ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಹ್ಯುಂಡೈ ಕಂಪನಿಯು ಕಳೆದ ವಾರವಷ್ಟೇ ದೇಶಿಯ ಮಾರುಕಟ್ಟೆ ತನ್ನ ಹೊಸ ವೆನ್ಯೂ ಮಾದರಿಯನ್ನು ಭಾರೀ ಬದಲಾವಣೆಯೊಂದಿಗೆ ಬಿಡುಗಡೆಗೊಳಿಸಿದ್ದು, ಕಂಪನಿಯು ಇದೀಗ ವೆನ್ಯೂ ಮಾದರಿಯ ಪರ್ಫಾಮೆನ್ಸ್ ಆವೃತ್ತಿಯಾದ ವೆನ್ಯೂ ಎನ್-ಲೈನ್ ಬಿಡುಗಡೆಗೆ ಸಿದ್ದವಾಗುತ್ತಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಭಾರತದಲ್ಲಿ ಹ್ಯುಂಡೈ ಕಂಪನಿಯು ಕಳೆದ ವರ್ಷದ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಎನ್-ಲೈನ್ ಪರಿಚಯಿಸಿರುವ ಕಂಪನಿಯು ಈ ವರ್ಷಾಂತ್ಯಕ್ಕೆ ಮತ್ತೆರಡು ಕಾರು ಮಾದರಿಗಳಲ್ಲಿ ಹೊಸ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಎನ್-ಲೈನ್ ಆವೃತ್ತಿಗಳು ಹ್ಯುಂಡೈ ಪ್ರಮುಖ ಕಾರುಗಳಲ್ಲಿ ಪರ್ಫಾಮೆನ್ಸ್ ಆವೃತ್ತಿಯಾಗಿದ್ದು, ಇವು ಸ್ಟ್ಯಾಂಡರ್ಡ್ ಮಾದರಿಗಳಿಂತಲೂ ತುಸು ಹೆಚ್ಚುವರಿ ಎಂಜಿನ್ ಪರ್ಫಾಮೆನ್ಸ್ ಜೊತೆಗೆ ಕೆಲವು ತಾಂತ್ರಿಕ ಸೌಲಭ್ಯಗಳೊಂದಿಗೆ ಸ್ಪೋರ್ಟಿ ಮಾದರಿಯಾಗಿ ಗುರುತಿಸಿಕೊಳ್ಳುತ್ತದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಐ20 ಮಾದರಿಯಲ್ಲಿ ಮೊದಲ ಬಾರಿಗೆ ಎನ್‌-ಲೈನ್ ಪರಿಚಯಿಸಿದ್ದ ಹ್ಯುಂಡೈ ಕಂಪನಿಯು ಇದೀಗ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿಯಲ್ಲೂ ಹೊಸ ಮಾದರಿಯನ್ನು ಪರಿಚಯಿಸಲು ಮುಂದಾಗಿದ್ದು, ಹೊಸ ಆವೃತ್ತಿಯು ಮುಂಬರುವ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ವೆನ್ಯೂ ಎನ್-ಲೈನ್ ಮಾದರಿಯು ಐ20 ಎನ್-ಲೈನ್ ಮಾದರಿಯೆಂತೆ ಎನ್6 ಮತ್ತು ಎನ್8 ಎನ್ನುವ ಎರಡು ವೆರಿಯೆಂಟ್ ಹೊಂದಬಹುದಾಗಿದ್ದು, ಈ ಎರಡೂ ರೂಪಾಂತರಗಳಲ್ಲೂ ಕಂಪನಿಯ ಹೈ ಎಂಡ್ ಮಾದರಿಯಲ್ಲಿರುವ 1.0-ಲೀಟರ್ ಮೂರು-ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ ಜೋಡಿಸಬಹುದಾಗಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಹೊಸ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿರುವ ವೆನ್ಯೂ ಎನ್-ಲೈನ್ ಕಾರು ಮಾದರಿಯು ಸೆಮಿ ಆಟೋಮ್ಯಾಟಿಕ್ ಮಾದರಿಯಾದ ಐಎಂಟಿ ಗೇರ್‌ಬಾಕ್ಸ್ ಇಲ್ಲವೆ 7 ಸ್ಪೀಡ್ ಡಿಸಿಟಿ ಸ್ವಯಂಚಾಲಿತ ಗೇರ್‌ಬಾಕ್ಸ್ ನೀಡಲಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಇದಲ್ಲದೆ ಹೊಸ ಕಾರಿನಲ್ಲಿ ಹ್ಯುಂಡೈ ಕಂಪನಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಸೇರಿಸಲಿದ್ದು, ಮುಂಭಾಗದ ಫೆಂಡರ್‌ಗಳಲ್ಲಿ ಎನ್-ಲೈನ್ ಬ್ಯಾಡ್ಜಿಂಗ್, ಹೊಸ ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳು ಮತ್ತು ಅವುಗಳ ಕೆಳಭಾಗದಲ್ಲಿ ಕೆಂಪು ಆಕ್ಸೆಂಟ್, ಛಾವಣಿಯ ಹಳಿಗಳ ಮೇಲೆ ರೆಡ್ ಇನ್ಸರ್ಟ್, ಹೊಸದಾದ ಮಿಶ್ರಲೋಹದ ಚಕ್ರಗಳನ್ನು ನೀಡಲಾಗುತ್ತದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಹಾಗೆಯೇ ಹೊಸ ಕಾರಿನಲ್ಲಿ ಡ್ಯುಯಲ್-ಟಿಪ್ ಎಕ್ಸಾಸ್ಟ್ ಪೈಪ್ ಅನ್ನು ಬಳಸಲಾಗಿದ್ದು, ಎನ್-ಲೈನ್ ಮಾದರಿಗೆ ಕೆಲವು ವಿನ್ಯಾಸ ಬದಲಾವಣೆಗಳನ್ನು ಮಾಡಲಾಗಿದೆ. 'ಪ್ಯಾರಾಮೆಟ್ರಿಕ್' ಗ್ರಿಲ್ ವಿನ್ಯಾಸದೊಂದಿಗೆ ಹೊಸ ಮುಂಭಾಗದ ಶೈಲಿಯು ಹೊಸ ಕಾರಿಗೆ ಮತ್ತಷ್ಟು ಮೆರಗು ನೀಡಲಿದ್ದು, ಸ್ಪೋರ್ಟಿ ವಿನ್ಯಾದಸದ ಪರಿಷ್ಕೃತ ಹೆಡ್‌ಲೈಟ್ಸ್ ಮತ್ತು ಸ್ಲೀಕರ್ ಟೈಲ್-ಲೈಟ್‌ಗಳನ್ನು ವೆನ್ಯೂ ಎನ್-ಲೈನ್‌ನಲ್ಲಿ ಕಾಣಬಹುದು.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಹ್ಯುಂಡೈ ಕಂಪನಿಯು ವೆನ್ಯೂ ಮಾದರಿಯನ್ನು ವಿವಿಧ ವೆರಿಯೆಂಟ್‌ಗಳಲ್ಲಿ ಆಕರ್ಷಕ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದು, ಹೊಸ ಮಾದರಿಯು ಸದ್ಯ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.53 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.57 ಲಕ್ಷ ಬೆಲೆ ಹೊಂದಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ವೆನ್ಯೂ ಎನ್-ಲೈನ್ ಮಾದರಿಯು ಸ್ಟ್ಯಾಂಡರ್ಡ್ ವೆನ್ಯೂ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದ್ದು, ಹ್ಯುಂಡೈ ಕಂಪನಿಯು ಸ್ಟ್ಯಾಂಡರ್ಸ್ ವೆನ್ಯೂ ಮಾದರಿಯನ್ನು ಈ ಹಿಂದಿನಂತೆ 1.2 ಲೀಟರ್ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಆದರೆ ವೆನ್ಯೂ ಎನ್-ಲೈನ್ ಮಾದರಿಯು ಪರ್ಫಾಮೆನ್ಸ್ ಮಾದರಿಯಾಗಿರುವುದರಿಂದ ಕಂಪನಿಯು ಕೇವಲ 1.-0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಹೊಸ ಮಾದರಿಯು ಸ್ಟ್ಯಾಂಡರ್ಡ್ ಮಾದರಿಯ ಹೈ ಎಂಡ್ ಆವೃತ್ತಿಗಿಂತ ರೂ. 