ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ಹೆಚ್ಚುತ್ತಿರುವ ಇಂಧನ ದರಗಳು ಮತ್ತು ಮಾಲಿನ್ಯದ ಕಾರಣದಿಂದ ಹೊಸ ವಾಹನ ಖರೀದಿದಾರರು ಪರಿಸರ ಸ್ನೇಹಿಯಾಗಿರುವ ಮತ್ತು ಕಡಿಮೆ ವೆಚ್ಚದಾಯಕವಾಗಿರುವ ಇವಿ ವಾಹನಗಳ ಬಳಕೆಗೆ ಆದ್ಯತೆ ನೀಡುತ್ತಿದ್ದು, ಚಾರ್ಜಿಂಗ್ ನಿಲ್ದಾಣಗಳು ಹೆಚ್ಚುತ್ತಿರುವಂತೆ ಇವಿ ವಾಹನ ನೋಂದಣಿ ಸಂಖ್ಯೆ ಕೂಡಾ ಸಾಕಷ್ಟು ಸುಧಾರಣೆ ಕಂಡಿದೆ.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ಇತ್ತೀಚಿನ ತಿಂಗಳುಗಳಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳು ಭರ್ಜರಿಯಾಗಿ ಮಾರಾಟವಾಗುತ್ತಿವೆ. ವಾಹನ್ ಡ್ಯಾಶ್‌ಬೋರ್ಡ್‌ (ವಾಹನ ಮಾರಾಟ, ನೋಂದಣಿ ಸೇರಿದಂತೆ ಇತರ ಮಾಹಿತಿ ಕುರಿತ ವೆಬ್‌ಸೈಟ್) ಮಾಹಿತಿಯ ಪ್ರಕಾರ 2022ರ ಮೊದಲಾರ್ಧದಲ್ಲಿ EV ಮಾರಾಟವು ಮೂರು ಪಟ್ಟು ಏರಿಕೆಯಾಗಿದ್ದು, ಜುಲೈ 2022 ರಲ್ಲಿ 4,445 ಎಲೆಕ್ಟ್ರಿಕ್ ಕಾರುಗಳು ಮಾರಾಟವಾಗಿವೆ.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ಕೇವಲ ಎಲೆಕ್ಟ್ರಿಕ್ ಕಾರುಗಳು ಮಾತ್ರವಲ್ಲದೆ ದ್ವಿಚಕ್ರ ವಾಹನಗಳು ಮತ್ತು ತ್ರಿಚಕ್ರ ವಾಹನಗಳು ಕೂಡ ಭರ್ಜರಿಯಾಗಿ ಮಾರಾಟವಾಗಿವೆ. ವಾಹನ್ ಡ್ಯಾಶ್‌ಬೋರ್ಡ್‌ನಲ್ಲಿನ ಮಾಹಿತಿಯ ಪ್ರಕಾರ, 2022 ರ ಮೊದಲಾರ್ಧದಲ್ಲಿ EV ಮಾರಾಟದಲ್ಲಿ ಮೂರು ಪಟ್ಟು ಜಿಗಿತವಾಗಿದೆ. ಕಳೆದ ಜುಲೈನಲ್ಲಿ 4,445 ಯುನಿಟ್‌ ಕಾರುಗಳ ಮಾರಾಟವಾಗಿದೆ.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ಕಳೆದ ವರ್ಷ ಜುಲೈಗೆ ಹೋಲಿಸಿದರೆ ಇದು 3.5 ಪಟ್ಟು ಹೆಚ್ಚಾಗಿದೆ. ಹಿಂದಿನ ತಿಂಗಳಿಗೆ ಹೋಲಿಸಿದರೆ ಇದು ಒಟ್ಟು ಜೂನ್ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 14.15 ಹೆಚ್ಚಾಗಿದೆ. ಈ ವಿಭಾಗದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಮುನ್ನಡೆ ಕಾಯ್ದುಕೊಂಡಿದೆ. ಜುಲೈನಲ್ಲಿ ಕಂಪನಿಯು ಒಟ್ಟು ನೋಂದಣಿಗಳಲ್ಲಿ ಶೇ 90.5 ರಷ್ಟು ಪಾಲನ್ನು ದಾಖಲಿಸಿದೆ.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ಟಾಟಾ ಮೋಟಾರ್ಸ್ ಜೊತೆಗೆ, MG ಮೋಟಾರ್, BYD, Audi, BMW, ಹ್ಯುಂಡೈ, ಮತ್ತು ಮಹೀಂದ್ರಾ & ಮಹೀಂದ್ರಾ ಮುಂತಾದ ಇತರ ಮಾರಾಟಗಾರರು ಸಹ ಸ್ಥಿರವಾದ ಏರಿಕೆಯನ್ನು ಸಾಧಿಸಿದ್ದಾರೆ. ಮೊದಲ ತ್ರೈಮಾಸಿಕದಲ್ಲಿ ಇವಿ ಮಾರಾಟವು ಪ್ರತಿ ತಿಂಗಳು ಸ್ಥಿರವಾದ ಹೆಚ್ಚಳದೊಂದಿಗೆ 72,474 ಯುನಿಟ್‌ಗಳಲ್ಲಿ ಬಂದಿತು.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ವಾಸ್ತವವಾಗಿ, ಈ ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ 3,90,399 ಯುನಿಟ್‌ಗಳಲ್ಲಿ ದಾಖಲಾದ EV ಮಾರಾಟವು 2021 ರಲ್ಲಿ ಮಾರಾಟವಾದ ಒಟ್ಟು EV ಗಳಿಗಿಂತ ಗಮನಾರ್ಹವಾಗಿ ಹೆಚ್ಚಾಗಿದೆ (3,11,420 EV ಗಳು). SIAM (ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್) ನಿಂದ ಅಧಿಕೃತ ಜುಲೈ ಮಾರಾಟದ ಮಾಹಿತಿಯು ಬೇಡಿಕೆಯಲ್ಲಿ ಸ್ವಲ್ಪ ಚೇತರಿಕೆಯನ್ನು ಸೂಚಿಸುತ್ತದೆ.