ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಅಮೆರಿಕ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ತನ್ನ ಕಂಪಾಸ್ ಮತ್ತು ಜೀಪ್ ಕಂಪಾಸ್ ಟ್ರೈಲ್ಹಾಕ್ ಬೆಲೆಗಳನ್ನು ಹೆಚ್ಚಿಸಿದೆ. ಇದರಿಂದ ಇದೀಗ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ದುಬಾರಿಯಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಜೀಪ್ ಕಂಪಾಸ್ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳ ಬೆಲೆಯನ್ನು ರೂ,25,000 ಗಳಷ್ಟು ಹೆಚ್ಚಿಸಲಾಗಿದೆ. ಜೀಪ್ ಪ್ರೀಮಿಯಂ ಕಾಂಪ್ಯಾಕ್ಟ್ ಎಸ್‍ಯುವಿಯ 80ನೇ ಆನುವರ್ಸರಿ ಎಡಿಷನ್ ಅನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಈ ಜೀಪ್ ಕಂಪಾಸ್ ಎಸ್‍ಯುವಿಯು ಬಗ್ಗೆ ಹೇಳುವುದಾದರೆ, ಆಂತರಿಕ ಮತ್ತು ಬಾಹ್ಯ ನವೀಕರಣಗಳೊಂದಿಗೆ ಪರಿಚಯಿಸಿದ್ದರು. ಈ ಜೀಪ್ ಕಂಪಾಸ್ ಎಸ್‍ಯುವಿಯು ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ),ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಮಾಡೆಲ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಕೂಡ ಲಭ್ಯವಿದೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ವರ್ಷಗಳ ಬಳಿಕ ಜೀಪ್ ಕಂಪಾಸ್ ಮಿಡ್-ಲೈಫ್ ನವೀಕರಣವನ್ನು ಪಡೆದುಕೊಂಡಿತ್ತು, ಕಳೆದ ವರ್ಷದ ಆರಂಭದಲ್ಲಿ ಬಿಡುಗಡೆಗೊಂಡ 2021ರ ಜೀಪ್ ಕಂಪಾಸ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಹೊರಗಿನ ನವೀಕರಣಗಳನ್ನು ಹತ್ತಿರದಿಂದ ಗಮನಿಸಿದರೆ ಮಾತ್ರ ತಿಳಿಯುತ್ತದೆ. ಇನ್ನು ಈ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಪಡೆದುಕೊಂಡಿತ್ತು. ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂನಿಂದ ಕೂಡಿದೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಜೀಪ್ ಕಂಪಾಸ್ ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಒಳಗೊಂಡಿವೆ.ಈ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಕಂಪಾಸ್ ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಒಳಗೊಂಡಿದೆ.ಇದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್‌ ಫೀಚರ್ ಗಳನ್ನು ಒಳಗೊಂಡಿವೆ. ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ಈ ಕಂಪಾಸ್ ಎಸ್‍ಯುವಿಯನ್ನು ಕೂಡ ಒಳಗೊಂಡಿದೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಜೀಪ್ ಕಂಪಾಸ್ ಎಸ್‍ಯುವಿಯಲ್ಲಿ ಹೊಸ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಈ ಎರಡು ಎಂಜಿನ್‌ಗಳು ಸ್ಟ್ಯಾಂಡರ್ಡ್‌ ಆಗಿ ಆರು-ಸ್ಪೀಡ್ ಮ್ಯಾನ್ಯುವಲ್‌ ಗೇರ್ ಬಾಕ್ಸ್ ನೊಂದಿಗೆ ಬರುತ್ತವೆ. ಕಂಪಾಸ್ ಪೆಟ್ರೋಲ್ ಏಳು-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆಯುತ್ತದೆ ಮತ್ತು ಡೀಸೆಲ್ ಒಂಬತ್ತು-ಸ್ಪೀಡ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ನೀಡಲಾಗಿದೆ.

Compass Petrol
Variant Old Price New Price Difference
Sport MT ₹17.79 Lakh ₹18.04 Lakh ₹+25,000
Sport DCT ₹20.37 Lakh ₹20.62 Lakh ₹+25,000
Longitude (O) DCT ₹22.09 Lakh ₹22.34 Lakh ₹+25,000
Limited (O) DCT ₹24.19 Lakh ₹24.44 Lakh ₹+25,000
Limited 80th Anniversary DCT ₹24.66 Lakh Discontinued -
Model S DCT ₹26.34 Lakh ₹26.59 Lakh ₹+25,000
Compass Diesel
Variant Old Price New Price Difference
Sport MT ₹19.49 Lakh ₹19.74 Lakh ₹+25,000
Longitude (O) MT ₹21.29 Lakh ₹21.54 Lakh ₹+25,000
Limited (O) 4x2 MT ₹23.39 Lakh ₹23.64 Lakh ₹+25,000
Limited 4x2 80th Anniversary MT ₹23.86 Lakh Discontinued -
Model S 4x2 MT ₹25.54 Lakh ₹25.79 Lakh ₹+25,000
Limited (O) 4x4 MT ₹27.19 Lakh ₹27.44 Lakh ₹+25,000
Limited 4x4 80th Anniversary AT ₹27.66 Lakh Discontinued -
Model S 4x4 AT ₹29.34 Lakh ₹29.59 Lakh ₹+25,000
Compass Trailhawk
Variant Old Price New Price Difference
4x4 AT ₹30.72 Lakh ₹30.97 Lakh ₹+25,000
ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಇನ್ನು 2022ರ ಜೀಪ್ ಕಂಪಾಸ್ ಟ್ರೈಲ್‌ಹಾಕ್ ಫೇಸ್‌ಲಿಫ್ಟ್ ಎಸ್‍ಯುವಿಯ ಬೆಲೆಯನ್ನು ರೂ.25,000 ಗಳಷ್ಟು ಹೆಚ್ಚಿಸಿದೆ. ನವೀಕರಿಸಿದ ಮಾದರಿಯು ಕಾಸ್ಮೆಟಿಕ್ ವಿನ್ಯಾಸ ಬದಲಾವಣೆಗಳೊಂದಿಗೆ ಮತ್ತು ಆಫ್-ರೋಡ್ ಕೇಂದ್ರೀಕೃತ ವೈಶಿಷ್ಟ್ಯಗಳೊಂದಿಗೆ ವೈಶಿಷ್ಟ್ಯದ ನವೀಕರಣಗಳೊಂದಿಗೆ ಬಂದಿದೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

