ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಕಿಯಾ ಇಂಡಿಯಾ ಕಂಪನಿಯು ಹೊಸ ಕಾರೆನ್ಸ್ ಎಂಯುವಿ ಮೂಲಕ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಹೊಸ ಕಾರು ಆಕರ್ಷಕ ಬೆಲೆ ಮತ್ತು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 90 ಸಾವಿರಕ್ಕೂ ಗ್ರಾಹಕರಿಂದ ಬುಕಿಂಗ್ ಪಡೆದುಕೊಂಡಿದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಕಾರೆನ್ಸ್ ಕಾರಿನ ಬುಕ್ಕಿಂಗ್ ಪ್ರಮಾಣವನ್ನು ಆಧರಿಸಿ ವಿತರಣೆಯನ್ನು ತೀವ್ರಗೊಳಿಸಿರುವ ಕಿಯಾ ಕಂಪನಿಯು ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ವಿತರಣೆ ಮಾಡುತ್ತಿದ್ದು, ಹೊಸ ಕಾರು ಎಂಪಿವಿ ವಿಭಾಗದಲ್ಲಿ ಹಲವು ವರ್ಷಗಳಿಂದ ತನ್ನದೇ ಆದ ಜನಪ್ರಿಯತೆ ಕಾಯ್ದುಕೊಂಡಿರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಮಾದರಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಎಂಪಿವಿ ಕಾರುಗಳ ವಿಭಾಗದಲ್ಲಿ ಬಜೆಟ್ ಕಾರು ಮಾದರಿಯಾಗಿರುವ ಮಾರುತಿ ಸುಜುಕಿ ಎರ್ಟಿಗಾ ಮೊದಲ ಸ್ಥಾನದಲ್ಲಿದ್ದರೂ ಟೊಯೊಟಾ ಇನೋವಾ ಕ್ರಿಸ್ಟಾ ಮಾದರಿಗೆ ಅದು ನೇರ ಪೈಪೋಟಿಯಾಗಿರಲಿಲ್ಲ. ಆದರೆ ಹೊಸದಾಗಿ ಬಿಡುಗಡೆಯಾಗಿರುವ ಕಿಯಾ ಕಾರೆನ್ಸ್ ಮಾದರಿಯು ಇನೋವಾ ಕ್ರಿಸ್ಟಾ ಮಾದರಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಮಾರಾಟದಲ್ಲಿ ಇದೀಗ ಇನೋವಾ ಕ್ರಿಸ್ಟಾ ಹಿಂದಿಕ್ಕಿದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಕಳೆದ ಫೆಬ್ರವರಿ ಮಧ್ಯಂತರದಲ್ಲಿ ಬಿಡುಗಡೆಯಾಗಿದ್ದ ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಭರ್ಜರಿ ಮುಂಚೂಣಿ ಸಾಧಿಸುತ್ತಿದ್ದು, ಈ ವರ್ಷದ ಮೊದಲಾರ್ಧದಲ್ಲಿ ಬರೋಬ್ಬರಿ 30,953 ಯುನಿಟ್ ಮಾರಾಟದೊಂದಿಗೆ ಇನೋವಾ ಕ್ರಿಸ್ಟಾ ಹಿಂದಿಕ್ಕಿದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಜನವರಿಯಿಂದ ಜೂನ್ ಕೊನೆಯಲ್ಲಿ ಟೊಯೊಟಾ ಕಂಪನಿಯು 30,551 ಯುನಿಟ್ ಇನೋವಾ ಕ್ರಿಸ್ಟಾ ಮಾರಾಟ ಮಾಡಿದ್ದು, ಫೆಬ್ರವರಿಯಿಂದ ಮಾರಾಟ ಆರಂಭಗೊಂಡಿದ್ದ ಕಿಯಾ ಕಾರೆನ್ಸ್ ಐದು ತಿಂಗಳ ಅವಧಿಯಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಂಡಿದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆಯೇ ಹೊಸ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್ ನೀಡುತ್ತದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 15.7 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.2 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 16.5 ಕಿ.ಮೀ ಮೈಲೇಜ್ ನೀಡುತ್ತದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯಲ್ಲಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 21.3 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.3 ಕಿ.ಮೀ ಮೈಲೇಜ್ ನೀಡಲಿದೆ. ಹೊಸ ಕಾರು ಸೆಲ್ಟೊಸ್ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಎಂಪಿವಿ ವಿಭಾಗದಲ್ಲಿ ಇನೋವಾ ಕ್ರಿಸ್ಟಾ ಕಾರಿಗೆ ಭರ್ಜರಿ ಪೈಪೋಟಿ ನೀಡಿದ ಕಿಯಾ ಕಾರೆನ್ಸ್

ಇನ್ನು ಹೊಸ ಕಾರು ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.60 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.70 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Kia carens muv beats toyota innova crysta sales
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X