಭಾಗದಲ್ಲಿ ತಮ್ಮ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇದೀಗ ಭಾರತದಲ್ಲಿ ಹ್ಯುಂಡೈ ಕಂಪನಿಯು ಹೊಸ ಮೈಕ್ರೋ ಎಸ್ಯುವಿ ಮಾದರಿಯನ್ನು ಬಿಡುಗಡೆಗೊಳಿಸಲಿದೆ.
ಹ್ಯುಂಡೈ ಮೋಟಾರ್ ಇಂಡಿಯಾದ ಸೇಲ್ಸ್ ಮತ್ತು ಮಾರ್ಕೆಟಿಂಗ್ ವಿಭಾಗದ ನಿರ್ದೇಶಕ ತರುಣ್ ಗಾರ್ಗ್ ಅವರು ಭಾರತದಲ್ಲಿ ಹ್ತ್ಯುಂಡೈ ಬ್ರ್ಯಾಂಡ್ ಹೊಸ ವಿಭಾಗಗಳನ್ನು ಅನ್ವೇಷಿಸುತ್ತಿದ್ದಾರೆ ಮತ್ತು ಗ್ರಾಹಕರ ಅಗತ್ಯತೆಗಳನ್ನು ಪರಿಹರಿಸಲು ಮಾರುಕಟ್ಟೆ ಸಂಶೋಧನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ ಹೊಸ ಮೈಕ್ರೋ ಎಸ್ಯುವಿ ಭಾರತದಲ್ಲಿ 2023 ರಲ್ಲಿ ಬಿಡುಗಡೆಯಾಗಲಿದೆ ಆದ್ದರಿಂದ ಈ ವರ್ಷದ ಅಂತ್ಯದ ವೇಳೆಗೆ ಈ ಮಾದರಿಯು ರೋಡ್ ಟೆಸ್ಟ್ ಅನ್ನು ಪ್ರಾರಂಭಿಸಬಹುದು. ಈ ಹೊಸ ಎಂಟ್ರಿ ಲೆವೆಲ್ ಮೈಕ್ರೋ ಎಸ್ಯುವಿಗೆ ಸದ್ಯಕ್ಕೆ Ai3 ಎಂಬ ಕೋಡ್ ನೇಮ್ ಅನ್ನು ನೀಡಲಾಗಿದೆ,
ಹೊಸ ಹ್ಯುಂಡೈ ಮೈಕ್ರೋ ಎಸ್ಯುವಿ ಮಾದರಿಯು ಭಾರತದಲ್ಲಿ ಮಾರುತಿ ಸುಜುಕಿ ಇಗ್ನಿಸ್, ಇತ್ತೀಚೆಗೆ ಬಿಡುಗಡೆಯಾದ ಟಾಟಾ ಪಂಚ್ ಮತ್ತು ಮಹೀಂದ್ರಾ KUV100 ಮಾದರಿಗಳಿಗೆ ಪೈಪೋಟಿ ನೀಡುತ್ತದೆ. Ai3 ಮಾದರಿಯು ಬಹುಶಃ ದಕ್ಷಿಣ ಕೊರಿಯಾದಲ್ಲಿ ಬಿಡುಗಡೆ ಮಾಡಲಾದ ಕ್ಯಾಸ್ಪರ್ ಮೈಕ್ರೋ ಎಸ್ಯುವಿಯ ಹೆಚ್ಚು ಸ್ಥಳೀಯ ಆವೃತ್ತಿಯಾಗಿದೆ.
ಸದ್ಯಕ್ಕೆ, ಹ್ಯುಂಡೈ Ai3 ಗಾಗಿ ಯಾವ ಪ್ಲಾಟ್ಫಾರ್ಮ್ ಅನ್ನು ಬಳಸುತ್ತದೆ ಎಂಬುದು ನಮಗೆ ತಿಳಿದಿಲ್ಲ. ಹ್ಯುಂಡೈ ಹೊಸ ಮೈಕ್ರೋ ಎಸ್ಯುವಿಗಾಗಿ ಭಾರತದಲ್ಲಿ ಬೇರೆ ಹೆಸರನ್ನು ಬಳಸಬಹುದು. ದಕ್ಷಿಣ ಕೊರಿಯಾದಲ್ಲಿ ಬಿಡುಗಡೆಗೊಂಡ ಹ್ಯುಂಡೈ ಕ್ಯಾಸ್ಪರ್ ಸಣ್ಣ ಎಸ್ಯುವಿಯಲ್ಲಿರುವ ಅದೇ ಎರಡು ಎಂಜಿನ್ ಆಯ್ಕೆಯನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ Ai3 ಮಾದರಿಯಲ್ಲಿ ನೀಡಬಹುದು,
ಇದು 1.0-ಲೀಟರ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು ಹೊಸ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಗಿದೆ. ಇದರಲ್ಲಿ 1.0-ಲೀಟರ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 76 ಬಿಎಚ್ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 4-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ಗೆ ಜೋಡಿಸಲಾಗಿರುತ್ತದೆ.
