ಭಾರತದಲ್ಲಿ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಕಾರು ಅನಾವರಣ: ಬುಕ್ಕಿಂಗ್ ಪ್ರಾರಂಭ

ಜನಪ್ರಿಯ ಮತ್ತು ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಐಯಾನಿಕ್ 5 ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಹ್ಯುಂಡೈ ಕಂಪನಿಯು ಈ ಹೊಸ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ.

ಈ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಆನ್‌ಲೈನ್‌ನಲ್ಲಿ ಅಥವಾ ಆಯ್ದ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಬುಕ್ಕಿಂಗ್ ಟೋಕನ್ ಮೊತ್ತ ರೂ.1 ಲಕ್ಷವಾಗಿದೆ. ಈ ಹೊಸ ಹುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರು CKD ಮಾರ್ಗದ ಮೂಲಕ ಬರಲಿದೆ ಮತ್ತು ಭಾರತದಲ್ಲಿ ಜೋಡಣೆಗೊಳ್ಳಲಿದೆ. ಈ ಬಹುನಿರೀಕ್ಷಿತ ಹೊಸ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕ್ರಾಸ್ಒವರ್ ದಕ್ಷಿಣ ಕೊರಿಯಾದ ವಾಹನ ತಯಾರಕರ ಪ್ರಸಿದ್ಧ ಮತ್ತು ಸುಧಾರಿತ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಅನ್ನು ಬಳಸುತ್ತದೆ.

ಭಾರತದಲ್ಲಿ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಕಾರು ಅನಾವರಣ: ಬುಕ್ಕಿಂಗ್ ಪ್ರಾರಂಭ

ಇದರರ್ಥ ಈ ಹ್ಯುಂಡೈ ಎಲೆಕ್ಟ್ರಿಕ್ ಕ್ರಾಸ್ಒವರ್ ಇತ್ತೀಚೆಗೆ ಬಿಡುಗಡೆಯಾದ ಕಿಯಾ ಇವಿ6 ಎಲೆಕ್ಟ್ರಿಕ್ ಕ್ರಾಸ್ಒವರ್ ವಾಹನಕ್ಕೆ ಬಹುತೇಕ ಹೋಲುತ್ತದೆ. ಈ ಹೊಸ ಇವಿ6 ಅನ್ನು ಸಂಪೂರ್ಣವಾಗಿ ಬಿಲ್ಟ್-ಅಪ್ ಘಟಕವಾಗಿ ಬಿಡುಗಡೆ ಮಾಡಲಾಗಿದೆ. ಈ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಕಾರಿನ ಬೆಲೆಯು ಕಿಯಾ ಇವಿ6 ಗಿಂತ ಕಡಿಮೆ ಬೆಲೆಯಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಐಯಾನಿಕ್ 5 ಎಲೆಕ್ಟ್ರಿಕ್ ಕಾರು 5 4,635 ಎಂಎಂ ಉದ್ದ, 1,890 ಅಗಲ ಮತ್ತು 1,625 ಎತ್ತರ ಮತ್ತು 3,000 ಎಂಎಂ ವ್ಹೀಲ್‌ಬೇಸ್ ಹೊಂದಿದೆ.

ಈ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಮಾದರಿಯು ಆಗಿದ್ದು, ಹೊರಭಾಗದಲ್ಲಿ ಭವಿಷ್ಯದ ವಿನ್ಯಾಸವನ್ನು ಹೊಂದಿದೆ. ಇದು ಪಿಕ್ಸಲೇಟೆಡ್ LED ಟೈಲ್-ಲೈಟ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳೊಂದಿಗೆ ಡ್ಯುಯಲ್ LED ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಡ್ಯುಯಲ್ ಫ್ಲೋಟಿಂಗ್ ಸ್ಕ್ರೀನ್ ಮತ್ತು 2-ಸ್ಪೋಕ್ ಸ್ಟೀರಿಂಗ್ ವೀಲ್‌ನೊಂದಿಗೆ ಆಕರ್ಷಕ ಒಳಾಂಗಣದೊಂದಿಗೆ ಬರುತ್ತದೆ. ಈ ಕಾರಿನಲ್ಲಿ 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನೀಡಲಾಗಿದೆ,

