ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಹೆಚ್ಚುತ್ತಿರುವ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಮತ್ತು ಸಾರಿಗೆ ವೆಚ್ಚ ತಗ್ಗಿಸಲು ರಾಜ್ಯ ಸಾರಿಗೆ ಸಂಸ್ಥೆಯು ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳ ಅಳವಡಿಕೆ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಹಂತ-ಹಂತವಾಗಿ ಇವಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಎದುರುನೋಡುತ್ತಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಪ್ರಸ್ತುತ ಸೇವೆಯಲ್ಲಿರುವ ಸಾಂಪ್ರದಾಯಿಕ ಡೀಸೆಲ್ ಬಸ್‌ಗಳ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವುದಲ್ಲದೆ ಇವುಗಳಿಂದ ಹೊರಸೂಸುವ ಮಾಲಿನ್ಯ ಪ್ರಮಾಣವು ಕೂಡಾ ಹೆಚ್ಚಳವಾಗುತ್ತಿದ್ದು, ಪರ್ಯಾಯ ಇಂಧನ ಮಾದರಿಗಳ ಜೊತೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಸೇವೆಯ ಕುರಿತಾಗಿ ಮಾತನಾಡಿರುವ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಮುಂಬರುವ 2030ರ ವೇಳೆಗೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ಸಿದ್ದವಾಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

