Just In
- 54 min ago
ಇಂದಿನಿಂದ ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್ ಆರಂಭಿಸಿದ ಮಹೀಂದ್ರಾ
- 1 hr ago
ಬೈಕ್ ನೀಡಿದ್ದ ಮೊದಲ ದಿನವೇ ಕಣ್ಮರೆಯಾಗಿದ್ದ ಧೋನಿ: ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಶ್ರೀನಿವಾಸನ್
- 1 hr ago
ನೀವು ಖರೀದಿಸಬಹುದಾದ ಅತ್ಯುತ್ತಮ ಸೆಕೆಂಡ್ ಹ್ಯಾಂಡ್ ಆಟೋಮ್ಯಾಟಿಕ್ ಹ್ಯಾಚ್ಬ್ಯಾಕ್ ಕಾರುಗಳಿವು...
- 3 hrs ago
ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್ಗಳನ್ನು ತೆಗೆದುಹಾಕಿದ ನಿಸ್ಸಾನ್
Don't Miss!
- News
ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
- Sports
ನತದೃಷ್ಟ ಪಂತ್: ಈತ ಶತಕ ಬಾರಿಸಿದರೆ ಭಾರತಕ್ಕೆ ಸೋಲು ಖಚಿತ ಎನ್ನುತ್ತಿವೆ ಅಂಕಿಅಂಶಗಳು!
- Movies
'ಸ್ಮೋಕಿಂಗ್ ಕಾಳಿ' ಪೋಸ್ಟರ್ ತೆಗೆದುಹಾಕಲು ಕೆನಡಾದ ಭಾರತೀಯ ಹೈಕಮಿಷನ್ ಕೋರಿಕೆ!
- Finance
ಎಲ್ಐಸಿ ಷೇರು ಖರೀದಿಸಲು ಮೋತಿಲಾಲ್ ಓಸ್ವಾಲ್ ಸಲಹೆ
- Technology
ಸಾರ್ವಜನಿಕರೇ ನಿಮ್ಮ ಮನೆ ಮೇಲೆ ಮೊಬೈಲ್ ಟವರ್ ಹಾಕಿಸುವ ಮುನ್ನ ಎಚ್ಚರ?
- Lifestyle
ಮಾನ್ಸೂನ್ ಸಮಯದಲ್ಲಿ ಜೀರ್ಣಕ್ರಿಯೆ ಸುಧಾರಿಸಲು ಇಂಥಾ ಆಹಾರಗಳಿಂದ ದೂರವಿರಿ
- Education
AIFD Recruitment 2022 : 5 ಪ್ಯಾಧ್ಯಾಪಕ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಕರ್ನಾಟಕ ಬಜೆಟ್ 2022: ವಾಹನ ಮಾಲೀಕರಿಗೆ ಸಿಹಿಸುದ್ದಿ, ಇವಿ ವಾಹನ ಖರೀದಿಗೆ ಸಬ್ಸಡಿ..
2022-2023ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಇಲಾಖೆಗಳಿಗೆ ಭಾರೀ ಪ್ರಮಾಣದ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಪ್ರಸಕ್ತ ವರ್ಷದ ಬಜೆಟ್ ಗಾತ್ರವು ಕಳೆದ ಬಾರಿಗಿಂತಲೂ ಶೇ. 7.7 ಹೆಚ್ಚಳವಾಗಿದ್ದು, ಈ ಬಾರಿ 2,53,165 ಕೋಟಿ ರೂ. ಬಜೆಟ್ ಮಂಡನೆ ಮಾಡಲಾಗಿದೆ. ಹೊಸ ಬಜೆಟ್‌ನಲ್ಲಿ ಈ ಬಾರಿ ಸಾರ್ವಜನಿಕ ಸಾರಿಗೆ ವಲಯದ ಅಭಿವೃದ್ದಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಮೆಟ್ರೊ ಮಾರ್ಗಗಳ ವಿಸ್ತರಣೆ, ವಿವಿಧ ರಸ್ತೆ ಕಾಮಗಾರಿಗಳಿಗೆ ಹೆಚ್ಚಿನ ಮಟ್ಟದ ಅನುದಾನಗಳನ್ನು ಘೋಷಣೆ ಮಾಡಲಾಗಿದೆ.

