ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಕಿಯಾ ಇಂಡಿಯಾ(Kia India) ಕಂಪನಿಯು ಹೊಸ ಕಾರೆನ್ಸ್ ಆವೃತ್ತಿಯ ಮೂಲಕ ಎಂಪಿವಿ ಕಾರು ಖರೀದಿಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಗೊಳಿಸಿದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆಯೊಂದಿಗೆ 50 ಸಾವಿರಕ್ಕೂ ಗ್ರಾಹಕರಿಂದ ಬುಕಿಂಗ್ ಪಡೆದುಕೊಂಡಿದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಹೊಸ ಕಾರೆನ್ಸ್ ಕಾರು ಮಾದರಿಗೆ ಉತ್ತಮ ಬೇಡಿಕೆ ದಾಖಲಾದ ಬೆನ್ನಲ್ಲೇ ಕಂಪನಿಯು ಹೊಸ ಕಾರಿನ ದರ ಪರಿಷ್ಕಣೆ ಮಾಡಿದ್ದು, ಮೊದಲ 50 ಸಾವಿರ ಬುಕಿಂಗ್ ದಾಖಲಿಸಿರುವ ಗ್ರಾಹಕರಿಗೆ ಈ ಹಿಂದಿನ ಬೆಲೆಯಲ್ಲಿ ವಿತರಣೆ ಮಾಡುವುದಾಗಿ ಮತ್ತು ಹೊಸದಾಗಿ ಬುಕಿಂಗ್ ದಾಖಲಿಸುವ ಗ್ರಾಹಕರಿಗೆ ಅನ್ವಯಿಸುವಂತೆ ದರ ಹೆಚ್ಚಳ ಮಾಡಿದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಕಳೆದ ಫೆಬ್ರವರಿ ಮಧ್ಯಂತರದಲ್ಲಿ ಬಿಡುಗಡೆಯಾಗಿದ್ದ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷ ಬೆಲೆ ಹೊಂದಿತ್ತು. ಇದೀಗ ಹೊಸ ದರ ಪಟ್ಟಿಯಲ್ಲಿ ಕಾರೆನ್ಸ್ ಬೆಲೆ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 20 ಸಾವಿರದಿಂದ ರೂ. 70 ಸಾವಿರ ತನಕ ದರ ಹೆಚ್ಚಿಸಿದ್ದು, ಡೀಸೆಲ್ ಮಾದರಿಗಳ ಬೆಲೆ ಸಾಕಷ್ಟು ಹೆಚ್ಚಳವಾಗಿದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಬೆಲೆ ಹೆಚ್ಚಳ ನಂತರವೂ ಇದು ಈ ವಿಭಾಗದ ಕಾರುಗಳಲ್ಲೇ ಹೆಚ್ಚಿನ ತಾಂತ್ರಿಕ ಸೌಲಭ್ಯಗಳೊಂದಿಗೆ ಅತ್ಯುತ್ತಮ ಬೆಲೆ ಹೊಂದಿರುವ ಕಾರು ಮಾದರಿಗಳಲ್ಲಿ ಇದು ಕೂಡಾ ಒಂದಾಗಿದ್ದು, ಹೊಸ ಕಾರೆನ್ಸ್ ಕಾರಿನಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳಿವೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ವಿವಿಧ ಎಂಜಿನ್ ಆಯ್ಕೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್‌ ಹೊಂದಿರುವ ಹೊಸ ಕಾರು ಅತಿ ಹೆಚ್ಚು ಮೈಲೇಜ್ ಪ್ರೇರಿತ ಎಂಪಿವಿ ಕಾರು ಮಾದರಿಯಾಗಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಮಾದರಿಯಲ್ಲಿ ಪೆಟ್ರೋಲ್ ಮಾದರಿಗಳಿಂತಲೂ ಡೀಸೆಲ್ ಮಾದರಿಗಳಿಗೆ ಹೆಚ್ಚು ಬೇಡಿಕೆಯಿದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಕಾರೆನ್ಸ್ ಕಾರಿನ ಬುಕ್ಕಿಂಗ್ ಪ್ರಮಾಣವನ್ನು ಆಧರಿಸಿ ವಿತರಣೆಯನ್ನು ತೀವ್ರಗೊಳಿಸಿರುವ ಕಿಯಾ ಕಂಪನಿಯು ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ಮಾದರಿಗಳಿಗೆ ನಿಗದಿತ ಕಾಯುವಿಕೆ ಅವಧಿಯನ್ನು ನಿಗದಿಪಡಿಸಿದ್ದು, ಕಾರೆನ್ಸ್ ಕಾರು ಖರೀದಿಗೆ ಹೊಸದಾಗಿ ಬುಕಿಂಗ್ ಸಲ್ಲಿಸುವ ಗ್ರಾಹಕರು ಕನಿಷ್ಠ 4 ತಿಂಗಳಿನಿಂದ 10 ತಿಂಗಳ ಕಾಲ ಕಾಯಬೇಕಾಗುತ್ತದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಹೊಸ ಕಾರಿನಲ್ಲಿ ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, 1.5 ಲೀಟರ್ ಡೀಸೆಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 21.3 ಕಿ.ಮೀ ಮೈಲೇಜ್ ನೀಡುತ್ತದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಹೊಸ ಕಾರಿನಲ್ಲಿ ಕಂಪನಿಯು ಟೈಗರ್ ನೋಸ್ ಹೊಂದಿರುವ ಸಿಗ್ನಿಚೆರ್ ಗ್ರಿಲ್ ಜೊತೆ ಏರ್ ಡ್ಯಾಮ್, ವಿಭಜಿತವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ವೈ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಮತ್ತು ಬಲಿಷ್ಠವಾಗಿರುವ ಫ್ರಂಟ್ ಬಂಪರ್ ಜೋಡಿಸಲಾಗಿದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಹೊಸ ಕಾರಿನಲ್ಲಿ ಫ್ರಂಟ್ ಹೆಡ್‌ಲ್ಯಾಂಪ್‌ಗೆ ಹೊಂದಿಕೊಂಡಂತೆ ನೀಡಲಾಗಿರುವ ಕ್ರಿಸ್ ಲೈನ್ ಕಾರನ್ನು ಸುತ್ತುವರಿದಿರುವುದು ಕೂಡಾ ಪ್ರೀಮಿಯಂ ಲುಕ್ ಹೆಚ್ಚಿಸಲು ಸಹಕಾರಿಯಾಗಿದ್ದು, ಬಾಡಿ ಕ್ಲ್ಯಾಡಿಂಗ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ವ್ಹೀಲ್ ಆರ್ಚ್, ಎಲ್ಇಡಿ ಟೈಲ್ ಲ್ಯಾಂಪ್, ಸ್ಟೈಲಿಶ್ ರಿಯರ್ ಬಂಪರ್, ಫ್ಲಕ್ಸ್ ಸಿಲ್ವರ್ ಇನ್ಸರ್ಟ್ ಜೊತೆ ಆಕರ್ಷಕವಾದ ರಿಯರ್ ಸ್ಪಾಯ್ಲರ್ ನೀಡಲಾಗಿದೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಕಿಯಾ ಕಂಪನಿಯು ಹೊಸ ಕಾರಿನಲ್ಲಿ ಒಂದೇ ಸೂರಿನಡಿ ಹತ್ತಾರು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸುವ ಯುವಿಓ ಕಾರ್ ಕನೆಕ್ಟ್ ಫೀಚರ್ಸ್ ಸಹ ನೀಡಿದ್ದು, ವೆಂಟಿಲೆಟೆಡ್ ಸೀಟುಗಳು, 64 ಆಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಯಾಕ್ ಟೇಬಲ್, ಕಪ್ ಹೋಲ್ಡರ್ಸ್, ಏರ್ ಪ್ಯೂರಿಫೈಯರ್ ಸೌಲಭ್ಯಗಳಿವೆ.

ಬೇಡಿಕೆ ಹೆಚ್ಚಳ: ಹೊಸ ಕಾರೆನ್ಸ್ ಎಂಪಿವಿ ಕಾರಿನ ದರ ಹೆಚ್ಚಿಸಿದ ಕಿಯಾ

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

Most Read Articles

Kannada
English summary
Kia carens muv first prices hiked up to rs 70 000 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X