ಇದರೊಂದಿಗೆ 1.0-ಲೀಟರ್ 3-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಬಹುದು. ಈ ಟರ್ಬೋ ಎಂಜಿನ್ 100 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ನೊಂದಿಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.
ಈ ಹ್ಯುಂಡೈ ಮೈಕ್ರೋ ಎಸ್ಯುವಿಯು 3,595 ಎಂಎಂ ಉದ್ದ, 1,595 ಎಂಎಂ ಅಗಲ ಮತ್ತು 1,575 ಎಂಎಂ ಎತ್ತರವನ್ನು ಹೊಂದಿದೆ. ಇದು ಸ್ಯಾಂಟ್ರೊ ಹ್ಯಾಚ್ಬ್ಯಾಕ್ಗಿಂತ ಚಿಕ್ಕದಾಗಿದೆ. ಆದರೆ ಇದು ಕ್ಯಾಬಿನ್ನಲ್ಲಿ ಯೋಗ್ಯವಾದ ಜಾಗವನ್ನು ಹೊಂದಿದೆ. ಈ ಕ್ಯಾಸ್ಪರ್ ನಾಲ್ಕು ಸೀಟ್ ಮಾದರಿಯಾಗಿದೆ. ಆದರೆ ನಾಲ್ಕೂ ಸೀಟುಗಳು ಉತ್ತಮ ಸೌಕರ್ಯ ಮತ್ತು ಬೆಂಬಲವನ್ನು ನೀಡುತ್ತವೆ. ಭಾರತದ ಮಾದರಿಯಲ್ಲಿ ಸಣ್ಣ ಬದಲಾವಣೆ ನಡೆಸಬಹುದು.
ಕ್ಯಾಸ್ಪರ್ ಮಾದರಿಯಲ್ಲಿ ಎರಡೂ ಮುಂಭಾಗದ ಸೀಟುಗಳನ್ನು ಫ್ಲಾಟ್ ಆಗಿ ಮಡಚಬಹುದು, ಇದು ಪ್ರೊಡಕ್ಷನ್ ಕಾರ್ಗೆ ವಿಶ್ವದಲ್ಲೇ ಮೊದಲನೆಯದು. ಹೀಗಾಗಿ ಮೇಕ್-ಶಿಫ್ಟ್ ಕ್ಯಾಂಪಿಂಗ್ ಟೇಬಲ್ಗಳಾಗಿ ಕಾರ್ಯನಿರ್ವಹಿಸುತ್ತದೆ. ಹಿಂಭಾಗದ ಸೀಟುಗಳನ್ನು ಪ್ರತ್ಯೇಕವಾಗಿ 160 ಎಂಎಂ ಮುಂದಕ್ಕೆ ಮತ್ತು ಹಿಂದಕ್ಕೆ ಸ್ಲೈಡ್ ಮಾಡಬಹುದು. ಇನ್ನು 39 ಡಿಗ್ರಿಗಳವರೆಗೆ ಒರಗಬಹುದು, ಇದು ಹಿಂಭಾಗದ ಪ್ರಯಾಣಿಕರ ಸೌಕರ್ಯ ಉತ್ತಮವಾಗಿದೆ.
ಈ ಹೊಸ ಮೈಕ್ರೋ ಎಸ್ಯುವಿಯಲ್ಲಿ 8 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಪೂರ್ಣ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್, ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್ (ಎರಡು-ಸ್ಪೋಕ್, ಫ್ಲಾಟ್-ಬಾಟಮ್ ವಿನ್ಯಾಸ), ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೀಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ, ವೆಂಟಿಲೇಟೆಡ್ ಡ್ರೈವರ್ ಸೀಟ್ ಮತ್ತು.ಮುಂತಾದ ಹಲವು ಫೀಚರ್ಸ್ ಗಳನ್ನು ಮತ್ತು ತಂತ್ರಜ್ಙಾನಗಳನ್ನು ಹೊಂದಿವೆ.
