ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಇವಿ ವಾಹನ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಇತ್ತೀಚೆಗೆ ಗುರುಗ್ರಾಮ್ ಮೂಲದ ಅಲೆಕ್ಟ್ರಿಫೈ ಪ್ರೈವೇಟ್ ಲಿಮಿಟೆಡ್ ಕಂಪನಿಯು ಇವಿ ವಾಹನಗಳಿಗೆ ಪೂರಕವಾಗಿ ಒಂದೇ ಸ್ಥಳದಲ್ಲಿ ಸುಮಾರು ನೂರು ಇವಿ ವಾಹನಗಳನ್ನು ಏಕಕಾಲಕ್ಕೆ ಚಾರ್ಜಿಂಗ್ ಮಾಡಬಹುದಾದ ಬೃಹತ್ ಚಾರ್ಜಿಂಗ್ ನಿಲ್ದಾಣವನ್ನು ತೆರೆದಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಗುರುಗ್ರಾಮ್‌ ಮೂಲಕ ಸಂಪರ್ಕ ಹೊಂದಿರುವ ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ದೇಶದ ಅತಿದೊಡ್ಡ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಕೇಂದ್ರವನ್ನು ಹೊಸದಾಗಿ ಆರಂಭಿಸಲಾಗಿದ್ದು, ಹೊಸ ಚಾರ್ಜಿಂಗ್ ನಿಲ್ದಾಣದಲ್ಲಿ ನಾಲ್ಕು ಚಕ್ರದ ಸುಮಾರು 100 ಇವಿ ವಾಹನಗಳನ್ನು ಏಕಕಾಲಕ್ಕೆ ಚಾರ್ಜ್ ಮಾಡಬಹುದು.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

16 AC ಮತ್ತು 4 DC ಚಾರ್ಜಿಂಗ್ ಪೋರ್ಟ್‌ಗಳನ್ನು ಹೊಂದಿರುವ ನವಿ ಮುಂಬೈನಲ್ಲಿರುವ ಇವಿ ಚಾರ್ಜಿಂಗ್ ಸ್ಟೇಷನ್‌ಗಿಂತಲೂ ಈ ನಿಲ್ದಾಣವು ದೊಡ್ಡದಾಗಿದ್ದು, ಈ ಚಾರ್ಜಿಂಗ್ ಸ್ಟೇಷನ್‌ನಲ್ಲಿ 96 ಚಾರ್ಜಿಂಗ್ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಅಲೆಕ್ಟ್ರಿಫೈ ಪ್ರೈವೇಟ್ ಲಿಮಿಟೆಡ್ ನಿರ್ಮಾಣದ ಹೊಸ ಚಾರ್ಜಿಂಗ್ ನಿಲ್ದಾಣವು ಭಾರತ ಸರ್ಕಾರದ ವಿದ್ಯುತ್ ಸಚಿವಾಲಯದಿಂದ ಪ್ರಮಾಣೀಕರಿಸಲ್ಪಟ್ಟಿದೆ ಮತ್ತು ಸರ್ಕಾರವು ನಿಗದಿಪಡಿಸಿದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಅನುಸರಿಸುತ್ತಿದ್ದು, ಇದು ಕೇಂದ್ರ ಸರ್ಕಾರದ ಫೇಮ್ 2 ಇವಿ ಯೋಜನ ಅಡಿಯಲ್ಲಿ ಸಬ್ಸಡಿಯೊಂದಿಗೆ ನಿರ್ಮಾಣಗೊಂಡಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ರಾಷ್ಟ್ರ ರಾಜಧಾನಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೆಹಲಿ ಸರ್ಕಾರವು ಕಳೆದ ವರ್ಷ ಚಾರ್ಜಿಂಗ್ ನಿಲ್ದಾಣಗಳಿಗೆ ಸಬ್ಸಿಡಿ ಯೋಜನೆಯನ್ನು ಪ್ರಾರಂಭಿಸಿತ್ತು. ಇದರ ಅಡಿಯಲ್ಲಿ ದೆಹಲಿ ಸರ್ಕಾರವು ಯಾವುದೇ ಖಾಸಗಿ ಆಸ್ತಿ, ಮಾಲ್, ಆಸ್ಪತ್ರೆ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಸಹಾಯಧನವನ್ನು ನೀಡುತ್ತಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಈ ಮೂಲಕ ಎಲೆಕ್ಟ್ರಿಕ್ ವಾಹನಗಳಿಗೆ ಕೊನೆಯ ಮೈಲಿ ತನಕವೂ ಚಾರ್ಜಿಂಗ್ ಸೌಲಭ್ಯ ದೊರೆಯುವಂತೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರಮುಖ ಪೆಟ್ರೋಲಿಯಂ ಕಂಪನಿಗಳು ಕೂಡಾ ಇವಿ ನಿಲ್ದಾಣಗಳನ್ನು ಹೆಚ್ಚಿಸಲು ಪೆಟ್ರೋಲ್ ಬಂಕ್‌ಗಳಲ್ಲಿಯೇ ಚಾರ್ಜಿಂಗ್ ಪಾಯಿಂಟ್‌ಗಳನ್ನು ನಿರ್ಮಾಣಕ್ಕೆ ಚಾಲನೆ ನೀಡಿವೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಸಂಸ್ಥೆಯು ದೇಶಾದ್ಯಂತ ಸಾವಿರಾರು ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಹೊಸ ಯೋಜನೆಯಡಿ ಭಾರತ್ ಪೆಟ್ರೋಲಿಯಂ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹಂತ-ಹಂತವಾಗಿ 7 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಯೋಜನೆ ಸಿದ್ದಪಡಿಸಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಭಾರತ್ ಪೆಟ್ರೋಲಿಯಂ ಕಂಪನಿಯ ಹೊಸ ಪ್ರಕಟನೆಯಲ್ಲಿ ಮುಂದಿನ ಅಕ್ಟೋಬರ್ ವೇಳೆಗೆ ದೇಶದ ಪ್ರಮುಖ ಕಡೆಗಳಲ್ಲಿ ಒಂದು ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದಿರುವುದಾಗಿ ಭರವಸೆ ನೀಡಿದ್ದು, ಇಂಧನ ಚಾಲಿತ ಬದಲಾಗಿ ಪರಿಸರ ಸ್ನೇಹಿ ವಾಹನಗಳನ್ನು ಉತ್ತೇಜಿಸಲು ಎಲ್ಲಾ ಮೂಲಭೂತ ಸೌಕರ್ಯ ಒದಗಿಸುವುವಲ್ಲಿ ಕಂಪನಿಯು ಬದ್ದವಾಗಿದೆ ಎಂದಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಅತಿ ಕಡಿಮೆ ಅವಧಿಯ ಹೆಚ್ಚಿನ ಪ್ರಮಾಣದ ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ಪರಿಚಯಿಸಲಾಗುತ್ತಿದ್ದು, ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಸಹಕಾರಿಯಾಗುವಂತೆ ಹೊಸ ಯೋಜನೆ ರೂಪಿಸಲಾಗಿದೆ.

ಏಕಕಾಲಕ್ಕೆ 100 ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದಾದ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ

ಇದರಿಂದ ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಮೂಲಕ ದೂರದ ಪ್ರಯಾಣಕ್ಕೂ ಅನುಕೂಲಕರವಾಗಲಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.

Most Read Articles

Kannada
English summary
India s largest ev charging station opens in gurugram details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X