ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಕಿಯಾ ಇಂಡಿಯಾ ಕಂಪನಿಯು ಹೊಸ ಕಾರೆನ್ಸ್ ಎಂಯುವಿ ಮಾದರಿಯನ್ನು ಬಿಡುಗಡೆಗೊಳಿಸಿ ವಿತರಣೆ ಆರಂಭಿಸಿದ್ದು, ಹೊಸ ಕಾರು ಆಕರ್ಷಕ ಬೆಲೆ ಮತ್ತು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 50 ಸಾವಿರ ಗ್ರಾಹಕರಿಂದ ಬುಕ್ಕಿಂಗ್ ಪಡೆದುಕೊಂಡಿದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಕಾರೆನ್ಸ್ ಕಾರಿನ ಬುಕ್ಕಿಂಗ್ ಪ್ರಮಾಣವನ್ನು ಆಧರಿಸಿ ವಿತರಣೆಯನ್ನು ತೀವ್ರಗೊಳಿಸಿರುವ ಕಿಯಾ ಕಂಪನಿಯು ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ಮಾದರಿಗಳಿಗೆ ನಿಗದಿತ ಕಾಯುವಿಕೆ ಅವಧಿಯನ್ನು ಪ್ರಕಟಸಿದೆ. ಹೊಸ ಕಾರು ಮಾದರಿಯಲ್ಲಿ ಪೆಟ್ರೋಲ್ ಮಾದರಿಗಳಿಂತಲೂ ಡೀಸೆಲ್ ಮಾದರಿಗಳಿಗೆ ಹೆಚ್ಚು ಬೇಡಿಕೆಯಿದ್ದು, ಎಂಪಿವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷ ಬೆಲೆ ಹೊಂದಿದ್ದು, ಇದು ಈ ವಿಭಾಗದ ಕಾರುಗಳಲ್ಲೇ ಇದು ಅತಿ ಕಡಿಮೆ ಬೆಲೆಯಾಗಿರುವುದರಿಂದ ಹೆಚ್ಚಿನ ಬೇಡಿಕೆಗೆ ಕಾರಣವಾಗಿದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆಯೇ ಹೊಸ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್ ನೀಡುತ್ತದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 15.7 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.2 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 16.5 ಕಿ.ಮೀ ಮೈಲೇಜ್ ನೀಡುತ್ತದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯಲ್ಲಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 21.3 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.3 ಕಿ.ಮೀ ಮೈಲೇಜ್ ನೀಡಲಿದೆ. ಹೊಸ ಕಾರು ಸೆಲ್ಟೊಸ್ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಹೊಸ ಕಾರಿನಲ್ಲಿ ಕಂಪನಿಯು ಟೈಗರ್ ನೋಸ್ ಹೊಂದಿರುವ ಸಿಗ್ನಿಚೆರ್ ಗ್ರಿಲ್ ಜೊತೆ ಏರ್ ಡ್ಯಾಮ್, ವಿಭಜಿತವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ವೈ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಮತ್ತು ಬಲಿಷ್ಠವಾಗಿರುವ ಫ್ರಂಟ್ ಬಂಪರ್ ಜೋಡಿಸಲಾಗಿದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಹೊಸ ಕಾರಿನಲ್ಲಿ ಫ್ರಂಟ್ ಹೆಡ್‌ಲ್ಯಾಂಪ್‌ಗೆ ಹೊಂದಿಕೊಂಡಂತೆ ನೀಡಲಾಗಿರುವ ಕ್ರಿಸ್ ಲೈನ್ ಕಾರನ್ನು ಸುತ್ತುವರಿದಿರುವುದು ಕೂಡಾ ಪ್ರೀಮಿಯಂ ಲುಕ್ ಹೆಚ್ಚಿಸಲು ಸಹಕಾರಿಯಾಗಿದ್ದು, ಬಾಡಿ ಕ್ಲ್ಯಾಡಿಂಗ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ವ್ಹೀಲ್ ಆರ್ಚ್, ಎಲ್ಇಡಿ ಟೈಲ್ ಲ್ಯಾಂಪ್, ಸ್ಟೈಲಿಶ್ ರಿಯರ್ ಬಂಪರ್, ಫ್ಲಕ್ಸ್ ಸಿಲ್ವರ್ ಇನ್ಸರ್ಟ್ ಜೊತೆ ಆಕರ್ಷಕವಾದ ರಿಯರ್ ಸ್ಪಾಯ್ಲರ್ ನೀಡಲಾಗಿದೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಕಿಯಾ ಕಂಪನಿಯು ಹೊಸ ಕಾರಿನಲ್ಲಿ ಒಂದೇ ಸೂರಿನಡಿ ಹತ್ತಾರು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸುವ ಯುವಿಓ ಕಾರ್ ಕನೆಕ್ಟ್ ಫೀಚರ್ಸ್ ಸಹ ನೀಡಿದ್ದು, ವೆಂಟಿಲೆಟೆಡ್ ಸೀಟುಗಳು, 64 ಆಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಯಾಕ್ ಟೇಬಲ್, ಕಪ್ ಹೋಲ್ಡರ್ಸ್, ಏರ್ ಪ್ಯೂರಿಫೈಯರ್ ಸೌಲಭ್ಯಗಳಿವೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಹೊಸ ದಾಖಲೆ ನಿರ್ಮಿಸಿದ ಕಿಯಾ ಕಾರೆನ್ಸ್

ಇನ್ನು ಹೊಸ ಕಾರು ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದ್ದು, ಆಕರ್ಷಕ ಬೆಲೆಯೊಂದಿಗೆ ಹೊಸ ಕಾರು ಮಾರುತಿ ಎರ್ಟಿಗಾ, ಮಹೀಂದ್ರಾ ಮರಾಜೋ, ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಮತ್ತು ಇನೋವಾ ಕ್ರಿಸ್ಟಾ ಆರಂಭಿಕ ಮಾದರಿಗಳಿಗೂ ಇದು ಪೈಪೋಟಿ ನೀಡಲಿದೆ.

More from DriveSpark

Article Published On: Friday, March 11, 2022, 9:00 [IST]
English summary
Kia carens muv receives overwhelming response crosses 50 000 mark
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+