ಈ ಹೊಸ ಹುಂಡೈ ಪ್ರಾಜೆಕ್ಟ್ AX1 ನ ಉತ್ಪಾದನೆಯ ಆವೃತ್ತಿಯಾದ ಹ್ಯುಂಡೈ ಕ್ಯಾಸ್ಪರ್ ಸಿಟಿ ಮೂಲದ ಗ್ರಾಹಕರನ್ನು ಗುರಿಯಾಗಿರಿಸಿಕೊಳ್ಳುತ್ತದೆ. ಹ್ಯುಂಡೈ ಐ10 ಗಾಗಿ ಬಳಸಿದ ಪ್ಲಾಟ್ಫಾರ್ಮ್ ಅನ್ನು ಕಾರು ಹಂಚಿಕೊಂಡಿದೆ, ಅಂದರೆ ಕೋನಾ ಅಥವಾ ವೆನ್ಯೂ ಎಸ್ಯುವಿಗಳಿಗೆ ಹೋಲಿಸಿದರೆ ಇದು ಗಾತ್ರದಲ್ಲಿ ಚಿಕ್ಕದಾಗಿದೆ.
ಹ್ಯುಂಡೈ ಕ್ಯಾಸ್ಪರ್ ಮೈಕ್ರೊ ಎಸ್ಯುವಿಯು ಆಕರ್ಷಕ ಬಾಕ್ಸಿ ವಿನ್ಯಾಸವನ್ನು ಹೊಂದಿದೆ. ಈ ಮಕ್ರೋ ಎಸ್ಯುವಿಯು ವೃತ್ತಾಕಾರದ ಎಲ್ಇಡಿ ಡಿಆರ್ಎಲ್ಗಳೊಂದಿಗೆ ಸುತ್ತಿನ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿಸಿ, ದೊಡ್ಡ ಗ್ರಿಲ್, ಎಲ್ಇಡಿ ಡಿಆರ್ಎಲ್ಗಳ ತೆಳುವಾದ ಸ್ಟ್ರಿಪ್ ಟರ್ನ್ ಇಂಡಿಕೇಟರ್ಗಳು, ಸ್ಪ್ಲಿಟ್ ಟೈಲ್ ಲ್ಯಾಂಪ್ಸ್, ರೂಫ್ ಮೇಲೆ ಜೋಡಿಸಲಾದ ಸ್ಪಾಯ್ಲರ್ ಜೊತೆಗೆ ಟೈಲ್ ಗೇಟ್ ಅನ್ನು ಒಳಗೊಂಡಿದೆ.
ಇನ್ನು ಈ ಮೈಕ್ರೋ ಎಸ್ಯುವಿಯಲ್ಲಿ 7-ಏರ್ಬ್ಯಾಗ್ಗಳು, TPMS, ಫಾರ್ವರ್ಡ್ ಕಾಲಿಷನ್ ಅವೈಡನ್ಸ್ ಅಸಿಸ್ಟ್, ರೇರ್ ಕ್ರಾಸ್ ಟ್ರಾಫಿಕ್ ಅಲರ್ಟ್, ಡ್ರೈವರ್ ಅಟೆಕ್ಷನ್ ಮಾನಿಟರ್, ಇತ್ಯಾದಿ ಸೇರಿದಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳು ಲಭ್ಯವಿದೆ. ಇನ್ನು ಈ ಪುಟ್ಟ ಎಸ್ಯುವಿಯಲ್ಲಿ ಸ್ನೋ, ಸ್ಯಾಂಡ್ ಮತ್ತು ಮಾಡ್ ಎಂಬ ಡ್ರೈವಿಂಗ್ ಮೋಡ್ ಗಳನ್ನು ಒಳಗೊಂಡಿದೆ. ಈ ಮೈಕ್ರೊ ಎಸ್ಯುವಿಯು ಬೋರ್ಗ್ವರ್ನರ್ ಇಂಟಿಗ್ರೇಟೆಡ್ ಡ್ರೈವ್ ಮಾಡ್ಯೂಲ್ (ಐಡಿಎಂ) ಅನ್ನು ಪಡೆಯುತ್ತದೆ
ಹ್ಯುಂಡೈ ಕಂಪನಿಯು ಹಲವು ಜನಪ್ರಿಯ ಮಾದರಿಗಳು ಭಾರತದಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇದರೊಂದಿಗೆ ಹ್ಯುಂಡೈ ಕಂಪನಿಯು ಈ ವರ್ಷ ಭಾರತದಲ್ಲಿ ಹಲವು ಕಾರುಗಳನ್ನು ಬಿಡುಗಡೆಗೊಳಿಸಲಿವೆ. ಆದರೆ ಈ ಹೊಸ ಮೈಕ್ರೋ ಎಸ್ಯುವಿಯು ಭಾರತದಲ್ಲಿ ಮುಂದಿನ ವರ್ಷ ಬಿಡುಗಡೆಯಾಗುತ್ತದೆ.