70 ಸಾವಿರದಿಂದ ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಹೊಂದಿರಲಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಇನ್ನು ವೆನ್ಯೂ 2022ರ ಮಾದರಿಯು ಈ ಬಾರಿ ಹಲವಾರು ನವೀಕೃತ ವಿನ್ಯಾಸಗಳೊಂದಿಗೆ ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಟ್ಯೂಸಾನ್ ಮಾದರಿಯಿಂದಲೂ ಪ್ರೇರಣೆ ಹೊಂದಿದ್ದು, 16 ಇಂಚಿನ ಡ್ಯುಯಲ್ ಟೋನ್ ಅಲಾಯ್ ವ್ಹೀಲ್‌, ಎಲ್ಇಡಿ ಟೈಲ್‌ಲೈಲ್, ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್ ಜೊತೆಗೆ ಸ್ಕೂಪ್-ಔಟ್‌ನೊಂದಿಗೆ ನವೀಕೃತಗೊಂಡಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಹೊಸ ಕಾರಿನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಗೆ ಬೆಂಬಲ ನೀಡುವ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಹೊಸ ಡಿಜಿಟಲ್ ಡ್ರೈವರ್‌ ಸೈಡ್ ಡಿಸ್ಪ್ಲೇ ನೀಡಲಾಗಿದ್ದು, ಬ್ಲೂಲಿಂಕ್ ಸಂಪರ್ಕಿತ ಕಾರ್ ಸೂಟ್ ಮೂಲಕ 60ಕ್ಕೂ ಹೆಚ್ಚು ಸಂಪರ್ಕಿತ ಕಾರ್ ವೈಶಿಷ್ಟ್ಯಗಳನ್ನು ನೀಡಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಕಂಪನಿಯು ಈ ಬಾರಿ ಹಲವಾರು ಫೀಚರ್ಸ್ ಜೋಡಣೆ ಮಾಡಿದ್ದು, ಹೈ ಎಂಡ್ ಮಾದರಿಗಳಲ್ಲಿ 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಹಿಲ್ ಅಸಿಸ್ಟ್ ಕಂಟ್ರೋಲ್ ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ(TPMS) ಸೇರಿದಂತೆ 30ಕ್ಕೂ ಹೆಚ್ಚು ಸುರಕ್ಷತಾ ಸೌಲಭ್ಯಗಳನ್ನು ನೀಡಿದೆ.

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್

ಹೈ ಎಂಡ್ ಮಾದರಿಗಳಲ್ಲಿ ಬೆಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ನೋಡಬಹುದಾಗಿದ್ದು, ಹೈ ಎಂಡ್ ಮಾದರಿಗಳಲ್ಲಿ ಡ್ರೈವರ್ ಸೈಡ್ ಡಿಜಿಟಲ್ ಡಿಸ್‌ಪ್ಲೇ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಏರ್ ಪ್ಯೂರಿಫೈಯರ್, ಕೂಲ್ಡ್ ಗ್ಲೋ ಬಾಕ್ಸ್, ಕ್ರೂಸ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಸನ್‌ರೂಫ್ ಸೌಲಭ್ಯಗಳಿರಲಿವೆ.

Most Read Articles

Kannada
English summary
Hyundai venue to get n line variants details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X