Just In
Don't Miss!
- News
ಯುಎಪಿಎ ಅಡಿ ಯಾವುದೇ ವಕ್ತಿಯನ್ನು ವಿಚಾರಣೆಗೊಳಪಡಿಸಬಹುದು-ಹೈಕೋರ್ಟ್ ಆದೇಶ
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Sports
ICC Womens ODI Ranking: ಅಗ್ರ 10ರೊಳಗೆ ಸ್ಮೃತಿ ಮಂಧಾನ, 11ನೇ ಸ್ಥಾನದಲ್ಲಿ ರಾಜೇಶ್ವರಿ
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸಾಧಾರಣ ಪ್ರದರ್ಶನ ತೋರಿದ ಕಿಯಾ ಕಾರೆನ್ಸ್ ಎಂಯುವಿ
ಕಿಯಾ ಕಂಪನಿಯು ಭಾರತದಲ್ಲಿ ತನ್ನ ಹೊಸ ಕಾರೆನ್ಸ್ ಎಂಯುವಿ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಯು ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ. ಆದರೆ ಹೊಸ ಕಾರಿನಲ್ಲಿ ಗರಿಷ್ಠ ಸುರಕ್ಷಾ ಫೀಚರ್ಸ್ ಹೊರತಾಗಿಯೂ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸಾಧಾರಣ ಪ್ರದರ್ಶನ ತೋರಿದ್ದು, ಹೊಸ ಕಾರು ಖರೀದಿದಾರರಿಗೆ ಇದು ಅಸಮಾಧಾನ ಉಂಟು ಮಾಡಿದೆ.

ಹೊಸ ಕಾರೆನ್ಸ್ ಎಂಯುವಿ ಮಾದರಿಯ ಮೂಲಕ ಕಿಯಾ ಕಂಪನಿಯು ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದು, ಹೊಸ ಕಾರು ಆಕರ್ಷಕ ಬೆಲೆ ಮತ್ತು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 80 ಸಾವಿರಕ್ಕೂ ಗ್ರಾಹಕರಿಂದ ಬುಕಿಂಗ್ ಪಡೆದುಕೊಂಡಿದೆ. ಕಂಪನಿಯು ಈಗಾಗಲೇ 20 ಸಾವಿರಕ್ಕೂ ಹೆಚ್ಚು ಯುನಿಟ್ ವಿತರಣೆ ಮಾಡಿದ್ದು, ಇನ್ನುಳಿದ ಕಾರುಗಳ ವಿತರಣೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಉತ್ಪಾದನೆಯನ್ನು ಹೆಚ್ಚಿಸಲಾಗಿದೆ.

ಹೊಸ ಕಾರು ಭರ್ಜರಿ ಬೇಡಿಕೆಯ ನಡುವೆ ಇದೀಗ ಗ್ಲೋಬಲ್ ಎನ್‌ಸಿಎಪಿಯು ಸುರಕ್ಷತಾ ಫಲಿತಾಂಶವನ್ನು ಪ್ರಕಟಿಸಿದ್ದು, ಹೊಸ ಕಾರು ಗರಿಷ್ಠ ಸುರಕ್ಷಾ ಫೀಚರ್ಸ್‌ಗಳ ನಡುವೆಯೂ ಗರಿಷ್ಠ 5 ಸ್ಟಾರ್ ರೇಟಿಂಗ್ಸ್‌ನಲ್ಲಿ 3 ಸ್ಟಾರ್ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಸಾಧಾರಣ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದು ಪರಿಗಣಿಸಲಾಗುತ್ತದೆ. ಹಾಗೆಯೇ 4 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡ ಉತ್ತಮ, 3 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಲ್ಲಿ ಸಾಧರಣ ಮತ್ತು 2, 1 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡರೆ ಅಂತಹ ಕಾರುಗಳನ್ನು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಇದೀಗ ಕಿಯಾ ಕಾರೆನ್ಸ್ ಕಾರು ಮಾದರಿಯು ಗ್ಲೋಬಲ್ ಎನ್‌ಸಿಎಪಿ ನಿಗದಿಪಡಿಸಿರುವ ಕನಿಷ್ಠ 3 ಸ್ಟಾರ್ ರೇಟಿಂಗ್ ಮೂಲಕ ಸಾಧಾರಣ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಗರಿಷ್ಠ ಸುರಕ್ಷಾ ಫೀಚರ್ಸ್ ಹೊರತಾಗಿ ಹೊಸ ಕಾರು ಮಾದರಿಯು ಸಾಧಾರಣ ಮಾದರಿಯಾಗಿ ಹೊರಹೊಮ್ಮಿರುವುದು ಸಂಭಾವ್ಯ ಕಾರು ಖರೀದಿ ಗ್ರಾಹಕರಲ್ಲಿ ಅಸಮಾಧಾನ ಉಂಟುಮಾಡಿದೆ.

ಇತ್ತೀಚೆಗೆ ಭಾರತದಲ್ಲಿ ಹೊಸದಾಗಿ ಬಿಡುಗಡೆಯಾಗಿರುವ ಬಹುತೇಕ ಹೊಸ ಕಾರು ಮಾದರಿಗಳು ಉತ್ತಮ ಸುರಕ್ಷಾ ಫೀಚರ್ಸ್‌ಗಳೊಂದಿಗೆ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್, 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುದುಕೊಳ್ಳುತ್ತಿದ್ದು, ಇದೀಗ ನ್ಯೂ ಜನರೇಷನ್ ಫೀಚರ್ಸ್‌ಗಳಿದ್ದರೂ ಕಾರೆನ್ಸ್ ಮಾದರಿಯು ಕೇವಲ 3 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ಸಾಧಾರಣ ಕಾರು ಮಾದರಿಯಾಗಿ ಗುರುತಿಸಿಕೊಂಡಿದೆ.

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ.

ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳನ್ನು ನೀಡುತ್ತಿದೆ.

ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆಯೇ ಹೊಸ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ.

ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್ ನೀಡುತ್ತದೆ.

ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 15.7 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.2 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 16.5 ಕಿ.ಮೀ ಮೈಲೇಜ್ ನೀಡುತ್ತದೆ.

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯಲ್ಲಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 21.3 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.3 ಕಿ.ಮೀ ಮೈಲೇಜ್ ನೀಡಲಿದೆ. ಹೊಸ ಕಾರು ಸೆಲ್ಟೊಸ್ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯುತ್ತಿದೆ.

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಬೆಲೆ ವಿಚಾರವಾಗಿ ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ಕಳೆದ ಫೆಬ್ರವರಿ ಮಧ್ಯಂತರದಲ್ಲಿ ಬಿಡುಗಡೆಯಾಗಿದ್ದ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.60 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.70 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಯೂ ಬೆಲೆಯಲ್ಲಿ ಗಮನಸೆಳೆದರೂ ಸುರಕ್ಷಾ ಟೆಸ್ಟಿಂಗ್ ವಿಚಾರವಾಗಿ ಮುಂಬರುವ ದಿನಗಳಲ್ಲಿನ ಬೇಡಿಕೆಯಲ್ಲಿ ತುಸು ಪರಿಣಾಮ ಬೀರಬಹುದಾಗಿದೆ.