Just In
Don't Miss!
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಕಾರೆನ್ಸ್ ಎಂಯುವಿ ಕಾರು ವಿತರಣೆಗೆ ಅಧಿಕೃತ ಚಾಲನೆ ನೀಡಿದ ಕಿಯಾ ಇಂಡಿಯಾ
ಕಿಯಾ ಇಂಡಿಯಾ ಕಂಪನಿಯು ತನ್ನ ಹೊಸ ಕಾರೆನ್ಸ್ ಎಂಯುವಿ ಬಿಡುಗಡೆಯ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಹೊಸ ಕಾರಿನ ವಿತರಣೆಗೆ ಇದೀಗ ಅಧಿಕೃತವಾಗಿ ಚಾಲನೆ ನೀಡಿದೆ.

ಹೊಸ ಕಾರೆನ್ಸ್ ಎಂಯುವಿ ಮಾದರಿಯು ಇದುವರೆಗೆ ಸುಮಾರು 20 ಸಾವಿರಕ್ಕೂ ಹೆಚ್ಚು ಗ್ರಾಹಕರಿಂದ ಬುಕ್ಕಿಂಗ್ ಪಡೆದುಕೊಂಡಿದ್ದು, ಬುಕ್ಕಿಂಗ್ ಆಧರಿಸಿ ಕಂಪನಿಯು ದೇಶಾದ್ಯಂತ ವಿಸ್ತರಣೆಗೊಂಡಿರುವ ತನ್ನ ಪ್ರಮುಖ ಡೀಲರ್ಸ್‌ಗಳಲ್ಲಿ ಹೊಸ ಕಾರಿನ ವಿತರಣೆಯನ್ನು ಆರಂಭಿಸಿದೆ.

ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ವಿವಿಧ ಎಂಜಿನ್ ಆಯ್ಕೆ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದ್ದು, 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರಿನ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷಕ್ಕೆ ಬೆಲೆ ನಿಗದಿಪಡಿಸಲಾಗಿದೆ.

ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆಯೇ ಹೊಸ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ.

ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಐಷಾರಾಮಿ ಫೀಚರ್ಸ್ ಮತ್ತು ವಿಶಾಲವಾದ ಒಳಾಂಗಣವನ್ನು ಹೊಂದಿರಲಿದೆ.

ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ಹೊಸ ಕಾರಿನಲ್ಲಿ ಕಂಪನಿಯು ಟೈಗರ್ ನೋಸ್ ಹೊಂದಿರುವ ಸಿಗ್ನಿಚೆರ್ ಗ್ರಿಲ್ ಜೊತೆ ಏರ್ ಡ್ಯಾಮ್, ವಿಭಜಿತವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ವೈ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಮತ್ತು ಬಲಿಷ್ಠವಾಗಿರುವ ಫ್ರಂಟ್ ಬಂಪರ್ ಜೋಡಿಸಲಾಗಿದೆ.

ಹೊಸ ಕಾರಿನಲ್ಲಿ ಫ್ರಂಟ್ ಹೆಡ್‌ಲ್ಯಾಂಪ್‌ಗೆ ಹೊಂದಿಕೊಂಡಂತೆ ನೀಡಲಾಗಿರುವ ಕ್ರಿಸ್ ಲೈನ್ ಕಾರನ್ನು ಸುತ್ತುವರಿದಿರುವುದು ಕೂಡಾ ಪ್ರೀಮಿಯಂ ಲುಕ್ ಹೆಚ್ಚಿಸಲು ಸಹಕಾರಿಯಾಗಿದ್ದು, ಬಾಡಿ ಕ್ಲ್ಯಾಡಿಂಗ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ವ್ಹೀಲ್ ಆರ್ಚ್, ಎಲ್ಇಡಿ ಟೈಲ್ ಲ್ಯಾಂಪ್, ಸ್ಟೈಲಿಶ್ ರಿಯರ್ ಬಂಪರ್, ಫ್ಲಕ್ಸ್ ಸಿಲ್ವರ್ ಇನ್ಸರ್ಟ್ ಜೊತೆ ಆಕರ್ಷಕವಾದ ರಿಯರ್ ಸ್ಪಾಯ್ಲರ್ ನೀಡಲಾಗಿದೆ.

ಕಿಯಾ ಕಂಪನಿಯು ಹೊಸ ಕಾರಿನಲ್ಲಿ ಒಂದೇ ಸೂರಿನಡಿ ಹತ್ತಾರು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸುವ ಯುವಿಓ ಕಾರ್ ಕನೆಕ್ಟ್ ಫೀಚರ್ಸ್ ಸಹ ನೀಡಿದ್ದು, ವೆಂಟಿಲೆಟೆಡ್ ಸೀಟುಗಳು, 64 ಆಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಯಾಕ್ ಟೇಬಲ್, ಕಪ್ ಹೋಲ್ಡರ್ಸ್, ಏರ್ ಪ್ಯೂರಿಫೈಯರ್ ಸೌಲಭ್ಯಗಳಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಇನ್ನು ಹೊಸ ಕಾರು ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದ್ದು, ಆಕರ್ಷಕ ಬೆಲೆಯೊಂದಿಗೆ ಹೊಸ ಕಾರು ಮಾರುತಿ ಎರ್ಟಿಗಾ, ಮಹೀಂದ್ರಾ ಮರಾಜೋ, ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಮತ್ತು ಇನೋವಾ ಕ್ರಿಸ್ಟಾ ಆರಂಭಿಕ ಮಾದರಿಗಳಿಗೂ ಇದು ಪೈಪೋಟಿ ನೀಡಲಿದೆ.