ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಬ್ರಿಟಿಷ್ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಜಾಗ್ವಾರ್ ತನ್ನ ಮೊದಲ ಆಲ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾದ ಐ-ಪೇಸ್ ಇವಿ ಮಾದರಿಯೊಂದಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಜಾಗ್ವಾರ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾದ ಐ-ಪೇಸ್ ಆವೃತ್ತಿಯನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಮಾಡುತ್ತಿದ್ದು, 2018ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಐ-ಪೇಸ್ ಕಾರು ಇದುವರೆಗೆ 50 ಸಾವಿರ ಯುನಿಟ್ ಮಾರಾಟ ಮೈಲಿಗಲ್ಲು ಸಾಧಿಸಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಭಾರತದಲ್ಲಿ ಕಳೆದ ವರ್ಷವಷ್ಟೇ ಬಿಡುಗಡೆಯಾಗಿರುವ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು ಮಾದರಿಯು ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ದಾಖಲೆಯನ್ನು ಕಾಣುತ್ತಿದ್ದು, ದುಬಾರಿ ಬೆಲೆ ನಡುವೆಯೂ ಐ-ಪೇಸ್ ಮಾದರಿಗೆ ಹೆಚ್ಚಿನ ಬೇಡಿಕೆ ಹರಿದುಬಂದಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ಹೊಸ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಪ್ರಸಕ್ತ ವರ್ಷದಲ್ಲಿ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 8 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, 2022ರ ಅವಧಿಗೆ ಇದು ಇನ್ನಷ್ಟು ಹೆಚ್ಚಳವಾಗಿರಲಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಇದರಿಂದ ಅತ್ಯುತ್ತಮ ವಿನ್ಯಾಸ, ಸುಧಾರಿತ ತಂತ್ರಜ್ಞಾನಗೊಂದಿಗೆ ಐಷಾರಾಮಿ ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ತನ್ನದೇ ಬೇಡಿಕೆ ಹೊಂದಿರುವ ಐ-ಪೇಸ್ ಕಾರು ಪ್ರಮುಖ ಇವಿ ಕಾರುಗಳನ್ನು ಹಿಂದಿಕ್ಕಿ 2019ರ ವರ್ಲ್ಡ್ ಕಾರ್ ಆಫ್ ದಿ ಇಯರ್, ವರ್ಲ್ಡ್ ಕಾರ್ ಡಿಸೈನ್ ಆಫ್ ದಿ ಇಯರ್ ಮತ್ತು ವರ್ಲ್ಡ್ ಗ್ರೀನ್ ಕಾರ್ ಸೇರಿದಂತೆ 80ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಈ ಮೂಲಕ ಜಾಗತಿಕ ಮಾರುಕಟ್ಟೆಯಲ್ಲಿ ತನ್ನದೆ ಆದ ಬೇಡಿಕೆ ಹೊಂದಿರುವ ಐ-ಪೇಸ್‌ ಮಾದರಿಯು ಕಳೆದ ವರ್ಷದಿಂದ ಭಾರತದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಸದ್ಯ ಭಾರತದಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1.08 ಕೋಟಿಯಿಂದ ಟಾಪ್ ಎಂಡ್ ಮಾದರಿಯು ರೂ. 1.12 ಕೋಟಿ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಐಷಾರಾಮಿ ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಐ-ಪೇಸ್ ವಿಭಿನ್ನವಾದ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಗರಿಷ್ಠ 400-ಬಿಎಚ್‌ಪಿ ಮತ್ತು 696-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ 90kWh ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್‌ಗೆ 470 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

2.2 ಟನ್ ತೂಕ ಹೊಂದಿರುವ ಐ-ಪೇಸ್ ಕಾರಿಗೆ ಬಲಿಷ್ಠ ಮೋಟಾರ್ ಒದಗಿಸಿರುವ ಜಾಗ್ವಾರ್ ಕಂಪನಿಯು ಪರ್ಫಾಮೆನ್ಸ್ ಜೊತೆಗೆ ಉತ್ತಮ ಮೈಲೇಜ್ ರೇಂಜ್ ಖಾತ್ರಿಪಡಿಸಿದ್ದು, ಕೇವಲ 4.8 ಸೇಕೆಂಡುಗಳಲ್ಲಿ ಸೊನ್ನೆಯಿಂದ ನೂರು ಕಿ.ಮೀ ಸಾಗುವ ಹೊಸ ಕಾರು ಪ್ರತಿ ಗಂಟೆಗೆ 200ಕಿ.ಮೀ ಟಾಪ್ ಸ್ಪೀಡ್ ತಲುಪಬಲ್ಲದು.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಹೊಸ ಕಾರಿಗಾಗಿ 7.4kW ವಾಲ್ ಮೌಂಟ್ ಎಸಿ ಚಾರ್ಜರ್ ನೀಡಲಿರುವ ಕಂಪನಿಯು ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಟಾಟಾ ಪವರ್ ಜೊತೆಗೂಡಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 45 ನಿಮಿಷದಲ್ಲಿ ಶೇ.80 ಚಾರ್ಜಿಂಗ್ ಮಾಡಬಹುದಾಗಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಇನ್ನು ಹೊಸ ಕಾರಿನಲ್ಲಿ ಹೊರ ಮತ್ತು ಒಳಭಾಗದ ಫೀಚರ್ಸ್‌ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದ್ದು, ಎಲ್ಇಡಿ ಹೆಡ್‌ಲ್ಯಾಂಪ್ಸ್, ಟೈಲ್ ಲೈಟ್ಸ್, ಫುಲ್ ಸೈಜ್ ಫಿಕ್ಸ್ಡ್ ಗ್ಲಾಸ್ ರೂಫ್, ಡ್ಯುಯಲ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಇನ್ ಕಂಟ್ರೊಲ್ ಕನೆಕ್ಟೆಡ್ ಟೆಕ್ನಾಲಜಿ ನೀಡಲಾಗಿದೆ.

ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಜಾಗ್ವಾರ್ ಹೊಸ ಮೈಲಿಗಲ್ಲು

ಹಾಗೆಯೇ ಹೊಸ ಕಾರಿನ ಹೈ ಎಂಡ್ ಮಾದರಿಯಲ್ಲಿ ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್‌ಲ್ಯಾಂಪ್, ಹ್ಯಾಂಡ್ ಫ್ರೀ ಬೂಟ್ ಓಪನ್, ಅಡಾಪ್ಟಿವ್ ಕ್ರೂಸ್ ಕಂಟ್ರೊಲ್, ಹೆಡ್‌ಅಪ್ ಡಿಸ್‌ಪ್ಲೇ, ವಿಂಡ್‌ಸಾರ್ ಲೆದರ್ ಸ್ಪೋಟ್ ಸೀಟ್, ಫೋರ್ ಜೋನ್ ಕ್ಲೈಮೆಟ್ ಕಂಟ್ರೊಲ್ ಸೇರಿದಂತೆ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

Most Read Articles

Kannada
English summary
Jaguar i pace electric suv sales cross 50 000 units
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X