ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಕಿಯಾ ಇಂಡಿಯಾ(Kia India) ಕಂಪನಿಯು ತನ್ನ ಬಹುನೀರಿಕ್ಷಿತ ಕಾರೆನ್ಸ್ ಎಂಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.8.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷ ಬೆಲೆ ಹೊಂದಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಭಾರತದಲ್ಲಿ ಕಿಯಾ ಕಂಪನಿಯು ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ, ಕಾರ್ನಿವಾಲ್ ಲಗ್ಷುರಿ ಎಂಪಿವಿ ಮತ್ತು ಸೊನೆಟ್ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ನಂತರ ನಾಲ್ಕನೇ ಕಾರು ಆವೃತ್ತಿಯಾಗಿ ಕಾರೆನ್ಸ್ ಎಂಯುವಿ(ಮಲ್ಟಿ ಯುಟಿಲಿಟಿ ವೆಹಿಕಲ್) ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರೆನ್ಸ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ವಿವಿಧ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಹೊಸ ಕಾರೆನ್ಸ್ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರಲಿದ್ದು, ಹೊಸ ಕಾರು ಮೂರು ಸಾಲಿನ ಆಸನ ಸೌಲಭ್ಯಗಳನ್ನು ಹೊಂದಿರುವ ಮಧ್ಯಮ ಕ್ರಮಾಂಕದ ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರಿನ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷಕ್ಕೆ ಬೆಲೆ ನಿಗದಿಪಡಿಸಲಾಗಿದೆ.

ವೆರಿಯೆಂಟ್‌ಗಳು ಪೆಟ್ರೋಲ್ ಟರ್ಬೊ ಪೆಟ್ರೋಲ್ ಡೀಸೆಲ್
ಸ್ಮಾರ್ಟ್‌ಟ್ರಿಮ್ 1.5 ಲೀಟರ್ ಸ್ಮಾರ್ಟ್‌ಟ್ರಿಮ್ 1.4 ಲೀಟರ್ ಸಿಆರ್‌ಡಿಐ ವಿಜಿಟಿ 1.5 ಲೀಟರ್
ಪ್ರೀಮಿಯಂ ರೂ. 8.99 ಲಕ್ಷ ರೂ. 10.99 ಲಕ್ಷ ರೂ. 10.99 ಲಕ್ಷ
ಪ್ರೆಸ್ಟಿಜ್ ರೂ. 9.99 ಲಕ್ಷ ರೂ. 11.99 ಲಕ್ಷ ರೂ. 11.99 ಲಕ್ಷ
ಪ್ರೆಸ್ಟಿಜ್ ಪ್ಲಸ್ 6ಎಂಟಿ - ರೂ. 13.49 ಲಕ್ಷ

7ಡಿಸಿಟಿ - ರೂ. 14.59 ಲಕ್ಷ

ರೂ. 13.49 ಲಕ್ಷ
ಲಗ್ಷುರಿ ರೂ. 14.99 ಲಕ್ಷ ರೂ. 14.99 ಲಕ್ಷ

ಲಗ್ಷುರಿ ಪ್ಲಸ್

(6/7 ಸೀಟರ್)

