YouTube

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಜಾಗತಿಕ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನ ಅಭಿವೃದ್ದಿ ಮತ್ತು ಮಾರಾಟವು ಗಮನಾರ್ಹ ಬೆಳವಣಿಗೆ ಸಾಧಿಸುತ್ತಿದ್ದು, ಸಾಂಪ್ರದಾಯಿಕ ವಾಹನ ಮಾದರಿಗಳಿಂದ ಇವಿ ವಾಹನಗಳತ್ತ ಹೆಚ್ಚಿನ ಗಮನಹರಿಸಲು ಹ್ಯುಂಡೈ ಕಂಪನಿಯು ಮಹತ್ವದ ನಿರ್ಧಾರ ಪ್ರಕಟಿಸಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಕಾರು ಉತ್ಪಾದನೆಯಲ್ಲಿ ಸದ್ಯ ವಿಶ್ವದ ಪ್ರಮುಖ ಕಾರು ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿರುವ ಹ್ಯುಂಡೈ ಕಂಪನಿಯು 9ನೇ ಸ್ಥಾನ ಕಾಯ್ದುಕೊಂಡಿದ್ದು, ಹ್ಯುಂಡೈ ಕಂಪನಿಯು 190ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ತನ್ನ ಮಾರಾಟ ಜಾಲವನ್ನು ಹೊಂದಿದೆ. ಹ್ಯುಂಡೈ ಕಂಪನಿಯ ಕಾರು ಉತ್ಪಾದನೆ ಮತ್ತು ತಂತ್ರಜ್ಞಾನ ಅಳವಡಿಕೆಯಲ್ಲಿ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಮುಂಚೂಣಿಯಲ್ಲಿದ್ದು, ಭವಿಷ್ಯ ಯೋಜನೆಗಳಿಗಾಗಿ ಕಂಪನಿಯು ಇದೀಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ದುಬಾರಿ ಇಂಧನಗಳ ದರ ಮತ್ತು ಮಾಲಿನ್ಯಕ್ಕೆ ಕಡಿವಾಣ ಹಾಕುವ ಉದ್ದೇಶ ವಿಶ್ವಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬದಲಾಗಿ ಪರಿಸರ ಸ್ನೇಹಿ ವಾಹನಗಳ ಬಳಕೆಯತ್ತ ಹೆಚ್ಚಿನ ಗಮನಹರಿಸುತ್ತಿದ್ದು, ಹ್ಯುಂಡೈ ಕಂಪನಿಯು ಕೂಡಾ ಪರಿಸರ ಸ್ನೇಹಿ ವಾಹನಗಳ ಅಭಿವೃದ್ದಿ ಮತ್ತು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಭವಿಷ್ಯದಲ್ಲಿ ಪರಿಸರ ಸ್ನೇಹಿ ವಾಹನಗಳಾದ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮನ್ನಣೆ ಸಿಗಲಿರುವುದನ್ನು ಅರಿತಿರುವ ಹ್ಯುಂಡೈ ಕಂಪನಿಯು ಈಗಿನಿಂದಲೇ ತನ್ನ ಹೊಸ ಯೋಜನೆಗಳಲ್ಲಿ ಹಲವಾರು ಮಾರ್ಪಾಡುಗಳೊಂದಿಗೆ ಅನುಷ್ಠಾನಗೊಳಿಸುತ್ತಿದ್ದು, ಭವಿಷ್ಯ ಯೋಜನೆಗಳಿಗಾಗಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿರುವ ತನ್ನ ಮುಖ್ಯ ಕಾರು ಉತ್ಪಾದನಾ ಘಟಕದಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಅಭಿವೃದ್ದಿ ವಿಭಾಗದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಣೆ ಮಾಡಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಸದ್ಯ ಚಾಲ್ತಿಯಲ್ಲಿ ಯೋಜನೆಗಳನ್ನು ಹೊರತುಪಡಿಸಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಅಭಿವೃದ್ದಿಗಾಗಿ ಯಾವುದೇ ಹೊಸ ಯೋಜನೆಗಳನ್ನು ರೂಪಿಸದಿರಲು ನಿರ್ಧರಿಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬದಲಾಗಿ ಸಂಪೂರ್ಣ ಪರಿಸರ ಸ್ನೇಹಿ ವಾಹನಗಳ ಅಭಿವೃದ್ದಿಯತ್ತ ಗಮನಹರಿಸುವ ಯೋಜನೆ ರೂಪಿಸಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