2022ರ ಜೀಪ್ ಕಂಪಾಸ್ ಟ್ರೈಲ್‌ಹಾಕ್ ಫೇಸ್‌ಲಿಫ್ಟ್ ಎಸ್‍ಯುವಿಯ ಸ್ಟೈಲಿಂಗ್ ಬದಲಾವಣೆಗಳಿಗೆ ಸಂಬಂಧಿಸಿದಂತೆ, ಈ ಜೀಪ್ ಕಂಪಾಸ್ ಟ್ರೈಲ್‌ಹಾಕ್ ಮಾದರಿಯು ಹೊಸ ಹೆಡ್‌ಲ್ಯಾಂಪ್‌ಗಳು ಮತ್ತು ಗ್ರಿಲ್ ಜೊತೆಗೆ ಹೊಸ ಬಂಪರ್‌ಗಳೊಂದಿಗೆ ಬರುತ್ತದೆ. ಈ ಹೊಸ ಎಸ್‍ಯುವಿಯಲ್ಲಿ ಬಾನೆಟ್ ಡೆಕಾಲ್, 225/65 R17 ವಿಭಾಗದ ಟೈರ್‌ಗಳೊಂದಿಗೆ ಸಣ್ಣ 17-ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ. ಹಿಂಭಾಗದಲ್ಲಿ ಕೆಂಪು ಹುಕ್, ಸ್ಕಫ್ ಪ್ಲೇಟ್‌ಗಳು ಮತ್ತು ಫೆಂಡರ್‌ಗಳಲ್ಲಿ ಹೊಸ 'ಟ್ರಯಲ್ ರೇಟ್' ಬ್ಯಾಡ್ಜ್‌ನೊಂದಿಗೆ ಬರುತ್ತದೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಜೀಪ್ ಕಂಪಾಸ್ ಟ್ರೈಲ್‌ಹಾಕ್ ಎಸ್‍ಯುವಿಯಲ್ಲಿ 2.0-ಲೀಟರ್ 4-ಸಿಲಿಂಡರ್ ಟರ್ಬೊ-ಡೀಸೆಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 170 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 9-ಸ್ಪೀಡ್ ಟಾರ್ಕ್ ಕರ್ನ್ವಾಟರ್ ಗೇರ್‌ಬಾಕ್ಸ್ ಅನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಫೋರ್ ವ್ಹೀಲ್ ಡ್ರೈವ್ ಸಿಸ್ಟಂ ಮೂಲಕ ಎಲ್ಲಾ-4 ಚಕ್ರಗಳಿಗೆ ಪವರ್ ಅನ್ನು ಕಳುಹಿಸುತ್ತದೆ. 2022ರ ಜೀಪ್ ಕಂಪಾಸ್ ಟ್ರೈಲ್‌ಹಾಕ್ ಎಸ್‍ಯುವಿಯಲ್ಲಿ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿವೆ.

ಬೆಲೆ ಏರಿಕೆ ಪಡೆದುಕೊಂಡ ಜೀಪ್ ಕಂಪಾಸ್ ಮತ್ತು ಕಂಪಾಸ್ ಟ್ರೈಲ್‌ಹಾಕ್

ಇನ್ನು ಜೀಪ್ ಕಂಪನಿಯು ಈ ವರ್ಷ ಭಾರತದ ಮಾರುಕಟ್ಟೆಗೆ ಮೆರಿಡಿಯನ್‌ ಮಾದರಿಯನ್ನು ಬಿಡುಗಡೆಗೊಳಿಸಲಿದೆ. ಜೀಪ್ ಮೆರಿಡಿಯನ್ ಮೂಲತಃ ಕಂಪಾಸ್‌ನ 7-ಆಸನಗಳ ಆವೃತ್ತಿಯಾಗಿದೆ, ಈ ಎಸ್‍ಯುವಿ ಈಗಾಗಲೇ ಕಮಾಂಡರ್ ಆಗಿ ಆಯ್ದ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದೆ.

Most Read Articles

Kannada
Read more on ಜೀಪ್ jeep
English summary
Jeep compass and compass trailhawk get a price hike find here all details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X