ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಕಂಪನಿಯಾಗಿರುವ ಕಿಯಾ ವಿಶ್ವಾದ್ಯಂತ ಪ್ರಮುಖ ರಾಷ್ಟ್ರ ಕಾರು ಮಾರಾಟ ಜಾಲ ಹೊಂದಿದ್ದು, ವಿಶ್ವದ ಎಂಟನೇ ಅತಿ ದೊಡ್ಡ ಕಾರು ಕಂಪನಿಯಾಗಿ ಹೊರಹೊಮ್ಮಿರುವ ಕಿಯಾ ಭಾರತದಲ್ಲೂ 2019ರಿಂದ ಕಾರು ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿತ್ತು.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮೂಲಕ ದೇಶಿಯ ಮಾರುಕಟ್ಟೆಯನ್ನು ಅಧಿಕೃತವಾಗಿ ಪ್ರವೇಶಿಸಿದ ಕಿಯಾ ಇಂಡಿಯಾ ಕಂಪನಿಯು ಪ್ರೀಮಿಯಂ ಕಾರು ಉತ್ಪನ್ನಗಳೊಂದಿಗೆ ಕಳೆದ ಎರಡೂವರೆ ವರ್ಷಗಳಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡಿದ್ದು, ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 5 ಲಕ್ಷ ಕಾರುಗಳನ್ನು ಉತ್ಪಾದನಾ ಗುರಿಯನ್ನು ತಲುಪಿದೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಕಿಯಾ ಕಂಪನಿಯು ಭಾರತದಲ್ಲಿ ಉತ್ಪಾದನೆ ಮಾಡುತ್ತಿರುವ ಕಾರುಗಳನ್ನು ಕೇವಲ ದೇಶಿಯ ಮಾರುಕಟ್ಟೆಗಳಿಗೆ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಇಲ್ಲಿಂದಲೇ ರಫ್ತು ಕೈಗೊಳ್ಳುತ್ತಿದ್ದು, ಇದುವರೆಗೆ ಉತ್ಪಾದನೆ ಮಾಡಲಾದ 5 ಲಕ್ಷ ಕಾರುಗಳಲ್ಲಿ 4 ಲಕ್ಷ ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡಿದರೆ ಇನ್ನುಳಿದ 1 ಲಕ್ಷ ಕಾರುಗಳನ್ನು ರಫ್ತು ಕೈಗೊಂಡಿದೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಭಾರತದಲ್ಲಿ ಮೊದಲ ಬಾರಿಗೆ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ನಂತರ ಕಾರ್ನಿವಾಲ್ ಲಗ್ಷುರಿ ಎಂಪಿವಿ ತದನಂತರ ಸೊನೆಟ್ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಿದ್ದ ಕಿಯಾ ಕಂಪನಿಯು ನಾಲ್ಕನೇ ಕಾರು ಆವೃತ್ತಿಯಾಗಿ ಇತ್ತೀಚೆಗೆ ಕಾರೆನ್ಸ್ ಎಂಯುವಿ(ಮಲ್ಟಿ ಯುಟಿಲಿಟಿ ವೆಹಿಕಲ್) ಮಾದರಿಯನ್ನು ಬಿಡುಗಡೆ ಮಾಡಿತು.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಹೊಸ ಕಾರು ಉತ್ಪಾದನಾ ಘಟಕವನ್ನು ಆಂಧ್ರಪ್ರದೇಶದ ಅನಂತಪುರದಲ್ಲಿ ಆರಂಭಿದ ನಂತರ ಹಂತ-ಹಂತವಾಗಿ ವಾರ್ಷಿಕವಾಗಿ 3 ಲಕ್ಷ ಕಾರುಗಳ ಉತ್ಪಾದನಾ ಸೌಲಭ್ಯವನ್ನು ತೆರೆದಿದ್ದು, ಹೊಸ ಘಟಕದ ಮೇಲೆ ಇದುವರೆಗೆ ಸುಮಾರು ಎಂಟು ಸಾವಿರ ಕೋಟಿ ಹೂಡಿಕೆ ಮಾಡಿದೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಕಿಯಾ ನಿರ್ಮಾಣದ ಕಾರುಗಳಲ್ಲಿ ಸೆಲ್ಟೊಸ್ ಮತ್ತು ಸೊನೆಟ್ ಮಾದರಿಗಳು ಹೆಚ್ಚಿನ ಮಾರಾಟ ಸಂಖ್ಯೆಯನ್ನು ಹೊಂದಿದ್ದು, ದುಬಾರಿ ಬೆಲೆ ನಡುವೆಯೂ ಕಾರ್ನಿವಾಲ್ ಮಾದರಿಯು ಸಹ ಉತ್ತಮ ಮಾರಾಟ ಸಂಖ್ಯೆಯನ್ನು ತನ್ನದಾಗಿಸಿಕೊಂಡಿದೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಇತ್ತೀಚೆಗೆ ಬಿಡುಗಡೆಯಾದ ಕಾರೆನ್ಸ್ ಕಾರು ಮಾದರಿಯು ಸಹ ಕಿಯಾ ಕಂಪನಿಗೆ ಭಾರೀ ಬೇಡಿಕೆ ತಂದುಕೊಡುವ ನೀರಿಕ್ಷೆಯಿದ್ದು, ಕಾರೆನ್ಸ್ ಕಾರು ಬಿಡುಗಡೆಯ ಆರಂಭದಲ್ಲಿ ಬರೋಬ್ಬರಿ 20 ಸಾವಿರ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಎಂಪಿವಿ ಕಾರು ಮಾರಾಟ ವಿಭಾಗದಲ್ಲಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಹೊಸ ಕಾರೆನ್ಸ್ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರಿನ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷಕ್ಕೆ ಬೆಲೆ ನಿಗದಿಪಡಿಸಲಾಗಿದ್ದು, ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಿಸಲಾಗಿದೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಹೊಸ ಕಾರು 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಮೂರನೇ ಸಾಲಿನ ಆಸನವು ಇತರೆ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶ ಪಡೆದುಕೊಂಡಿದೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಹೊಸ ಕಾರಿನಲ್ಲಿ ಫ್ರಂಟ್ ಹೆಡ್‌ಲ್ಯಾಂಪ್‌ಗೆ ಹೊಂದಿಕೊಂಡಂತೆ ನೀಡಲಾಗಿರುವ ಕ್ರಿಸ್ ಲೈನ್ ಕಾರನ್ನು ಸುತ್ತುವರಿದಿರುವುದು ಕೂಡಾ ಪ್ರೀಮಿಯಂ ಲುಕ್ ಹೆಚ್ಚಿಸಲು ಸಹಕಾರಿಯಾಗಿದ್ದು, ಬಾಡಿ ಕ್ಲ್ಯಾಡಿಂಗ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ವ್ಹೀಲ್ ಆರ್ಚ್, ಎಲ್ಇಡಿ ಟೈಲ್ ಲ್ಯಾಂಪ್, ಸ್ಟೈಲಿಶ್ ರಿಯರ್ ಬಂಪರ್, ಫ್ಲಕ್ಸ್ ಸಿಲ್ವರ್ ಇನ್ಸರ್ಟ್ ಜೊತೆ ಆಕರ್ಷಕವಾದ ರಿಯರ್ ಸ್ಪಾಯ್ಲರ್ ನೀಡಲಾಗಿದೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಕಿಯಾ ಕಂಪನಿಯು ಹೊಸ ಕಾರಿನಲ್ಲಿ ಒಂದೇ ಸೂರಿನಡಿ ಹತ್ತಾರು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸುವ ಯುವಿಓ ಕಾರ್ ಕನೆಕ್ಟ್ ಫೀಚರ್ಸ್ ಸಹ ನೀಡಿದ್ದು, ವೆಂಟಿಲೆಟೆಡ್ ಸೀಟುಗಳು, 64 ಆಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಯಾಕ್ ಟೇಬಲ್, ಕಪ್ ಹೋಲ್ಡರ್ಸ್, ಏರ್ ಪ್ಯೂರಿಫೈಯರ್ ಸೌಲಭ್ಯಗಳಿವೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಭಾರತದಲ್ಲಿ ಕಾರು ಉತ್ಪಾದನೆ ಆರಂಭಿಸಿದ ನಂತರ ಹೊಸ ದಾಖಲೆ ನಿರ್ಮಿಸಿದ ಕಿಯಾ

ಆಕರ್ಷಕ ಬೆಲೆಯೊಂದಿಗೆ ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಾದ ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಮತ್ತು ಎಂಪಿವಿ ಕಾರು ಮಾದರಿಗಳಾದ ಎರ್ಟಿಗಾ ಹಾಗೂ ಇನೋವಾ ಕ್ರಿಸ್ಟಾ ಆರಂಭಿಕ ಮಾದರಿಗಳಿಗೂ ಇದು ಭರ್ಜರಿ ಪೈಪೋಟಿ ನೀಡಲಿದೆ.

More from DriveSpark

Article Published On: Wednesday, February 23, 2022, 11:38 [IST]
English summary
Kia india dispatches 5 lakh vehicles milestone details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+