2025ರ ವೇಳೆಗೆ ವಿಶ್ವಾದ್ಯಂತ ಕಾರ್ಯನಿರ್ವಹಿಸುತ್ತಿರುವ ತನ್ನ ಪ್ರಮುಖ ಕಾರು ಘಟಕಗಳಲ್ಲಿ ಇವಿ ವಾಹನ ಉತ್ಪಾದನೆಗಾಗಿ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ಹ್ಯುಂಡೈ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ಕಾರುಗಳನ್ನು ರಸ್ತೆಗಿಳಿಸಲು ಸಿದ್ದವಾಗಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ದಕ್ಷಿಣ ಕೊರಿಯಾದ ಹ್ಯುಂಡೈ ಕಂಪನಿಯು ಕೂಡಾ ಸಹ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಿವಿಧ ವರ್ಗದ ಗ್ರಾಹಕರನ್ನು ಗಮದಲ್ಲಿಟ್ಟುಕೊಂಡು ವಿವಿಧ ಮಾದರಿಯ ಇವಿ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಭಾರತದಲ್ಲೂ ಸಹ ಇವಿ ಕಾರುಗಳ ಬಿಡುಗಡೆಯಾಗಿ ಬೃಹತ್ ಯೋಜನೆಯೊಂದಕ್ಕೆ ಚಾಲನೆ ನೀಡುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

