ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಕಿಯಾ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಇವಿ6 ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 59.95 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಇವಿ6 ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಿದ್ದು, ಜಿಟಿ ಲೈನ್ ಫ್ರಂಟ್ ವ್ಹೀಲ್ ಡ್ರೈವ್ ವೆರಿಯೆಂಟ್ ಎಕ್ಸ್‌ಶೋರೂಂ ಪ್ರಕಾರ ರೂ. 59.95 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ವೆರಿಯೆಂಟ್ ಜಿಟಿ ಲೈನ್ ಆಲ್ ವ್ಹೀಲ್ ಡ್ರೈವ್ ಮಾದರಿಯು ರೂ. 64.95 ಲಕ್ಷ ಬೆಲೆ ಹೊಂದಿದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹೊಸ ಇವಿ6 ಎಲೆಕ್ಟ್ರಿಕ್ ಕಾರು ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್(E-GMP) ಅನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಇದು ಬ್ರ್ಯಾಂಡ್‌ನ ಭವಿಷ್ಯದ ಶ್ರೇಣಿಯ ಎಲೆಕ್ಟ್ರಿಕ್ ಕೊಡುಗೆಗಳ ಆಧಾರವಾಗಿದೆ. ಹೊಸ ಕಾರಿನಲ್ಲಿ ಕಂಪನಿಯು 77.4kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಅತ್ಯಧಿಕ ಮೈಲೇಜ್ ನೀಡಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 528 ಕಿ.ಮೀ ಮೈಲೇಜ್ ರೇಂಜ್ ಖಚಿತಪಡಿಸುತ್ತದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹೊಸ ಕಾರಿನ ಬ್ಯಾಟರಿ ಪ್ಯಾಕ್ ಅಲ್ಟ್ರಾ-ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು, ಸೂಪರ್ ಚಾರ್ಜಿಂಗ್ ಮೂಲಕ ಕೇವಲ 4.5 ನಿಮಿಷಗಳ ಚಾರ್ಜಿಂಗ್ ಮೂಲಕ ಕನಿಷ್ಠ 100 ಕಿ.ಮೀ ಕ್ರಮಿಸುವಷ್ಟು ಚಾರ್ಜ್ ಮಾಡಬಹುದು. ಜೊತೆಗೆ ಹೊಸ ಕಾರಿನಲ್ಲಿ 350kW ಫಾಸ್ಟ್ ಚಾರ್ಜರ್ ಸೌಲಭ್ಯದೊಂದಿಗೆ 50kWh ಡಿಸಿ ಫಾಸ್ಟ್ ಚಾರ್ಜರ್‌ ಆಯ್ಕೆಗಳಿದ್ದು, ಇವು ಕ್ರಮವಾಗಿ 18 ನಿಮಿಷ ಮತ್ತು 73 ನಿಮಿಷಗಳಲ್ಲಿ ಶೇ. 10 ರಿಂದ ಶೇ. 80ರ ವರೆಗಿನ ಬ್ಯಾಟರಿಯನ್ನು ಚಾರ್ಜ್ ಮಾಡಬಹುದಾಗಿದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಕಿಯಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಡ್ಯುಯಲ್ ಮೋಟಾರ್ ಸೆಟಪ್ ಅನ್ನು ಜೋಡಿಸಿದ್ದು, ರಿಯರ್ ವ್ಹೀಲ್ ಡ್ರೈವ್ ಮಾದರಿಯು 350 ಎನ್ಎಂ ಮತ್ತು 225 ಬಿಎಚ್‌ಪಿ ಉತ್ಪಾದನೆ ಮಾಡಲಿದ್ದರೆ ಆಲ್ ವ್ಹೀಲ್ ಡ್ರೈವ್ ಮಾದರಿಯು 321 ಬಿಹೆಚ್‍ಪಿ ಮತ್ತು 605 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಸ್ನೋ ವೈಟ್ ಪರ್ಲ್, ಅರೋರಾ ಬ್ಲ್ಯಾಕ್ ಪರ್ಲ್, ಮೊನೊಸ್ಕೇಪ್, ರನ್ವೇ ರೆಡ್ ಮತ್ತು ಯಾಚ್ ಬ್ಲೂ ಸೇರಿದಂತೆ ಐದು ಬಾಹ್ಯ ಬಣ್ಣದ ಆಯ್ಕೆ ನೀಡಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರು 4690 ಎಂಎಂ ಉದ್ದ, 1890 ಎಂಎಂ ಅಗಲ ಮತ್ತು 1550 ಎಂಎಂ ಎತ್ತರದೊಂದಿಗೆ ಅತ್ಯುತ್ತಮ ಕ್ಯಾಬಿನ್ ಸ್ಥಳವಾಕಾಶ ಹೊಂದಿದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹಾಗೆಯೇ ಹೊಸ ಕಾರಿನಲ್ಲಿ ಡ್ಯುಯಲ್ 12.3-ಇಂಚಿನ ಡಿಸ್ಪ್ಪೇ, ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 10 ಹಂತದಲ್ಲಿ ಹೊಂದಾಣಿಕೆ ಮಾಡಬಹುದಾದ ಪವರ್ ಅಡ್ಜೆಸ್ಟ್ ಫ್ರಂಟ್ ಸೀಟ್‌ಗಳು, ಪ್ಯಾಡಲ್ ಶಿಫ್ಟರ್‌, ರೈನ್ ಸೆನ್ಸಿಂಗ್ ವೈಪರ್‌, ಮಲ್ಟಿ ಡ್ರೈವ್ ಮೋಡ್‌ಗಳು, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್, 4 ಸ್ಪೀಕರ್ ಆಡಿಯೋ ಸಿಸ್ಟಂ, 60ಕ್ಕೂ ಹೆಚ್ಚು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರುವ ಕಿಯಾ ಕನೆಕ್ಟ್ ಸೌಲಭ್ಯವನ್ನು ಕೂಡಾ ಹೊಂದಿರಲಿದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹೊಸ ಕಿಯಾ ಇವಿ6 ಕಾರು 14 ಸ್ಪೀಕರ್‌ಗಳೊಂದಿಗೆ ಮೆರಿಡಿಯನ್ ಸೌಂಡ್ ಸಿಸ್ಟಂ, ವರ್ಧಿತ ರಿಯಾಲಿಟಿ ಹೆಡ್ಸ್-ಅಪ್ ಡಿಸ್ಪ್ಲೇ, ಆಟೋಮ್ಯಾಟಿಕ್ ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಚಾಲಿತ ಟೈಲ್‌ಗೇಟ್‌ನಂತಹ ಕೆಲವು ವಿಶೇಷ ವಿನ್ಯಾಸದ ಅಂಶಗಳು ಮತ್ತು ವೈಶಿಷ್ಟ್ಯಗಳೊಂದಿಗೆ ಬರಲಿದ್ದು, ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ಸೂಟ್ ಅನ್ನು ಒಳಗೊಂಡಿದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಜೊತೆಗೆ ಹೊಸ ಕಾರಿನಲ್ಲಿ 8 ಏರ್‌ಬ್ಯಾಗ್‌ಗಳು, ಇಎಸ್‌ಸಿ, ಎಬಿಎಸ್, ಹೆಚ್‌ಎಸಿ, ಬಿಎಸ್ಎ, ವಿಎಸ್ಎಂ, ಇಎಸ್ಎಸ್, ಆಲ್ ವ್ಹೀಲ್ ಗಳಿಗೆ ಡಿಸ್ಕ್ ಬ್ರೇಕ್, ಮುಂಭಾಗ ಮತ್ತು ಹಿಂಭಾಗದಲ್ಲಿ ಪಾರ್ಕಿಂಗ್ ಸೆನ್ಸಾರ್ ಮತ್ತು ಐಸೋಫಿಕ್ಸ್ ಚೈಲ್ಡ್ ಆಂಕರ್‌ಗಳನ್ನು ಒಳಗೊಂಡಿದ್ದು, ಕ್ರ್ಯಾಶ್ ಟೆಸ್ಟಿಂಗ್ ಹೊಸ ಕಾರು ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಸೌಲಭ್ಯದೊಂದಿಗೆ ಉತ್ತಮ ಸುರಕ್ಷತೆಯನ್ನು ಖಚಿತಪಡಿಸುತ್ತದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹೊಸ ಕಾರು ತುಸು ದುಬಾರಿ ಬೆಲೆ ಹೊಂದಿದ್ದರೂ ಐಷಾರಾಮಿ ಫೀಚರ್ಸ್‌ಗಳೊಂದಿಗೆ ಪ್ರಮುಖ ಜರ್ಮನ್ ಕಾರು ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದ್ದು, ಸದ್ಯ ಕಂಪನಿಯು ಭಾರತದಲ್ಲಿ ಹೊಸ ಕಾರನ್ನು ಸೀಮಿತ ಸಂಖ್ಯೆಯಲ್ಲಿ ಮಾತ್ರ ಮಾರಾಟ ಮಾಡಲಿದೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹೊಸ ಕಾರು ಮಾದರಿಯನ್ನು ಕಂಪನಿಯು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಆಧರಿಸಿ ದೇಶದ ಪ್ರಮುಖ 12 ನಗರಗಳಲ್ಲಿನ 15 ಡೀಲರ್ಸ್‌ಗಳಲ್ಲಿ ಮಾರಾಟಗೊಳಿಸಲು ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಕೇವಲ 100 ಯುನಿಟ್‌ಗಳು ಮಾತ್ರ ಖರೀದಿಗೆ ಲಭ್ಯವಿವೆ.

ಅತ್ಯಧಿಕ ಮೈಲೇಜ್ ಹೊಂದಿರುವ ಕಿಯಾ ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹೊಸ ಕಾರನ್ನು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಂಡಿರುವುದರಿಂದ ತುಸು ದುಬಾರಿ ಎನ್ನಿಸಲಿರುವ ಹೊಸ ಕಾರು ಮುಂಬರುವ ಕೆಲವು ವರ್ಷಗಳಲ್ಲಿ ಭಾರತದಲ್ಲಿಯೇ ಜೋಡಣೆಯಾಗಲಿದ್ದು, ಇವಿ6 ಜೊತೆಗೆ ಕಂಪನಿಯು ಶೀಘ್ರದಲ್ಲಿಯೇ ತನ್ನ ಬಜೆಟ್ ಇವಿ ಮಾದರಿಯನ್ನು ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

More from DriveSpark

Article Published On: Thursday, June 2, 2022, 13:19 [IST]
English summary
Kia ev6 suv launched in india at rs 59 95 lakh details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+