ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ವೆನ್ಯೂ ಫೇಸ್‌ಲಿಫ್ಟ್ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯ ಆರಂಭಿಕವಾಗಿ ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.53 ಲಕ್ಷ ಬೆಲೆ ಹೊಂದಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಮುಂಚೂಣಿಯಲ್ಲಿರುವ ವೆನ್ಯೂ ಮಾದರಿಯನ್ನು ಹ್ಯುಂಡೈ ಕಂಪನಿಯು ಟಾಟಾ ನೆಕ್ಸಾನ್ ಮಾದರಿಗೆ ಪೈಪೋಟಿಯಾಗಿ ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ನವೀಕೃತ ವಿನ್ಯಾಸದೊಂದಿಗೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಹ್ಯುಂಡೈ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿನಂತೆ 1.2 ಲೀಟರ್ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಸಾಮಾನ್ಯ ಪೆಟ್ರೋಲ್ ಮಾದರಿಗೆ ಆರಂಭಿಕವಾಗಿ ರೂ. 7.53 ಲಕ್ಷ ಬೆಲೆ ಹೊಂದಿದ್ದರೆ ಟರ್ಬೊ ಪೆಟ್ರೋಲ್ ಮಾದರಿಗೆ ಆರಂಭಿಕವಾಗಿ ರೂ. 9.99 ಲಕ್ಷ ಮತ್ತು ಡೀಸೆಲ್ ಮಾದರಿಯು ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಹೊಂದಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಹೊಸ ವೆನ್ಯೂ ಮಾದರಿಯಲ್ಲಿ ವಿವಿಧ ಆವೃತ್ತಿಗಳ ಆರಂಭಿಕ ಮಾದರಿಗಳ ಬೆಲೆ ಮಾತ್ರ ಬಹಿರಂಗಪಡಿಸಿರುವ ಹ್ಯುಂಡೈ ಕಂಪನಿಯು ಶೀಘ್ರದಲ್ಲಿಯೇ ಮಧ್ಯಮ ಕ್ರಮಾಂಕದ ವೆರಿಯೆಂಟ್‌ಗಳು ಮತ್ತು ಟಾಪ್ ಎಂಡ್ ವೆರಿಯೆಂಟ್‌ಗಳ ಬೆಲೆ ಮಾಹಿತಿ ಬಹಿರಂಗಪಡಿಸಲಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