6ಎಂಟಿ - ರೂ. 16.19 ಲಕ್ಷ

7ಡಿಸಿಟಿ - ರೂ. 16.99 ಲಕ್ಷ

6ಎಂಟಿ - ರೂ. 16.19 ಲಕ್ಷ

6ಎಟಿ - ರೂ. 16.99 ಲಕ್ಷ

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಹೊಸ ಕಾರೆನ್ಸ್ ಕಾರಿನಲ್ಲಿ ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಿಸಲಾಗಿದ್ದು, ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಕಾರೆನ್ಸ್ ಕಾರಿನ 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಹಾಗೆಯೇ 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಐಷಾರಾಮಿ ಫೀಚರ್ಸ್ ಮತ್ತು ವಿಶಾಲವಾದ ಒಳಾಂಗಣವನ್ನು ಹೊಂದಿರಲಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಹೊಸ ಕಾರು 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಮೂರನೇ ಸಾಲಿನ ಆಸನವು ಇತರೆ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶ ಪಡೆದುಕೊಂಡಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವ ಗ್ರಾಹಕರ ಆಯ್ಕೆಗೆ ಪ್ರಮುಖ ಅಂಶವಾಗಲಿದ್ದು, ಹೊಸ ಕಾರಿನಲ್ಲಿ ಕಂಪನಿಯು ಟೈಗರ್ ನೋಸ್ ಹೊಂದಿರುವ ಸಿಗ್ನಿಚೆರ್ ಗ್ರಿಲ್ ಜೊತೆ ಏರ್ ಡ್ಯಾಮ್, ವಿಭಜಿತವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ವೈ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಮತ್ತು ಬಲಿಷ್ಠವಾಗಿರುವ ಫ್ರಂಟ್ ಬಂಪರ್ ಜೋಡಿಸಲಾಗಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಹೊಸ ಕಾರಿನಲ್ಲಿ ಫ್ರಂಟ್ ಹೆಡ್‌ಲ್ಯಾಂಪ್‌ಗೆ ಹೊಂದಿಕೊಂಡಂತೆ ನೀಡಲಾಗಿರುವ ಕ್ರಿಸ್ ಲೈನ್ ಕಾರನ್ನು ಸುತ್ತುವರಿದಿರುವುದು ಕೂಡಾ ಪ್ರೀಮಿಯಂ ಲುಕ್ ಹೆಚ್ಚಿಸಲು ಸಹಕಾರಿಯಾಗಿದ್ದು, ಬಾಡಿ ಕ್ಲ್ಯಾಡಿಂಗ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ವ್ಹೀಲ್ ಆರ್ಚ್, ಎಲ್ಇಡಿ ಟೈಲ್ ಲ್ಯಾಂಪ್, ಸ್ಟೈಲಿಶ್ ರಿಯರ್ ಬಂಪರ್, ಫ್ಲಕ್ಸ್ ಸಿಲ್ವರ್ ಇನ್ಸರ್ಟ್ ಜೊತೆ ಆಕರ್ಷಕವಾದ ರಿಯರ್ ಸ್ಪಾಯ್ಲರ್ ನೀಡಲಾಗಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಕಿಯಾ ಕಂಪನಿಯು ಹೊಸ ಕಾರಿನಲ್ಲಿ ಒಂದೇ ಸೂರಿನಡಿ ಹತ್ತಾರು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸುವ ಯುವಿಓ ಕಾರ್ ಕನೆಕ್ಟ್ ಫೀಚರ್ಸ್ ಸಹ ನೀಡಿದ್ದು, ವೆಂಟಿಲೆಟೆಡ್ ಸೀಟುಗಳು, 64 ಆಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಯಾಕ್ ಟೇಬಲ್, ಕಪ್ ಹೋಲ್ಡರ್ಸ್, ಏರ್ ಪ್ಯೂರಿಫೈಯರ್ ಸೌಲಭ್ಯಗಳಿವೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಖರೀದಿಗೆ ಲಭ್ಯವಿರುವ ಬಣ್ಣಗಳು

ಹೊಸ ಕಾರು ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ಕಿಯಾ ಕಾರೆನ್ಸ್ ಎಂಯುವಿ ಬಿಡುಗಡೆ

ಆಕರ್ಷಕ ಬೆಲೆಯೊಂದಿಗೆ ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಾದ ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಮತ್ತು ಎಂಪಿವಿ ಕಾರು ಮಾದರಿಗಳಾದ ಎರ್ಟಿಗಾ ಹಾಗೂ ಇನೋವಾ ಕ್ರಿಸ್ಟಾ ಆರಂಭಿಕ ಮಾದರಿಗಳಿಗೂ ಇದು ಭರ್ಜರಿ ಪೈಪೋಟಿ ನೀಡಲಿದೆ.

Article Published On: Tuesday, February 15, 2022, 12:47 [IST]
English summary
Kia carens muv launched in india price variants engine details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+