2028ರ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಹೊಂದಲಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಗ್ರಾಹಕರ ಬೇಡಿಕೆಯೆಂತೆ ಮುಂದಿನ ಐದು ವರ್ಷಗಳಲ್ಲಿ ಆರು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಸದ್ಯ ಎಲೆಕ್ಟ್ರಿಕ್ ಕಾರು ಮಾದರಿಗಳ ಮುಖ್ಯ ತಾಂತ್ರಿಕ ಅಂಶವಾಗಿ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯಕ್ಕಾಗಿ ಸಂಪೂರ್ಣವಾಗಿ ಚೀನಿ ಮತ್ತು ಥೈವಾನ್ ಮಾರುಕಟ್ಟೆಯನ್ನು ನೆಚ್ಚಿಕೊಂಡಿರುವುದೇ ಇವಿ ಕಾರುಗಳ ಬೆಲೆಯು ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಬೆಲೆ ಪಡೆದುಕೊಂಡಿರುವುದಕ್ಕೆ ಪ್ರಮುಖ ಕಾರಣವಾಗಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಇವಿ ವಾಹನಗಳ ಬೆಲೆ ಇಳಿಕೆಗಾಗಿ ಭಾರತದಲ್ಲೇ ಪೂರ್ಣ ಪ್ರಮಾಣದ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನಾ ಘಟಕಗಳಿಗೆ ಹಲವು ಆಟೋ ಕಂಪನಿಗಳು ಸಹಭಾಗೀತ್ವದ ಯೋಜನೆಯನ್ನು ಕೈಗೊಂಡಿದ್ದು, ಮೇಡ್ ಇನ್ ಇಂಡಿಯಾ ಬ್ಯಾಟರಿ ಲಭ್ಯವಾದಲ್ಲಿ ಇವಿ ಕಾರುಗಳ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಬಹುದಾಗಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಈ ಮೂಲಕ ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ಮಾರಾಟ ಮಾಡಲು ಉದ್ದೇಶಿಸಿರುವ ಹ್ಯುಂಡೈ ಕಂಪನಿಯು ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದ್ದು, ಕಂಪನಿಯು 2028ರ ವೇಳೆಗೆ ವಿವಿಧ ಸೆಗ್ಮೆಂಟ್‌ಗಳಲ್ಲಿ ಆರು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಹ್ಯುಂಡೈ ಕಂಪನಿಯು ಹೊಸ ಇವಿ ಕಾರುಗಳ ಉತ್ಪಾದನೆಗೆ ಪೂರಕವಾದ ಮತ್ತು ಗುಣಮಟ್ಟದ ಮಾದರಿಗಳನ್ನು ಸಿದ್ದಪಡಿಸಲು ಆಧುನಿಕ ತಂತ್ರಜ್ಞಾನ ಪ್ರೇರಿತ ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡಲು ಉದ್ದೇಶಿಸಿದ್ದು, ಹೊಸ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಕಂಪನಿಯು ವಿವಿಧ ಸೆಗ್ಮೆಂಟ್ ಇವಿ ಪರಿಚಯಿಸಲಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಹ್ಯುಂಡೈ ಕಂಪನಿಯು ಈಗಾಗಲೇ ಭಾರತದಲ್ಲಿ ಕೊನಾ ಎಲೆಕ್ಟ್ರಿಕ್ ಕಾರು ಮಾದರಿಯ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಬಜೆಟ್ ಇವಿ ಕಾರುಗಳೊಂದಿಗೆ ಐಷಾರಾಮಿ ಇವಿ ಕಾರು ಮಾದರಿಗಳನ್ನು ಸಹ ಬಿಡುಗಡೆ ಮಾಡಲಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಎಲೆಕ್ಟ್ರಿಕ್ ಜೊತೆಗೆ ಭವಿಷ್ಯದಲ್ಲಿ ಹೈಡ್ರೊಜನ್ ಫ್ಯೂಲ್ ಸೆಲ್ಸ್ ವಾಹನಗಳು ಕೂಡಾ ಸದ್ದು ಮಾಡುವ ನೀರಿಕ್ಷೆಯಿದ್ದು, ಹೊಸ ಮಾದರಿಯ ವಾಹನಗಳ ಸಂಶೋಧನೆ ಮತ್ತು ಅಭಿವೃದ್ದಿ ಮೇಲೆ ಹೆಚ್ಚಿನ ಗಮನಹರಿಸಿರುವ ಹ್ಯುಂಡೈ ಕೂಡಾ ಶೀಘ್ರದಲ್ಲೇ ಐಯಾನಿಕ್ 5 ಕಾರನ್ನು ವಿಶ್ವದ ಪ್ರಮುಖ ಮಾರುಕಟ್ಟೆಗೆ ಪರಿಚಯಿಸಲಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಶೀಘ್ರದಲ್ಲಿಯೇ ಅಮೆರಿಕ ಮತ್ತು ಯುರೋಪಿನ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸಲಿರುವ ಐಯಾನಿಕ್ 5 ಕಾರನ್ನು ಹ್ಯುಂಡೈ ಕಂಪನಿಯು ಭಾರತದಲ್ಲೂ ಸದ್ದು ಮಾಡುವ ನೀರಿಕ್ಷೆಗಳಿದ್ದು, ಹೊಸ ಕಾರುಗಳಲ್ಲಿ ಬಜೆಟ್ ಕಾರು ಮಾದರಿಗಳನ್ನು ಸಹ ಸೇರ್ಪಡೆಗೊಳಿಸಲಾಗಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಯೋಜನೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ಹ್ಯುಂಡೈ

ಹೊಸ ಯೋಜನೆಗಳಿಗಾಗಿ ಹ್ಯುಂಡೈ ಕಂಪನಿಯು ಭಾರತ ಒಂದರಲ್ಲೇ ಮುಂದಿನ ಐದು ವರ್ಷಗಳ ಅವಧಿಗೆ ಸುಮಾರು ರೂ.4 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಮುಂದಾಗಿದ್ದು, ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ತಂತ್ರಜ್ಞಾನವು ಹ್ಯುಂಡೈ ಇವಿ ಕಾರುಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲಿದೆ.

Most Read Articles

Kannada
English summary
Hyundai shuts down it s ice engine development centre details
Story first published: Monday, January 3, 2022, 9:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X