2022ರ ವೆನ್ಯೂ ಮಾದರಿಯು ಇ, ಎಸ್, ಎಸ್(ಒ), ಎಸ್ಎಕ್ಸ್ ಮತ್ತು ಎಸ್ಎಕ್ಸ್(ಒ) ವೆರಿಯೆಂಟ್‌ಗಳನ್ನು ಪಡೆದುಕೊಂಡಿದ್ದು, ಈ ಬಾರಿ ಹಲವಾರು ನವೀಕೃತ ವಿನ್ಯಾಸಗಳೊಂದಿಗೆ ಮುಂಭಾಗದ ವಿನ್ಯಾಸವು ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಟ್ಯೂಸಾನ್ ಮಾದರಿಯಿಂದ ಪ್ರೇರಣೆ ಹೊಂದಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಮುಂಭಾಗದ ಗ್ರಿಲ್ ಅನ್ನು ಡಾರ್ಕ್ ಕ್ರೋಮ್‌ಗಳೊಂದಿಗೆ ಅಭಿವೃದ್ದಿಪಡಿಸಲಾಗಿದ್ದು, ಮುಂಭಾಗದ ಬಂಪರ್ ಅನ್ನು ಕೂಡಾ ಸಾಕಷ್ಟು ಪರಿಷ್ಕರಣೆ ಮಾಡಲಾಗಿದೆ. ಹೊಸ ಬಂಪರ್ ಜೊತೆ ಈ ಬಾರಿ ದೊಡ್ಡದಾದ ಏರ್ ಡ್ಯಾಮ್ ನೀಡಲಾಗಿದ್ದು, ಇದರಲ್ಲಿ ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್ ಕೂಡಾ ಕಂಡುಬರುತ್ತದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಹಾಗೆಯೇ ಹೊಸ ಕಾರಿನ ಎರಡು ಬದಿಯಲ್ಲೂ ಹೊಸ ವಿನ್ಯಾಸದ 16 ಇಂಚಿನ ಡ್ಯುಯಲ್ ಟೋನ್ ಅಲಾಯ್ ವ್ಹೀಲ್‌ಗಳನ್ನು ನೀಡಲಾಗಿದ್ದು, ಎಲ್ಇಡಿ ಟೈಲ್‌ಲೈಲ್, ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್ ಜೊತೆಗೆ ಸ್ಕೂಪ್-ಔಟ್‌ನೊಂದಿಗೆ ನವೀಕೃತಗೊಂಡಿರುವ ಹಿಂಭಾಗದ ಬಂಪರ್ ಮತ್ತು ನಂಬರ್ ಪ್ಲೇಟ್ ವಿಭಾಗವನ್ನು ಕಪ್ಪು ಬಣ್ಣದ ಪ್ಲಾಸ್ಟಿಕ್‌ನೊಂದಿಗೆ ಜೋಡಿಸಲಾಗಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಹೊರಭಾಗದಲ್ಲಿನ ಬದಲಾವಣೆಯೆಂತೆ ಕಾರಿನ ಇಂಟಿರಿಯರ್ ಕೂಡಾ ಸಾಕಷ್ಟು ಬದಲಾವಣೆಗೊಂಡಿದ್ದು, ಹಲವಾರು ಸೂಕ್ಷ್ಮ ಬದಲಾವಣೆಗಳು ಕಾರಿನ ಪ್ರಯಾಣವನ್ನು ಮತ್ತಷ್ಟು ಆರಾಮಾದಾಯಕಗೊಳಿಸಲಿವೆ. ಮುಖ್ಯವಾಗಿ ಹೊಸ ಕಾರಿನ ಒಳಭಾಗದಲ್ಲಿ 4 ಹಂತದಲ್ಲಿ ಹೊಂದಾಣಿಕೆ ಮಾಡಹುದಾದ ಚಾಲಕನ ಆಸನ ಮತ್ತು ಹಿಂಬದಿಯ ಆಸನಗಳಿಗೆ ಎರಡು ಹಂತದ ರಿಕ್ಲೈನ್ ಆಯ್ಕೆ ನೀಡಲಾಗಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಇದರ ಜೊತೆಗೆ ಹೊಸ ಕಾರಿನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಗೆ ಬೆಂಬಲ ನೀಡುವ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಹೊಸ ಡಿಜಿಟಲ್ ಡ್ರೈವರ್‌ ಸೈಡ್ ಡಿಸ್ಪ್ಲೇ ನೀಡಲಾಗಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಹೊಸ ಇನ್ಫೋಟೈನ್‌ಮೆಂಟ್ ಸಿಸ್ಟಂ ಇದೀಗ ಗೂಗಲ್ ಅಸಿಸ್ಟ್ ಮತ್ತು ಅಮೆಜಾನ್ ಅಲೆಕ್ಸಾಗೆ ಬೆಂಬಲ ಹೊಂದಿದ್ದು, ವೆನ್ಯೂ ಹೊಸ ಕಾರು ಮಾದರಿಗಾಗಿ ಹ್ಯುಂಡೈ ಕಂಪನಿಯು ಬ್ಲೂಲಿಂಕ್ ಸಂಪರ್ಕಿತ ಕಾರ್ ಸೂಟ್ ಮೂಲಕ 60ಕ್ಕೂ ಹೆಚ್ಚು ಸಂಪರ್ಕಿತ ಕಾರ್ ವೈಶಿಷ್ಟ್ಯಗಳನ್ನು ನೀಡಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಕಂಪನಿಯು ಈ ಬಾರಿ ಹಲವಾರು ಫೀಚರ್ಸ್ ಜೋಡಣೆ ಮಾಡಿದ್ದು, ಹೈ ಎಂಡ್ ಮಾದರಿಗಳಲ್ಲಿ 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಹಿಲ್ ಅಸಿಸ್ಟ್ ಕಂಟ್ರೋಲ್ ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ(TPMS) ಸೇರಿದಂತೆ 30ಕ್ಕೂ ಹೆಚ್ಚು ಸುರಕ್ಷತಾ ಸೌಲಭ್ಯಗಳನ್ನು ನೀಡಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಹೈ ಎಂಡ್ ಮಾದರಿಗಳಲ್ಲಿ ಬೆಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ನೋಡಬಹುದಾಗಿದ್ದು, ಹೈ ಎಂಡ್ ಮಾದರಿಗಳಲ್ಲಿ ಡ್ರೈವರ್ ಸೈಡ್ ಡಿಜಿಟಲ್ ಡಿಸ್‌ಪ್ಲೇ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಏರ್ ಪ್ಯೂರಿಫೈಯರ್, ಕೂಲ್ಡ್ ಗ್ಲೋ ಬಾಕ್ಸ್, ಕ್ರೂಸ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಸನ್‌ರೂಫ್ ಸೌಲಭ್ಯಗಳಿರಲಿವೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್

2022ರ ವೆನ್ಯೂ ಮಾದರಿಯಲ್ಲಿ ಕಂಪನಿಯು ಈ ಹಿಂದಿನಂತೆಯೇ 1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಹೊಸ ಕಾರಿನಲ್ಲಿ ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್, 6-ಸ್ಪೀಡ್ ಮ್ಯಾನುವಲ್ ಮತ್ತು 6 -ಸ್ಪೀಡ್ ಐಎಂಟಿ ಗೇರ್‌ಬಾಕ್ಸ್ ಮತ್ತು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಮಾದರಿಗಳನ್ನು ಪರಿಚಯಿಸಲಾಗಿದೆ.

ವಿನೂತನ ವಿನ್ಯಾಸದೊಂದಿಗೆ ಹ್ಯುಂಡೈ ವೆನ್ಯೂ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ

1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 82 ಬಿಎಚ್‌ಪಿ, 114 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5 ಲೀಟರ್ ಡೀಸೆಲ್ ಮಾದರಿಯು 99 ಬಿಎಚ್‌ಪಿ, 240 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಟಾಪ್ ಎಂಡ್ ಮಾದರಿಯಾದ 1.0 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 118 ಬಿಎಚ್‌ಪಿ ಮತ್ತು 172 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಇಂಧನ ದಕ್ಷತೆ ಪಡೆದುಕೊಂಡಿದೆ.

Most Read Articles

Kannada
English summary
Hyundai venue facelift launched in india at rs 7 53 lakh details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X