ಕಾರೆನ್ಸ್ ಎಂಯುವಿ ಗ್ರಾಹಕರಿಗೆ ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಕಿಯಾ ಇಂಡಿಯಾ ಕಂಪನಿಯು ಕಾರೆನ್ಸ್ ಎಂಯುವಿ ಮೂಲಕ ಕಾರು ಮಾರಾಟದಲ್ಲಿ ಉತ್ತಮ ಮುನ್ನಡೆ ಕಾಯ್ದುಕೊಳ್ಳುತ್ತಿದ್ದು, ಕಾರೆನ್ಸ್ ಹೊಸ ಮಾದರಿಯ ಮಾಲೀಕರಿಗೆ ಕಂಪನಿಯು ಮಾರಾಟ ನಂತರದ ಪ್ರಮುಖ ಸೇವೆಗಳನ್ನು ಒಂದೇ ಸೂರಿನಡಿಯಲ್ಲಿ ನೀಡುವ ಉದ್ದೇಶದಿಂದ 'ಮೈ ಕನ್ವೀನಿಯನ್ಸ್ ಪ್ಯಾಕೇಜ್' ಅನ್ನು ಪರಿಚಯಿಸಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಮೈ ಕನ್ವೀನಿಯನ್ಸ್ ಪ್ಯಾಕೇಜ್‌ನಲ್ಲಿ ಗ್ರಾಹಕರು ನಿಯಮಿತ ನಿರ್ವಹಣೆ, ವಿಸ್ತೃತ ವಾರಂಟಿ, ಟೈರ್, ಅಪಘಾತ ದುರಸ್ತಿ ಮತ್ತು ರಸ್ತೆ ಬದಿಯ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಮೈ ಕನ್ವೀನಿಯನ್ಸ್ ಪ್ಯಾಕೇಜ್ ಅನ್ನು ಗ್ರಾಹಕರು ಪ್ರೀಮಿಯಂ ಮತ್ತು ಐಷಾರಾಮಿ ಮಾದರಿಯಲ್ಲಿ ಖರೀದಿಸಬಹುದಾಗಿದ್ದು, ಇದು ನಾಲ್ಕು ಮತ್ತು ಐದು ವರ್ಷಗಳವರೆಗೆ ಕಾರಿಗೆ ಕವರೇಜ್ ನೀಡುತ್ತದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಹೊಸ ಸರ್ವಿಸ್ ಪ್ಯಾಕೇಜ್ ಅನ್ನು ದೇಶದಾದ್ಯಂತ ಹರಡಿರುವ ಕಿಯಾ ಮೋಟಾರ್ಸ್‌ನ ಯಾವುದೇ ನೆಟ್‌ವರ್ಕ್‌ನಿಂದ ಖರೀದಿಸಬಹುದಾಗಿದ್ದು, ಗ್ರಾಹಕರು ಹೊಸ ಪ್ಯಾಕೇಜ್‌ಗಳ ಪ್ರಯೋಜನಗಳನ್ನು ಯಾವುದೇ ಅಧಿಕೃತ ಸರ್ವಿಸ್ ಸೆಂಟರ್‌ಗಳಲ್ಲಿ ಪಡೆಯಬಹುದು ಎಂದು ಕಂಪನಿ ಹೇಳಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಇದಲ್ಲದೆ ಕಾರೆನ್ಸ್ ಗ್ರಾಹಕರಿಗಾಗಿ ಕಿಯಾ ಕಂಪನಿಯು ಕಾರ್ ಶೀಲ್ಡ್ ಪ್ಯಾಕೇಜ್ ಅನ್ನು ಸಹ ಬಿಡುಗಡೆ ಮಾಡಿದ್ದು, ಕಾರ್ ಶೀಲ್ಡ್ ಪ್ಯಾಕೇಜ್ ಅಡಿಯಲ್ಲಿ ಕಂಪನಿಯು ಅಪಘಾತದಲ್ಲಿ ಉಂಟಾಗುವ ಹಾನಿಯನ್ನು ಭರಿಸುತ್ತದೆ. ಗ್ರಾಹಕರು ಅಪಘಾತದಲ್ಲಿ ಯಾವುದೇ ರೀತಿಯ ವಿಮೆ ಕ್ಲೈಮ್‌ಗಳನ್ನು ಎದುರಿಸಬೇಕಿದ್ದಲ್ಲಿ ಕಂಪನಿಯು ಗ್ರಾಹಕರಿಗೆ ರೂ 1 ಲಕ್ಷದವರೆಗೆ ಸಹಾಯ ಮಾಡಲಿದ್ದು, ಈ ಪ್ರಯೋಜನವನ್ನು ಗರಿಷ್ಠ ಎರಡು ಬಾರಿ ಪಡೆಯಬಹುದಾಗಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಇನ್ನು ಕಿಯಾ ಇಂಡಿಯಾ ಕಂಪನಿಯು ಹೊಸ ಕಾರೆನ್ಸ್ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಆಕರ್ಷಕ ಬೆಲೆ ಮತ್ತು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 50 ಸಾವಿರ ಗ್ರಾಹಕರಿಂದ ಬುಕ್ಕಿಂಗ್ ಪಡೆದುಕೊಂಡಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷ ಬೆಲೆ ಹೊಂದಿದ್ದು, ಇದು ಈ ವಿಭಾಗದ ಕಾರುಗಳಲ್ಲೇ ಇದು ಅತಿ ಕಡಿಮೆ ಬೆಲೆಯಾಗಿರುವುದರಿಂದ ಹೆಚ್ಚಿನ ಬೇಡಿಕೆಗೆ ಕಾರಣವಾಗಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆಯೇ ಹೊಸ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್ ನೀಡುತ್ತದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 15.7 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.2 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 16.5 ಕಿ.ಮೀ ಮೈಲೇಜ್ ನೀಡುತ್ತದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯಲ್ಲಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 21.3 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.3 ಕಿ.ಮೀ ಮೈಲೇಜ್ ನೀಡಲಿದೆ. ಹೊಸ ಕಾರು ಸೆಲ್ಟೊಸ್ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಹೊಸ ಕಾರಿನಲ್ಲಿ ಕಂಪನಿಯು ಟೈಗರ್ ನೋಸ್ ಹೊಂದಿರುವ ಸಿಗ್ನಿಚೆರ್ ಗ್ರಿಲ್ ಜೊತೆ ಏರ್ ಡ್ಯಾಮ್, ವಿಭಜಿತವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ವೈ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಮತ್ತು ಬಲಿಷ್ಠವಾಗಿರುವ ಫ್ರಂಟ್ ಬಂಪರ್ ಜೋಡಿಸಲಾಗಿದೆ.

ಹೊಸ ಸರ್ವಿಸ್ ಪ್ಯಾಕೇಜ್ ಪರಿಚಯಿಸಿದ ಕಿಯಾ ಇಂಡಿಯಾ

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

More from DriveSpark

Article Published On: Friday, March 18, 2022, 11:28 [IST]
English summary
Kia india introduces multiple sales and aftersales initiatives for carens customers details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+