ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಕಿಯಾ ಇಂಡಿಯಾ ಕಂಪನಿಯು ಹಲವು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದು, ಇದೀಗ ಕಂಪನಿಯು ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 5 ಲಕ್ಷ ಕಾರುಗಳ ಮಾರಾಟ ಮೈಲಿಗಲ್ಲು ಸಾಧಿಸಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

2019ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಕಾರು ಮಾರಾಟ ಆರಂಭಿಸಿದ ಕಿಯಾ ಕಂಪನಿಯು ಇದುವರೆಗೆ ಸುಮಾರು 5 ಲಕ್ಷ ಕಾರುಗಳನ್ನು ಮಾರಾಟ ಮಾಡಿದ್ದು, ಪ್ರೀಮಿಯಂ ಕಾರುಗಳ ವಿಭಾಗದಲ್ಲಿ ಮುಂಚೂಣಿ ಸಾಧಿಸುತ್ತಿದೆ. ಸೆಲ್ಟೊಸ್ ಮೂಲಕ ಭಾರತದಲ್ಲಿ ಕಾರು ಮಾರಾಟ ಆರಂಭಿಸಿದ ಕಿಯಾ ಕಂಪನಿಯು ಸದ್ಯ ಸೊನೆಟ್, ಕಾರ್ನಿವಾಲ್ ಮತ್ತು ಕಾರೆನ್ಸ್ ಕಾರುಗಳನ್ನು ಮಾರಾಟ ಮಾಡುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಕಿಯಾ ಕಂಪನಿಯು ಸೆಲ್ಟೊಸ್, ಸೊನೆಟ್, ಕಾರ್ನಿವಾಲ್ ಮತ್ತು ಕಾರೆನ್ಸ್ ಮಾದರಿಗಳನ್ನು ಭಾರತದಲ್ಲಿಯೇ ನಿರ್ಮಾಣ ಮಾಡುತ್ತಿದ್ದರೆ ಇತ್ತೀಚೆಗೆ ಬಿಡುಗಡೆ ಮಾಡಲಾದ ಇವಿ6 ಎಲೆಕ್ಟ್ರಿಕ್ ಕಾರು ಮಾದರಿಯನ್ನು ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಂಡು ಮಾರಾಟ ಮಾಡುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಇವಿ6 ಹೊರತುಪಡಿಸಿ ಇನ್ನುಳಿದ ನಾಲ್ಕು ಕಾರು ಮಾದರಿಗಳನ್ನು ಭಾರತದಲ್ಲಿಯೇ ನಿರ್ಮಿಸುತ್ತಿರುವ ಕಿಯಾ ಕಂಪನಿಯು ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಮೂಲಕ ಕಾರು ಮಾರಾಟದಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದು, ಸೆಲ್ಟೊಸ್, ಸೊನೆಟ್ ಮತ್ತು ಕಾರೆನ್ಸ್ ಕಾರುಗಳು ಕಂಪನಿಯ ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಕಿಯಾ ಕಾರುಗಳ ಮಾರಾಟ ಪಟ್ಟಿಯಲ್ಲಿ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳೇ ನಾಲ್ಕು ಲಕ್ಷಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದ್ದು, ಇತ್ತೀಚೆಗೆ ಬಿಡುಗಡೆಯಾದ ಕಾರೆನ್ಸ್ ಎಂಯುವಿ ಕೂಡಾ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಕಾರ್ನಿವಾಲ್ ಮತ್ತು ಇವಿ6 ಮಾದರಿಗಳು ತುಸು ದುಬಾರಿ ಬೆಲೆ ಹೊಂದಿದ್ದರೂ ಆಯಾ ವಿಭಾಗದಲ್ಲಿ ಉತ್ತಮ ಬೇಡಿಕೆ ಹೊಂದಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಆಧರಿಸಿ ಕಂಪನಿಯು ಉತ್ಪಾದನಾ ಪ್ರಮಾಣವನ್ನು ಹಂತ-ಹಂತವಾಗಿ ಹೆಚ್ಚಳ ಮಾಡುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಆಂಧ್ರಪ್ರದೇಶ ಪೆನುಕೊಂಡ ಬಳಿಯಿರುವ ಕಾರು ಉತ್ಪಾದನಾ ಘಟಕದಲ್ಲಿ ಕಾರು ಉತ್ಪಾದನಾ ಪ್ರಮಾಣವನ್ನು ಹಂತ-ಹಂತವಾಗಿ ಹೆಚ್ಚಳ ಮಾಡುತ್ತಿರುವ ಕಿಯಾ ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಹೊಸ ಕಾರು ಉತ್ಪಾದನಾ ಘಟಕಕ್ಕಾಗಿ ಆರಂಭದಲ್ಲಿ ರೂ. 8 ಸಾವಿರ ಕೋಟಿ ಹೂಡಿಕೆ ಮಾಡಿದ್ದ ಕಿಯಾ ಕಂಪನಿಯು ಹಂತ-ಹಂತವಾಗಿ ಕಾರು ಉತ್ಪಾದನಾ ಘಟಕ ವಿಸ್ತರಣೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಲೇ ಇದ್ದು, ಸೆಲ್ಟೊಸ್ ಮಾದರಿಯನ್ನು ಕಂಪನಿಯು ಭಾರತದಲ್ಲಿ ಮಾತ್ರವಲ್ಲದೇ ಪ್ರಮುಖ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗೆ ಇಲ್ಲಿಂದಲೇ ರಫ್ತು ಕೈಗೊಳ್ಳುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಸೆಲ್ಟೊಸ್ ನಂತರ ಸೆೊನೆಟ್ ಮತ್ತು ಕಾರೆನ್ಸ್ ಕಾರುಗಳು ಸಹ ಪ್ರಮುಖ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗೆ ಪ್ರವೇಶಿಸುವ ತವಕದಲ್ಲಿದ್ದು, ಮೇಕ್ ಇನ್ ಇಂಡಿಯಾ ಯೋಜನೆ ಅಡಿ ಭಾರೀ ಪ್ರಮಾಣದ ಕಾರು ಉತ್ಪಾದನಾ ಗುರಿ ಸಾಧಿಸುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾದ ಕಿಯಾ ಕಾರೆನ್ಸ್ ಎಂಯುವಿ ಮಾದರಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕಾರೆನ್ಸ್ ಕಾರು ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ದಾಖಲೆ ಮಟ್ಟದ ಬೇಡಿಕೆ ಪಡೆದುಕೊಂಡಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆಯೇ ಹೊಸ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್ ನೀಡುತ್ತದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 15.7 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.2 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 16.5 ಕಿ.ಮೀ ಮೈಲೇಜ್ ನೀಡುತ್ತದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯಲ್ಲಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 21.3 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.3 ಕಿ.ಮೀ ಮೈಲೇಜ್ ನೀಡಲಿದೆ. ಹೊಸ ಕಾರು ಸೆಲ್ಟೊಸ್ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕಿಯಾ

ಇನ್ನು ಹೊಸ ಕಾರು ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.60 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.70 ಲಕ್ಷ ಬೆಲೆ ಹೊಂದಿದೆ.

More from DriveSpark

Article Published On: Wednesday, July 20, 2022, 8:46 [IST]
English summary
Kia achieves 5 lakh sales milestones in india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+