ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Jeep India
ಅಮೆರಿಕ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿಯಾದ ಜೀಪ್ ಕಂಪನಿಯು 2021ರ ವಾರ್ಷಿಕ ಮತ್ತು ಕಳೆದ ತಿಂಗಳ ಮಾಸಿಕ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. 2021ರ ಡಿಸೆಂಬರ್ ತಿಂಗಳಿನಲ್ಲಿ ಜೀಪ್ ಇಂಡಿಯಾ ಕಂಪನಿಯು 916 ಯುನಿಟ್‌ಗಳ ಮಾರಾಟ ಮಾಡಿದೆ.

2020ರ ಡಿಸೆಂಬರ್ ತಿಂಗಳಿನಲ್ಲಿ ಜೀಪ್ ಕಂಪನಿಯು 386 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ವರ್ಷದ ಮಾರಾಟಕ್ಕೆ ಹೋಲಿಸಿದರೆ ಶೇ.137.31 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು 2021ರ ವಾರ್ಷಿಕ ಮಾರಾಟದ ಬಗ್ಗೆ ಹೇಳುವುದಾದರೆ, ಕೇವಲ ಕಂಪಾಸ್ ಮತ್ತು ರಾಂಗ್ಲರ್ ಕೊಡುಗೆಯೊಂದಿಗೆ, 11,652 ಯುನಿಟ್‌ಗಳು ಮಾರಾಟವಾಗುವುದರೊಂದಿಗೆ ಜೀಪ್ 2021 ರ ವರ್ಷವನ್ನು ಕೊನೆಗೊಳಿಸಿತು. ಇದು 2020 ಕ್ಕೆ ಹೋಲಿಸಿದರೆ, ಸುಮಾರು 123% ರಷ್ಟು ಬೆಳವಣಿಗೆಯಾಗಿದೆ.

ಕಳೆದ ವರ್ಷದಲ್ಲಿ ಜೀಪ್ ಮಾರಾಟವನ್ನು ಗಣನೆಗೆ ತೆಗೆದುಕೊಂಡರೆ, 2020 ರ ಅನುಗುಣವಾದ ತಿಂಗಳುಗಳಿಗೆ ಹೋಲಿಸಿದರೆ ಕಂಪನಿಯು 2021 ರ ಜನವರಿಯಲ್ಲಿ ಮಾತ್ರ ಬೆಳವಣಿಗೆಯ ಕುಸಿತವನ್ನು ವರದಿ ಮಾಡಿದೆ. ಉಳಿದ ತಿಂಗಳುಗಳಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಕಳೆದ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಹೊಸ ಜೀಪ್ ಕಂಪಾಸ್ ಅನ್ನು ಭಾರತೀಯ ಗ್ರಾಹಕರು ಉತ್ತಮವಾಗಿ ಸ್ವೀಕರಿಸಿದ್ದಾರೆ. ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಂತರಿಕ ಮತ್ತು ಬಾಹ್ಯ ನವೀಕರಣಗಳೊಂದಿಗೆ ಪರಿಚಯಿಸಿದ್ದರು. 2021ರ ಜೀಪ್ ಕಂಪಾಸ್ ಎಸ್‍ಯುವಿಯು ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ),ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಮಾಡೆಲ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಕೂಡ ಲಭ್ಯವಿದೆ.

ವರ್ಷಗಳ ಬಳಿಕ ಜೀಪ್ ಕಂಪಾಸ್ ಮಿಡ್-ಲೈಫ್ ನವೀಕರಣವನ್ನು ಪಡೆದುಕೊಂಡಿತ್ತು, ಕಳೆದ ವರ್ಷದ ಆರಂಭದಲ್ಲಿ ಬಿಡುಗಡೆಗೊಂಡ 2021ರ ಜೀಪ್ ಕಂಪಾಸ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ. ಹೊರಗಿನ ನವೀಕರಣಗಳನ್ನು ಹತ್ತಿರದಿಂದ ಗಮನಿಸಿದರೆ ಮಾತ್ರ ತಿಳಿಯುತ್ತದೆ.

