ಅತ್ಯುತ್ತಮ 7 ಸೀಟರ್ ಸೌಲಭ್ಯ ಹೊಂದಿರುವ ಕಿಯಾ ಕಾರೆನ್ಸ್ ಎಸ್‌ಯುವಿ ರಿವ್ಯೂ ವಿಡಿಯೋ

ಕಿಯಾ ಇಂಡಿಯಾ ಕಂಪನಿಯು ತನ್ನ ಹೊಸ ಎಸ್‌ಯುವಿ ಮಾದರಿಯಾದ ಕಾರೆನ್ಸ್ ಆವೃತ್ತಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರಿನ ಕಾರ್ಯಕ್ಷಮತೆ ಪರೀಕ್ಷೆಗಾಗಿ ಫಸ್ಟ್ ಡ್ರೈವ್ ಆಯೋಜಿಸಿತ್ತು. ಫಸ್ಟ್ ಡ್ರೈವ್‌ಗೆ ಡ್ರೈವ್‌ಸ್ಪಾರ್ಕ್ ತಂಡವನ್ನು ಸಹ ಆಹ್ವಾನಿಸಿದ್ದ ಕಿಯಾ ಕಂಪನಿಯು ಹೊಸ ಕಾರಿನ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಹೊಸ ಕಿಯಾ ಕಾರೆನ್ಸ್ ಕಾರು ಮಾದರಿಯು ಒಟ್ಟು ಐದು ವೆರಿಯೆಂಟ್ ಮತ್ತು ಮೂರು ಎಂಜಿನ್ ಆಯ್ಕೆಗಳಲ್ಲಿ ಬಿಡುಗಡೆಗೊಳ್ಳುತ್ತಿದ್ದು, ಹೊಸ ಕಾರು ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿಯಾಗಲಿದೆ. ಕಾರೆನ್ಸ್ ಕಾರು ಎಸ್‌ಯುವಿ ಮತ್ತು ಎಂಪಿವಿ ಕಾರುಗಳಿಗೆ ಪೈಪೋಟಿಯಾಗಿ ನಿರ್ಮಾಣಗೊಂಡಿದ್ದು, ಹೊಸ ಕಾರು 4,540 ಎಂಎಂ ಉದ್ದ, 1,800 ಎಂಎಂ ಅಗಲ, 1,708 ಎತ್ತರ ಮತ್ತು 2,780 ಎಂಎಂ ವ್ಹೀಲ್ ಬೆಸ್ ಹೊಂದಿದೆ.

ಹೊಸ ಕಾರು ಹಲವಾರು ಪ್ರಯೋಗಾತ್ಮಕ ವಿಧಾನಗಳನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಹೆಚ್ಚು ಪ್ರೀಮಿಯಂ ಮಾದರಿಯಾಗಿರದೆ ಕುಟುಂಬ ಸಮೇತರಾಗಿ ಪ್ರಯಾಣಿಸಲು ಸಹಕಾರಿಯಾಗುವಂತೆ ಅವಶ್ಯಕ ಫೀಚರ್ಸ್‌ಗಳನ್ನು ಜೋಡಣೆ ಮಾಡಿದೆ.

ಕಾರೆನ್ಸ್ ಮಾದರಿಯನ್ನು ಕಿಯಾ ಕಂಪನಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಮೂರನೇ ಸಾಲಿನ ಆಸನಗಳೊಂದಿಗೆ 6 ಮತ್ತು 7 ಆಸನಗಳ ಸೌಲಭ್ಯವನ್ನು ಜೋಡಣೆ ಮಾಡಲಿದ್ದು, ಮೂರನೇ ಸಾಲಿನಲ್ಲಿರುವ ಆಸನಗಳು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ಒಳಾಂಗಣದೊಂದಿಗೆ ವಯಸ್ಕ ಪ್ರಯಾಣಿಕರೂ ಸಹ ಆರಾಮವಾಗಿ ಕುಳಿತುಕೊಳ್ಳಬಹುದಾಗಿದೆ.

ಮೂರನೇ ಸಾಲಿನಲ್ಲೂ ಪ್ರಯಾಣಿಕರಿಗೆ ಓವರ್‌ಹೆಡ್ ಎಸಿ ವೆಂಟ್‌ಗಳನ್ನು ಹೊಂದುವ ಹೆಚ್ಚುವರಿ ಅನುಕೂಲವಿದ್ದು, ಟೈಪ್-ಸಿ ಸ್ಮಾರ್ಟ್‌ಫೋನ್ ಚಾರ್ಜಿಂಗ್ ಸ್ಲಾಟ್ ಮತ್ತು ಫೋನ್/ಟ್ಯಾಬ್ಲೆಟ್ ಹೋಲ್ಡರ್ ಜೊತೆಗೆ ಕಪ್ ಹೋಲ್ಡರ್ ಸೌಲಭ್ಯಗಳಿವೆ.

ಅತ್ಯುತ್ತಮ 7 ಸೀಟರ್ ಸೌಲಭ್ಯ ಹೊಂದಿರುವ ಕಿಯಾ ಕಾರೆನ್ಸ್ ಎಸ್‌ಯುವಿ ರಿವ್ಯೂ ವಿಡಿಯೋ

ಕಾರೆನ್ಸ್ ಕಾರು ಮಾದರಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯಲ್ಲಿರುವಂತೆ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ. ಎಂಜಿನ್ ಆಯ್ಕೆಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಶ್ರೇಣಿಯಲ್ಲಿರುವ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರುವ ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಮತ್ತು ಎಂಪಿವಿ ಕಾರು ಮಾದರಿಗಳಾದ ಎರ್ಟಿಗಾ ಹಾಗೂ ಇನೋವಾ ಕ್ರಿಸ್ಟಾ ಆರಂಭಿಕ ಮಾದರಿಗಳಿಗೂ ಇದು ಪೈಪೋಟಿ ನೀಡಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷದ ತನಕ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Kia carens kannada review video 3rd row seat space features
Story first published: Saturday, January 29, 2022, 19:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X