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ಒಟ್ಟು ಪ್ರಯಾಣಿಕ ವಾಹನಗಳ ಮಾರಾಟವು ಜುಲೈ 2021 ರಲ್ಲಿ ಮಾರಾಟವಾದ 264,442 ವಾಹನಗಳಿಂದ ಶೇ 11.12 ರಷ್ಟು 293,865 ಯುನಿಟ್‌ಗಳಲ್ಲಿ ಒಟ್ಟಾರೆ ಮಾರಾಟದ ಪ್ರವೃತ್ತಿಯನ್ನು ಪ್ರತಿಬಿಂಬಿಸಿದೆ. ಭಾರತದಲ್ಲಿ EV ಮಾರಾಟವು ಇತ್ತೀಚಿನ ದಿನಗಳಲ್ಲಿ ಉತ್ತಮ ಬೆಳವಣಿಗೆಯನ್ನು ಕಂಡಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಹಂಚಿಕೊಂಡ ಇತ್ತೀಚಿನ ಮಾಹಿತಿಯು ಪ್ರಸ್ತುತ, 13,92,265 EV ಗಳು ಭಾರತೀಯ ರಸ್ತೆಗಳಲ್ಲಿ ಸಂಚರಿಸುತ್ತಿವೆ. ಅದರಲ್ಲಿ ಎಲೆಕ್ಟ್ರಿಕ್ ಕಾರುಗಳು ಶೇಕಡಾ 5.58 ರಷ್ಟಿವೆ.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ. ಇದರಲ್ಲಿ ಕೇಂದ್ರದ ಫೇಮ್ 2 ಸಬ್ಸಡಿ ಯೋಜನೆಯು ಪ್ರಮುಖವಾಗಿದ್ದು, ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಇವಿ ವಾಹನಗಳ ಉತ್ತೇಜನಕ್ಕೆ ವಿವಿಧ ಸಬ್ಸಡಿ ಯೋಜನೆಗಳನ್ನು ಅಳವಡಿಸಿಕೊಂಡಿವೆ.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರೋತ್ಸಾಹದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನಗಳ ಬಳಕೆಗೆ ಸಾರ್ವಜನಿಕರು ಆದ್ಯತೆ ನೀಡುತ್ತಿದ್ದಾರೆ. ಕರ್ನಾಟಕದಲ್ಲೂ ಸಹ ಇವಿ ವಾಹನಗಳ ಅಳವಡಿಕೆಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ಯೋಜನೆಗಳನ್ನು ಘೋಷಣೆ ಮಾಡಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇವಿ ವಾಹನಗಳು ಸಾಕಷ್ಟು ಸಂಖ್ಯೆಯಲ್ಲಿ ರಸ್ತೆಗಿಳಿದಿವೆ.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ರಾಜ್ಯ ಸರ್ಕಾರದ ಸಬ್ಸಡಿ ಯೋಜನೆ ಜಾರಿ ನಂತರ ಇದುವರೆಗೆ ಕರ್ನಾಟಕದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಹೆಚ್ಚಳ ಪರಿಣಾಮ ಇವಿ ವಾಹನಗಳ ಸಂಖ್ಯೆಯು ನಿಧಾನವಾಗಿ ಏರಿಕೆಯಾಗುತ್ತಿದೆ.

ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಮಾತ್ರವಲ್ಲದೆ ಹೊಸದಾಗಿ ಇವಿ ವಾಹನ ಉತ್ಪಾದನೆಗೆ ಪೂರಕವಾದ ಸ್ಟಾರ್ಟ್‌ಅಪ್ ಕಂಪನಿಗಳಿಗೂ ರಾಜ್ಯ ಸರ್ಕಾರವು ಹಲವಾರು ಸಬ್ಸಡಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಗಳಿಂದಾಗಿ ಕರ್ನಾಟಕದಲ್ಲಿ ಇದೀಗ 45ಕ್ಕೂ ಹೆಚ್ಚು ಇವಿ ವಾಹನಗಳಿಗೆ ಸಂಬಂಧಿಸಿದ ಸ್ಟಾರ್ಟ್ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ.

Most Read Articles

Kannada
English summary
July electric car sales up 35 per cent Tata accounts for 90 per cent
Story first published: Friday, August 12, 2022, 18:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X