ಈ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಪಡೆದುಕೊಂಡಿತ್ತು. ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ. ಈ ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಒಳಗೊಂಡಿವೆ.ಈ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಹೊಂದಿದೆ.

ಇದು ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಒಳಗೊಂಡಿದೆ.ಇದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್ ಫೀಚರ್ ಗಳನ್ನು ಒಳಗೊಂಡಿವೆ. ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ಈ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಕೂಡ ಒಳಗೊಂಡಿದೆ.

ಈ ಜೀಪ್ ಕಂಪಾಸ್ ಎಸ್‍ಯುವಿಯಲ್ಲಿ ಹೊಸ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ,

ಈ ಎರಡು ಎಂಜಿನ್‌ಗಳು ಸ್ಟ್ಯಾಂಡರ್ಡ್ ಆಗಿ ಆರು-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ನೊಂದಿಗೆ ಬರುತ್ತವೆ. ಕಂಪಾಸ್ ಪೆಟ್ರೋಲ್ ಏಳು-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆಯುತ್ತದೆ ಮತ್ತು ಡೀಸೆಲ್ ಒಂಬತ್ತು-ಸ್ಪೀಡ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ಕೂಡ ಹೊಂದಿದೆ.

ಇನ್ನು ಜೀಪ್ ಕಂಪನಿಯು ಮೇಡ್ ಇನ್ ಇಂಡಿಯಾ 2021ರ ರ‍್ಯಾಂಗ್ಲರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಬಿಡುಗಡೆಗೊಳಿಸಿತು. ಜೀಪ್ ಕಂಪನಿಯು ಈ ರ‍್ಯಾಂಗ್ಲರ್ ಎಸ್‍ಯುವಿಯು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ,

ಇನ್ನು ಇತ್ತೀಚೆಗೆ ಜೀಪ್ ಕಂಪನಿಯು ಹೊಸ ಕಮಾಂಡರ್ ಎಸ್‌ಯುವಿಯನ್ನು ಬ್ರೆಜಿಲ್‌ನಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಇದನ್ನು ಕಂಪಾಸ್ ಐದು ಸೀಟಿನ ಮಾದರಿಗೆ ಹೋಲಿಸಿದರೆ ಗಮನಾರ್ಹ ವ್ಯತ್ಯಾಸಗಳನ್ನು ಹೊಂದಿದೆ. ಅಲ್ಲದೇ ಹೊಸ ಜೀಪ್ ಕಮಾಂಡರ್ ಎಸ್‍ಯುವಿಯು ಹೆಚ್ಚು ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಹೊಸ ಮಾದರಿಯನ್ನು ಆಂತರಿಕವಾಗಿ ಜೀಪ್ ಲೋ-ಡಿ ಎಂದು ಕರೆಯಲಾಗುತ್ತಿತ್ತು. ಇದು ಕಂಪಾಸ್ ಎಸ್‌ಯುವಿಗಿಂತ ಉದ್ದವಾದ ಹೆಚ್ಚು ವಿಶಾಲವಾದ ಮತ್ತು ಪ್ರೀಮಿಯಂ ಆವೃತ್ತಿಯಾಗಿರುತ್ತದೆ,

ಇನ್ನು ಈ ಹೊಸ ಜೀಪ್ 7-ಸೀಟರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಜೀಪ್ ಮೆರಿಡಿಯನ್ ಎಂಬ ಹೆಸರಿನಲ್ಲಿ ಬಿಡುಗಡೆಯಾಗಲಿದೆ. ಈ ಜೀಪ್ 7-ಸೀಟರ್ ಎಸ್‌ಯುವಿಯು ಮೊದಲು ಬ್ರೆಜಿಲ್‌ನಲ್ಲಿ ಬಿಡುಗಡೆಯಾಗಲಿದೆ, ಭಾರತದಲ್ಲಿ ಈ ಎಸ್‍ಯುವಿಯು ಈ ವರ್ಷದ ಮಧ್ಯದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