2030ರ ವೇಳೆಗೆ ರಾಜ್ಯಾದ್ಯಂತ ಎಲ್ಲಾ ಬಸ್‌ಗಳು ಎಲೆಕ್ಟ್ರಿಕ್ ಮಾದರಿಗಳಾಬೇಕೆಂಬುದು ನಮ್ಮ ಸಂಕಲ್ಪವಾಗಿ ಎಂದಿರುವ ಶ್ರೀರಾಮುಲು ಅವರು ಹಂತ-ಹಂತವಾಗಿ ಇವಿ ಬಸ್ ಬಸ್‌ಗಳನ್ನು ಅಳವಡಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಇದರ ಜೊತೆಗೆ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ (CESL) ವಿವಿಧ ರಾಜ್ಯಗಳ ಸಾರಿಗೆ ಸಂಸ್ಥೆಗಳಿಗಾಗಿ ಇವಿ ಬಸ್ ಟೆಂಡರ್ ಘೋಷಿಸಿದ್ದು, ಸಿಇಎಸ್ಎಲ್ ಟೆಂಡರ್‌ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಬಿಎಂಟಿಸಿ ಸಂಸ್ಥೆಗೆ ಒದಗಿಸಲಾಗುವ ಎಲೆಕ್ಟ್ರಿಕ್ ಬಸ್ ಟೆಂಡರ್ ಅನ್ನು ತನ್ನದಾಗಿಸಿಕೊಂಡಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ ಟೆಂಡರ್‌ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಬಿಎಂಟಿಸಿ ಸಾರಿಗೆ ಸಂಸ್ಥೆಗೆ ಒಟ್ಟು 921 ಎಲೆಕ್ಟ್ರಿಕ್ ಬಸ್ ಒದಗಿಸುವ ಟೆಂಡರ್ ಪಡೆದುಕೊಂಡಿದ್ದು, ಹೊಸ ಯೋಜನೆಯಡಿ ಟಾಟಾ ಮೋಟಾರ್ಸ್ ಕಂಪನಿಯು 921 ಸ್ಟಾರ್ ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಟಾಟಾ ಮೋಟಾರ್ಸ್ ಕಂಪನಿಯು ಈಗಾಗಲೇ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ ಟೆಂಡರ್‌ನಲ್ಲಿ ದೆಹಲಿ ಸಾರಿಗೆ ಸಂಸ್ಥೆಗಾಗಿ 1500 ಎಲೆಕ್ಟ್ರಿಕ್ ಬಸ್‌ಗಳನ್ನು ಮತ್ತು 1,180 ಎಲೆಕ್ಟ್ರಿಕ್ ಬಸ್‌ಗಳನ್ನು ಪಶ್ಚಿಮ ಬಂಗಾಳ ಸಾರಿಗೆ ಸಂಸ್ಥೆಗೆ ಒದಗಿಸುವ ಟೆಂಡರ್ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಈ ಮೂಲಕ ಕಳೆದ ಒಂದು ತಿಂಗಳ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 3,600 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸುವ ಯೋಜನೆಯ ಟೆಂಡರ್ ತನ್ನದಾಗಿಸಿಕೊಂಡಿದ್ದು, ಟೆಂಡರ್ ಅನ್ವಯ ಕಂಪನಿಯು 12 ಮೀಟರ್ ಉದ್ದಳತೆಯ ಸ್ಟಾರ್ ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಜೊತೆಗೆ ಎಲೆಕ್ಟ್ರಿಕ್ ಬಸ್ ಒದಗಿಸುವುದರ ಜೊತೆ 12 ವರ್ಷಗಳ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದು, ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿರುವ ಸ್ಟಾರ್ ಎಲೆಕ್ಟ್ರಿಕ್ ಬಸ್ ಮಾದರಿಗಳು ಅರಾಮದಾಯಕ ಮತ್ತು ಸುರಕ್ಷಿತ ಪ್ರಯಾಣವನ್ನು ಖಾತ್ರಿಪಡಿಸುತ್ತವೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಎಲೆಕ್ಟ್ರಿಕ್ ಬಸ್ ಮಾದರಿಗಳನ್ನು ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ ಬೃಹತ್ ಯೋಜನೆ ರೂಪಿಸಿದ್ದು, ವಿವಿಧ ರಾಜ್ಯಗಳಿಗಾಗಿ ಬರೋಬ್ಬರಿ 50 ಸಾವಿರ ಎಲೆಕ್ಟ್ರಿಕ್ ಬಸ್‌ಗಳನ್ನು ಖರೀದಿಸುತ್ತಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಹೊಸ ಯೋಜನೆ ಅಡಿ ದೇಶಾದ್ಯಂತ ಪ್ರಮುಖ ರಾಜ್ಯಗಳು ನಗರ ಸಾರಿಗೆ ವಿಭಾಗದಲ್ಲಿ ಇವಿ ಬಸ್‌ಗಳನ್ನು ವೇಗವಾಗಿ ಅವಡಿಸಿಕೊಳ್ಳಲು ಸಹಕಾರಿಯಾಗಲಿದ್ದು, 2030 ರ ವೇಳೆಗೆ ಒಟ್ಟು 50 ಸಾವಿರ ಎಲೆಕ್ಟ್ರಿಕ್ ಬಸ್‌ಗಳ (ಇ-ಬಸ್‌ಗಳು) ನಿಯೋಜನೆಗೊಳಿಸಲು ಬೃಹತ್ ಯೋಜನೆಯನ್ನು ರೂಪಿಸುತ್ತಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ದೇಶಾದ್ಯಂತ ಪ್ರಮುಖ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಕಡಿತಗೊಳಿಸಲು ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಬದಲಾಗಿ ಇವಿ ಮಾದರಿಗಳನ್ನು ಹಂತ-ಹಂತವಾಗಿ ಅಳವಡಿಸಿಕೊಳ್ಳುತ್ತಿದ್ದು, ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ (CESL) ಸಂಸ್ಥೆಯು ವರ್ಲ್ಡ್ ರಿಸೋರ್ಸ್ ಇನ್‌ಸ್ಟಿಟ್ಯೂಟ್ ಇಂಡಿಯಾ (WRI ಇಂಡಿಯಾ) ಜೊತೆಗೂಡಿ ಇವಿ ಬಸ್‌ಗಳನ್ನು ಅಳವಡಿಸುತ್ತಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಗ್ರ್ಯಾಂಡ್ ಚಾಲೆಂಜ್‌ನ ಯಶಸ್ಸಿನ ನಂತರ CESL ಸಂಸ್ಥೆಯು ಭಾರತದ ಪ್ರಮುಖ 25 ರಾಜ್ಯಗಳಲ್ಲಿ 2030ರ ವೇಳೆಗೆ 50,000 ಎಲೆಕ್ಟ್ರಿಕ್ ಬಸ್‌ಗಳ (ಇ-ಬಸ್‌ಗಳು) ನಿಯೋಜನೆಯನ್ನು ಮಾಡುವ ಗುರಿಹೊಂದಿದ್ದು, ಇದಕ್ಕಾಗಿ ಸುಮಾರು ರೂ. 80 ಸಾವಿರ ಕೋಟಿ ವೆಚ್ಚ ತಗುಲುವುದಾಗಿ ಅಂದಾಜಿಸಲಾಗಿದೆ.

ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ ಬರೋಬ್ಬರಿ 35 ಸಾವಿರ ಎಲೆಕ್ಟ್ರಿಕ್ ಬಸ್‌ಗಳು

ಹೆಚ್ಚುತ್ತಿರುವ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಮೊದಲು ಸಾರ್ವಜನಿಕ ಬಳಕೆಯ ಇವಿ ಬಸ್‌ಗಳನ್ನು ವಿದ್ಯುತ್ ಮಾದರಿಗಳ ಬದಲಿಸುವ ಅವಶ್ಯಕತೆಯನ್ನು ಅರಿತಿರುವ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯು ಹೊಸ ಯೋಜನೆಯಡಿ 50 ಸಾವಿರ ಇವಿ ಬಸ್‌ಗಳನ್ನು ಅಳವಡಿಸಿಕೊಳ್ಳಲು ಶಿಫಾರಸ್ಸು ಮಾಡಿದೆ.

Most Read Articles

Kannada
English summary
Karnataka aims to convert 35 000 buses into electric buses by 2030 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X