ಇದರೊಂದಿಗೆ ಡ್ರೈವರ್ ಡಿಸ್‌ಪ್ಲೇಗಳು, 360 ಡಿಗ್ರಿ ಕ್ಯಾಮೆರಾ, ಪನೋರಮಿಕ್ ಸನ್‌ರೂಫ್, V2L (ವಾಹನ 2 ಲೋಡ್) ವೈಶಿಷ್ಟ್ಯಗಳು ಮತ್ತು ಇತರವುಗಳೊಂದಿಗೆ ಸುಸಜ್ಜಿತವಾಗಿರುತ್ತದೆ. ಈ ಹೊಸ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜನ್ಸಿ ಬ್ರೇಕಿಂಗ್, ಲೇನ್ ಕೀಪ್ ಮತ್ತು ಡಿಪಾರ್ಚರ್ ಏಡ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಮ್‌ನಂತಹ ವೈಶಿಷ್ಟ್ಯಗಳೊಂದಿಗೆ ADAS (ಅಡ್ವಾನ್ಸ್ಡ್ ಡ್ರೈವರ ಅಸಿಸ್ಟ್ ಸಿಸ್ಟಂ) ನೊಂದಿಗೆ ಬರುತ್ತದೆ.

ಈ ಹೊಸ ಎಲೆಕ್ಟ್ರಿಕ್ ಕಾರು ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ. ಇದು 72.6kWh ಮತ್ತು 58kWh ಆಗಿದೆ. ಇವುಗಳು ಕ್ರಮವಾಗಿ ಸುಮಾರು 384 ಕಿ.ಮೀ ಮತ್ತು 481 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಇನ್ನು ಇಂಡಿಯಾ-ಸ್ಪೆಕ್ ಮಾದರಿಯನ್ನು RWD ಮತ್ತು AWD ಡ್ರೈವ್‌ಟ್ರೇನ್ ಆಯ್ಕೆಗಳೊಂದಿಗೆ ನೀಡಲಾಗುವುದು. ಟಾಪ್-ಸ್ಪೆಕ್ ರೂಪಾಂತರವು ಡ್ಯುಯಲ್-ಮೋಟರ್, AWD ಸೆಟಪ್‌ನೊಂದಿಗೆ ಬರುತ್ತದೆ ಅದು 306 ಬಿಹೆಚ್‍ಪಿ ಪವರ್ ನಿಂದ 605 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಈ ಕಾರು ಸೆಕೆಂಡ್‌ಗಳಲ್ಲಿ 0 ರಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಎಲೆಕ್ಟ್ರಿಕ್ ಕಾರು 185 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. 58kWh ಬ್ಯಾಟರಿ ಪ್ಯಾಕ್‌ನೊಂದಿಗೆ ಹುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರು 169 ಬಿಹೆಚ್‌ಪಿ ಪವರ್ ಉತ್ಪಾದಿಸುವ ಮೋಟಾರ್‌ನೊಂದಿಗೆ ಬರುತ್ತದೆ. ಈ ರೂಪಾಂತರವನ್ನು RWD ಸಿಸ್ಟಂ ನೊಂದಿಗೆ ಮಾತ್ರ ನೀಡಲಾಗುತ್ತದೆ. ಎಲೆಕ್ಟ್ರಿಕ್ ಕ್ರಾಸ್ಒವರ್ 800V ಬ್ಯಾಟರಿ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ.

ಅದು ಅಲ್ಟ್ರಾ ಕ್ಷಿಪ್ರ ಚಾರ್ಜಿಂಗ್ ಅನ್ನು ನೀಡುತ್ತದೆ. ಬ್ಯಾಟರಿ ಪ್ಯಾಕ್ 220kW DC ಚಾರ್ಜಿಂಗ್‌ಗೆ ಹೊಂದಿಕೆಯಾಗುತ್ತದೆ ಅದು ಕೇವಲ 18 ನಿಮಿಷಗಳಲ್ಲಿ 10 ರಿಂದ 80 ಪ್ರತಿಶತದಷ್ಟು ಚಾರ್ಜ್ ಮಾಡುತ್ತದೆ. ಭಾರತದಲ್ಲ್ ಹ್ಯುಂಡೈ ಕಂಪನಿಯ ಕೊನಾ ಎಲೆಕ್ಟ್ರಿಕ್ ನಂತರ ಬ್ರ್ಯಾಂಡ್‌ನಿಂದ ಎರಡನೇ ಎಲೆಕ್ಟ್ರಿಕ್ ಕಾರ್ ಆಗಿದೆ, ಈ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರು ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿದೆ.

Most Read Articles

Kannada
English summary
Hyundai unveiled new ioniq 5 ev in india bookings details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X