2022-23ನೇ ಸಾಲಿನ ಬಜೆಟ್‌ನಲ್ಲಿ ಯಾವುದೇ ಹೊಸ ತೆರಿಗೆ ಹೊರೆ ಹೇರದೆ ವಿವಿಧ ಕ್ಷೇತ್ರಗಳಿಗೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಲಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಹೆಚ್ಚಳ ಮಾಡದೆ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ.

ಪ್ರತಿ ಬಜೆಟ್‌ನಲ್ಲೂ ಆಯವ್ಯಯ ಮಂಡನೆಗೆ ತಕ್ಕಂತೆ ನೇರವಾಗಿ ಆದಾಯ ಕ್ರೂಢಿಕರಿಸುವ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಹೆಚ್ಚಿಸಲಾಗುತ್ತಿತ್ತು. ಆದರೆ ಈ ಬಾರಿ ಯಾವುದೇ ಹೊಸ ತೆರಿಗೆ ವಿಧಿಸದೆ ಬಜೆಟ್ ಮಾಡಲಾಗಿದ್ದು, ಎಲ್ಲಾ ವಲಯಗಳ ಅಭಿವೃದ್ದಿಗೂ ಹೆಚ್ಚಿನ ಅನುದಾನ ನೀಡಲಾಗಿದೆ.

ರೈತರಿಗೆ ಸಬ್ಸಡಿ ಡೀಸೆಲ್
ಹೊಸ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು ಕೃಷಿ ವಾಹನಗಳ ಬಳಕೆಯನ್ನು ಉತ್ತೇಜಿಸಲು ಪ್ರತಿ ಎಕರೆಗೆ(ಗರಿಷ್ಠ5 ಏಕರೆ ತನಕ) ವಾರ್ಷಿಕವಾಗಿ ರೂ. 250 ಡೀಸೆಲ್ ಖರೀದಿಗೆ ಸಬ್ಸಡಿ ಘೋಷಣೆ ಮಾಡಲಾಗಿದ್ದು, ಹೊಸ ಸಬ್ಸಡಿ ಯೋಜನೆಯು ಕೃಷಿ ವಾಹನಗಳ ಬಳಕೆಗೆ ಉತ್ತೇಜನ ನೀಡಲಿದೆ.

ತೆರಿಗೆ ಪಾವತಿಯ ಅವಧಿ ವಿಸ್ತರಣೆ
ಕರ್ನಾಟಕ ಸರ್ಕಾರದ ಹೊಸ ಬಜೆಟ್‌ನಲ್ಲಿ ವಾಹನ ಮಾಲೀಕರಿಗೆ ಮತ್ತೊಂದು ಸಿಹಿಸುದ್ದಿ ಅಂದರೆ ಅದು ಮೋಟಾರ್ ವಾಹನ ತೆರಿಗೆ ಪಾವತಿಗೆ ಹೆಚ್ಚುವರಿಯಾಗಿ 1 ತಿಂಗಳ ವಿಸ್ತರಣೆ ಮಾಡಿದ್ದು, ಯೆಲ್ಲೊ ಬೋರ್ಡ್ ಚಾಲಕರ ಮಕ್ಕಳ ವಿದ್ಯಾಭ್ಯಾಸ ಯೋಜನೆಗೂ ರಾಜ್ಯ ಸರ್ಕಾರವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದೆ.

ಎಲೆಕ್ಟ್ರಿಕ್ ತ್ರಿ-ಚಕ್ರ ವಾಹನ ಖರೀದಿಗೆ ಸಬ್ಸಡಿ
2022-23ನೇ ಸಾಲಿನ ಬಜೆಟ್‌ನಲ್ಲಿ ತ್ರಿ-ಚಕ್ರ ಇವಿ ವಾಹನಗಳ ಖರೀದಿಗಾಗಿ ರೂ.50 ಸಾವಿರ ತನಕ ಸಬ್ಸಡಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದು, ಹೊಸ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರಲ್ಲಿ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ಈ ಯೋಜನೆ ಜಾರಿಗೆ ತರಲಾಗಿದೆ.

ಹೊಸ ಸಬ್ಸಡಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯುವಕರು ರೂ. 1.50 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ತ್ರಿ-ಚಕ್ರ ವಾಹನಗಳ ಖರೀದಿಗೆ ರೂ. 50 ಸಾವಿರ ಸಬ್ಸಡಿ ಪಡೆದುಕೊಳ್ಳಲಿದ್ದು, ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಈ ಯೋಜನೆ ಮಹತ್ವದ ನಿರ್ಧಾರವಾಗಿದೆ.

ಮೂರನೇ ಹಂತದ ಮೆಟ್ರೋ ಮಾರ್ಗ ಪ್ರಸ್ತಾಪ
ಬೆಂಗಳೂರಿನ ಹೆಚ್ಚುತ್ತಿರುವ ಟ್ರಾಫಿಕ್ ದಟ್ಟಣೆಯನ್ನು ತಡೆಯಲು ಸಾರ್ವಜನಿಕ ಸಾರಿಗೆ ಬಲಪಡಿಸುತ್ತಿರುವ ರಾಜ್ಯ ಸರ್ಕಾರವು ಮೂರನೇ ಹಂತದ ಮೆಟ್ರೋ ಯೋಜನೆಯನ್ನು ಪ್ರಸ್ತಾಪಿಸಿದ್ದು, ಮೂರನೇ ಹಂತದ ಮೆಟ್ರೊ ಯೋಜನೆಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ, ಡೈರಿ ವೃತ್ತ, ಹೆಬ್ಬಾಳ ತನಕ ವಿಸ್ತರಿಸಲು ಯೋಜಿಸಲಾಗಿದೆ.

ಮೂರನೇ ಹಂತದ ಮೆಟ್ರೊ ಯೋಜನೆಗಾಗಿ ರಾಜ್ಯ ಸರ್ಕಾರವು ಸುಮಾರು ರೂ.15,000 ಕೋಟಿ ಅಂದಾಜು ವೆಚ್ಚದಲ್ಲಿ 36 ಕಿ. ಮೀ. ಉದ್ದದ ಹೊಸ ಮಾರ್ಗಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ನಿರ್ದೇಶಿಸಲಾಗಿದ್ದು, ಹೊಸ ಮಾರ್ಗದೊಂದಿಗೆ ಟ್ರಾಫಿಕ್ ದಟ್ಟಣೆ ತಡೆಯುವ ಗುರಿಹೊಂದಲಾಗಿದೆ.

ಜೊತೆಗೆ ಮೂರನೇ ಹಂತದ ಮೆಟ್ರೊ ಯೋಜನೆಯಲ್ಲಿ ರೂ. 11,250 ಕೋಟಿ ಅಂದಾಜು ವೆಚ್ಚದಲ್ಲಿ ಹೆಬ್ಬಾಳದಿಂದ ಜೆ. ಪಿ. ನಗರದವರೆಗೆ 32 ಕಿ. ಮೀ. ಗಳ ಹೊರವರ್ತುಲ ರಸ್ತೆ ಮಾರ್ಗ ಹಾಗೂ ಹೊಸಹಳ್ಳಿಯಿಂದ ಕಡಬಗೆರೆವರೆಗೆ 13 ಕಿ. ಮೀ. ಮಾರ್ಗವನ್ನು ಒಳಗೊಂಡಿದೆ.

ಇದಲ್ಲದೆ ಬೆಂಗಳೂರಿನ ಸಬ್ ಅರ್ಬನ್ ರೈಲ್ವೆ ಯೋಜನೆಗಳಿಗಾಗಿ ರೂ. 15,267 ಕೋಟಿ ಅನುದಾನ ಪ್ರಕಟಿಸಲಾಗಿದ್ದು, 148 ಕಿ.ಮೀ. ಉದ್ದದ ಈ ಯೋಜನೆಯಡಿ ನಾಲ್ಕು ಕಾರಿಡಾರ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ಇದಲ್ಲದೆ ರಾಜ್ಯ ಸರ್ಕಾರವು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಪ್ರಮುಖ ರಸ್ತೆ ಕಾಮಗಾರಿಗಳಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದು, ಹೊಸ ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಯಾವುದೇ ಹೆಚ್ಚುವರಿ ಸುಂಕ ವಿಧಿಸದೆ ಬಜೆಟ್ ಮಂಡನೆ ಮಾಡಿರುವುದಕ್ಕೆ ವಾಹನ ಮಾಲೀಕರ ನಿಟ್ಟುಸಿರು ಬಿಟ್ಟಿದ್ದಾರೆ ಎನ್ನಬಹುದು.